All posts by nagaraj11081993

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಮಂಗಳೂರು, ಮಾರ್ಚ್ 17: ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು (Mangalore) ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Moodabidri Inspector) ಸಂದೇಶ್ ಪಿಜಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ.

ಏನಿದು ಮೂಡಬಿದ್ರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ಕೌಟುಂಬಿಕ ವ್ಯಾಜ್ಯ ಅಥವಾ ದೂರು ನೀಡಲು ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಈತ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಸಂತ್ರಸ್ತೆಯೊಬ್ಬಳ ಗಂಡನನ್ನು ಕೇಸ್‌ನಲ್ಲಿ ಸಿಲುಕಿಸಿ, ಆತನನ್ನು ಬಿಡುಗಡೆ ಮಾಡಲು ‘ನನ್ನ ಜೊತೆ ಮಲಗಬೇಕು ಅಥವಾ 25 ಲಕ್ಷ ರೂಪಾಯಿ ನೀಡಬೇಕು’ ಎಂದು ಇನ್ಸ್‌ಪೆಕ್ಟರ್ ಧಮಕಿ ಹಾಕಿರುವ ವಿಷಯ ಈಗ ಬೆಳಕಿಗೆ ಬಂದಿದೆ. ‘ನಾನು ಪೋಸ್ಟಿಂಗ್‌ಗಾಗಿ ಗೃಹಸಚಿವರಿಗೆ 50 ಲಕ್ಷ ನೀಡಿ ಬಂದಿದ್ದೇನೆ’ ಎಂದು ಈತ ಅಹಂಕಾರದಿಂದ ಹೇಳಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಮತ್ತೊಂದು ಪ್ರಕರಣದ ಸಂತ್ರಸ್ತೆ ಮಗಳ ಮೇಲೂ ಕಣ್ಣು: ಆಡಿಯೋ ವೈರಲ್

ಈ ಪ್ರಕರಣದಲ್ಲಿ ಇನ್ನೊಂದು ಕರಾಳವಾದ ಅಂಶವೆಂದರೆ, ಈ ಇನ್ಸ್‌ಪೆಕ್ಟರ್‌ ತಾನು ಲೈಂಗಿಕವಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕೆಟ್ಟದೃಷ್ಟಿ ಬೀರಿದ್ದಾರೆ. ತನ್ನ ತೀಟೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಕಣ್ಣುಹಾಕಿದ್ದಲ್ಲದೆ, ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ಈಗ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೊನೆಗೂ ಎಚ್ಚೆತ್ತ ಪೊಲೀಸ್ ಇಲಾಖೆ

ಕಳೆದ ಕೆಲವು ತಿಂಗಳುಗಳಿಂದ ಈತನ ವಿರುದ್ಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪವಿತ್ತು. ಹಿರಿಯ ಅಧಿಕಾರಿಗಳೇ ಈತನನ್ನು ರಕ್ಷಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಪ್ರಕರಣದ ತೀವ್ರತೆ ಅರಿತ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ಈವರೆಗೂ ಯಾವೊಬ್ಬ ಮಹಿಳೆಯೂ ಅಧಿಕೃತವಾಗಿ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಿಷನರ್ ಮನವಿ ಮಾಡಿದ್ದಾರೆ. ಆದರೆ ಮತ್ತೊಂದೆಡೆ, ಈಗಾಗಲೇ ಸಿಎಂ, ಗೃಹ ಸಚಿವರು ಮತ್ತು ಮಹಿಳಾ ಆಯೋಗಕ್ಕೂ ದೂರು ನೀಡಿದ್ದೇನೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದು, ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Mike Hesson: ಏನ್​ ಹೇಳೋದು, ತೀವ್ರ ನಿರಾಶೆ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಏಕದಿನ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೊಸ ನಾಯಕ, ಹೊಸ ತಂತ್ರದೊಂದಿಗೆ ಢಾಕಾಗೆ ಕಾಲಿಟ್ಟಿದ್ದ ಪಾಕ್ ಪಡೆಯನ್ನು ಬಾಂಗ್ಲಾ 2-1 ಅಂತರದಿಂದ ಸೋಲಿಸಿದೆ. ಈ ಸೋಲಿನ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಸೋಲನ್ನು ವಿಶ್ಲೇಷಿಸಿದ ಮೈಕ್ ಹೆಸ್ಸನ್,  ನಾವು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಗಿದ್ದು “ತೀವ್ರ ನಿರಾಶಾದಾಯಕ”. ಬಾಂಗ್ಲಾದೇಶದ ಬೌಲರ್‌ಗಳು, ವಿಶೇಷವಾಗಿ ವೇಗಿ ನಹೀದ್ ರಾಣಾ ಅವರ ದಾಳಿಗೆ ತಮ್ಮ ಬ್ಯಾಟರ್‌ಗಳು ಉತ್ತರ ನೀಡಲು ವಿಫಲರಾದರು ಎಂದು ಅವರು ಒಪ್ಪಿಕೊಂಡಿದ್ದಾರೆ.

ಇನ್ನು ಈ ಸರಣಿಯಿಂದ ಬಾಬರ್ ಆಝಂ ಅವರಂತಹ ಹಿರಿಯ ಆಟಗಾರರನ್ನು ಕೈ ಬಿಟ್ಟು, ನಾಲ್ವರು ಹೊಸ ಆಟಗಾರರನ್ನು ಕಣಕ್ಕಿಳಿಸಿದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಮೈಕ್ ಹೆಸ್ಸನ್, ಭವಿಷ್ಯದ ತಂಡವನ್ನು ಕಟ್ಟಲು ಇಂತಹ ಪ್ರಯೋಗಗಳು ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಸರಣಿಯ ನಿರ್ಣಾಯಕ ಮೂರನೇ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ವಿರುದ್ಧದ ವಿವಾದಾತ್ಮಕ ಡಿಆರ್‌ಎಸ್ ತೀರ್ಪಿನ ಬಗ್ಗೆ ಹೆಸ್ಸನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಐಸಿಸಿ (ICC) ಮ್ಯಾಚ್ ರೆಫರಿಯನ್ನು ಭೇಟಿಯಾಗಿ ಅಧಿಕೃತವಾಗಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಸರಣಿಯ ಮೂಲಕ ಪಾಕ್ ತಂಡದ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದ ಶಾಹೀನ್ ಅಫ್ರಿದಿ ಅವರ ನಾಯಕತ್ವವನ್ನು ಬೆಂಬಲಿಸಿರುವ ಮೈಕ್ ಹೆಸ್ಸನ್, ಶಾಹೀನ್ ಒಬ್ಬ “ಚಾಣಾಕ್ಷ ನಾಯಕ” ಮತ್ತು ತಂಡದ ಮೇಲೆ ಧನಾತ್ಮಕ ಪ್ರಭಾವ ಬೀರುತ್ತಿದ್ದಾರೆ. ಇದು ಸೋಲಿನ ನಡುವೆ ಸಿಕ್ಕ ಸಕರಾತ್ಮಕ ವಿಷಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ SRH ತಂಡಕ್ಕೆ ಆಘಾತ

ಒಟ್ಟಿನಲ್ಲಿ ಟಿ20 ವಿಶ್ವಕಪ್ ಸೋಲಿನ ನೋವನ್ನು ಮರೆಯಲು ಬಾಂಗ್ಲಾದೇಶ್ ತಂಡಕ್ಕೆ ತೆರಳಿದ್ದ ಪಾಕಿಸ್ತಾನ್ ತಂಡವು ಹೀನಾಯ ಸೋಲನುಭವಿ ಭಾರೀ ಮುಖಭಂಗಕ್ಕೆ ಒಳಗಾಗಿದ್ದಾರೆ. ಅಲ್ಲದೆ ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡದ ಕೋಚ್ ಮೈಕ್ ಹೆಸ್ಸನ್ ಅವರ ಕಾರ್ಯತಂತ್ರದ ಬಗ್ಗೆ ಮಾಜಿ ಕ್ರಿಕೆಟಿಗರು ಪ್ರಶ್ನೆಗಳನ್ನೆತ್ತಿದ್ದು, ಹೀಗಾಗಿ ಅವರು ಕೋಚ್ ಆಗಿ ಮುಂದುವರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Source link

ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ಮಂಗಳೂರು, ಮಾರ್ಚ್ 17: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ (LPG) ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದವು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ (India) ತಲುಪಿವೆ. ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20 ಸಾವಿರ ಮೆಟ್ರಿಕ್ ಟನ್ ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಇಂದೇ ಮಂಗಳೂರು ಬಂದರಿಗೆ ತಂದು ಅನ್‌ಲೋಡ್ ಮಾಡುವ ಸಾಧ್ಯತೆ ಇದೆ. ಇದರಿಂದ ದೇಶದಲ್ಲಿ ಉಂಟಾಗಿದ್ದ ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್ ಸಿಗುವ ನಿರೀಕ್ಷೆಯಿದೆ.

ಇದರ ಜೊತೆಗೆ ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಇಂದು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ‘ಜಗ್ ಲಾಡ್ಕಿ’ ಹಡಗು ಸುಮಾರು 81 ಸಾವಿರ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.

ಪೆಟ್ರೋಲಿಯಂ ಡೀಲರ್ಸ್‌ಗಳ ಅಂದಾಜಿನ ಪ್ರಕಾರ, ಈ ಎರಡು ಹಡಗುಗಳಿಂದ ಒಟ್ಟು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಲಭ್ಯವಾಗಲಿದ್ದು, ಇದು ದೇಶದ ಅವಶ್ಯಕತೆಗೆ ಕೇವಲ 2 ದಿನಗಳ ಮಟ್ಟಿಗೆ ಮಾತ್ರ ಸಾಕಾಗಬಹುದು.

ಇದನ್ನೆಲ್ಲ ಮೀರಿ, ಇನ್ನೂ 20ಕ್ಕೂ ಹೆಚ್ಚು ಭಾರತೀಯ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ. ಇದೇ ವೇಳೆ ಇರಾನ್‌ನಲ್ಲಿ ಯುದ್ಧದ ಪರಿಣಾಮವಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಉಂಟಾಗಿರುವುದರಿಂದ, ಭಾರತದಿಂದ ಔಷಧಿ ಮತ್ತು ವೈದ್ಯಕೀಯ ನೆರವು ಒದಗಿಸಿದರೆ ಉಳಿದ ಹಡಗುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇರಾನ್ ಮನವಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಒಟ್ಟಿನಲ್ಲಿ, ಜಾಗತಿಕ ಉದ್ವಿಗ್ನತೆ ನಡುವೆಯೂ ಭಾರತಕ್ಕೆ ತೈಲ ಮತ್ತು ಎಲ್‌ಪಿಜಿ ಸರಬರಾಜು ಕ್ರಮೇಣ ಪುನರಾರಂಭವಾಗುತ್ತಿರುವುದು ಸ್ವಲ್ಪ ಮಟ್ಟಿನ ನಿಟ್ಟಿನಲ್ಲಿ ನೆಮ್ಮದಿ ತಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುನೀತ್ ಬಾಲನಟನಾಗಿ ನಟಿಸಿದ ಸಿನಿಮಾಗಳು ಇವು; ಒಂದಕ್ಕಿಂತ ಒಂದು ಸೂಪರ್

ಬಾಲ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದ ಕನ್ನಡಿಗರ ಪ್ರೀತಿಯ ಅಪ್ಪು ಇಂದು ನಮ್ಮ ಜೊತೆ ಇಲ್ಲ. ಇಂದು (ಮಾರ್ಚ್ 17) ಪುನೀತ್ ಜನ್ಮದಿನ. ಅವರು ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡರು. ಅವರು ಆಗಲೇ ರಾಷ್ಟ್ರ ಪ್ರಶಸ್ತಿ ಕೂಡ ಪಡೆದುಕೊಂಡರು. ಅವರು ಬಾಲ ಕಲಾವಿದನಾಗಿ ನಟಿಸಿದ ಸಿನಿಮಾಗಳ ವಿವರ ಇಲ್ಲಿದೆ.

  1. ಪುನೀತ್ ನಟನೆಯ ಮೊದಲ ಚಿತ್ರ ಪ್ರೇಮದ ಕಾಣಿಕೆ. 1976ರಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಶಿಶುವಾಗಿದ್ದಾಗಲೇ ಬಣ್ಣದ ಲೋಕದಲ್ಲಿ ಅಪ್ಪು ಕಾಣಿಸಿಕೊಂಡಿದ್ದರು.
  2. 1977ರಲ್ಲಿ ಬಿಡುಗಡೆಯಾದ ಸನಾದಿ ಅಪ್ಪಣ್ಣ ಚಿತ್ರದಲ್ಲಿಯೂ ಅಶೋಕ್ ಎನ್ನುವ ಪಾತ್ರದಲ್ಲಿ ಪುನೀತ್ ಕಾಣಿಸಿಕೊಂಡಿದ್ದರು.
  3. 1978ರಲ್ಲಿ ‘ತಾಯಿಗೆ ತಕ್ಕ ಮಗ’ ಸಿನಿಮಾದಲ್ಲಿ ಅಪ್ಪು ನಟಿಸಿದರು.
  4. 1980ರಲ್ಲಿ ‘ವಸಂತ ಗೀತ’ ಚಿತ್ರ ಬಿಡುಗಡೆಯಾಗಿತ್ತು. ಇದರಲ್ಲಿ ರಾಜಕುಮಾರ್ ಅವರೊಂದಿಗೆ ನಟಿಸಿದ್ದರು.
  5. 1981ರಲ್ಲಿ ಬಿಡುಗಡೆಯಾದ ‘ಭಾಗ್ಯವಂತ’ ಚಿತ್ರದಲ್ಲಿಯೂ ಅಪ್ಪು ಬಾಲನಟನಾಗಿ ಬಣ್ಣ ಹಚ್ಚಿದರು.
  6. ಬಾಲ ನಟನಾಗಿ ಅವರಿಗೆ ಸಾಲು ಸಾಲು ಆಫರ್​​ಗಳು ಬರುತ್ತಿದ್ದವು. 1982ರಲ್ಲಿ ರಿಲೀಸ್ ಆದ ‘ಹೊಸ ಬೆಳಕು’ ಚಿತ್ರದಲ್ಲಿ ಅಭಿನಯಿಸಿದ್ದರು.
  7. ಅದೇ ವರ್ಷ ಬಿಡುಗಡೆಯಾದ ‘ಚಲಿಸುವ ಮೋಡಗಳು’ ಚಿತ್ರದಲ್ಲಿಅದ್ಭುತ ನಟನೆಯ ಮೂಲಕ ಜನಪ್ರಿಯತೆ ಪಡೆದರು.
  8. ವಿಷ್ಟುವಿನ ಭಕ್ತನಾಗಿ ಮಿಂಚಿದ ‘ಭಕ್ತ ಪ್ರಹ್ಲಾದ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವು 1983ರಲ್ಲಿ ಚಿತ್ರ ಬಿಡುಗಡೆಯಾಗಿತ್ತು.
  9. ಪುನೀತ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸಿದ ಸಿನಿಮಾ ಎಂದರೆ ಅದು ಎರಡು ನಕ್ಷತ್ರಗಳು. 1983ರಲ್ಲಿ ಚಿತ್ರ ಬಿಡುಗಡೆಯಾಗಿ ಯಶಸ್ಸು ಕಂಡಿತು.
  10. 1984ರಲ್ಲಿ ರಿಲೀಸ್ ಆದ ಯಾರಿವನು ಚಿತ್ರದಲ್ಲಿ ಪುನೀತ್ ನಟನೆ ಅಭಿಮಾನಿಗಳನ್ನು ಖುಷಿಪಡಿಸಿತ್ತು.
  11. 1985ರಲ್ಲಿ ಬಿಡುಗಡೆಯಾದ ‘ಬೆಟ್ಟದ ಹೂವು’ ಚಿತ್ರ ಪುನೀತ್ ಸಿನಿ ಬದುಕಿಗೆ ಭದ್ರ ಬುನಾದಿ ಹಾಕಿತು. ಇದಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದರು.
  12. 1988ರಲ್ಲಿ ಬಿಡುಗಡೆ ಕಂಡ ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರ ಸೂಪರ್ ಹಿಟ್ ಆಗಿತ್ತು. ಪುನೀತ್ ನಟನೆ ಅಭಿಮಾನಿಗಳ ಮನಸ್ಸನ್ನು ಸ್ಪರ್ಶಿಸಿತ್ತು.
  13. ಬಾಲ ನಟನಾಗಿ ಅಪ್ಪು ನಟಿಸಿದ ಕೊನೆಯ ಚಿತ್ರ ‘ಪರಶುರಾಮ’. ಅಪ್ಪು ಎನ್ನುವ ಹೆಸರಿನ ಪಾತ್ರವನ್ನು ಈ ಚಿತ್ರದಲ್ಲಿ ಪುನೀತ್ ನಟಿಸಿದ್ದರು. ಆ ಬಳಿಕ ‘ಅಪ್ಪು’ ಸಿನಿಮಾ ಮೂಲಕ ಹೀರೋ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಹಾಯ ಮಾಡಿದ ಬಳಿಕ ಒಂದು ಕಂಡೀಷನ್ ಹಾಕುತ್ತಿದ್ದ ಪುನೀತ್ ರಾಜ್​​ಕುಮಾರ್ 

Puneeth Rajkumar Birthday: ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಇಂದು ಬದುಕಿದ್ದರೆ ಅಭಿಮಾನಿಗಳು ಅದ್ದೂರಿಯಾಗು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಪುನೀತ್ ರಾಜ್ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾಗಿದ್ದರು. ಈ ವೇಳೆ ಅವರು ಹಲವರ ಸಹಾಯಕ್ಕೆ ನಿಂತಿದ್ದರು. ಈ ಬಗ್ಗೆ ಯಾರೊಬ್ಬರಿಗೂ ಅವರು ಹೇಳಿಕೊಳ್ಳುತ್ತಾ ಇರಲಿಲ್ಲ ಎಂಬುದು ವಿಶೇಷ.

ಪುನೀತ್ ರಾಜ್​​ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾದಾಗ ಹಲವು ಜನರಿಗೆ ಸಹಾಯ ಮಾಡಿದ್ದರು. ಕಷ್ಟದಲ್ಲಿದ್ದು ಬಂದ ಅನೇಕರು ಗೆಲುವು ಕಾಣುತ್ತಿರಲಿಲ್ಲ. ಅಂಥವರಿಗೆ ಪುನಿತ್ ಸಹಾಯ ಮಾಡುತ್ತಿದ್ದರಂತೆ. ಆದರೆ, ಈ ಬಗ್ಗೆ ಯಾರೊಬ್ಬರಿಗೂ ಹೇಳದಂತೆ ಅವರು ಕಂಡೀಷನ್ ಹಾಕುತ್ತಿದ್ದಾರೆ. ಇದು ಅವರ ಹೆಚ್ಚುಗಾರಿಕೆ.

ಇನ್ನು, ಅವರ ಕೊನೆಯ ಪ್ರಾಜೆಕ್ಟ್ ‘ಗಂಧದ ಗುಡಿ’ ಸಾಕಷ್ಟು ಗಮನ ಸೆಳೆಯಿತು. ಈ ಪ್ರಾಜೆಕ್ಟ್​​ ಶೂಟ್​​​ಗಾಗಿ ಅವರು ಉತ್ತರ ಕನ್ನಡ, ಚಾಮರಾಜ ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದರು. ಈ ವೇಳೆ ಸೆಟ್​ಗೆ ಸಹಾಯಕ್ಕೆ ಬಂದ ಅನೇಕರಿಗೆ ಅವರು ಸಹಾಯ ಮಾಡುತ್ತಿದ್ದರು.

