ನವದೆಹಲಿ, ಮಾರ್ಚ್ 16: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಪುತ್ರಿ ಹಿಮಾಯನಿ ಪುರಿ ಹಲವಾರು ವ್ಯಕ್ತಿಗಳು ಮತ್ತು ಆನ್‌ಲೈನ್ ಪ್ಲಾಟ್ಫಾರ್ಮ್ಗಳ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವ್ಯಕ್ತಿಗಳು ಮತ್ತು ಪ್ಲಾಟ್ಫಾರ್ಮ್ಗಳು ತಮ್ಮ ಬಗ್ಗೆ ಮಾನಹಾನಿಕರ ವಿಷಯವನ್ನು ಹರಡುತ್ತಿದ್ದು, ಕ್ರಿಮಿನಲ್ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಕಲ್ಪಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದೆಹಲು ಹೈಕೋರ್ಟ್ನಲ್ಲಿ 10 ಕೋಟಿ ರೂ.ಗಳ ಸಿವಿಲ್ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಎಎನ್‌ಐ ವರದಿ ಪ್ರಕಾರ, ಹಿಮಾಯನಿ ಪುರಿ ತಮ್ಮ ಅರ್ಜಿಯಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ತಮ್ಮ ಬಗ್ಗೆ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ವ್ಯಾಪಕವಾಗಿ ಪ್ರಸಾರ ಮಾಡಲಾಗಿದ್ದು, ತಮ್ಮ ಮತ್ತು ಎಪ್ಸ್ಟೀನ್ ನಡುವಿನ ಸಂಬಂಧವನ್ನು ತಪ್ಪು ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಹೇಳಿದ್ದಾರೆ. ಈ ವಿಷಯವು ತಮ್ಮ ಖ್ಯಾತಿ ಮತ್ತು ವೈಯಕ್ತಿಕ ವಿಶ್ವಾಸಾರ್ಹತೆಗೆ ಗಂಭೀರ ಹಾನಿಯನ್ನುಂಟುಮಾಡಿದೆ ಎಂದು ಆರೋಪಿಸಿದ್ದಾರೆ.
ಹಿಮಾಯನಿ ಪುರಿ ಅವರು ಜೆಫ್ರಿ ಎಪ್ಸ್ಟೀನ್ ಜೊತೆ ನೇರ ಅಥವಾ ಪರೋಕ್ಷ ವ್ಯವಹಾರ, ಹಣಕಾಸು, ವೈಯಕ್ತಿಕ ಅಥವಾ ನೆಟ್‌ವರ್ಕ್ ಸಂಪರ್ಕಗಳನ್ನು ಹೊಂದಿದ್ದಾರೆ ಎಂದು ಸೂಚಿಸುವ ಆಧಾರರಹಿತ ಆರೋಪಗಳನ್ನು ಪ್ರತಿವಾದಿಗಳು ಸೃಷ್ಟಿಸಿದ್ದಾರೆ ಮತ್ತು ಪ್ರಸಾರ ಮಾಡಿದ್ದಾರೆ. ಅವರು ಎಪ್ಸ್ಟೀನ್ ಅಥವಾ ಅವರ ಸಹಚರರಿಂದ ಹಣಕಾಸಿನ ಪ್ರಯೋಜನಗಳನ್ನು ಪಡೆದಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಲೆಹ್ಮನ್ ಬ್ರದರ್ಸ್‌ನ ಪತನಕ್ಕೆ ರಾಬರ್ಟ್ ಮಿಲ್ಲಾರ್ಡ್ ಪುರಿಯವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಪ್ರಕಟಿಸಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಈ ಆರೋಪಗಳು “ಸಂಪೂರ್ಣವಾಗಿ ಸುಳ್ಳು, ದುರುದ್ದೇಶಪೂರಿತವಾದುದು” ಎಂದು ಹಿಮಾಯನಿ ಪುರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎಕ್ಸ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಲಿಂಕ್ಡ್‌ಇನ್ ಸೇರಿದಂತೆ ಹಲವಾರು ಪ್ಲಾಟ್ಫಾರ್ಮ್ಗಳು, ಬ್ಲಾಗ್‌ಗಳು ಮತ್ತು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಲ್ಲಿ ಈ ವಿಷಯವನ್ನು ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇವು ವರದಿಗಳು, ಪೋಸ್ಟ್‌ಗಳು, ವೀಡಿಯೊಗಳು, ಕಿರುಚಿತ್ರಗಳು, ಥಂಬ್‌ನೇಲ್‌ಗಳು ಮತ್ತು ಹೆಡ್ಲೈನ್ಗಳ ಮೂಲಕ ಸುಳ್ಳು ನಿಸುದ್ದಿಗಳನ್ನು ಹರಡಿದೆ ಮತ್ತು ತಮ್ಮ ಖ್ಯಾತಿಗೆ ಹಾನಿ ಮಾಡಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಹೀಗಾಗಿ, ವಿವಾದಿತ ವಿಷಯವನ್ನು ಡಿಲೀಟ್ ಮಾಡಲು ನ್ಯಾಯಾಲಯದ ಆದೇಶ, ಮುಂದಿನ ದಿನಗಳಲ್ಲಿ ಅಂತಹ ವಿಷಯವನ್ನು ಪ್ರಕಟಿಸದಂತೆ ಶಾಶ್ವತ ತಡೆಯಾಜ್ಞೆ, 10 ಕೋಟಿ ರೂ. ಪರಿಹಾರ ಮತ್ತು ಪ್ರತಿವಾದಿಗಳಿಂದ ಬೇಷರತ್ತಾದ ಕ್ಷಮೆಯಾಚನೆಯನ್ನು ಹಿಮಾಯನಿ ಪುರಿ ಕೋರಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಮಾರ್ಚ್ 16): ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ (SSLC Exams) ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ (KSRTC) ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ. ಹೌದು.. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ.
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ (exam center) ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು (bengaluru) ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ.
ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 16: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸದನದಲ್ಲಿ ಸರ್ಕಾರದ ಪರವಾಗಿ ಮಾತನಾಡಿದ್ದು, ಈ ವಿಷಯವನ್ನು ಸರ್ಕಾರ ಈಗಾಗಲೇ ಬಹಳ ಗಂಭೀರವಾಗಿ ಪರಿಗಣಿಸಿದೆ. ಸ್ಪೀಕರ್ ಅವರ ಪೀಠದಿಂದ ಈ ಮಾತು ಬಂದ ಮೇಲೆ ಸರ್ಕಾರ ಇದನ್ನು ಸ್ವಾಭಾವಿಕವಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ. ಕಂದಾಯ ಇಲಾಖೆಯಲ್ಲಿ 90 ಪ್ರಶ್ನೆಗಳಿಗೆ ಕೇವಲ 20 ಉತ್ತರಗಳು ಮಾತ್ರ ಬಂದಿರುವುದು ಸೇರಿದಂತೆ ಹಲವು ಇಲಾಖೆಗಳಲ್ಲಿ ಇದೇ ಪರಿಸ್ಥಿತಿ ಇರುವ ಬಗ್ಗೆ ಪರಿಶೀಲಿಸಲಾಗಿದೆ. ಹಾಗಾಗಿ, ಸರ್ಕಾರದ ಪರವಾಗಿ ಮತ್ತು ಮುಖ್ಯಮಂತ್ರಿಗಳ ಪರವಾಗಿ ಮುಂದಿನ ದಿನಗಳಲ್ಲಿ ಇಂತಹ ಬೆಳವಣಿಗೆ ಮರುಕಳಿಸದಂತೆ ಭರವಸೆ ನೀಡುತ್ತೇನೆ. ಎಲ್ಲಾ ಪ್ರಶ್ನೆಗಳಿಗೆ ಸಕಾಲದಲ್ಲಿ ಉತ್ತರ ಸಿಗಲು ಕ್ರಮ ಕೈಗೊಳ್ಳುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ಈ ಮರಳಿನಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಿ.
ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?
ಮೊದಲು ಇಲ್ಯೂಷನ್ ಚಿತ್ರವನ್ನು ನೋಡುವಾಗ ಅಂತಹದ್ದೇನು ಹೊಸದು ಕಾಣಿಸಲ್ಲ. ಆದರೆ ಈ ಚಿತ್ರದಲ್ಲಿರುವ ಗುಪ್ತ ವಸ್ತುಗಳನ್ನು ಕಂಡು ಹಿಡಿಯುವುದೇ ದೊಡ್ಡ ಸವಾಲು. ಈ ಮರಳಿನಲ್ಲಿ ಸರೀಸೃಪವೊಂದು ಅಡಗಿ ಕುಳಿತಿದ್ದು, ಐದು ಸೆಕೆಂಡುಗಳೊಳಗೆ ಈ ಹಾವನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ. ಕಣ್ಣು ಬಿಟ್ಟು ಈ ಚಿತ್ರ ನೋಡಿ ಒಗಟು ಬಿಡಿಸಲು ಪ್ರಯತ್ನಿಸಿ.
ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಮರಳು ಕಾಣಿಸುತ್ತದೆ. ಆದರೆ ಈ ಮರಳಿನಲ್ಲಿ ಹಾವೊಂದು ಕಣ್ಣಿಗೆ ಬೀಳದಂತೆ ಅವಿತು ಕುಳಿತಿದೆ. ನೀವು ಈ ಹಾವನ್ನು ಕಂಡು ಹಿಡಿಯಲು ಕಷ್ಟ ಪಡುತ್ತಿದ್ದರೆ ನಾವು ಹೇಳುವ ಸಲಹೆ ಅನುಸರಿಸಿ. ಚಿತ್ರಗಳನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಹಾವನ್ನು ಪತ್ತೆ ಹಚ್ಚಲು ನೋಡಿ. ಏನೇ ಪ್ರಯತ್ನ ಪಟ್ಟರೂ ಹಾವು ಹುಡುಕಲು ಸಾಧ್ಯವಾಗಿಲ್ಲವೇ ಹೆಚ್ಚು ಚಿಂತಿಸಬೇಡಿ, ಈ ಕೆಳಗಿನ ಚಿತ್ರದಲ್ಲಿ ಹಾವು ಎಲ್ಲಿದೆ ಎಂದು ಗುರುತಿಸಿದ್ದೇವೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು, (ಮಾರ್ಚ್ 16): ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ (Woman) ಇನ್ಸ್ಪೆಕ್ಟರ್ (Inspector) ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ(Dakshina Kannada) ಜಿಲ್ಲೆ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್ಪೆಕ್ಟರ್ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.
ಮಹಿಳೆಯ ಆರೋಪವೇನು?
ಪ್ರಕರಣವೊಂದರಲ್ಲಿ ಮೂಡಬಿದ್ರೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಸಂಬಂಧ ಬಂಧಿತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾಳೆ. ಈ ವೇಳೆ ಇನ್ಸ್ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಮಹಿಳೆಯೇ ಆರೋಪಿಸಿದ್ದಾರೆ. ತಿಯನ್ನು ಬಿಡಬೇಕಂದ್ರೆ ಲೈಂಗಿಕವಾಗಿ ಸಹಕರಿಸು. ಇಲ್ಲ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲಿ ಪೋಸ್ಟ್ಗಾಗಿ ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹಣ ಕೊಡದಿದ್ರೆ ನಿನ್ನ ಪತಿ ಮೇಲೆ ರೌಡಿಶೀಟ್ ಓಪನ್ ಮಾಡುತ್ತೇನೆ ಎಂದು ಇನ್ಸ್ಪೆಕ್ಟರ್ ಸಂದೇಶವನ್ನ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.
