All posts by nagaraj11081993

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಡೆದದ್ದೇನು?

ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧ ಎಂದು ಆರೋಪಿಸಿ ತಮ್ಮದೇ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಮೀನುಗಾರಿಕೆ ಜೊತೆಗೆ ಮಾರಾಟ ಮಾಡಲು ಮುಖಂಡರು ಅವಕಾಶ ನೀಡಿಲ್ಲ.

ಇದನ್ನೂ ಓದಿ: ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಬ್ಯಾರೇಜ್ ಮೇಲೆ ಮಾಂಗಲ್ಯ ಸರ ತೆಗೆದಿಟ್ಟಿದ್ದಾರೆ. ಇಂದು ಮಧ್ಯಾಹ್ನ ಅಗ್ನಿ ಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಮದುವೆಗೆ ವಿರೋಧ: ಭದ್ರನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು 

ತುಂಗ ಭದ್ರನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಳಿ ಇರುವ ತುಂಗಭದ್ರ ಸೇತುವೆ ಬಳಿ ಇತ್ತೀಚೆಗೆ ನಡೆದಿದೆ. ಸ್ಥಳೀಯರಿಂದ ಮಾಹಿತಿ ಬೆನ್ನಲ್ಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಪ್ರೇಮಿಗಳನ್ನ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳು. ಅಪ್ರಾಪ್ತ ಬಾಲಕಿ ಹಾಗೂ 19 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಪ್ರೇಮಿಗಳು ಸೇತುವೆಯಿಂದ ನದಿಗೆ ಹಾರಿದ್ದಾರೆ. ನದಿಯಲ್ಲಿ ನೀರು ಕಡಿಮೆ ಇದ್ದ ಹಿನ್ನೆಲೆ ನಡುಗಡ್ದೆಯಲ್ಲಿ ಆಸರೆ ಪಡೆದಿದ್ದರು. ಯುವಕ ಅನ್ಯಧರ್ಮೀಯ ಹಿನ್ನೆಲೆ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಹೊನ್ನಾಳಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

Source link

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು. ಇನ್ನು ಮಾರ್ಚ್ 16ರಂದು ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.

ಜೋರಾದ ಟಿಕೆಟ್​​ ಫೈಟ್​​

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್​​ ಎರಡೂ ಪಕ್ಷಗಳಿಗೆ ಸವಾಲಿನ ಕೆಲಸವಾಗಿ ಮಾರ್ಪಟ್ಟಿದೆ. ಶಾಮನೂರ ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರದಲ್ಲಿ ಗೆಲ್ಲುವ ಉತ್ಸಾಹದಲ್ಲಿದ್ದ ಬಿಜೆಪಿ ಸ್ಥಿತಿ ಮನೆಯೊಂದು ಮೂರು ಬಾಗಿಲಾಗಿದ್ದರೆ, ಇತ್ತ ಕಾಂಗ್ರೆಸ್​​ನಲ್ಲಿ ಟಿಕೆಟ್​​ಗಾಗಿ ಮುಸ್ಲಿಂ ಸಮುದಾಯ ಪಟ್ಟು ಹಿಡಿದಿದೆ. ಮತ್ತೊಂದೆಡೆ ತಮ್ಮ ಕುಟುಂಬಕ್ಕೇ ಮರಳಿ ಟಿಕೆಟ್​​ ಸಿಗಬೇಕೆಂವ ಆಗ್ರಹವನ್ನು ಶಾಮನೂರು ಕುಟುಂಬ ವ್ಯಕ್ತಪಡಿಸಿದ್ದರೆ, ಈ ನಡುವೆ ಅಖಾಡಕ್ಕೆ ಹೊಸ ಮುಖದ ಪ್ರವೇಶವೂ ಆಗಿದೆ. ಎಐಸಿಸಿ ಯುವ ಘಟಕದ ಕಾರ್ಯದರ್ಶಿ, ಜಿಲ್ಲೆಯ ಮುಸ್ಲಿಂ ಸಮಾಜದ ಪ್ರಭಾವಿ ಮುಖಂಡ ಸೈಯದ್ ಸೈಪುಲ್ಲಾ ಪುತ್ರ ಮಹಮ್ಮದ್ ಖಾಲೀದ್ ಕೂಡ ಟಿಕೆಟ್​​ ಆಕಾಂಕ್ಷಿಯಾಗಿದ್ದಾರೆ. ಬೃಹತ್ ಇಫ್ತಾರ್​​ ಕೂಟ ಆಯೋಜನೆ ಮಾಡಿ ಟಿಕೆಟ್​​​ಗೆ ಬೇಡಿಕೆ ಇಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಮತ್ತೋರ್ವ ಆಕಾಂಕ್ಷಿ ಹಾಗೂ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ ಶಾಮನೂರು ಕೂಡ ಹಾಜರಾಗಿರೋದು ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: 5 ಕೋಟಿ ಆಫರ್​​ ನೀಡಿ ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ; ಡಿಕೆಶಿ ಸ್ಫೋಟಕ ಆರೋಪ

