ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!
ಬೆಂಗಳೂರು, ಮಾರ್ಚ್ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ತುಂತುರು ಮಳೆ? ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ…