‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ – Kannada News | Kangana Ranaut clarifies secret Marriage rumours over Mangalsutra Viral Video
ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಮಂಗಳಸೂತ್ರ (Mangalsutra) ಮತ್ತು ಹಸಿರು ಬಳೆಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕಂಗನಾ ರಣಾವತ್ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹಬ್ಬಿದ್ದವು. ಆ ‘ಅದೃಷ್ಟವಂತ ಪುರುಷ’ ಯಾರು ಎಂದು ನೆಟ್ಟಿಗರು ಹುಡುಕಾಡಲಾರಂಭಿಸಿದ್ದರು. ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಕಂಗನಾ ರಣಾವತ್ (Kangana Ranaut) ಅವರೇ ಸ್ಪಷ್ಟನೆ ನೀಡಿದ್ದು, ‘ಇದರಲ್ಲಿ ಇಷ್ಟೊಂದು ತಲೆಕೆಡಿಸಿಕೊಳ್ಳುವಂತದ್ದು ಏನಿದೆ?’ ಎಂದು ಪ್ರಶ್ನಿಸಿದ್ದಾರೆ….