ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್
ಮಂಗಳೂರು, ಮಾರ್ಚ್ 17: ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು (Mangalore) ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Moodabidri Inspector) ಸಂದೇಶ್ ಪಿಜಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ. ಏನಿದು ಮೂಡಬಿದ್ರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣ? ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ…