PBKS vs GT IPL 2026 Live Score: ಕಿಂಗ್ಸ್ vs ಟೈಟಾನ್ಸ್ ನಡುವಣ ಕದನಕ್ಕೆ ಕ್ಷಣಗಣನೆ
ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸಲಿದ್ದಾರೆ. ಇಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಈ ಮ್ಯಾಚ್ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು….