ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು! – Kannada News | Why RCB Will Keep Top Spot Even With a Loss in Final Game
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್ಸಿಬಿ ವಿರುದ್ಧದ ಈ ಪಂದ್ಯವು ಸನ್ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು. ಈ ಎರಡೂ ತಂಡಗಳು…