Headlines

nagaraj11081993

ಎಪ್ಸ್ಟೀನ್ ಲಿಂಕ್ ಆರೋಪದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಸಿಂಗ್ ಪುರಿ ಪುತ್ರಿ

ನವದೆಹಲಿ, ಮಾರ್ಚ್ 16: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಪುತ್ರಿ ಹಿಮಾಯನಿ ಪುರಿ ಹಲವಾರು ವ್ಯಕ್ತಿಗಳು ಮತ್ತು ಆನ್‌ಲೈನ್ ಪ್ಲಾಟ್​ಫಾರ್ಮ್​ಗಳ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವ್ಯಕ್ತಿಗಳು ಮತ್ತು ಪ್ಲಾಟ್​ಫಾರ್ಮ್​ಗಳು ತಮ್ಮ ಬಗ್ಗೆ ಮಾನಹಾನಿಕರ ವಿಷಯವನ್ನು ಹರಡುತ್ತಿದ್ದು, ಕ್ರಿಮಿನಲ್ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಕಲ್ಪಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದೆಹಲು ಹೈಕೋರ್ಟ್​ನಲ್ಲಿ 10…

Read More

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ

ಬೆಂಗಳೂರು, (ಮಾರ್ಚ್ 16): ಎಸ್​​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗೆ (SSLC Exams) ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​​​​ಆರ್​​​ಟಿಸಿ (KSRTC) ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ.  ಹೌದು.. ಎಸ್​​ಎಸ್​​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್​ಆರ್​​ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು,…

Read More

ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಿಗ್ತಿಲ್ಲ ಸರಿಯಾದ ಉತ್ತರ: ಗೃಹ ಸಚಿವ ಪರಮೇಶ್ವರ್​​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್​​ 16: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸದನದಲ್ಲಿ ಸರ್ಕಾರದ ಪರವಾಗಿ ಮಾತನಾಡಿದ್ದು, ಈ ವಿಷಯವನ್ನು ಸರ್ಕಾರ ಈಗಾಗಲೇ ಬಹಳ ಗಂಭೀರವಾಗಿ ಪರಿಗಣಿಸಿದೆ. ಸ್ಪೀಕರ್ ಅವರ ಪೀಠದಿಂದ ಈ ಮಾತು ಬಂದ ಮೇಲೆ ಸರ್ಕಾರ ಇದನ್ನು ಸ್ವಾಭಾವಿಕವಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ….

Read More

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ಈ ಮರಳಿನಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಮೊದಲು ಇಲ್ಯೂಷನ್ ಚಿತ್ರವನ್ನು ನೋಡುವಾಗ ಅಂತಹದ್ದೇನು ಹೊಸದು ಕಾಣಿಸಲ್ಲ….

Read More

ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ಮಂಗಳೂರು, (ಮಾರ್ಚ್ 16): ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ (Woman) ಇನ್ಸ್​ಪೆಕ್ಟರ್ (Inspector) ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಮೂಡಬಿದ್ರೆ ಪೊಲೀಸ್​ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್​ಪೆಕ್ಟರ್​ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ…

Read More

ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ; ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 16: ಇರಾನ್ ಜೊತೆಗಿನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಮೇಲೆ ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ, ಎಲ್ಲವನ್ನೂ ಧ್ವಂಸಗೊಳಿಸಲಾಗಿದೆ ಎಂದಿದ್ದ ಟ್ರಂಪ್ ಇರಾನ್ ಕದನವಿರಾಮಕ್ಕೆ ರೆಡಿ ಇದ್ದರೂ ನಾವು ಸಿದ್ಧರಿಲ್ಲ ಎಂದಿದ್ದರು. ಆದರೆ, ನಿನ್ನೆ ಬೇರೆ ರೀತಿಯದ್ದೇ ಹೇಳಿಕೆ ನೀಡಿರುವ ಅವರು ನಾವು ಇರಾನ್ ಜೊತೆ ಯುದ್ಧ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ. ಇರಾನ್- ಇಸ್ರೇಲ್,…

Read More

ಕರಾವಳಿ ಕಥೆಯ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡು

ಕರಾವಳಿ ಭಾಗದ ಕಥೆ ಹೊಂದಿರುವ ಸಿನಿಮಾಗಳಿಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಅಂತಹ ಸಿನಿಮಾಗಳ ಸಾಲಿಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಕೂಡ ಸೇರ್ಪಡೆ ಆಗಲಿದೆ. ಈ ಮೊದಲು ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ‘ಅಧಿಪತ್ರ’ ಸಿನಿಮಾದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದ ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ ಆಗಿರಲಿದ್ದು, ಹಲವು ಹಾಸ್ಯ ಕಲಾವಿದರು ಅಭಿನಯಿಸುತ್ತಿದ್ದಾರೆ. ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು (Prakash Thuminad),…

Read More

ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ

ಹಲವು ವರ್ಷಗ ದರೋಡೆ ಹಾಗೂ ಅಧಿಕಾರಿಗಳ ಉತ್ಸವದ ಬಳಿಕ ಬಿಬಿಎಂಪಿಯನ್ನು ಜಿಬಿಎ ಎನ್ನುವ ದೊಡ್ಡ ನಾಟಕ ಮಂಡಳಿ ಮಾಡಿ ಚುನಾವಣೆಗೆ ತಯಾರಿ ನಡೆಸಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಈಗ ಶನಿವಾರದಂದು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿರುವ ಕರಡು ಮತಪಟ್ಟಿಯು ಕಾಂಗ್ರೆಸ್‌ನ ನಾಟಕ ಹಾಗೂ ಸುಳ್ಳುಗಳನ್ನು ಅನಾವರಣ ಮಾಡಿದೆ. ಹಾಗೆಯ ಮತಚೋರಿ ಎನ್ನುವುದು ರಾಹುಲ್‌ ಗಾಂಧಿ ಪಟಾಲಂನ ಸುಳ್ಳುಗಳ ಸರಣಿಯ ಮುಂದುವರಿದ ಭಾಗ ಎನ್ನುವುದು ಖಾತ್ರಿಯಾಗುತ್ತದೆ. ಆದರೀಗ ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಾಡಿರುವ ‘ಮತಚೋರಿ’ಯನ್ನು ನಾನು…

Read More

ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಜೆರುಸಲೇಂ, ಮಾರ್ಚ್ 16: ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ರಾತ್ರೋರಾತ್ರಿ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು…

Read More

ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ

ದಾವಣಗೆರೆ, (ಮಾರ್ಚ್ 16): ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕರಣವಾಗಲಿದೆ. ಇನ್ನು ಎಲೆಕ್ಷನ್ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಇತ್ತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದರೆ ಇತ್ತ ಬಿಜೆಪಿ ಬೈ ಎಲೆಕ್ಷನಲ್ಲಿ ಕಮಲ ಅರಳಿಸುವ…

Read More