ಪುನೀತ್ ಅವರು 13 ವರ್ಷಗಳ ಕಾಲ ಉಚಿತವಾಗಿ ಕೆಎಂಎಫ್‌ನ ರಾಯಭಾರಿಯಾಗಿದ್ದರು. ಪ್ರವಾಹ, ಕೊವಿಡ್‌ ಹೀಗೆ ಪ್ರಕೃತಿ ವಿಕೋಪಗಳ ಸಮಯದಲ್ಲಿ ಅಪ್ಪು ಹಣವನ್ನು ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ನೀಡಿದ ಹಲವು ಉದಾಹರಣೆಗಳು ಇವೆ. ಇದು ಅಚರ ಹೆಚ್ಚುಗಾರಿಕೆ. ‘ಶಿಕ್ಷಣದ ಹಕ್ಕು’ ಜಾಹೀರಾತಿನಲ್ಲಿಯೂ ಸಂಭಾವನೆ ಪಡೆಯದೇ ನಟಿಸಿದ್ದರು. ಡಾ. ರಾಜಕುಮಾರ್‌ ಟ್ರಸ್ಟ್‌ ಮೂಲಕ ಹೆಣ್ಣುಮಕ್ಕಳ ಶೇಯೋಭಿವೃದ್ಧಿಗಾಗಿ ಕೆಲಸ ಮಾಡಿದ್ದಾರೆ. ಇನ್ನೂ ಸಾಕಷ್ಟು ಸಹಾಯವನ್ನು ಅವರು ಮಾಡಿದ್ದಾರೆ. ಆದರೆ, ಅನೇಕ ವಿಷಯಗಳು ಹೊರಗೆ ಬಂದಿಲ್ಲ.

ಇದನ್ನೂ ಓದಿ: ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ಇಂದು ಕುಟುಂಬದವರು ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಇಡೀ ಕುಟುಂಬ ಕಂಠೀರವ ಸ್ಟುಡಿಯೋದಲ್ಲಿರೋ ಸಮಾಧಿ ಬಳಿ ತೆರಳಲಿದೆ. ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಸೇರಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ.

ವಿಜಯ್ ಅವರ ಪತ್ನಿ ಸಂಗೀತಾ ಅವರು ಒಂದು ಗಂಭಿರ ಆರೋಪವನ್ನು ಮಾಡಿದ್ದಾರೆ. ವಿಜಯ್​​ಗೆ ನಟಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಹೇಳಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಆ ನಟಿ ಯಾರು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ತ್ರಿಷಾ ಜೊತೆ ವಿಜಯ್ ಆಪ್ತತೆ ಬೆಳೆಸಿಕೊಂಡಿರುವುದರಿಂದ ಆ ನಟಿಯ ಮೇಲೆ ಆರೋಪ ಹೆಚ್ಚಿದೆ. ಸಂಗೀತಾ ಸಲ್ಲಿಕೆ ಮಾಡಿರುವ ಡಿವೋರ್ಸ್ ಅರ್ಜಿ ವಿಚಾರಣೆ ಕೌಟುಂಬಿಕ ನ್ಯಾಯಾಲಯದಲ್ಲಿ ಏಪ್ರಿಲ್ 20ರಂದು ನಡೆಯಲಿದೆ.

ಒಂದೊಮ್ಮೆ ಕೋರ್ಟ್ ಅರ್ಜಿ ವಿಚಾರಣೆ ನಡೆಸಿ, ಇಬ್ಬರೂ ಸಮ್ಮತಿಸಿದರೆ ಏಪ್ರಿಲ್ 20ರಂದೇ ಡಿವೋರ್ಸ್ ಸಿಗಲಿದೆಯೇ ಎಂಬ ಪ್ರಶ್ನೆ ಅನೇಕರದ್ದು. ಈ ವಿಚಾರಣೆ ಮುಗಿದ ಮೂರೇ ದಿನಕ್ಕೆ ಅಂದರೆ, ಏಪ್ರಿಲ್ 23ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 20ರಂದು ವಿಜಯ್ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇರುವುದರಿಂದ ಅವರು ಇಲ್ಲಿಗೆ ಹಾಜರಿ ಹಾಕುತ್ತಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಅವರು ಈ ವಿಚಾರಣೆಯನ್ನು ಮುಂದಕ್ಕೆ ಹಾಕಿಕೊಳ್ಳುವಂತೆ ಮನವಿ ಮಾಡಬಹುದು.

ಇದನ್ನೂ ಓದಿ: ‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ಇನ್ನು, ಮೇ 4 ತ್ರಿಷಾ ಜನ್ಮದಿನ. ಇದೇ ದಿನದಂದು ತಮಿಳುನಾಡು ಚುನಾವಣೆ ಫಲಿತಾಂಶ ಹೊರ ಬೀಳಲಿದೆ ಎಂಬುದು ವಿಶೇಷ. ಈ ದಿನ ವಿಜಯ್ ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ವಿಜಯ್ ಸ್ಪರ್ಧಿಸುತ್ತಿದ್ದಾರೆ. ಒಂದೊಮ್ಮೆ ಅವರು ಗೆಲುವು ಕಂಡರೆ ಮುಂದಿನ ಸಿಎಂ ಆಗಿ ವಿಜಯ್ ಆಯ್ಕೆ ಆಗುತ್ತಾರೆ. ಸದ್ಯ ಅವರು ಹೋದಲ್ಲಿ ಬಂದಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಅದು ಮತವಾಗಿ ಬದಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ-ಪುನಸ್ಕಾರಗಳನ್ನು ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಯ ಬಗ್ಗೆ ‘ಟಿವಿ9’ ಕನ್ನಡ ಡಿಜಿಟಲ್​ನ ‘ನಿತ್ಯ ಭಕ್ತಿ’ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಣೆಬರಹ ಅಥವಾ ಕರ್ಮಫಲವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಪೂಜೆ, ಪುನಸ್ಕಾರ, ಹೋಮ, ಹವನ, ಯಜ್ಞ, ಯಾಗಾದಿ ಮತ್ತು ಜಪಗಳು ಕಷ್ಟಗಳನ್ನು ಸಂಪೂರ್ಣವಾಗಿ ನಿವಾರಿಸದಿದ್ದರೂ, ಅವುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ನೀಡುತ್ತವೆ. ಪೂಜೆ, ಮಂತ್ರಗಳನ್ನು ಮಾಡುವಾಗ ‘ಮನನಾತ್ ತ್ರಾಯತೇ ಇತಿ ಮಂತ್ರಃ’ ಎಂಬಂತೆ ನಮ್ಮ ಮನಸ್ಸಿನಲ್ಲಿ ಧನಾತ್ಮಕ ಚಿಂತನೆಗಳು ಮೂಡಿ, ಪರಿಹಾರ ಸಿಗುತ್ತದೆ ಎಂಬ ನಂಬಿಕೆ ಮೂಡುತ್ತದೆ. ಕಷ್ಟ ಬಂದಾಗ ಭಗವಂತನನ್ನು ಕಷ್ಟ ನಿವಾರಣೆ ಮಾಡು ಎಂದು ಕೇಳುವ ಬದಲು, ಕಷ್ಟಗಳನ್ನು ಎದುರಿಸುವ ಶಕ್ತಿ ನೀಡು ಎಂದು ಪ್ರಾರ್ಥಿಸಬೇಕು. ನಿತ್ಯ ಪೂಜೆ, ನಾಮಸ್ಮರಣೆ, ಜಪ, ತಪಗಳಿಗಿಂತ ಮಾನಸಿಕ ಪೂಜೆಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ‘ಯದ್ಭಾವಂ ತದ್ಭವತಿ’ ಎಂಬಂತೆ ಸರಳ ಮತ್ತು ಶುದ್ಧ ಹೃದಯದ ಭಕ್ತಿಗೆ ಭಗವಂತ ಒಲಿಯುತ್ತಾನೆ ಎಂದು ಗುರೂಜಿ ವಿಶ್ಲೇಷಿಸಿದ್ದಾರೆ.

Source link

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ ಕರಣವಿರುವ ಈ ದಿನದ ಮಹತ್ವವನ್ನು ಕೂಡ ವಿವರಿಸಿದ್ದಾರೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಗ್ಗೆ 10:57 ರಿಂದ 12:28 ರವರೆಗೆ ಇದೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ

ಪಾರ್ವತಿ ದೇವಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ಯಾವುದೇ ಕೆಲಸದಲ್ಲಿ ಇರುವಂಥ ಗೊಂದಲ ದೂರವಾಗಲಿದೆ. ಇನ್ನು ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆ ಕೂಡ ಬಗೆಹರಿಯಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣಕ್ಕೆ ಹಣದ ಅಗತ್ಯ ಬಂದು, ಅದಕ್ಕಾಗಿ ಉಳಿತಾಯ ಅಥವಾ ಹೂಡಿಕೆ ಹಣ ಹಿಂದೆ ತೆಗೆಯುವ ಬಗ್ಗೆ ನಿರ್ಧಾರ ಮಾಡುತ್ತೀರಿ. ಬ್ಯೂಟಿ ಪಾರ್ಲರ್ ನಡೆಸುತ್ತಾ ಇರುವವರಿಗೆ ಈಗಿರುವ ಸ್ಥಳದಿಂದ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂಬ ಆಲೋಚನೆ ಮೂಡಲಿದೆ. ಒಬ್ಬ ವ್ಯಕ್ತಿಯನ್ನು ಭೇಟಿ ಆಗುವುದಕ್ಕೆ ಹಲವು ಸಲ ಪ್ರಯತ್ನ ಮಾಡುವಂತಾಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ತೀರ್ಥ ಕ್ಷೇತ್ರ, ದೇವಸ್ಥಾನ ಅಥವಾ ಯಾವುದಾದರೂ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇನ್ನು ನಿಮ್ಮಲ್ಲಿ ಕೆಲವರಿಗೆ ಚಿಕ್ಕ ವಯಸ್ಸಿಂದ ಪರಿಚಯ ಇರುವ ವ್ಯಕ್ತಿ ತುಂಬ ಅನುಕೂಲ ಆಗುವ ಕೆಲ ಮಾಹಿತಿ ನೀಡಲಿದ್ದಾರೆ. ಕೃಷಿ ಹಾಗೂ ಕೃಷಿ ಸಂಬಂಧಿತ ವೃತ್ತಿ ಮಾಡುತ್ತಾ ಇರುವವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಅವಕಾಶ ತೆರೆದು ಕೊಳ್ಳಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸಣ್ಣ ಸಣ್ಣ ಒಡವೆಗಳನ್ನು ಜೋಪಾನವಾಗಿ ಇರಿಸಿಕೊಳ್ಳುವ ಕಡೆಗೆ ಲಕ್ಷ್ಯ ನೀಡಿ. ಒಂದು ವೇಳೆ ಇತರರು ಈ ರೀತಿಯ ಜವಾಬ್ದಾರಿ ನಿಮಗೆ ವಹಿಸಿದರೆ ಸಾಮಾನ್ಯ ದಿನಗಳಿಗಿಂತ ಹೆಚ್ಚು ಎಚ್ಚರಿಕೆ ವಹಿಸುವುದು ಮುಖ್ಯ. ಸಂಬಂಧಿಕರ ಮನೆ ಕಾರ್ಯಕ್ರಮಗಳಿಗೋ ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮಕ್ಕಾಗಿ ಹೊಸ ಬಟ್ಟೆಗಳು ಖರೀದಿ ಮಾಡಬೇಕು ಎಂದು ಹಣ ಖರ್ಚು ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link