ನೂರಾರು ಮಹಿಳೆಯರು ಇದೇ ರೀತಿ ನನ್ನ ಜೊತೆಗೆ ಇದ್ದಾರೆ. ಅವರಂತೆ ನೀನು ಕೂಡ ಲೈಂಗಿಕವಾಗಿ ಸಹಕರಿಸು. ಇಲ್ಲದಿದ್ರೆ ಡ್ರಗ್ಸ್ ಪೆಡ್ಲರ್ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯುತ್ತೇನೆ ಎಂದು ಇನ್ಸ್ಪೆಕ್ಟರ್ ಸಂದೇಶ್ ಧಮ್ಕಿ ಹಾಕಿದ್ದಾಗಿ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಈ ಸಂಬಂಧ ಮಹಿಳೆ, ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಯಾವುದೇ ಉಪಯೋಗವಾಗಿಲ್ಲ. ಪಿಐ ಸಂದೇಶ ಮೇಲೆ ಮೇಲಾಧಿಕಾರಿಗಳಿಗಳ ಕೃಪಾಕಟಾಕ್ಷ ಇದೆ. ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ವಾಷಿಂಗ್ಟನ್, ಮಾರ್ಚ್ 16: ಇರಾನ್ ಜೊತೆಗಿನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಮೇಲೆ ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ, ಎಲ್ಲವನ್ನೂ ಧ್ವಂಸಗೊಳಿಸಲಾಗಿದೆ ಎಂದಿದ್ದ ಟ್ರಂಪ್ ಇರಾನ್ ಕದನವಿರಾಮಕ್ಕೆ ರೆಡಿ ಇದ್ದರೂ ನಾವು ಸಿದ್ಧರಿಲ್ಲ ಎಂದಿದ್ದರು. ಆದರೆ, ನಿನ್ನೆ ಬೇರೆ ರೀತಿಯದ್ದೇ ಹೇಳಿಕೆ ನೀಡಿರುವ ಅವರು ನಾವು ಇರಾನ್ ಜೊತೆ ಯುದ್ಧ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ.
ಇರಾನ್- ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅಮೆರಿಕ ಇರಾನ್ ಜೊತೆ ಚರ್ಚೆ ನಡೆಸುತ್ತಿದೆ. ಆದರೆ ಯುದ್ಧವನ್ನು ಕೊನೆಗೊಳಿಸಲು ಇರಾನ್ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ.
ಭಾನುವಾರ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರ ಜೊತೆ ಮಾತನಾಡಿದ ಟ್ರಂಪ್, “ಹೌದು, ನಾವು ಇರಾನ್ ಜೊತೆ ಮಾತನಾಡುತ್ತಿದ್ದೇವೆ” ಎಂದಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹರಡಿರುವ ಮತ್ತು ಜಾಗತಿಕ ಮಾರುಕಟ್ಟೆಗಳನ್ನು ತಲ್ಲಣಗೊಳಿಸಿರುವ ಸಂಘರ್ಷವನ್ನು ಕೊನೆಗೊಳಿಸಲು ಯಾವುದಾದರೂ ರಾಜತಾಂತ್ರಿಕತೆ ನಡೆಯುತ್ತಿದೆಯೇ ಎಂದು ಕೇಳಿದಾಗ ಅದಕ್ಕೆ ಉತ್ತರಿಸಿದ ಟ್ರಂಪ್, “ನಾವು ಮಾತುಕತೆ ನಡೆಸುತ್ತಿದ್ದೇವೆ. ಆದರೆ ಅವರು ಯುದ್ಧ ನಿಲ್ಲಿಸಲು ಸಿದ್ಧರಾಗಿದ್ದಾರೆಂದು ನನಗೆ ಅನಿಸುವುದಿಲ್ಲ” ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಇರಾನ್‌ನ ವಿದೇಶಾಂಗ ಸಚಿವರು ಅಮೆರಿಕದ ಜೊತೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಫೆಬ್ರವರಿ 28ರಂದು, ಇರಾನ್‌ನ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಡಜನ್ಗಟ್ಟಲೆ ಇರಾನಿನ ಹಿರಿಯ ಅಧಿಕಾರಿಗಳು ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಮೊದಲ ದಿನದಂದೇ ಪ್ರಾಣ ಕಳೆದುಕೊಂಡರು. ಇದಾದ ನಂತರ ಇರಾನ್ ಕೂಡ ಪ್ರತೀಕಾರದ ದಾಳಿ ನಡೆಸಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳು ಮತ್ತು ಇಸ್ರೇಲ್ ಮೇಲೆ ದಾಳಿ ನಡೆಸಿತ್ತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರಾವಳಿ ಭಾಗದ ಕಥೆ ಹೊಂದಿರುವ ಸಿನಿಮಾಗಳಿಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಅಂತಹ ಸಿನಿಮಾಗಳ ಸಾಲಿಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಕೂಡ ಸೇರ್ಪಡೆ ಆಗಲಿದೆ. ಈ ಮೊದಲು ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ‘ಅಧಿಪತ್ರ’ ಸಿನಿಮಾದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದ ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ ಆಗಿರಲಿದ್ದು, ಹಲವು ಹಾಸ್ಯ ಕಲಾವಿದರು ಅಭಿನಯಿಸುತ್ತಿದ್ದಾರೆ. ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು (Prakash Thuminad), ನವೀನ್ ಡಿ. ಪಡೀಲ್, ದೀಪಕ್ ರೈ ಪಾಣಾಜೆ, ರಕ್ಷಿತಾ, ನಮಿತಾ ಕಿರಣ್, ರಘು ಪಾಂಡೇಶ್ವರ, ರಾಮ್‌ದಾಸ್, ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸುತ್ತಿದ್ದಾರೆ.
