All posts by nagaraj11081993

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ.

ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ. 1,800 ರೂಪಾಯಿ ಬೆಲೆಯ ಸಿಲಿಂಡರ್‌ಗಳನ್ನು 4,000-5,000 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಅಕ್ರಮ ಮಾರಾಟದ ವಿರುದ್ಧ ಪೀಣ್ಯ, ಚಿಕ್ಕಜಾಲ ಮತ್ತು ಕಿಂಗೇರಿ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಅನಿಲ ಕೊರತೆಯನ್ನು ನಿಭಾಯಿಸಲು ಪೆಟ್ರೋಲಿಯಂ ಸಚಿವಾಲಯವು ಪೈಪ್‌ಲೈನ್ ಗ್ಯಾಸ್ (ಪಿಎನ್‌ಜಿ) ಸಂಪರ್ಕ ಹೊಂದಿರುವವರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೊಸ ನಿಯಮ ಜಾರಿಗೆ ತಂದಿದೆ. ಈ ಬಿಕ್ಕಟ್ಟು ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಎಂದು ವಿಶ್ಲೇಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

 

Source link

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ ಬೇಡಿಕೆಯನ್ನು ಗಣನೀಯವಾಗಿ ಕುಸಿಯುವಂತೆ ಮಾಡಿದೆ. ಸಾಮಾನ್ಯವಾಗಿ, ತರಕಾರಿ ಉತ್ಪಾದನೆಯ ಶೇಕಡಾ 60 ರಷ್ಟಕ್ಕೆ ಹೋಟೆಲ್ ಮತ್ತು ಆಹಾರ ಉದ್ಯಮದಿಂದಲೇ ಬೇಡಿಕೆ ಇದೆ. ಆದರೆ, ಹೋಟೆಲ್‌ಗಳು ಮುಚ್ಚಿರುವುದರಿಂದ ಈ ಬೇಡಿಕೆ ಇಲ್ಲವಾಗಿದೆ. ಇದರಿಂದಾಗಿ ತರಕಾರಿ ಬೆಲೆ (Vegetable Prices) ಗಣನೀಯ ಕುಸಿತವಾಗಿದೆ.

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಹಿಂದೆ 40-50 ರೂ.ನಂತೆ ಮಾರಾಟವಾಗುತ್ತಿದ್ದ ತರಕಾರಿ ಬೆಲೆಗಳು ಈಗ 10-20 ರೂ.ಗೆ ಕುಸಿದಿವೆ. ಕೆಲವು ತರಕಾರಿಗಳಾದ ಕ್ಯಾಬೇಜ್ 2-3 ರೂ, ಹೂಕೋಸು 5-8 ರೂ.ಗೆ ಮಾರಾಟವಾಗುತ್ತಿವೆ. ಕ್ಯಾಪ್ಸಿಕಂ, ಹೀರೆಕಾಯಿ, ಬಜ್ಜಿ ಮೆಣಸಿನಕಾಯಿ, ಸ್ವೀಟ್ ಕಾರ್ನ್, ಕ್ಯಾರೆಟ್, ಬದನೆಕಾಯಿ ಮುಂತಾದ ಎಲ್ಲ ತರಕಾರಿಗಳ ಬೆಲೆಯೂ ತೀವ್ರ ಕುಸಿತ ಕಂಡಿದೆ. ಬಜ್ಜಿ, ಬೋಂಡಾ, ಗೋಬಿ ಮಂಚೂರಿ, ನೂಡಲ್ಸ್, ಫ್ರೈಡ್ ರೈಸ್ ಮಾಡುವ ಸಣ್ಣಪುಟ್ಟ ಹೋಟೆಲ್‌ಗಳು ಮತ್ತು ತಿಂಡಿ ಅಂಗಡಿಗಳು ಸಹ ಅನಿಲ ಸಿಲಿಂಡರ್‌ಗಳ ಕೊರತೆಯಿಂದಾಗಿ ಮುಚ್ಚಿರುವುದೇ ಬೆಲೆ ಕುಸಿತಕ್ಕೆ ಕಾರಣವಾಗಿದೆ.

ರೈತರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಕಷ್ಟಪಟ್ಟು ತರಕಾರಿ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ಯುದ್ಧದ ಪರಿಣಾಮವಾಗಿ ದಿಢೀರ್ ಬೆಲೆ ಕುಸಿತದಿಂದಾಗಿ ಅವರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳಲ್ಲೂ ಇದೇ ರೀತಿಯ ಪರಿಸ್ಥಿತಿಯಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ. ಬಿಸಿಲಿನ ತಾಪ ಹೆಚ್ಚಾಗಿರುವಾಗ ತರಕಾರಿ ಬೆಲೆಗಳು ಹೆಚ್ಚಿರಬೇಕಿತ್ತು, ಆದರೆ ಯುದ್ಧದ ಕಾರ್ಮೋಡವು ಇಡೀ ದೇಶದ ಕೃಷಿ ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಹೋಟೆಲ್ ಉದ್ಯಮವು ಮತ್ತೆ ಚೇತರಿಸಿಕೊಂಡರೆ ಮಾತ್ರ ತರಕಾರಿಗಳಿಗೆ ಸರಿಯಾದ ಬೆಲೆ ಸಿಗುತ್ತದೆ ಎಂಬುದು ತರಕಾರಿ ವ್ಯಾಪಾರಸ್ಥರ ಅಭಿಪ್ರಾಯ. ಪ್ರಸ್ತುತ ಪರಿಸ್ಥಿತಿಯನ್ನು ಸರ್ಕಾರ ಆದಷ್ಟು ಬೇಗ ನಿಭಾಯಿಸಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತರು ಮತ್ತು ವ್ಯಾಪಾರಸ್ಥರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Varun Chakravarthy: ‘ಮಲ್ಲು’ ಇದ್ದರೆ ಕಪ್ ನಮ್ಮದೇ..!

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಜಯಭೇರಿಯೊಂದಿಗೆ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿ ಹಿಡಿದಿದೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ. ಈ ವಿಶೇಷ ಸಾಧನೆ ಮಾಡಿದ ಚಾಂಪಿಯನ್ ತಂಡವನ್ನು ಭಾನುವಾರ (ಮಾ.15) ದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಅವಾರ್ಡ್ಸ್​ನಲ್ಲಿ ಗೌರವಿಸಲಾಗಿದೆ. ಈ ವೇಳೆ ಮಾತನಾಡಿದ ವರುಣ್ ಚಕ್ರವರ್ತಿ, ‘ಮಲ್ಲು’ ಪ್ರಸಂಗವನ್ನು ತೆರೆದಿಟ್ಟಿದ್ದಾರೆ.

ಚಾಂಪಿಯನ್ ಪಟ್ಟ ಅಲಂಕರಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವರುಣ್ ಚಕ್ರವರ್ತಿ, ಭಾರತ ತಂಡದಲ್ಲಿ ಮಲ್ಲು ಕ್ರಿಕೆಟಿಗನೊಬ್ಬನಿದ್ದರೆ ವಿಶ್ವಕಪ್ ಗೆಲ್ಲುತ್ತೆ ಎಂಬ ಮೀಮ್ ಒಂದೊಂದಿದೆ. ಈ ಬಾರಿ ನಮ್ಮೊಂದಿಗೆ ಸಂಜು ಸ್ಯಾಮ್ಸನ್ ಇದ್ದರು. ಅದರಂತೆ ಈ ಸಲನೂ ನಾವು ಕಪ್ ಗೆದ್ದಿದ್ದೇವೆ ಎಂದು ತಮಾಷೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಭಾರತ ತಂಡಕ್ಕೆ  ಸಂಜು ಸ್ಯಾಮ್ಸನ್ ಅವರನ್ನು ಸೇರಿಸಿಕೊಂಡಿದ್ದೇ ತಂಡದ “ಮಾಸ್ಟರ್‌ಸ್ಟ್ರೋಕ್”. ಸ್ಯಾಮ್ಸನ್ ಅವರ ಉಪಸ್ಥಿತಿಯೇ ತಂಡಕ್ಕೆ ಅದೃಷ್ಟ ತಂದಿತು ಎಂಬುದನ್ನು ವರುಣ್ ಚಕ್ರವರ್ತಿ ಹೇಳಿದ್ದಾರೆ.

ಇನ್ನು ವರುಣ್ ಚಕ್ರವರ್ತಿ ಅವರ ಈ ಹೇಳಿಕೆ ನಿಜವೇ ಎಂದು ಪರಿಶೀಲಿಸಿದರೆ, ಭಾರತ ತಂಡ ವಿಶ್ವಕಪ್ ಗೆದ್ದಾಗೆಲ್ಲಾ ಮಲ್ಲು ಅಥವಾ ಮಲಯಾಳಿ ಆಟಗಾರನೊಬ್ಬ ತಂಡದಲ್ಲಿದದ್ದು ನಿಜ.

2007ರ ಟಿ20 ವಿಶ್ವಕಪ್ ಗೆದ್ದಾಗ ಕೇರಳದ ಶ್ರೀಶಾಂತ್ ಭಾರತ ತಂಡದಲ್ಲಿದ್ದರು. ಇನ್ನು 2011 ರಲ್ಲಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದಾಗಲೂ ಶ್ರೀಶಾಂತ್ ಚಾಂಪಿಯನ್ ತಂಡದಲ್ಲಿದ್ದರು.

ಇನ್ನು 2024 ರಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಜಯಸಿದಾಗ ಮಲಯಾಳಿಯಾಗಿ ಸಂಜು ಸ್ಯಾಮ್ಸನ್ ತಂಡದಲ್ಲಿದ್ದರು. ಇದೀಗ 2026 ರಲ್ಲಿ ಟೀಮ್ ಇಂಡಿಯಾ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿದಾಗಲೂ ಸಂಜು ತಂಡದಲ್ಲಿದ್ದಾರೆ.

1983 ರಲ್ಲಿ ಭಾರತ ತಂಡದಲ್ಲಿ ಮಲಯಾಳಿ ಇದ್ದರಾ?

1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗಲೂ ಮಲಯಾಳಿ ಆಟಗಾರೊಬ್ಬರು ತಂಡದಲ್ಲಿದ್ದರು ಎಂಬುದು ವಿಶೇಷ.  ಹೌದು, 1983ರ ವಿಶ್ವಕಪ್ ಗೆದ್ದ ಭಾರತ ತಂಡದಲ್ಲೂ ಒಬ್ಬ “ಮಲ್ಲು” ಆಟಗಾರ ಇದ್ದರು. ಅವರ ಹೆಸರು ಸುನಿಲ್ ವಲ್ಸನ್.

ಇದನ್ನೂ ಓದಿ: IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

ಸುನಿಲ್ ವಲ್ಸನ್ ಅವರು ಹುಟ್ಟಿದ್ದು ಸಿಕಂದರಾಬಾದ್‌ನಲ್ಲಾದರೂ, ಅವರ ಪೋಷಕರು ಕೇರಳದ ಕಣ್ಣೂರು ಮೂಲದವರು. 1983ರ ವಿಶ್ವಕಪ್ ತಂಡದಲ್ಲಿದ್ದ 14 ಆಟಗಾರರಲ್ಲಿ ಸುನಿಲ್ ಅವರು ಮಾತ್ರ ಇಡೀ ಟೂರ್ನಿಯಲ್ಲಿ ಒಂದೂ ಪಂದ್ಯವನ್ನು ಆಡಲಿಲ್ಲ. ಆದರೂ ಅವರು ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಹಾಗಾಗಿ, ಭಾರತ ತಂಡದಲ್ಲಿ “ಮಲಯಾಳಿ ಇದ್ದರೆ ಅದನ್ನು ಅದೃಷ್ಟದ ಸಂಕೇತ” ಎಂದು ಮೀಮ್‌ಗಳಲ್ಲಿ ಕರೆಯಲಾಗುತ್ತದೆ.

  • 1983: ಸುನಿಲ್ ವಲ್ಸನ್
  • 2007 & 2011: ಎಸ್. ಶ್ರೀಶಾಂತ್
  • 2024 & 2026: ಸಂಜು ಸ್ಯಾಮ್ಸನ್

 

Source link

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು.

‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್ ಆಗಿದ್ದು ಇದೇ ಮೊದಲು. ‘ಆಲ್ ಅಬೌಟ್ ಈವ್’ ಸಿನಿಮಾ 14 ವಿಭಾಗಗಳಲ್ಲಿ ನಾಮಿನೇಟ್ ಆಗಿ ದಾಖಲೆ ಮಾಡಿತ್ತು. ‘ಸಿನ್ನರ್ಸ್’ ಸಿನಿಮಾ ಕೆಲವು ವಿಭಾಗಗಳಲ್ಲಿ ಅವಾರ್ಡ್ ಪಡೆಯಲು ಯಶಸ್ವಿ ಆಗಿದೆ. ಅಮೆರಿಕದ ಕಾಲ ಮಾನದ ಪ್ರಕಾರ ಭಾನುವಾರ ಸಂಜೆ ಈ ವಾರ್ಡ್​ ಕಾರ್ಯಕ್ರಮ ನಡೆದಿದೆ. ಭಾರತದ ಕಾಲಮಾನದ ಪ್ರಕಾರ, ಸೋಮವಾರ ಬೆಳಿಗ್ಗೆ 5.30ಕ್ಕೆ ಅವಾರ್ಡ್ ಕಾರ್ಯಕ್ರಮ ಪ್ರಸಾರ ಆರಂಭಿಸಿತ್ತು.

‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಸಿನಿಮಾ ಅತ್ಯುತ್ತಮ ಸಿನಿಮಾ ಅವಾರ್ಡ್ ಬಾಚಿಕೊಂಡಿತು. ಈ ಸಿನಿಮಾದಲ್ಲಿ ‘ಟೈಟಾನಿಕ್’ ಖ್ಯಾತಿಯ ಲಿಯನಾರ್ಡೋ ಡಿಕ್ಯಾಪ್ರರಿಯೋ ಹೀರೋ. ಪೌಲ್ ಥಾಮಸ್ ಆ್ಯಂಡ್ರಿಸನ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದದಾರೆ. ಅವರಿಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಕೂಡ ಸಿಕ್ಕಿದೆ. ಈ ಚಿತ್ರ ಒಟ್ಟೂ ಆರು ಅವಾರ್ಡ್ ಗೆದ್ದಿದ್ದು, ಜಿಯೋ ಹಾಟ್​ಸ್ಟಾರ್​ ಅಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇದನ್ನೂ ಓದಿ: ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಜೆಸ್ಸಿ ಬಕ್ಲಿ ಅವರು ‘ಹ್ಯಾಮ್ನೆಟ್’ ಸಿನಿಮಾದ ನಟನೆಗೆ ಅತ್ಯುತ್ತಮ ನಟಿ ಅವಾರ್ಡ್ ಪಡೆದರು. ‘ಸಿನ್ನರ್ಸ್’ ಸಿನಿಮಾ ನಟನೆಗೆ ಮೈಕಲ್ ಬಿ ಜೋರ್ಡನ್ ಅವರು ಅತ್ಯುತ್ತಮ ನಟ ಅವಾರ್ಡ್ ಪಡೆದರು.

