ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು – Kannada News | Salman Khan accepts paparazzi apology for hospital incident at Raja Shivaji event in Mumbai
ಮುಂಬೈನ ಆಸ್ಪತ್ರೆಯೊಂದರ ಹೊರಗಡೆ ತಮ್ಮ ಖಾಸಗಿತನಕ್ಕೆ ಧಕ್ಕೆ ತಂದ ಪಾಪರಾಜಿಗಳ ಮೇಲೆ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ (Salman Khan) ತೀವ್ರ ಆಕ್ರೋಶ ಹೊರಹಾಕಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಘಟನೆ ನಡೆದ ಕೇವಲ ಒಂದೇ ದಿನದಲ್ಲಿ ಸಲ್ಲು ಭಾಯ್ ಹಳೆಯ ಮುನಿಸನ್ನು ಮರೆತು ಫೋಟೋಗ್ರಾಫರ್ಗಳ ಕ್ಷಮೆಯನ್ನು ಸ್ವೀಕರಿಸುವ ಮೂಲಕ ದೊಡ್ಡ ಗುಣ ಪ್ರದರ್ಶಿಸಿದ್ದಾರೆ. ಬುಧವಾರ (ಮೇ 20) ನಡೆದ ಕಾರ್ಯಕ್ರಮವೊಂದರಲ್ಲಿ ಸಲ್ಮಾನ್ ಮತ್ತು ಪಾಪರಾಜಿಗಳ (Paparazzi) ನಡುವೆ ಸೌಹಾರ್ದಯುತ ಮಾತುಕತೆ…