ನಿರ್ದೇಶಕ ಚಯನ್ ಶೆಟ್ಟಿ ಅವರ ಚೊಚ್ಚಲ ಸಿನಿಮಾ ‘ಅಧಿಪತ್ರ’ಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಅವರು ‘ಮ್ಯಾರೇಜ್ ಪಾರ್ಟಿ’ ಮೂಲಕ ಸಂಪೂರ್ಣ ಮನರಂಜನೆಯ ಕಥೆಯನ್ನು ಪ್ರೇಕ್ಷಕರಿಗೆ ತೋರಿಸಲಿದ್ದಾರೆ. ಯಾವುದೇ ಸದ್ದು ಗದ್ದಲ ಇಲ್ಲದೇ ಈ ಸಿನಿಮಾಗೆ ಮೊದಲ ಹಂತದ ಚಿತ್ರೀಕರಣ ಮುಗಿಸಲಾಗಿದೆ. ‘ಇದು ಹಾಸ್ಯಪ್ರಧಾನ ಸಿನಿಮಾ. ಗಟ್ಟಿ ಕಥೆಯೊಂದಿಗೆ ಪ್ರತಿ ಹಂತದಲ್ಲಿಯೂ ಕಚಗುಳಿಯಿಡುವ ಕಾಮಿಡಿ ಇರಲಿದೆ’ ಎಂದು ಚಿತ್ರತಂಡ ಹೇಳಿದೆ.
ಒಂದು ಊರಿನಲ್ಲಿ ನಡೆಯುವ ಫನ್ನಿ ಘಟನೆಗಳ ಸುತ್ತ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಕಥೆ ಸಾಗುತ್ತದೆ. ಕುಂದಾಪುರದ ಲೊಕೇಷನ್ಗಳಲ್ಲಿ ಶೂಟಿಂಗ್ ನಡೆದಿದೆ. ಈಗಾಗಲೇ ಮೊದಲ ಹಂತದಲ್ಲಿ 20 ದಿನಗಳ ಕಾಲ ಚಿತ್ರೀಕರಣ ನಡೆಸಿರುವ ಚಿತ್ರತಂಡ, 2ನೇ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದೆ. ಈ ಸಿನಿಮಾದಲ್ಲಿ ವಿನೀತ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ.
ಈಗಾಗಲೇ ಹಲವಾರು ತುಳು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರಿಗೆ ಪರಿಚಯ ಆಗಿರುವ ವಿನೀತ್ ಕುಮಾರ್ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ. ಕುಂದಾಪುರ ಮೂಲದವರಾದ ನಿರ್ದೇಶಕ ಚಯನ್ ಶೆಟ್ಟಿ ಅವರು ತಮ್ಮೂರಿನಲ್ಲಿ ನಡೆಯುವ ಮಜವಾದ ಕಥೆಯೊಂದನ್ನು ‘ಮ್ಯಾರೇಜ್ ಪಾರ್ಟಿ’ ಸಿನಿಮಾದಲ್ಲಿ ಹೇಳಲಿದ್ದಾರೆ.
ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ನಿರ್ಮಾಪಕ ಸಂತೋಷ್ ವಿ. ಅವರು ‘ವರಾಹಿ ಫಿಲ್ಮ್ಸ್’ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಶ್ರೀಕಾಂತ್ ಅವರ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಅವರ ಸಂಗೀತ ನಿರ್ದೇಶನ, ನಿತಿನ್ ಶೆಟ್ಟಿ ಅವರ ಸಂಕಲನ ಈ ಸಿನಿಮಾಗೆ ಇರಲಿದೆ. ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಸಾಹಿತ್ಯ ಬರೆದಿದ್ದಾರೆ.
ಹಲವು ವರ್ಷಗ ದರೋಡೆ ಹಾಗೂ ಅಧಿಕಾರಿಗಳ ಉತ್ಸವದ ಬಳಿಕ ಬಿಬಿಎಂಪಿಯನ್ನು ಜಿಬಿಎ ಎನ್ನುವ ದೊಡ್ಡ ನಾಟಕ ಮಂಡಳಿ ಮಾಡಿ ಚುನಾವಣೆಗೆ ತಯಾರಿ ನಡೆಸಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಈಗ ಶನಿವಾರದಂದು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿರುವ ಕರಡು ಮತಪಟ್ಟಿಯು ಕಾಂಗ್ರೆಸ್‌ನ ನಾಟಕ ಹಾಗೂ ಸುಳ್ಳುಗಳನ್ನು ಅನಾವರಣ ಮಾಡಿದೆ. ಹಾಗೆಯ ಮತಚೋರಿ ಎನ್ನುವುದು ರಾಹುಲ್ ಗಾಂಧಿ ಪಟಾಲಂನ ಸುಳ್ಳುಗಳ ಸರಣಿಯ ಮುಂದುವರಿದ ಭಾಗ ಎನ್ನುವುದು ಖಾತ್ರಿಯಾಗುತ್ತದೆ. ಆದರೀಗ ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಾಡಿರುವ ‘ಮತಚೋರಿ’ಯನ್ನು ನಾನು ಅನಾವರಣ ಮಾಡುತ್ತೇನೆ.
