ಸೋದರ ಸಂಬಂಧಿಗಳ ಆರ್ಥಿಕ ಸ್ಥಿತಿ ಒಂದಿಷ್ಟು ಒತ್ತಡವನ್ನು ತರಲಿದೆ. ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಇಂಥವರಿಗೆ ಹೇಗೆ ಉತ್ತರ ಕೊಡಬೇಕು ಎಂದು ಆಲೋಚಿಸುವಂತೆ ಆಗುತ್ತದೆ.
ಕುಟುಂಬದ ಸಲುವಾಗಿಯೇ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ. ಕಾರು ಅಥವಾ ಬೈಕ್ ಸರ್ವೀಸ್ ಮಾಡಿಸಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ಒಂದು ವೇಳೆ ಮುಖ್ಯ ವ್ಯಕ್ತಿಯನ್ನು ಭೇಟಿ ಆಗಬೇಕು ಎಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಅಲ್ಲಿರುವಂತೆ ನೋಡಿಕೊಳ್ಳಿ. ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳಬೇಕು ಎಂದಿದ್ದಲ್ಲಿ ಅಲ್ಲಿನ ಪರಿಸ್ಥಿತಿ, ವಾತಾವರಣ ಹೇಗಿದೆ ಎಂಬುದನ್ನು ಅವಲೋಕಿಸಿ.
ಇವರು ಏನು ನನಗೆ ಹೇಳುವುದು ಎಂಬ ಧೋರಣೆ ಯಾವುದೇ ಕಾರಣಕ್ಕೂ ಬೇಡ. ಈ ದಿನ ಇತರರು ನಿಮ್ಮ ಜತೆಗೆ ಮಾತನಾಡುವಾಗ ಶ್ರದ್ಧೆಯಿಂದ ಕೇಳಿಸಿಕೊಳ್ಳಿ. ಈ ಹಿಂದೆ ಯಾವಾಗಲೋ ನಡೆದಿದ್ದ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು, ಯಾವುದೇ ತೀರ್ಮಾನಕ್ಕೆ ಬರಬೇಡಿ. ಇನ್ನು ಈ ದಿನ ಸೋದರ- ಸೋದರಿಯರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ.
ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು ಮಾತ್ರ ನೀಡಿ. ಮನೆಗೆ ಕೆಲವು ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸುವ ಯೋಗವಿದೆ.
ನಿಮ್ಮ ಲೆಕ್ಕಾಚಾರಲ್ಲಿ ತಪ್ಪಿದೆಯಾ ಎಂದು ಪದೇಪದೇ ಅನಿಸಲಿದೆ. ವಿಪರೀತ ಗಾಬರಿ, ಆತಂಕ ಸೃಷ್ಟಿ ಆಗಲಿದೆ. ಏಕೋ ಅಂದುಕೊಂಡಂತೆ ಏನೂ ಆಗುತ್ತಿಲ್ಲ ಅಂತಲೂ ಅನಿಸಲಿದೆ. ಇನ್ನೂ ಮುಂದುವರಿದು ಸಣ್ಣ ಸಮಸ್ಯೆಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತೆ ಆಗುತ್ತದೆ. ಆದರೆ ವಾಸ್ತವ ಹೇಗಿರುತ್ತದೆ, ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡರು ಎಂಬ ಮಾತಿದೆಯಲ್ಲಾ ಹಾಗೆ.
ಈಗಾಗಲೇ ಮಾಡಿದ್ದ ಹೂಡಿಕೆ ಅಥವಾ ಸೇವಿಂಗ್ಸ್ ಮುರಿಸಬೇಕಾಗಬಹುದು. ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಲಿದ್ದೀರಿ. ಕಾರ್ಯಕ್ರಮ ಅಥವಾ ಸಮಾರಂಭಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಯಾಣ ಮಾಡಬೇಕಾಗಬಹುದು. ಇದರಿಂದ ದಣಿವು ಸಹ ಆಗಲಿದೆ. ನೀವು ಲೆಕ್ಕ ಹಾಕಿಕೊಂಡಂತೆಯೇ ಕೆಲವು ವ್ಯವಹಾರಗಳ ನಡೆಯಲಿವೆ. ಮತ್ತೆ ಬಾರದು ಎಂದುಕೊಂಡಿದ್ದ ಹಣವೊಂದು ಕೈ ಸೇರುವುದಕ್ಕೆ ಏನು ಮಾಡಬೇಕು ಎಂಬ ಮಾರ್ಗ ಗೋಚರ ಆಗಲಿದೆ.
ಹಲವು ವಿಚಾರ- ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಬೇಕಾದ ವೇದಿಕೆ ಸಿಗಲಿದೆ. ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ ಇದೆ. ರೆಸಾರ್ಟ್, ರೆಸ್ಟೋರೆಂಟ್, ಸಿನಿಮಾ ಹೀಗೆ ಮನರಂಜನೆಗಾಗಿ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ.
ಪ್ರೇಮಿಗಳಿಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಕೆಲಸ ಬದಲಾವಣೆ ಮಾಡುವುದಕ್ಕೆ ಸ್ನೇಹಿತರ ಸಹಾಯ ದೊರೆಯಲಿದೆ. ಈ ಹಿಂದೆ ನೀವು ಪಟ್ಟ ಶ್ರಮವನ್ನು ಗುರುತಿಸಿ, ಉಡುಗೊರೆಗಳನ್ನು ನೀಡಬಹುದು. ಚಿನ್ನ- ಬೆಳ್ಳಿ ಖರೀದಿ ಮಾಡಬೇಕು ಎಂದುಕೊಂಡಿದ್ದಲ್ಲಿ ದಿನದ ಮಟ್ಟಿಗೆ ನಿರ್ಧಾರವನ್ನು ಮುಂದೆ ಹಾಕುವುದು ಉತ್ತಮ.
ನೀವು ಯಾರ ಜತೆಗೆ ಭಾವನಾತ್ಮಕವಾಗಿ ಬಹಳ ಹತ್ತಿರ ಆಗಿರುತ್ತೀರಿ ಅವರ ಬದುಕಿನಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಕುಗ್ಗಿಹೋಗುವ ಸಾಧ್ಯತೆಗಳಿವೆ. ಮತ್ತು ಇದೇ ದಿನ ತಂದೆ- ತಾಯಿಯ ಆರೋಗ್ಯ ವಿಚಾರ ಚಿಂತೆಗೆ ಕಾರಣ ಆಗಲಿದೆ. ನೀವು ಯಾರನ್ನು ಭೇಟಿ ಆಗಬಾರದು, ಮಾತನಾಡಬಾರದು ಅಂದುಕೊಂಡಿರುತ್ತೀರೋ ಅಂಥ ವ್ಯಕ್ತಿ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಎದುರಾಗಿ, ಆ ವ್ಯಕ್ತಿಯ ಮುಖಾಮುಖಿಯಿಂದಾಗಿ ಮುಜುಗರ, ಮಾನಸಿಕ ಹಿಂಸೆ ಅನುಭವಿಸಬೇಕಾಗುತ್ತದೆ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:03 – 09:33, ಯಮಗಂಡ ಕಾಲ 11:03 – 12:33, ಗುಳಿಕ ಕಾಲ 14:03 – 15:33
ಮೇಷ ರಾಶಿ: ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಬರಹಗಳು ನಿಮ್ಮ ಆದಾಯಕ್ಕೆ ಹೆಚ್ಚಿನ ಒತ್ತನ್ನು ಕೊಡುವುದು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಮಾಣೀಕರಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಯಾವುದನ್ನು ಖಂಡಿಸುವಾಗಲೂ ಅದರ ಪೂರ್ಣ ಮಾಹಿತಿ ಇರಲಿ. ಸ್ನೇಹಿತರ ಸಹವಾಸ ಅಧಿಕಾಗುವುದು. ಮಾತಿನಲ್ಲಿ ಲವಲವಿಕೆ ಇರುವುದು.
ವೃಷಭ ರಾಶಿ: ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನದ ಖರೀದಿಸುವ ಆಸೆಯು ಪ್ರಬಲವಾಗಬಹುದು. ನಯವಂಚಕತನವು ನಿಮಗೆ ಪ್ರಿಯವಾಗಬಹುದು. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ದುಂದುವೆಚ್ಚದಿಂದ ಬೇಸರ. ಮಕ್ಕಳ ಜೊತೆ ಸಂತೋಷದ ಕ್ಷಣವು ಇರಲಿದೆ. ಶ್ರದ್ಧೆಯಿಂದ ಯಾವುದನ್ನೂ ಇಂದು ಮಾಡಲಾರಿರಿ.
ಮಿಥುನ ರಾಶಿ: ವ್ಯಾಪಾರದ ಬದಲಾವಣೆಗಳನ್ನು ಅಧ್ಯಯನ ಮಾಡಿ ಬದಲಾಯಿಸಿ. ಚುರುಕುತನವು ನಿಮಗೆ ಸಾಧ್ಯವಾಗದು. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.
ಕರ್ಕಾಟಕ ರಾಶಿ: ಆದಾಯದ ಗೌಪತೆಯನ್ನು ಕಾಪಾಡಿಕೊಳ್ಳಿ. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಅಲ್ಪ ಆದಾಯವನ್ನು ಹೆಚ್ಚು ಮಾಡಿ ಹೇಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು.
ಸಿಂಹ ರಾಶಿ: ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂತಾನವು ನಿಮ್ಮ ಖುಷಿಯನ್ನು ಹೆಚ್ಚಿಸುವುದು. ಮಕ್ಕಳಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ.
ಕನ್ಯಾ ರಾಶಿ: ಕಡಿಮೆ ಖರ್ಚು ಮತ್ತು ಆದಾಯದ ಉದ್ಯಮಕ್ಕೆ ಆದ್ಯತೆ ಕೊಡುವಿರಿ. ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು. ವಿಶ್ವಾಸವನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಮಾಡಲಿದ್ದೀರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಕೆಲವು ವಿಚಾರದಲ್ಲಿ ಮರೆವೂ ನಿಮಗೆ ವರವಾದಂತೆ ಅನ್ನಿಸುವುದು.
ತುಲಾ ರಾಶಿ: ಹಿರಿಯರ ಮಾತಿನಿಂದ ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಸಂಗಾತಿಯ ಮಾತನ್ನು ನಡೆಸಿಕೊಡಲಾಗದು. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ಮಕ್ಕಳಿಗೆ ಯಾವುದಾದರೂ ಉತ್ತಮ ಹವ್ಯಾಸದ ರುಚಿ ಬರುವಂತೆ ಮಾಡುವಿರಿ. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ.
ವೃಶ್ಚಿಕ ರಾಶಿ: ಮಾತುಗಳನ್ನು ಬದಲಿಸಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ಅಸಹಜ ವ್ಯವಹಾರದಿಂದ ಹಿಂದೆ ಸರಿಯುವುದು ಉತ್ತಮ.
ಧನು ರಾಶಿ: ಧಾರ್ಮಿಕ ಕಾರ್ಯಗಳು ಶ್ರದ್ಧೆಯಿಂದ ಪೂರ್ಣವಾಗಲಿದೆ. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ರಾಜಕೀಯ ಪ್ರೇರಿತ ಕಾರ್ಯದಲ್ಲಿ ಸಿಕ್ಕಿಕೊಳ್ಳುವಿರಿ. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಭೂಮಿಯ ವಿವಾದ ಹೊಸದಾಗಿ ಆರಂಭವಾಗಲಿದೆ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ.
ಮಕರ ರಾಶಿ: ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಸಿಗಲಿರುವ ಸ್ಥಿರಾಸ್ತಿಯು ಕೈತಪ್ಪಿಹೋಗಬಹುದು. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ.
ಕುಂಭ ರಾಶಿ: ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ಗುರಿಯ ಸಾಧನೆಗೆ ಸಾರ್ವಜನಿಕ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಹೊಸ ವಿಚಾರಗಳ ಕಡೆ ಹೊರಳುವ ಆಲೋಚನೆ ಮನಸ್ಸಿಗೆ ಬರಲಿದೆ. ನಿಮ್ಮಿಂದ ಆಗದೇ ಇರುವ ಕಾರ್ಯ ಎಂದು ಯಾವುದೂ ಇರದು. ಆದರೆ ಕೆಲವಕ್ಕೆ ಸಮಯ ಹೆಚ್ಚು ಬೇಕು ಅಷ್ಟೇ.
ಮೀನ ರಾಶಿ: ನಿಮ್ಮ ದೈನಂದಿನ ಕಾರ್ಯದಲ್ಲಿ ವ್ಯತ್ಯಾಸ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ.
ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಿಸಿಸಿಐ, ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಮತ್ತು ಮಿಥಾಲಿ ರಾಜ್ ಅವರಿಗೆ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಳಿಗಾಗಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿತು. ಮೂವರಿಗೂ ವಿಶೇಷ ಟ್ರೋಫಿ ನೀಡಲಾಯಿತು. ಅದರಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸಿದ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ‘ದಿ ವಾಲ್’ ಎಂದೇ ಖ್ಯಾತಿ ಪಡೆದಿರುವ ಕನ್ನಡಿಗ ರಾಹುಲ್ ದ್ರಾವಿಡ್, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,000 ಕ್ಕೂ ಹೆಚ್ಚು ರನ್ ಗಳಿಸಿದ್ದು, ಒಂದು ದಶಕಕ್ಕೂ ಹೆಚ್ಚು ಕಾಲ ಭಾರತದ ಬ್ಯಾಟಿಂಗ್‌ನ ಬೆನ್ನೆಲುಬಾಗಿದ್ದವರು. ಹಾಗೆಯೇ ನಾಯಕನಾಗಿ ಭಾರತವನ್ನು ಅನೇಕ ಸ್ಮರಣೀಯ ವಿಜಯಗಳಿಗೆ ಕರೆದೊಯ್ದವರು. ನಿವೃತ್ತಿಯ ನಂತರ, ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ಮುಖ್ಯಸ್ಥರಾಗಿ ಯುವ ಆಟಗಾರರಿಗೆ ತರಬೇತಿ ನೀಡಿದರು. 2018 ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ತಂಡಕ್ಕೂ ಅವರು ತರಬೇತಿ ನೀಡಿದರು. ಭಾರತೀಯ ಪುರುಷರ ತಂಡದ ಮುಖ್ಯ ತರಬೇತುದಾರರಾಗಿ, ಅವರು 2024 ರ ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ (Salman Ali Agha) ಕೂಡ 106 ರನ್‌ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಾಕಿಸ್ತಾನ ತಂಡ 279 ರನ್‌ಗಳಿಗೆ ಆಲೌಟ್ ಆಯಿತು.
ತಂಜಿದ್ ಹಸನ್ ಶತಕ
ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, 5 ವಿಕೆಟ್‌ಗೆ 290 ರನ್ ಗಳಿಸಿತು. ತಂಡದ ಪರ ಆರಂಭಿಕ ತಂಜಿದ್ ಹಸನ್ ತಮೀಮ್ 107 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದು ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವೂ ಆಗಿದೆ. ತಂಜಿದ್ ಹೊರತುಪಡಿಸಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಲಿಟ್ಟನ್ ದಾಸ್ 51 ಎಸೆತಗಳಲ್ಲಿ 41 ರನ್ ಗಳಿಸಿದರೆ, ಕೊನೆಯಲ್ಲಿ, ತೌಹಿದ್ ಹೃದಯ್ 44 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿ ತಂಡದ ಸ್ಕೋರ್ ಅನ್ನು 290ಕ್ಕೆ ತಲುಪಿಸಿದರು. ಇವರ ಜೊತೆಗೆ ಆರಂಭಿಕ ಆಟಗಾರ ಸೈಫ್ ಹಸನ್ 36 ರನ್ ಮತ್ತು ನಜ್ಮುಲ್ ಹೊಸೈನ್ ಶಾಂಟೊ 27 ರನ್‌ಗಳ ಕಾಣಿಕೆಯನ್ನು ನೀಡಿದರು.
ದುಬಾರಿಯಾದ ಬೌಲರ್ಸ್
ಪಾಕಿಸ್ತಾನ ಪರ ಹ್ಯಾರಿಸ್ ರೌಫ್ 10 ಓವರ್‌ಗಳಲ್ಲಿ 52 ರನ್ ನೀಡಿ ಮೂರು ವಿಕೆಟ್‌ಗಳನ್ನು ಪಡೆದರೆ, ನಾಯಕ ಶಾಹೀನ್ ಅಫ್ರಿದಿ 10 ಓವರ್‌ಗಳಲ್ಲಿ 55 ರನ್‌ಗಳಿಗೆ ಒಂದು ವಿಕೆಟ್ ಪಡೆದರು. ಅಬ್ರಾರ್ ಅಹ್ಮದ್ 10 ಓವರ್‌ಗಳಲ್ಲಿ 49 ರನ್ ನೀಡಿ ಒಂದು ವಿಕೆಟ್ ಪಡೆದರು. ಶಾದ್ ಮಸೂದ್ 8 ಓವರ್‌ಗಳಲ್ಲಿ 55 ರನ್ ಬಿಟ್ಟುಕೊಟ್ಟರು.
ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕಳಪೆ ಆರಂಭ ಪಡೆಯಿತು. ಆರಂಭಿಕರಿಬ್ಬರು ತಲಾ 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅನುಭವಿ ಮೊಹಮ್ಮದ್ ರಿಜ್ವಾನ್ ಕೂಡ 4 ರನ್‌ಗಳಿಗೆ ಸುಸ್ತಾದರು. ಆದರೆ ಆ ಬಳಿಕ ಬಂದ ಸಲ್ಮಾನ್ ಆಘಾ, ಅಬ್ದುಲ್ ಸಮದ್ ಜೊತೆಗೂಡಿ ಇನ್ನಿಂಗ್ಸ್ ನಿಭಾಯಿಸಿದರು. ಸಮದ್ 34 ರನ್ ಬಾರಿಸಿ ಔಟಾದರೆ, ಆ ಬಳಿಕ ಬಂದ ಸಾದ್ ಮಸೂದ್ 38 ರನ್‌ಗಳ ಕಾಣಿಕೆ ನೀಡಿದರು. ನಾಯಕ ಶಾಹೀನ್ ಅಫ್ರಿದಿ 37 ರನ್ ಬಾರಿಸಿದರು. ಸತತ ವಿಕೆಟ್‌ಗಳ ಪತನದ ನಡುವೆಯೂ ಹೋರಾಟ ನೀಡಿದ ಆಘಾ, 98 ಎಸೆತಗಳಲ್ಲಿ 106 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ ನಿರ್ಣಾಯಕ ಹಂತದಲ್ಲಿ ವಿಕೆಟ್ ಕೈಚೆಲ್ಲುವ ಮೂಲಕ ತಂಡವನ್ನು ಸೋಲಿನ ಸುಳಿಗೆ ತಳ್ಳಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೊರಿಯನ್ ಸಿನಿಮಾಗಳು (Cinema) ವಿಶ್ವದಾದ್ಯಂತ ಮೋಡಿ ಮಾಡಿವೆ. ವಿಶ್ವದಲ್ಲಿಯೇ ಅತ್ಯುತ್ತಮ ಸಿನಿಮಾಗಳನ್ನು ನಿರ್ಮಿಸುವ ದೇಶಗಳಲ್ಲಿ ಕೊರಿಯಾ ಸಹ ಒಂದು. ಕೋವಿಡ್ ನಂತರದ ಒಟಿಟಿ ಕ್ರಾಂತಿಯ ಬಳಿಕವಂತೂ ಕೊರಿಯನ್ ಸಿನಿಮಾಗಳು ಸಣ್ಣ ಪುಟ್ಟ ನಗರ-ಪಟ್ಟಣಗಳನ್ನೂ ತಲುಪಿವೆ. ಕೊರಿಯನ್ ಶೋಗಳು, ಕೊರಿಯನ್ ಹಾಡುಗಳು ಭಾರತದಲ್ಲಿಯೂ ಸಹ ಸಖತ್ ಜನಪ್ರಿಯ. ಇತ್ತೀಚೆಗಿನ ‘ಸ್ಕ್ವಿಡ್ ಗೇಮ್ಸ್’ ವೆಬ್ ಸರಣಿ ಸಹ ಭಾರಿ ದೊಡ್ಡ ಹಿಟ್ ಆಗಿತ್ತು. ಇದೀಗ ಈ ‘ಸ್ಕ್ವಿಡ್ ಗೇಮ್’ ಸೇರಿದಂತೆ ಕೊರಿಯಾದ ಹಲವು ಸಿನಿಮಾ, ಶೋಗಳಲ್ಲಿ ನಟಿಸಿರುವ ಸ್ಟಾರ್ ನಟರೊಬ್ಬರು ಕನ್ನಡದ ‘ಕೆಜಿಎಫ್’ ಸಿನಿಮಾ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ.
‘ಸ್ಕ್ವಿಡ್ ಗೇಮ್ಸ್’, ‘ದಿ ಚೇಸ್’, ‘ಮಿಡ್ನೈಟ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಕೊರಿಯಾದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ವಿ ಹಾ ಜುನ್ ಅವರು ಇತ್ತೀಚೆಗೆ ಭಾರತಕ್ಕೆ ಬಂದಿದ್ದಾಗ ಭಾರತೀಯ ಸಿನಿಮಾಗಳ ಬಗ್ಗೆ ಮಾತನಾಡುತ್ತಾ ಮೊದಲು ‘ಕೆಜಿಎಫ್’ ಸಿನಿಮಾದ ಬಗ್ಗೆ ಮಾತನಾಡಿದರು. ‘ನನಗೆ ಕೆಲವು ಭಾರತೀಯ ಸಿನಿಮಾಗಳ ಪರಿಚಯ ಇದೆ. ಕೆಲವು ಸಿನಿಮಾಗಳನ್ನು ನೋಡಿದ್ದೇನೆ. ‘ಕೆಜಿಎಫ್’ ಸಿನಿಮಾ ನನಗೆ ಬಹಳ ಇಷ್ಟ. ಅದೊಂದು ಅದ್ಭುತವಾದ ಬಹಳ ಅದ್ಧೂರಿಯಾದ ಆಕ್ಷನ್ ಸಿನಿಮಾ. ಬಹಳ ಇಂಟೆನ್ಸ್ ಆದ ಆಕ್ಷನ್ ಮತ್ತು ಸನ್ನಿವೇಶಗಳನ್ನು ಆ ಸಿನಿಮಾ ಹೊಂದಿದೆ’ ಎಂದಿದ್ದಾರೆ.
‘ಕೆಜಿಎಫ್’ ಸಿನಿಮಾ ಅದ್ಧೂರಿ ಸ್ಕೇಲ್ ಹೊಂದಿರುವ ಸೀಟಿನ ತುದಿಗೆ ಕೂರಿಸುವ ಸಿನಿಮಾ, ಮತ್ತು ಅಷ್ಟೇ ಮನೊರಂಜನಾತ್ಮಕವೂ ಇದೆ. ನಾನು ಸಹ ಅಂಥಹಾ ಒಂದು ಅದ್ಧೂರಿ ಮತ್ತು ಇಂಟೆನ್ಸ್ ಆಗಿರುವ ಆಕ್ಷನ್ ಸಿನಿಮಾನಲ್ಲಿ ನಟಿಸಲು ಕಾತರದಿಂದ ಕಾಯುತ್ತಿದ್ದೀನಿ. ನನಗೆ ಅಂಥಹಾ ಸಿನಿಮಾಗಳಲ್ಲಿ ನಟಿಸುವ ಆಸೆ ಇದೆ. ಅದು ಮಾತ್ರವೇ ಅಲ್ಲದೆ ವಿಶ್ವದಾದ್ಯಂತ ಜನಪ್ರಿಯವಾಗಿರುವ ‘3 ಇಡಿಯಟ್ಸ್’ ಸಿನಿಮಾವನ್ನು ಸಹ ನಾನು ಇನ್ನು ಮೆನ್ಷನ್ ಮಾಡಲೇ ಬೇಕು. ಅದು ಬಹಳ ಮನೊರಂಜನಾತ್ಮಕ ಮತ್ತು ಅಷ್ಟೆ ಹಾಸ್ಯಮಯ ಸಿನಿಮಾ ಅದರ ಜೊತೆಗೆ ಸಮಾಜಕ್ಕೆ ಒಂದು ಅದ್ಭುತ ಸಂದೇಶವನ್ನು ಸಹ ಹೊಂದಿದೆ’ ಎಂದು ಅವರು ಹೇಳಿದರು.
ಕನ್ನಡದ ಸಿನಿಮಾಗಳು ಕರ್ನಾಟಕದ ಗಡಿಯನ್ನೇ ದಾಟದ ಸಮಯವೊಂದಿತ್ತು. ಆದರೆ ಈಗ ವಿಶ್ವದ ಗಡಿಯನ್ನು ದಾಟುವುದು ಮಾತ್ರವಲ್ಲದೆ, ಭಾರತೀಯ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿದೇಶಿ ನಟನೊಬ್ಬ ‘ಕೆಜಿಎಫ್’ ಅನ್ನು ಉದಾಹರಣೆಯಾಗಿ ನೀಡುವುದು ‘ಕೆಜಿಎಫ್’ ಸಿನಿಮಾ ಸೃಷ್ಟಿಸಿರುವ ಪ್ರಭಾವಕ್ಕೆ ಅದ್ಭುತ ಉದಾಹರಣೆ ಆಗಿದೆ. ‘ಕೆಜಿಎಫ್’ ಮೂಲಕ ಯಶ್ ಮತ್ತು ಪ್ರಶಾಂತ್ ನೀಲ್ ಅದ್ಭುತವನ್ನೇ ಸೃಷ್ಟಿಸಿದ್ದಾರೆ. ಆ ಸಿನಿಮಾದ ಮೂಲಕ ಮನೊರಂಜನಾ ಕ್ಷೇತ್ರದಲ್ಲಿ ಕರ್ನಾಟಕದ ಹೆಸರನ್ನು ದೇಶ-ವಿದೇಶಗಳಿಗೆ ವಿಸ್ತರಿಸಿದ್ದಾರೆ.
ಈಗ ಯಶ್ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು ಅದುವೇ ‘ಟಾಕ್ಸಿಕ್’ ಈ ಸಿನಿಮಾವನ್ನು ಸಹ ಅವರು ಅಂತರಾಷ್ಟ್ರೀಯ ಸಿನಿಮಾ ಮಾರುಕಟ್ಟೆಯನ್ನು ಗಮನದಲ್ಲಿ ಇಟ್ಟುಕೊಂಡೇ ನಿರ್ಮಿಸಿದ್ದಾರೆ. ಸಿನಿಮಾವನ್ನು ಗೀತು ಮೋಹನ್ದಾಸ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಯಶ್ ಮತ್ತು ಕೆವಿಎನ್ ಬಂಡವಾಳ ಹೂಡಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ.
ಚಿಕ್ಕಮಗಳೂರು, ಮಾರ್ಚ್ 15: ಡೆತ್‌ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (suicide)ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆತ್‌ನೋಟ್‌ನಲ್ಲಿ ಏನಿದೆ?
ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ.
ಫೈನಾನ್ಸ್‌ನಲ್ಲಿ ಸಾಲ ಮಾಡಿರುವೆ, ಸಂಬಳ ನೀಡದಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮಿಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೂ ಕಿರುಕುಳ ನೀಡುತ್ತಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲವರು ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಹಾಸ್ಟೆಲ್ ವಾರ್ಡನ್ ಮನೆಯಲ್ಲಿ ನೇಣಿಗೆ ಶರಣು
ಹಾಸನ ನಗರದ ದಾಸರಕೊಪ್ಪಲಿನಲ್ಲಿ ಹಾಸ್ಟೆಲ್ ವಾರ್ಡನ್ ಲೋಕೇಶ್(45) ಆತ್ಮಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಮುಂಬಡ್ತಿ ಪಡೆದು ಚನ್ನರಾಯಪಟ್ಟಣ ಹಾಸ್ಟೆಲ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಲೋಕೇಶ್ ನೇಣಿಗೆ ಶರಣಾಗಿದ್ದಾರೆ. ಹಾಸನದ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
KSRTC ಬಸ್ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ
ಕೆಎಸ್ಆರ್ಟಿಸಿ ಬಸ್ನಲ್ಲಿ ಹೃದಯಾಘಾತವಾಗಿ ಪ್ರಯಾಣಿಕ ಸಾವನ್ನಪ್ಪಿರುವಂತ ಘಟನೆ ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಬಸ್ನಲ್ಲಿ ನಡೆದಿದೆ. ಕೊಳ್ಳೇಗಾಲದ ವಡ್ಡರ ದೊಡ್ಡಿಯ ಆರೋಗ್ಯ ಸ್ವಾಮಿ ಮೃತ ದುರ್ದೈವಿ.
ಬಸ್ ನಿಲ್ಧಾಣಕ್ಕೆ ಬಂದಾಗ ಎಲ್ಲಾ ಪ್ರಯಾಣಿಕರು ಇಳಿದಿದ್ದಾರೆ. ಆದರೆ ಆರೋಗ್ಯ ಸ್ವಾಮಿ ಮಾತ್ರ ಬಸ್ನಲ್ಲೇ ಕುಳಿತಿದ್ದರು. ಬಸ್ ನಿಂದ ಕಂಡಕ್ಟರ್ ಇಳಿಸಲು ಮುಂದಾದಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ 112 ಕರೆ ಮಾಡಿ ಬಸ್ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶಿಲನೆ ಮಾಡಿದ್ದಾರೆ. ಮೃತದೇಹವನ್ನ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು, ಮಾರ್ಚ್ 15: ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಚುನಾವಣಾ ಅಧಿಕಾರಿಯೇ ಕಾಂಗ್ರೆಸ್ ಪರ ಫೋರ್ಜರಿ ಮಾಡಿರುವ ಆರೋಪ ಕೇಳಿಬಂದಿದ್ದು, ಜೇಬಿನಲ್ಲಿ ಮತಪತ್ರಗಳನ್ನು ತುಂಬಿಕೊಂಡು ಬಂದು ಮತ ಪೆಟ್ಟಿಗೆಗೆ ಹಾಕಿರೋದಾಗಿ ಜೆಡಿಎಸ್ ದೂರಿದೆ. ಈ ಸಂಬಂಧ ಚುನಾವಣಾಧಿಕಾರಿ ವಿರುದ್ಧ ಕುಣಿಗಲ್ನ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿದ್ದು, ಹೈಡ್ರಾಮಾದ ಬಳಿಕ ಚುನಾವಣೆಯನ್ನೇ ರದ್ದು ಮಾಡಿದ ಪ್ರಸಂಗ ನಡೆದಿದೆ.
ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ 12 ಮಂದಿ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಸಾಲಗಾರರ 11 ಕ್ಷೇತ್ರ ಮತ್ತು 1 ಸಾಮಾನ್ಯ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ನಡೆದ ಎಲೆಕ್ಷನ್ಗೆ 22 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಶೇಕಡ 20ರಷ್ಟು ಮತದಾನ ಬಾಕಿ ಇರುವಾಗ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬ್ಯಾಲೇಟ್ ಪೇಪರನ್ನು ಅಕ್ರಮವಾಗಿ ಮತಪೆಟ್ಟಿಗೆಗೆ ಚುನಾವಣಾಧಿಕಾರಿ ಸುನೀಲ್ ಸೇರಿಸಿದ ಆರೋಪವನ್ನು ಜೆಡಿಎಸ್ ಮಾಡಿದೆ. ಸಾಲಗಾರರ ಕ್ಷೇತ್ರ ಮತಗಟ್ಟೆ ಸಂಖ್ಯೆ 1ರಲ್ಲಿ ಚುನಾವಣಾಧಿಕಾರಿಯೇ ಜೇಬಿನಲ್ಲಿ ತುಂಬಿಕೊಂಡು ಬಂದು ಮತಪತ್ರವನ್ನು ಮತಪೆಟ್ಟಿಗೆಗೆ ಹಾಕಿದ್ದಾರೆ. ಇದನ್ನು ಜೆಡಿಎಸ್ ಎಂಜೆಂಟ್ ಕಂಡು ತಡೆದಿದ್ದಾರೆ. ಈ ವೇಳೆ ಸುನೀಲ್ ಅವರ ಜೇಬಿನಲ್ಲಿ 25 ಮತಪತ್ರಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದ್ದು, ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಣಿಗಲ್ ತಾಲೂಕು ಜೆಡಿಎಸ್ ಅಧ್ಯಕ್ಷ ಜಗದೀಶ್, ಚುನಾವಣಾಧಿಕಾರಿಯಿಂದ ಕಳ್ಳ ಮತದಾನ ನಡೆದಿದೆ. ತಮ್ಮದೇ ಸರ್ಕಾರ ಇದೆ ಎಂದು ಶಾಸಕರು ತಾಲೂಕಿನಲ್ಲಿ ಮಾಡಬಾರದ ಅನಾಚಾರ ಮಾಡುತ್ತಿದ್ದಾರೆ. ಈ ಹಿಂದೆ ರಾಮನಗರ ಮತ್ತು ಹಾಸನದಲ್ಲಿ ಚುನಾವಣಾ ಅಕ್ರಮ ಮಾಡಿದ್ದ ಸುನೀಲ್ರನ್ನು ಕುಣಿಗಲ್ ತಾಲೂಕಿಗೆ ಹಾಕಿಸಿದ್ದಾರೆ. ಕಿಟಿಕಿಯಿಂದ ಗೌಪ್ಯವಾಗಿ ಮತಪತ್ರಗಳನ್ನು ತಂದು ಏಜೆಂಟರು ಇಲ್ಲದಿದ್ದಾಗ ಮತಪೆಟ್ಟಿಗೆಗೆ ತುಂಬುತ್ತಿದ್ದರು. ಸುಮಾರು ನೂರರಿಂದ ನೂರೈವತ್ತು ಈ ರೀತಿ ಕಳ್ಳಮತದಾನ ನಡೆದಿದೆ. ಚುನಾವಣಾಧಿಕಾರಿ ವಿರುದ್ಧ ನಾವು ದೂರು ನೀಡಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅವರ ಜೊತೆ ಯಾರ್ಯಾರು ಭಾಗಿಯಾಗಿದ್ದಾರೋ ಅವರಿಗೂ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.
ಟಿಎನ್ ಸೀತಾರಾಮ್ (TN Seetharam) ಅವರು ಜನಪ್ರಿಯ ಧಾರಾವಾಹಿ ನಿರ್ದೇಶಕರು ಮಾತ್ರವಲ್ಲದೆ ನಟರೂ ಸಹ ಹೌದು. ಕೆಲ ಸಿನಿಮಾಗಳನ್ನು ಸಹ ಅವರು ನಿರ್ದೇಶನ ಮಾಡಿದ್ದಾರೆ. ಆದರೆ ದಶಕಗಳ ಹಿಂದೆ ಅವರು ನಾಯಕನಾಗಿಯೂ ಸಹ ನಟಿಸಿದ್ದರು. ಸೀತಾರಾಮ್ ಅವರ ಗುರುಗಳಾದ ಪಿ ಲಂಕೇಶ್ ಅವರೇ ನಿರ್ದೇಶಿಸಿದ್ದ ಸಿನಿಮಾ ಅದಾಗಿತ್ತು. ಲಂಕೇಶರು ನಿರ್ದೇಶಿಸಿದ್ದ ‘ಪಲ್ಲವಿ’ ಸಿನಿಮಾನಲ್ಲಿ ತಾವು ನಾಯಕ ಆಗಿದ್ದು ಹೇಗೆ? ಲಂಕೇಶ್ ಅವರು ತಮ್ಮನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದು ಹೇಗೆ? ಎಂದು ಟಿಎನ್ ಸೀತಾರಾಮ್ ಅವರು ವಿವರಿಸಿದ್ದಾರೆ. ಅದರ ಜೊತೆಗೆ ಲಂಕೇಶ್ ಅವರೊಟ್ಟಿಗಿನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ ವಿಡಿಯೋ ನೋಡಿ….