ಅತ್ಯುತ್ತಮ ಸಿನಿಮಾ: ‘ಒನ್ ಬ್ಯಾಟಲ್ ಆಫ್ಟರ್ ಅನದರ್
ಅತ್ಯುತ್ತಮ ನಟಿ: ಜೆಸ್ಸಿ ಬಕ್ಲಿ (‘ಹ್ಯಾಮ್ನೆಟ್’)
ಅತ್ಯುತ್ತಮ ನಟ: ಮೈಕಲ್ ಬಿ ಜೋರ್ಡನ್ (ಸಿನ್ನರ್ಸ್)
ಅತ್ಯುತ್ತಮ ಒರಿಜಿನಲ್ ಸಾಂಗ್: ಗೋಲ್ಡನ್
ಅತ್ಯುತ್ತಮ ಛಾಯಾಗ್ರಹಣ: ಸಿನ್ನರ್ಸ್
ಅತ್ಯುತ್ತಮ ಸಿನಿಮಾ ಎಡಿಟಿಂಗ್: ಒನ್ ಬ್ಯಾಟಲ್ ಆಫ್ಟರ್ ಅನದರ್
ಅತ್ಯುತ್ತಮ ಸೌಂಡ್ ಸಿನಿಮಾ: ಎಫ್​1
ಅತ್ಯುತ್ತಮ ಸಂಗೀತ ಸಂಯೋಜನೆ: ಸಿನ್ನರ್ಸ್
ಅತ್ಯುತ್ತಮ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್ಸ್: ಆಲ್ ದಿ ಎಂಪ್ಟಿ ರೂಂ
ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್​: ಅವತಾರ್: ಫೈಯರ್ ಆ್ಯಂಡ್ ಆ್ಯಶ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ನವದೆಹಲಿ, ಮಾರ್ಚ್ 16: ಇಂದು ಸೋಮವಾರ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha polls) ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಚುನಾವಣೆ ಎದುರಿಸುತ್ತಿರುವ 37 ರಾಜ್ಯಸಭಾ ಸ್ಥಾನಗಳು

  • ಮಹಾರಾಷ್ಟ್ರ: 7
  • ತಮಿಳುನಾಡು: 6
  • ಪಶ್ಚಿಮ ಬಂಗಾಳ: 5
  • ಬಿಹಾರ: 5
  • ಒಡಿಶಾ: 4
  • ಅಸ್ಸಾಂ: 3
  • ಛತ್ತೀಸ್​ಗ: 2
  • ಹರ್ಯಾಣ: 2
  • ತೆಲಂಗಾಣ: 2
  • ಹಿಮಾಚಲಪ್ರದೇಶ: 1

ಇದನ್ನೂ ಓದಿ: ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

ರಾಜ್ಯಸಭೆಯಲ್ಲಿ ಬಿಜೆಪಿ ಬಲ ಹೆಚ್ಚಲಿದೆ

234 ಸದಸ್ಯಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟ 134 ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಬಳಿ 80 ಸದಸ್ಯಬಲ ಇದೆ. ವಿವಿಧ ಮಸೂದೆಗಳ ಅನುಮೋದನೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೆಚ್ಚಿನ ಸದಸ್ಯಬಲ ಇರುವುದು ಅಗತ್ಯ. ಇವತ್ತಿನ ರಾಜ್ಯಸಭಾ ಚುನಾವಣೆ ಬಳಿಕ ಮೇಲ್ಮನೆಯಲ್ಲಿ ಎನ್​ಡಿಎ ಸದಸ್ಯಬಲ ಮತ್ತಷ್ಟು ಏರಿಕೆ ಆಗಲಿದೆ.

ರಾಜ್ಯಸಭಾ ಚುನಾವಣೆ ಆಗಲಿರುವ 10 ರಾಜ್ಯಗಳಲ್ಲಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಬಹುದು. ಅಲ್ಲಿ ಮತದಾನದ ಅವಶ್ಯಕತೆ ಇರುವುದಿಲ್ಲ. ಶರದ್ ಪವಾರ್, ರಾಮದಾಸ್ ಆಥಾವಳೆ, ತಂಬಿದುರೈ, ಬಾಬುಲ್ ಸುಪ್ರಿಯೋ, ವಿನೋದ್ ತಾವಡೆ, ಅಭಿಷೇಕ್ ಮನು ಸಿಂಘ್ವಿ ಮೊದಲಾದವರು ಅವಿರೋಧವಾಗಿ ರಾಜ್ಯಸಭೆಗೆ ಪ್ರವೇಶ ಮಾಡಲಿದ್ದಾರೆ.