ಶನಿವಾರ ಸಂಜೆ ಮಲಗುವ ವೇಳೆಗೆ ಜಿಬಿಎ ಕರಡು ಮತಪಟ್ಟಿ ಬಿಡುಗಡೆ ಎನ್ನುವ ನೋಟಿಫಿಕೇಷನ್ ನನ್ನ ಮೊಬೈಲ್‌ಗೆ ಬಂತು. ಕೂಡಲೇ ಜಿಬಿಎ ವೆಬ್‌ಸೈಟ್ ಹೋಗಿ ನನ್ನ ಹೆಸರು ಹುಡುಕುವ ಪ್ರಯತ್ನ ಮಾಡಿದೆ. ಸತತ ಅರ್ಧಗಂಟೆಯ ಹರಸಾಹಸದ ಬಳಿಕ ಕೊನೆಗೂ ನಮ್ಮ ಬಡಾವಣೆಯಲ್ಲಿನ ಮತಪಟ್ಟಿಯಲ್ಲಿ ಹೆಸರು ಕಾಣಿಸಿತು. ಬಳಿಕ ನನ್ನ ಹೆಂಡತಿಯ ಹೆಸರನ್ನು ನಾಲ್ಕು ಬಾರಿ ಹುಡುಕಿದರೂ ಸಿಗಲಿಲ್ಲ. ಮತ್ತೆ ಬೆಳಗ್ಗೆ ಎದ್ದು ಲ್ಯಾಪ್‌ಟಾಪ್‌ನಲ್ಲಿ ಹುಡುಕಿದೆ. ಮತಪಟ್ಟಿಯಿಂದ ಆಕೆಯ ಹೆಸರು ಮಾಯವಾಗಿತ್ತು. ಇದಾದ ಬಳಿಕ ಆಕೆಯ ಹೆಸರನ್ನು ಕೇಂದ್ರ ಚುನಾವಣೆ ಆಯೋಗದ ವೆಬ್‌ಸೈಟ್‌ನಲ್ಲಿ ಹುಡುಕಿದೆ. ಅಲ್ಲಿಯ ಆಕೆಯ ಮತಪತ್ರದ ಎಲ್ಲ ವಿವರ ಹಾಗೂ ಮತಕೇಂದ್ರದ ಮಾಹಿತಿ ಕೂಡ ಇದೆ. ಅದರ ಜೊತೆಗೆ ಸಿರೀಯಲ್ ನಂಬರ್ ಕೂಡ ಲಭ್ಯವಿದೆ. ಬಳಿಕ ನನ್ನ ಮಾಹಿತಿಯನ್ನು ಪರಿಶೀಲಿಸಿದಾಗ ಒಂದಿಷ್ಟು ಸಮಸ್ಯೆ ಕಾಣಿಸಿತು. ನನ್ನ ಸಿರೀಯಲ್ ನಂಬರ್, ಮತಕೇಂದ್ರದ ಸಂಖ್ಯೆ ಬದಲಾಗಿತ್ತು. ಆಗ ರಾಜ್ಯ ಚುನಾವಣೆ ಆಯೋಗ ಹೀಗೆ ನಾಟಕವಾಡಿರಬಹುದು ಎನ್ನುವ ಸಂಶಯ ನನಗೆ ಮೂಡಲಾರಂಭಿಸಿತು.
ನಾನು ಕಳೆದ ಲೋಕಸಭೆ ಚುನಾವಣೆಯ ವೇಳೆಯಲ್ಲಿ ನನ್ನ ಹೆಂಡತಿಯ ಹೆಸರನ್ನು ಸಾಗರ ವಿಧಾನಸಭೆ ಕ್ಷೇತ್ರದ ಮತಪಟ್ಟಿಯಿಂದ ಬೆಂಗಳೂರಿನ ಹಾಲಿ ವಿಳಾಸಕ್ಕೆ ವರ್ಗಾಯಿಸಿದ್ದೆ. ನಿಯಮದಂತೆ ಅದು ವರ್ಗಾವಣೆಯಾಗಿ ಸ್ಥಳೀಯ ಮತಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಹಾಗೆಯೇ ಆಕೆಯು ಕಳೆದ ಲೋಕಸಭೆ ಚುನಾವಣೆಯ ವೇಳೆಗೆ ಮತದಾನವನ್ನೂ ಮಾಡಿದ್ದಳು. ಆದರೆ ಜಿಬಿಎಯ ಕರಡು ಮತಪಟ್ಟಿಯಲ್ಲಿ ಇದು ಕಾಣಿಸಿಕೊಂಡಿಲ್ಲ. ಜೊತೆಗೆ ನಮ್ಮೆಲ್ಲರ ಸಿರೀಯಲ್ ನಂಬರ್ ಕೂಡ ಬದಲಾಗಿದೆ. ನನ್ನ ಗುಮಾನಿಯಂತೆ ರಾಜ್ಯ ಚುನಾವಣೆ ಆಯೋಗದ ಅಧಿಕಾರಿಗಳು 2023ರ ವಿಧಾನಸಭೆ ಚುನಾವಣೆಯ ಮತಪಟ್ಟಿಯನ್ನು ಇರಿಸಿಕೊಂಡು ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ. 2024ರಲ್ಲಿ ನೂತನ ಮತಪಟ್ಟಿ ಇರುವಾಗ ಹಳೆಯ ಮತಪಟ್ಟಿಗೆ ಹೋಗಿದ್ದೇಕೆ ಎನ್ನುವುದು ಸ್ಪಷ್ಟವಾಗಿಲ್ಲ. ಇವೆರಡು ಮತಪಟ್ಟಿಯಲ್ಲಿ ಯಾವ ʼರಾಜಕೀಯʼ ಅಡಗಿದೆ ಎನ್ನುವುದನ್ನು ಸಂವಿಧಾನ ರಕ್ಷಕ ಪಡೆಯೇ ಸ್ಪಷ್ಟಪಡಿಸಬೇಕಿದೆ. ಇನ್ನೊಂದೆಡೆ ನನ್ನ ಹೆಂಡತಿ ರೀತಿಯಲ್ಲಿ ಮತಪಟ್ಟಿಯಿಂದ ಅನಗತ್ಯವಾಗಿ ಹೊರ ಇರುವವರು ಮತ್ತೇಕೆ ನಿಮ್ಮ ಗ್ರೇಟ್ ಜಿಬಿಎ ಕಚೇರಿಗೆ ಅಲೆಯಬೇಕು ಎನ್ನುವ ಮಾಹಿತಿಯನ್ನು ಜನಸಾಮಾನ್ಯರಿಗೆ ಚುನಾವಣೆ ಆಯುಕ್ತರು ನೀಡಬೇಕಿದೆ.
ಇಂತಹ ದುರುದ್ದೇಶಪೂರ್ವಕವಾದ ಕ್ರಮಕ್ಕೆ ಒಂದು ಸುಳ್ಳನ್ನು ಸೇರಿಸಲಾಗಿದೆ. ಇವರ ಪ್ರಕಾರ ಕಳೆದ ಅಕ್ಟೋಬರ್‌ನಲ್ಲಿನ ಮಾಹಿತಿ ಪ್ರಕಾರ ಮತಪಟ್ಟಿ ಕರಡು ಪ್ರಕಟಿಸಲಾಗಿದೆ. ಎಂತಹ ವಿಪರ್ಯಾಸವೆಂದರೆ 2024ರ ಏಪ್ರಿಲ್‌ನಲ್ಲಿ ಪ್ರಕಟಿಸಿದ ಕರಡು ಪಟ್ಟಿಯಲ್ಲಿರುವ ನನ್ನ ಹೆಂಡತಿ ಹೆಸರು, ಇದ್ದಕ್ಕಿದ್ದಂತೆ ಮಾಯವಾಗಿದೆ. ಹಾಗಿದ್ದರೆ ನನ್ನ ಹೆಂಡತಿ ಹೆಸರು ಅಕ್ರಮವಾಗಿ ಮತಪಟ್ಟಿಗೆ ಸೇರಿದೆಯೆನ್ನುವ ಸಂಶಯದಿಂದ ರದ್ದು ಮಾಡಿರಬಹುದು ಎಂದು ಬಡಾವಣೆಯಲ್ಲಿ ವಿಚಾರಿಸಿದೆ. ಕಳೆದೊಂದು ವರ್ಷದಲ್ಲಿ ನಮ್ಮ ಬಡಾವಣೆಗೆ ಜಿಬಿಎ ಅಥವಾ ಹಿಂದಿನ ಬಿಬಿಎಂಪಿ ಯಾವುದೇ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಹಾಗೆಯೇ ನನ್ನ ಮೊಬೈಲ್‌ಗೆ ಈ ಸಂಬಂಧ ಯಾವುದೇ ಕರೆ ಕೂಡ ಬಂದಿಲ್ಲ. ಏಕೆಂದರೆ ನನ್ನ ಹೆಂಡತಿಯ ಮತಪತ್ರದಲ್ಲಿ ನನ್ನ ಮತಪತ್ರದ ಜೋಡಣೆಯಾಗಿದೆ. ಕೇಂದ್ರ ಚುನಾವಣೆ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ಹುಡುಕುವಾಗ ನನ್ನ ಸಂಬಂಧಿ ಎನ್ನುವುದು ಅಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅಷ್ಟಕ್ಕೂ ರಾಜ್ಯ ಚುನಾವಣೆ ಆಯೋಗವು ಇಂತಹ ಯಾವುದೇ ಕೆಲಸ ಮಾಡಿರುವ ಹಾಗಿಲ್ಲ. ಬದಲಾಗಿ ʼಮಾಸ್ಟರ್ʼ ಅಣತಿಯಂತೆ 2023ರ ಮತಪಟ್ಟಿಯನ್ನು ಕಣ್ಮುಚ್ಚಿಕೊಂಡು ಮರು ಪ್ರಕಟಿಸಿದೆ.
ರಾಹುಲ್ ಅಣುಬಾಂಬ್ ಹಾಗೂ ಕರ್ನಾಟಕ
ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಹಾಕಿದ್ದ ಅಣುಬಾಂಬ್ ಹಾಗೂ ಹೈಡ್ರೋಜನ್ ಬಾಂಬ್ ನಿಮಗೆಲ್ಲ ಗೊತ್ತಿದೆ. ಅದಾದ ಬಳಿಕ ಆ ಬಾಂಬ್ ಲೋಕಸಭೆಯಲ್ಲೂ ಸ್ಫೋಟವಾಗಿತ್ತು. ಆ ಸಂದರ್ಭದಲ್ಲಿ ರಾಹುಲ್ ಗಾಂಧಿ ಪದೇಪದೆ ಒಂದು ವಿಚಿತ್ರವಾದ ಬೇಡಿಕೆ ಇರಿಸಿದ್ದರು. ಮತಪಟ್ಟಿಯ ಪಿಡಿಎಫ್ ಫೈಲ್‌ನಲ್ಲಿ ಸರ್ಚ್ ಅವಕಾಶವನ್ನು ಡಿಸೇಬಲ್ ಮಾಡಲಾಗಿದೆ. ಸರ್ಚ್ ಅವಕಾಶ ಇರುವ ಮತಪಟ್ಟಿಯನ್ನು ನಮ್ಮ ಕೈಗೆ ಕೊಡಿ ಎಂದು ಪದೇಪದೆ ಬಾಂಬ್ ಹಾಕುತ್ತಲೇ ಇದ್ದರು. ಇಂತಹ ಪಟ್ಟಿ ನೀಡಿದರೆ ಸುಲಭವಾಗಿ ಚುನಾವಣೆ ಆಯೋಗದ ಅಕ್ರಮವನ್ನು ಬಯಲಿಗೆ ಹಾಕಬಹುದು ಎನ್ನುವುದು ರಾಹುಲ್ ಗಾಂಧಿ ವಾದವಾಗಿತ್ತು. ಆದರೆ ಮತಪಟ್ಟಿಯ ಸುರಕ್ಷತೆ ಹಾಗೂ ದುರ್ಬಳಕೆ ತಡೆಯುವ ಉದ್ದೇಶದಿಂದ ಅದು ಅಸಾಧ್ಯ ಎನ್ನುವುದು ಚುನಾವಣೆಯ ಬಗ್ಗೆ ಲವಲೇಶ ಗೊತ್ತಿರುವ ಅಲ್ಪಜ್ಞಾನಿಗೂ ಗೊತ್ತಿದೆ. ಅಂದ ಹಾಗೆ ರಾಹುಲ್ ಅಣತಿಯನ್ನು ಪಾಲಿಸುವ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ರಾಜ್ಯ ಚುನಾವಣೆ ಆಯೋಗ ಕೂಡ ಪಿಡಿಎಫ್‌ನಲ್ಲಿ ಸರ್ಚ್ ಅವಕಾಶ ಕೊಟ್ಟಿಲ್ಲ. ಅದನ್ನು ಕೊಡುವುದು ಸರಿಯಲ್ಲ ಎನ್ನುವ ವಾದಕ್ಕೆ ನಾನು ಈಗಲೂ ಬದ್ಧವಾಗಿದ್ದೇನೆ. ರಾಹುಲ್ ಗಾಂಧಿ ರೀತಿಯಲ್ಲಿ ಪರಿಸ್ಥಿತಿಗೆ ತಕ್ಕಂತೆ ನಿಲುವು ಬದಲಿಸಲು ಸಾಧ್ಯವಿಲ್ಲ. ಆದರೆ ಕೇವಲ ಸಕ್ರಮವನ್ನಷ್ಟೇ ಮಾಡುವ ಮಂದಿ ಮಾಡಿರುವ ತೆರೆಮರೆಯ ನಾಟಕವನ್ನು ನಿಮಗೆ ತಿಳಿಸಲೇಬೇಕು.
ಕೇಂದ್ರ ಚುನಾವಣೆಯ ಆಯೋಗದ ವೆಬ್‌ಸೈಟ್‌ಗೆ ಯಾವುದೇ ಕ್ಷಣದಲ್ಲಿ ಭೇಟಿ ನೀಡಿದರೂ ನಿಮ್ಮ ಹೆಸರು, ಮತಚೀಟಿಯ ಸಂಖ್ಯೆ ಹಾಗೂ ಮೊಬೈಲ್ ನಂಬರ್ ಮೂಲಕ ವಿವರವನ್ನು ಪಡೆಯುವ ಅವಕಾಶವಿದೆ. ಇದರಿಂದ ಸುಲಭವಾಗಿ ನಿಮ್ಮ ಮತಚೀಟಿಯ ವಿವರವನ್ನು ನೀವು ಹುಡುಕಬಹುದು. ಆದರೆ ರಾಜ್ಯ ಚುನಾವಣೆ ಆಯೋಗವು ಪ್ರಕಟಿಸಿರುವ ವೆಬ್‌ಸೈಟ್‌ನಲ್ಲಿ ಅತ್ಯಂತ ಬುದ್ಧಿವಂತಿಕೆಯ ಕೆಲಸ ಮಾಡಲಾಗಿದೆ. ಹೆಸರು ಹಾಗೂ ಮತಚೀಟಿ ಸಂಖ್ಯೆಯ ಮೂಲಕ ಸರ್ಚ್ ಮಾಡುವ ಅವಕಾಶವನ್ನು ತೋರಿಸಲಾಗಿದೆ. ಆದರೆ ಅದನ್ನು ಡಿಸೇಬಲ್ ಮಾಡಿ, ದೂರದಲ್ಲಿನ ಚಂದಮಾಮನನ್ನು ತೋರಿಸಿ ಆಸೆ ಹುಟ್ಟಿಸುವ ಕೆಲಸ ಮಾಡಲಾಗಿದೆ. ಅಂದರೆ ಕರಡು ಮತಪಟ್ಟಿಯಲ್ಲಿನ ದಾಖಲೆಯನ್ನು ಸಾಮಾನ್ಯ ಮತದಾರರು ಹುಡುಕಲು ಸಾಧ್ಯವೇ ಇಲ್ಲದಂತಹ ಕೌಶಲ್ಯವನ್ನು ಜಿಬಿಎಯ ಅಧಿಕಾರಿಗಳು ತೋರಿಸಿದ್ದಾರೆ. ಮುಂದಿನ ಕೆಂಪೆಗೌಡ ಪ್ರಶಸ್ತಿಯನ್ನು ಇವರಿಗೆ ನೀಡಬಹುದು. ಹಾಗೆಯೇ ಲೋಕಸಭೆಯಲ್ಲಿ ಕೇಂದ್ರ ಚುನಾವಣೆ ಅಯೋಗದ ಮುಖ್ಯ ಆಯುಕ್ತರ ಮಹಾಭಿಯೋಗಕ್ಕೆ ಮುಂದಾಗಿರುವಂತೆ, ರಾಜ್ಯದಲ್ಲಿಯೂ ಆ ಕೆಲಸ ಮಾಡಬಹುದು.
ಕಾಂಗ್ರೆಸ್ ಎನ್ನುವ ಪಕ್ಷವು ರಾಷ್ಟ್ರ ರಾಜಕೀಯದಿಂದ ಸುಖಾಸುಮ್ಮನೇ ಮಾಯವಾಗುತ್ತಿಲ್ಲ. ಈ ರೀತಿಯ ಇಬ್ಬಗೆಯ ನೀತಿ ಹಾಗೂ ದಿಕ್ಕು ದಿಸೆಯಲ್ಲದ ನಿಲುವಿನಿಂದ ಮತದರರ ಮನಸ್ಸಿನಿಂದ ದೂರವಾಗುತ್ತಿದೆ. ಒಂದೊಮ್ಮೆ ಕೇಂದ್ರ ಚುನಾವಣೆ ಆಯೋಗವು ಸಂವಿಧಾನ ಬಾಹಿರವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಸಾಧಿಸಿ ತೋರಿಸಬೇಕಿದ್ದರೆ, ರಾಜ್ಯ ಚುನಾವಣೆ ಆಯೋಗದ ಕೆಲಸದಲ್ಲಿ ಆ ಎಲ್ಲ ಸುಧಾರಣೆ, ಸಕ್ರಮಗಳನ್ನು ಜಾರಿ ಮಾಡಿ ಮಾದರಿಯಾಗಬೇಕು. ಆಗ ಜನರಿಗೂ ನಂಬಿಕೆ ಬರುತ್ತದೆ ಹಾಗೂ ನಿಮ್ಮ ಹೋರಾಟ ಸರಿಯಾಗಿದೆ ಎನ್ನುವುದು ಅರಿವಾಗುತ್ತದೆ. ಆದರೆ ಈ ಕಾಂಗ್ರೆಸ್‌ನವರು ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಟಾರ್ಚ್ ಹಿಡಿದುಕೊಂಡು ಹೋಗಿ ಬೀಳುತ್ತಾರೆ. ಇವರನ್ನು ಯಾರಿಂದಲೂ ಸುಧಾರಿಸಲು ಸಾಧ್ಯವಿಲ್ಲ. ಅಂದಹಾಗೆ ದೇಶದಲ್ಲಿನ ಕಾಂಗ್ರೆಸ್ ಹಾಗೂ ಕರ್ನಾಟಕದಲ್ಲಿನ ಬಿಜೆಪಿಗೆ ಯಾವುದೇ ವ್ಯತ್ಯಾಸವಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇಲ್ಲಿ ನಿದ್ದೆಯಲ್ಲಿರುವ ನಾಯಕರಿಗೆ ಇಂತಹ ಸೂಕ್ಷ್ಮಗಳು ಗೊತ್ತಾಗುವಷ್ಟರಲ್ಲಿ ಜಿಬಿಎ ಚುನಾವಣೆ ಮುಗಿಯದಿದ್ದರೆ ಸಾಕು.