ಇನ್ನು ಮೊನ್ನೆ ಮೊನ್ನೆಯವರೆಗೂ ಜಿಲ್ಲೆಯಲ್ಲಿ ಕಿತ್ತಾಡುತ್ತಿದ್ದ ಬಿಜೆಪಿ ನಾಯಕರೀಗ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಪಕ್ಷ ಯಾರಿಗೇ ಮಣೆ ಹಾಕಿದರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜಿಪಿ ಟಿಕೆಟ್ ಆಕಾಂಕ್ಷಿಗಳಾದ ಬಿ.ಜಿ. ಅಜಯಕುಮಾರ, ಯಶವಂತರಾವ್ ಜಾಧವ್, ಶ್ರೀನಿವಾಸ ದಾಸಕರಿಯಪ್ಪ, ರಾಜನಹಳ್ಳಿ ಶಿವಕುಮಾರ ಹಾಗೂ ದೇವರಮನೆ ಶಿವಕುಮಾರ ಒಂದೇ ವೇದಿಕೆಗೆ ಬಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಣಗಳ ಟಿಕೆಟ್ ಆಕಾಂಕ್ಷಿಗಳು ಬಹುದಿನಗಳ ಬಳಿಕ ಒಂದೇ ವೇದಿಕೆಗೆ ಬಂದಿದ್ದು, ಪಕ್ಷ ಹೊಸ ಮುಖದ ಹುಡುಕಾಟ ನಡೆಸುತ್ತಿರೋದೇ ಇದರ ಹಿಂದಿನ ಕಾರಣ ಎನ್ನಲಾಗ್ತಿದೆ. ಅತ್ತ ಬಾಗಲಕೋಟೆಯಲ್ಲಿಯೂ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಸ್ಪರ್ಧೆ ಪಕ್ಷಗಳಲ್ಲಿ ಜೋರಾಗಿಯೇ ಇದ್ದು, ಅಂತಿಮವಾಗಿ ಅಖಾಡಕ್ಕೆ ಇಳಿಯುವವರು ಯಾರೆಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಏನಿದು ಘಟನೆ?

ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರು ಅಸಭ್ಯವಾಗಿ ನೃತ್ಯ ಪ್ರದರ್ಶನ ನೀಡುತ್ತಿರುವುದು ನೋಡುಗರ ಹುಬ್ಬೇರಿಸುವಂತೆ ಮಾಡಿದೆ.

@HateDetectors ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ:

ವೀಡಿಯೊದಲ್ಲಿ ಶಾಲೆಯ ಹೆಸರಿರುವ ಬ್ಯಾನರ್ ಸ್ಪಷ್ಟವಾಗಿ ಕಾಣಿಸುತ್ತಿದ್ದು, ನೂರಾರು ವಿದ್ಯಾರ್ಥಿಗಳು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಂತೆ ನೆಟ್ಟಿಗರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಶಿಕ್ಷಣ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಕಲಿಸಬೇಕು. ಇಂತಹ ಪ್ರದರ್ಶನಗಳಿಗೆ ಅನುಮತಿ ನೀಡಿದ್ದು ಹೇಗೆ?” ಎಂದು ಅನೇಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಈ ವಿವಾದಾತ್ಮಕ ವಿಡಿಯೋ ಬಗ್ಗೆ ಶಾಲಾ ಆಡಳಿತ ಮಂಡಳಿಯಿಂದ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಈ ಕಾರ್ಯಕ್ರಮ ನಡೆದ ನಿಖರ ದಿನಾಂಕ ಯಾವುದು? ವೇದಿಕೆಯ ಮೇಲೆ ಪ್ರದರ್ಶನ ನೀಡಿದವರು ಶಾಲೆಯ ವಿದ್ಯಾರ್ಥಿಗಳೇ ಅಥವಾ ಹೊರಗಿನಿಂದ ಬಂದ ಕಲಾವಿದರೇ? ಎಂಬ ಬಗ್ಗೆ ಇನ್ನೂ ಗೊಂದಲಗಳಿವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ. ಏನಿದು ವಿವಾದ? ಮಾಹಿತಿ ಇಲ್ಲಿದೆ.

ಮಾರ್ಚ್ 1, 2026 ರಂದು ಚೆನ್ನೈ ಸೂಪರ್ ಕಿಂಗ್ಸ್ ತನ್ನ ಹೊಸ ಜರ್ಸಿಯನ್ನು ಬಿಡುಗಡೆ ಮಾಡುವ ಪ್ರಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋದಲ್ಲಿ ಎಂಎಸ್ ಧೋನಿ ಅವರ ಎಂಟ್ರಿ ಮತ್ತು ಜರ್ಸಿ ಅನಾವರಣದ ಸಂದರ್ಭದಲ್ಲಿ ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿರುವ ‘ಜೈಲರ್’ ಮತ್ತು ‘ಜೈಲರ್ 2’ ಮತ್ತು ‘ಕೂಲಿ’ ಸಿನಿಮಾಗಳ ಜನಪ್ರಿಯ ಹಾಡುಗಳು, ಹಿನ್ನೆಲೆ ಸಂಗೀತ ಮತ್ತು ಸಂಭಾಷಣೆಗಳನ್ನು ಬಳಸಲಾಗಿತ್ತು ಇದು ಸನ್ ಪಿಕ್ಚರ್ಸ್​​ನ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ಕಾರಣಕ್ಕೆ ಇದೀಗ ಸನ್ ಪಿಕ್ಚರ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದು ಸಿಎಸ್​​ಕೆ ವಿರುದ್ಧ ಮದ್ರಾಸ್ ಹೈಕೋರ್ಟ್​​ನಲ್ಲಿ ದಾವೆ ಹೂಡಿದೆ. ಸನ್ ಪಿಕ್ಚರ್ಸ್ ಪರವಾಗಿ ವಾದ ಮಂಡಿಸಿದ ವಕೀಲರು, ಈ ಚಿತ್ರಗಳ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರೊಂದಿಗಿನ ಒಪ್ಪಂದದಂತೆ ಎಲ್ಲಾ ಹಕ್ಕುಗಳು ಸನ್ ಪಿಕ್ಚರ್ಸ್ ಬಳಿ ಇವೆ. ಸಿಎಸ್‌ಕೆ ಯಾವುದೇ ಪೂರ್ವಾನುಮತಿ ಪಡೆಯದೆ ಇವುಗಳನ್ನು ಬಳಸಿದೆ. ಜರ್ಸಿ ಮತ್ತು ಇತರ ಸರಕುಗಳ ಮಾರಾಟಕ್ಕಾಗಿ ಈ ವಿಡಿಯೋ ಬಳಸಲಾಗುತ್ತಿದ್ದು, ಇದು ವಾಣಿಜ್ಯ ಉದ್ದೇಶದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ. ಸನ್ ಪಿಕ್ಚರ್ಸ್ ತಂಡವು ಸಿಎಸ್‌ಕೆ ಮೇಲೆ 1 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಬೇಕು ಹಾಗೂ ಈ ಹಾಡುಗಳನ್ನು ಬಳಸದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ:‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

ಚೆನ್ನೈ ತಂಡದ ಪರ ವಾದ ಮಂಡಿಸಿದ ವಕೀಲರು ತಂಡವು ಈಗಾಗಲೇ ಆಕ್ಷೇಪಾರ್ಹ ವಿಡಿಯೋಗಳನ್ನು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಿದೆ. ಕಳೆದ ಮೂರು ವರ್ಷಗಳಿಂದ ಇಂತಹ ಹಾಡುಗಳನ್ನು ಬಳಸುತ್ತಿದ್ದರೂ ಸನ್ ನೆಟ್‌ವರ್ಕ್ ಈ ಹಿಂದೆ ಆಕ್ಷೇಪಿಸಿರಲಿಲ್ಲ. ಮುಂದಿನ ದಿನಗಳಲ್ಲಿ ಸನ್ ಪಿಕ್ಚರ್ಸ್‌ನ ಅನುಮತಿ ಅಥವಾ ಪರವಾನಗಿ ಪಡೆಯದೆ ಯಾವುದೇ ಸಂಗೀತ ಬಳಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ಅವರು ಈ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸಿಎಸ್‌ಕೆ ಲಿಮಿಟೆಡ್‌ಗೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿದ್ದಾರೆ.

ಸನ್ ಪಿಕ್ಚರ್ಸ್​ ಅವರ ಮಾಲೀಕರ ಪುತ್ರಿ ಕಾವ್ಯಾ ಮಾರನ್ ಅವರು ಐಪಿಎಲ್​​ನ ಮತ್ತೊಂದು ಪ್ರಮುಖ ತಂಡವಾಗಿರುವ ಸನ್​​ರೈಸರ್ಸ್ ಹೈದರಾಬಾದ್​​ನ ಮಾಲಕಿ ಆಗಿದ್ದಾರೆ. ಹೈದರಾಬಾದ್ ತಂಡವು ಸನ್ ನೆಟ್​​ವರ್ಕ್ ಉದ್ಯಮದ ಭಾಗವೇ ಆಗಿದೆ. ಹಾಗಾಗಿ ಇದು ಒಂದು ರೀತಿ ಎಸ್​​ಆರ್​​ಎಚ್ ಮತ್ತು ಸಿಎಸ್​​ಕೆ ನಡುವಿನ ಹೋರಾಟವೂ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳ, ಮಾರ್ಚ್​​ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟ ಪರಿಹಾರದೊಂದಿಗೆ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸಲಾಗುತ್ತದೆ. ಪ್ರತಿದಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರ್ಯಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಅಥವಾ ಬೆಲೆ ಏರಿಕೆ ಮಠದ ದಾಸೋಹದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಕ್ತರಿಗೆ ನಿತ್ಯ ಅನ್ನಪ್ರಸಾದ ಸೇವೆ ಲಭ್ಯವಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ.

ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2 ಬೇಕರಿ ಮತ್ತು 5ಕ್ಕೂ ಹೆಚ್ಚು ಹೋಟೆಲ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಮಾಲೀಕರು ವಾಣಿಜ್ಯ ಸಿಲಿಂಡರ್ ಬದಲು ಗೃಹಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆ ಆಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಸದ್ಯ 21 ಸಿಲಿಂಡರ್​ಗಳನ್ನು ವಶಕ್ಕೆ ಪಡೆದ ತಹಶೀಲ್ದಾರ್ ಸುಜಾತಾ ಎಚ್ಚರಿಕೆ ಕೂಡ ನೀಡಿದ್ದಾರೆ. ಇನ್ನು ದಾಳಿ ವೇಳೆ ಕೆಲವು ಹೋಟೆಲ್​ಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಕೂಡ ಪತ್ತೆ ಆಗಿದೆ. ಹೀಗಾಗಿ ಸುರಭಿ ಹೋಟೆಲ್‌ನಲ್ಲಿ ಅಧಿಕಾರಿಗಳು ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಹೋಟೆಲ್​ಗಳು ಬಂದ್​: ಆಲೂಗಡ್ಡೆ ಸೇಲ್​ ಆಗದೇ ರೈತ ಕಂಗಾಲು