ಒಡಿಶಾ, ಬಿಹಾರ ಮತ್ತು ಹರ್ಯಾಣದಲ್ಲಿ ಪೈಪೋಟಿ

ಒಡಿಶಾ, ಬಿಹಾರ ಮತ್ತು ಹರ್ಯಾಣ ರಾಜ್ಯಗಳಲ್ಲಿನ 11 ರಾಜ್ಯಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಬಹುದು. ಬಿಹಾರದಲ್ಲಿ ಐದು ಸ್ಥಾನಗಳಿವೆ. ಇದರಲ್ಲಿ ನಾಲ್ಕು ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಜೆಡಿಯುನ ನಿತೀಶ್ ಕುಮಾರ್ ಮತ್ತು ರಾಮನಾಥ್ ಠಾಕೂರ್, ಬಿಜೆಪಿಯ ನಿತಿನ್ ನಬಿನ್ ಮತ್ತು ಶಿವಂ ಕುಮಾರ್ ಗೆಲ್ಲುವ ನಿರೀಕ್ಷೆ ಇದೆ. ಐದನೇ ಸ್ಥಾನಕ್ಕೆ ಎನ್​ಡಿಎನ ಉಪೇಂದ್ರ ಖುಶವಾಹ ಮತ್ತು ವಿಪಕ್ಷಗಳ ಎಡಿ ಸಿಂಗ್ ನಡುವೆ ಪೈಪೋಟಿ ಇರುತ್ತದೆ.

ಇದನ್ನೂ ಓದಿ: ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ಒಡಿಶಾದಲ್ಲಿ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ. ಬಿಜೆಪಿಯ ಇಬ್ಬರು ಮತ್ತು ಬಿಜೆಡಿಯ ಒಬ್ಬರ ಗೆಲುವು ಖಾತ್ರಿ ಇದೆ. ನಾಲ್ಕನೇ ಸ್ಥಾನಕ್ಕೆ ಪೈಪೋಟಿ ಇದೆ.

ಹರ್ಯಾಣದಲ್ಲಿ ಎರಡು ಸ್ಥಾನ ಇದೆ. ಬಿಜೆಪಿಯ ಸಂಜಯ್ ಭಾಟಿಯಾ ಗೆಲುವು ಖಾತ್ರಿ ಇದೆ. ಎರಡನೇ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ ಪೈಪೋಟಿ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ಉದ್ಯಾನವನದಲ್ಲಿರುವ ಜೀಬ್ರಾಗಳಲ್ಲಿ ಹೆಣ್ಣು ಜೀಬ್ರಾಗಳೇ ಹೆಚ್ಚು ಇದ್ದು, ಹೊಸ ಮರಿಗಳ ಆರೋಗ್ಯದ ಮೇಲೂ ಸಿಬ್ಬಂದಿ ವಿಶೇಷ ಕಾಳಜಿ ವಹಿಸಿದ್ದಾರೆ. ಈ ಮರಿಗಳು ಆರೋಗ್ಯವಾಗಿದ್ದು, ತಾಯಿ ಜೀಬ್ರಾಗಳ ಜೊತೆಗೆ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಪ್ರಾಣಿ ವಿನಿಮಯ ಯೋಜನೆ ಅಡಿಯಲ್ಲಿ ಕೆಲವು ಜೀಬ್ರಾಗಳನ್ನು ಇತರ ಉದ್ಯಾನವನಗಳಿಗೆ ನೀಡುವ ಮೂಲಕ ಬೇರೆ ಅಪರೂಪದ ಪ್ರಾಣಿಗಳನ್ನು ತರಲು ಕೂಡ ಚಿಂತನೆ ನಡೆಸಲಾಗಿದೆ ಎಂದು ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

Source link

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ರೈಲನ್ನು ಪ್ರಸ್ತುತ ಕೊತ್ತನೂರು ಡಿಪೋದಲ್ಲಿನ ಇನ್ಸ್‌ಪೆಕ್ಷನ್ ಬೇ ಲೈನ್ (IBL) ಗೆ ಸ್ಥಳಾಂತರಿಸಿ ಅಗತ್ಯ ತಾಂತ್ರಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಪರೀಕ್ಷೆಗಳು ಮತ್ತು ನಿಯಮಾನುಸಾರ ಅನುಮತಿ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರೈಲು ಸೇವೆಗೆ ಸಿದ್ಧವಾಗಲಿದೆ.