ಜೆರುಸಲೇಂ, ಮಾರ್ಚ್ 16: ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ರಾತ್ರೋರಾತ್ರಿ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ.
ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು ಈ ವಿಮಾನವನ್ನು ಬಳಸುತ್ತಿದ್ದರು ಎಂದು ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ.
“ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕನ ವಿಮಾನವನ್ನು ನಮ್ಮ ವಾಯುಪಡೆಯು ನಾಶಪಡಿಸಿತು. ಈ ವಿಮಾನವನ್ನು ಇರಾನ್ ಭಯೋತ್ಪಾದಕ ಆಡಳಿತದ ನಾಯಕ ಅಲಿ ಖಮೇನಿ, ಇತರೆ ಹಿರಿಯ ಅಧಿಕಾರಿಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಇತರೆ ದೇಶಗಳೊಂದಿಗೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಹೆಚ್ಚಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಬಳಸುತ್ತಿದ್ದರು” ಎಂದು ಇಸ್ರೇಲ್ನ IAF ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ದಿ ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಈ ತಿಂಗಳ ಆರಂಭದಲ್ಲಿ ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ದೇಶದ ವಾಯುಪಡೆ ಇರಾನ್‌ನ 16 ವಿಮಾನಗಳನ್ನು ಹೊಡೆದುರುಳಿಸಿತು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಅಂಗವಾದ ಕುದ್ಸ್ ಫೋರ್ಸ್ ಈ ವಿಮಾನಗಳನ್ನು ಬಳಸುತ್ತಿತ್ತು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಮುಖ್ಯವಾಗಿ ಲೆಬನಾನ್‌ನ ಹೆಜ್ಬೊಲ್ಲಾಗೆ ಪ್ರಾಕ್ಸಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಹಣವನ್ನು ಸಾಗಿಸಲು ಈ ವಿಮಾನ ಬಳಕೆಯಾಗುತ್ತಿತ್ತು ಎನ್ನಲಾಗಿದೆ.
חיל האוויר השמיד את מטוסו של מנהיג משטר הטרור האיראני בשדה התעופה ״מהאראבד״ שבטהרן
צה״ל השמיד הלילה באופן ממוקד את המטוס של מנהיג משטר הטרור האיראני בשדה התעופה ״מהאראבד״ שבטהרן.
המטוס שימש את עלי ח׳אמנהאי, מנהיג משטר הטרור האיראני, בכירים נוספים ממשטר הטרור וגורמים בצבא… pic.twitter.com/pLximHkbJV
ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ 86 ವರ್ಷದ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಪ್ರಾದೇಶಿಕ ಸಂಘರ್ಷ ತೀವ್ರಗೊಂಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಹಲವಾರು ಗಲ್ಫ್ ರಾಷ್ಟ್ರಗಳಲ್ಲಿ ಇಸ್ರೇಲಿ ಮತ್ತು ಯುಎಸ್ ಗುರಿಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು. ಇದಾದ ನಂತರ ಇರಾನ್ ಪ್ರಮುಖ ಜಾಗತಿಕ ಇಂಧನ ಕಾರಿಡಾರ್ ಆದ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿತು. ಇದು ಅಂತಾರಾಷ್ಟ್ರೀಯ ತೈಲ ಸರಬರಾಜು, ಇಂಧನ ಮಾರುಕಟ್ಟೆಗಳು ಮತ್ತು ಜಾಗತಿಕ ಆರ್ಥಿಕ ಸ್ಥಿರತೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ. ಹಾರ್ಮುಜ್ ಜಲಸಂಧಿ ವಿಶ್ವದ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ನಿರ್ಣಾಯಕ ಸಮುದ್ರ ಮಾರ್ಗವಾಗಿದೆ. ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ನಿರ್ಣಾಯಕ ಹಡಗು ಮಾರ್ಗಗಳಲ್ಲಿ ಒಂದಾಗಿದೆ. ಹೀಗಾಗಿ, ಭಾರತ ಸೇರಿದಂತೆ ಹಲವು ದೇಶಗಳು ಇಂಧನದ ಪೂರೈಕೆಯ ಸಮಸ್ಯೆಯನ್ನು ಎದುರಿಸುತ್ತಿವೆ. ಸದ್ಯಕ್ಕೆ ಇರಾನ್ ಭಾರತದ ಹಡಗುಗಳು ಈ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಹಾಗೂ ಗ್ಯಾಸ್ ಸಾಗಾಟ ಮಾಡಲು ಒಪ್ಪಿಗೆ ನೀಡಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದಾವಣಗೆರೆ, (ಮಾರ್ಚ್ 16): ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕರಣವಾಗಲಿದೆ. ಇನ್ನು ಎಲೆಕ್ಷನ್ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಇತ್ತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದರೆ ಇತ್ತ ಬಿಜೆಪಿ ಬೈ ಎಲೆಕ್ಷನಲ್ಲಿ ಕಮಲ ಅರಳಿಸುವ ತಂತ್ರ ರೂಪಿಸುತ್ತಿದೆ. ಇದರ ಮಧ್ಯೆ ಬಿಜೆಪಿ ಮೈತ್ರಿ ಪಕ್ಷ ಜೆಡಿಎಸ್ ಮುಖಂಡ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.