ಪಿಂಕ್ ಲೈನ್‌ನ ಮೊದಲ ರೈಲನ್ನು ಬಿಇಎಂಎಲ್ ಸಂಸ್ಥೆ 2025ರ ಡಿಸೆಂಬರ್‌ 11ರಂದು ಬಿಡುಗಡೆ ಮಾಡಿತ್ತು. ಬಳಿಕ ಫೆಬ್ರವರಿಯಲ್ಲಿ ಇನ್ನೂ ಎರಡು ರೈಲುಗಳನ್ನು ಬಿಎಂಆರ್‌ಸಿಎಲ್‌ಗೆ ಹಸ್ತಾಂತರಿಸಿತ್ತು. ಈಗ ನಾಲ್ಕನೇ ರೈಲು ಕೂಡ ಬಂದಿರುವುದರಿಂದ ಪಿಂಕ್ ಲೈನ್ ಸೇವೆ ಆರಂಭದ ಸಿದ್ಧತೆಗಳು ವೇಗ ಪಡೆದುಕೊಂಡಿವೆ.

ಸುಮಾರು 7.5 ಕಿಲೋಮೀಟರ್ ಉದ್ದದ ಕಾಳೇನ ಅಗ್ರಹಾರ – ತಾವರೆಕೆರೆಯ ಪಿಂಕ್ ಲೈನ್ ಮಾರ್ಗದಲ್ಲಿ ಮೇ ತಿಂಗಳಲ್ಲಿ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಉದ್ದೇಶಿಸಿದೆ.

ನೇರಳೆ ಮತ್ತು ಹಸಿರು ಮಾರ್ಗಗಳ ಪ್ರಯಾಣಿಕರಿಗೂ ಗುಡ್ ನ್ಯೂಸ್

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಕೋಲ್ಕತ್ತಾ ಮೂಲದ ಟಿಟಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ (TRSL) ಸಂಸ್ಥೆ ಪರ್ಪಲ್ ಹಾಗೂ ಗ್ರೀನ್ ಲೈನ್‌ಗಳಿಗಾಗಿ ಎರಡನೇ ಡಿಟಿಜಿ ರೈಲು ಸೆಟ್‌ ಅನ್ನು ಕಳುಹಿಸಿದೆ. ಈ ರೈಲಿನ ಮೂರು ಕೋಚ್‌ಗಳನ್ನು ಮಾರ್ಚ್‌ 13ರಂದು ಕಳುಹಿಸಲಾಗಿದ್ದು, ಉಳಿದ ಮೂರು ಕೋಚ್‌ಗಳು ಮರುದಿನ ರಾತ್ರಿ ರವಾನೆಯಾಗಿವೆ. ಈ ರೈಲು ಈ ತಿಂಗಳ ಅಂತ್ಯದೊಳಗೆ ಪೀಣ್ಯಾ ಡಿಪೋ ತಲುಪುವ ಸಾಧ್ಯತೆ ಇದೆ.

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?

ಈ ಎರಡು ಹೊಸ ರೈಲುಗಳು ಮೇ–ಜೂನ್ ವೇಳೆಗೆ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಸಂಚಾರ ಶುರು ಮಾಡುವ ನಿರೀಕ್ಷೆ ಇದೆ. ಇದರಿಂದ ಪೀಕ್ ಅವಧಿಯಲ್ಲಿ ಮೆಟ್ರೋದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಒಟ್ಟು 57 ರೈಲುಗಳು ಸಂಚಾರ ಮಾಡುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 158ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವೆಡೆ ಏರ್ ಕ್ವಾಲಿಟಿ 100ಕ್ಕಿಂತ ಕಡಿಮೆ ಇದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –158
  • ಮಂಗಳೂರು-150
  • ಮೈಸೂರು –151
  • ಬೆಳಗಾವಿ – 76
  • ಕಲಬುರ್ಗಿ-119
  • ಶಿವಮೊಗ್ಗ – 158
  • ಬಳ್ಳಾರಿ – 178
  • ಹುಬ್ಬಳ್ಳಿ- 97
  • ಉಡುಪಿ –158
  • ವಿಜಯಪುರ –80

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link