ಜಿಲ್ಲೆಯಲ್ಲಿ ರೈತರಿಗೆ ಯುದ್ಧ ಬಿಸಿ ಮುಟ್ಟಿಸಿದೆ. ಸಿಲಿಂಡರ್​ ಅಭಾವದಿಂದ ಹೋಟೆಲ್​ಗಳು ಬಂದ್ ಆಗಿರೋದ್ರಿಂದ, ತರಕಾರಿಗಳನ್ನ ತೆಗೆದುಕೊಳ್ಳೋರೇ ಇಲ್ಲ. 1,200 ರಿಂದ 1,300 ರೂ. ಇದ್ದ ಮೂಟೆ ಆಲೂಗಡ್ಡೆ, 500 ರಿಂದ 600 ರೂಪಾಯಿಗೆ ಕುಸಿತ ಆಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟಿನ್​​ ಮಹಿಳೆಯರು

ವಾಣಿಜ್ಯ ಸಿಲಿಂಡರ್​ ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ. ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಕಲಬುರಗಿಯಲ್ಲಿ ಇಂದಿರಾ ಕ್ಯಾಂಟೀನ್​​ನಲ್ಲಿ​ ಕೆಲಸ ಮಾಡುತ್ತಿದ್ದ 10 ಮಹಿಳೆಯರನ್ನ ಕೆಲಸಕ್ಕೆ ಬರಬೇಡಿ ಅಂತ ಗುತ್ತಿಗೆದಾರರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಇನ್ನು ದಾವಣಗೆರೆಯಲ್ಲಿ ಆಟೋ ಎಲ್​ಪಿಜಿ ಗ್ಯಾಸ್​ ದರ ಏರಿಕೆ ಆಗಿದೆ. ಪ್ರತಿ ಲೀಟರ್​​ಗೆ 23 ರೂ. ಹೆಚ್ಚಳ ಮಾಡಿದ್ದು, 52 ರೂ. ಇದ್ದ ಲೀಟರ್​ ಎಲ್​​ಪಿಜಿ, 75 ರೂಪಾಯಿ ಆಗಿದೆ. ಎಲ್​​ಪಿಜಿ ಹೆಚ್ಚಳ ಮಾಡಿದೆಎ ಪ್ರಯಾಣಿಕರು ಹೆಚ್ಚುವರಿ ಹಣ ಕೊಡ್ತಾರಾ ಅಂತ ಚಾಲಕರು ಕಿಡಿಕಾರುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

NHPC Recruitment 2026: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ. ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ತನ್ನ ಅಧಿಕೃತ ಅಧಿಸೂಚನೆಯ ಮೂಲಕ 81 ‘ಟ್ರೈನಿ ಎಂಜಿನಿಯರ್’ (Trainee Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 06 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಿವಿಲ್, ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ BE, B.Tech ಅಥವಾ B.Sc ಪದವಿ ಪೂರೈಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷದೊಳಗಿರಬೇಕು ಮತ್ತು ಆಯ್ಕೆಯಾದವರಿಗೆ ತಿಂಗಳಿಗೆ 50,000 ರಿಂದ 1,60,000 ರೂಪಾಯಿಗಳವರೆಗೂ ವೇತನ ದೊರೆಯಲಿದೆ.

ಅಭ್ಯರ್ಥಿಗಳ ಆಯ್ಕೆಯು ಮುಖ್ಯವಾಗಿ GATE-2024 ಅಥವಾ 2025 ರ ಅಂಕಗಳು, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. SC, ST, ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ, ಆದರೆ ಇತರ ಅಭ್ಯರ್ಥಿಗಳು 708 ರೂಪಾಯಿಗಳನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಆಸಕ್ತರು ಏಪ್ರಿಲ್ 06 ರೊಳಗೆ NHPC ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಇಟ್ಟುಕೊಳ್ಳುವುದು ಅತ್ಯಗತ್ಯ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

ನವದೆಹಲಿ, ಮಾರ್ಚ್ 15: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ನಾಲ್ಕು ಕಡೆ ಒಂದೇ ಹಂತದಲ್ಲಿ ಮತದಾನವಾಗಲಿದೆ. ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ದಿನಾಂಕಗಳನ್ನು ಪ್ರಕಟಿಸಿದರು. ಇದರೊಂದಿಗೆ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ.

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ.

ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 824 ಕ್ಷೇತ್ರಗಳಲ್ಲಿ 17.4 ಕೋಟಿ ಮತದಾರರಿದ್ದಾರೆ. 2.19 ಲಕ್ಷ ಪೋಲಿಂಗ್ ಸ್ಟೇಷನ್​ಗಳಿವೆ. 25 ಲಕ್ಷ ಮತದಾನ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ.

ಚುನಾವಣೆ ನಡೆಯುವ ರಾಜ್ಯಗಳು ಮತ್ತು ಕ್ಷೇತ್ರಗಳ ಸಂಖ್ಯೆ

ಪಶ್ಚಿಮ ಬಂಗಾಳ: 294 ಕ್ಷೇತ್ರ

ತಮಿಳುನಾಡು: 234 ಕ್ಷೇತ್ರ

ಅಸ್ಸಾಂ: 126 ಕ್ಷೇತ್ರ

ಕೇರಳ: 140 ಕ್ಷೇತ್ರ

ಪುದುಚೆರಿ: 20 ಕ್ಷೇತ್ರ

Source link

ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಹುಬ್ಬಳ್ಳಿ, ಮಾರ್ಚ್​​ 15: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಕಿಮ್ಸ್​​ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತ ಬ್ರೈನ್​ ಡೆಡ್​​ ಆಗಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಧಾರವಾಡದ ತಾಲೂಕಿನ ಮೊರಬ ಗ್ರಾಮದ ನಿವಾಸಿ ಪ್ರಕಾಶ್ (25) ಮೃತರಾಗಿದ್ದು, ಜೆಸಿಬಿ ಚಾಲಕನಾಗಿ ಇವರು ಕೆಲಸಮಾಡಿಕೊಂಡಿದ್ದರು. ಮಾರ್ಚ್ 13ರಂದು ಕೆಲಸ ಮುಗಿಸಿ ಬೈಕ್​ನಲ್ಲಿ ತಮ್ಮೂರಿಗೆ ಹೋಗುತ್ತಿದ್ದ ವೇಳೆ ಯಾವುದೋ ಅಪರಿಚಿತವಾಹನ ಡಿಕ್ಕಿಯಾಗಿ ಪ್ರಕಾಶ್​​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆ್ಯಂಬುಲೆನ್ಸ್​ ಮೂಲಕ ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ಹುಬ್ಬಳ್ಳಿ ಕಿಮ್ಸ್​​ಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಹೀಗಾಗಿ ರಾತ್ರಿಯೇ ಪ್ರಕಾಶ್​​ರನ್ನು ಕಿಮ್ಸ್​​ಗೆ ಕರೆತರಲಾಗಿತ್ತು. ಆದರೆ ಇಲ್ಲಿನ ಸಿಬ್ಬಂದಿ ಮಾತ್ರ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದರೂ ಕನಿಷ್ಠ ಚಿಕಿತ್ಸೆಯನ್ನೂ ನೀಡಿಲ್ಲ. ಬೆಡ್ ಇಲ್ಲವೆಂಬ ಕಾರಣ ಹೇಳಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಕುಟುಂಬಸ್ಥರ ಆರೋಪ.

ಆ್ಯಂಬುಲೆನ್ಸ್​​ನಿಂದ ಗಾಯಾಳುವನ್ನು ಕೆಳಗಿಳಿಸಲೂ ಸಿಬ್ಬಂದಿ ಬಾರದ ಕಾರಣ, ಅರ್ಧಗಂಟೆಗೂ ಹೆಚ್ಚು ಕಾದು ಬಳಿಕ ಅನಿವಾರ್ಯವಾಗಿ ಪ್ರಕಾಶ್​​ರನ್ನು ಮತ್ತೆ ಧಾರವಾಡದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಅಷ್ಟರೊಳಗಾಗಿ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಮರಳಿ ಮತ್ತೆ ಕಿಮ್ಸ್​​ಗೆ ಕರೆತರಲಾಗಿತ್ತಾದರೂ ಗಾಯಾಳು ಮಾತ್ರ ಬದುಕುಳಿಯಲಿಲ್ಲ. ಧಾರವಾಡ ಜಿಲ್ಲಾ ಆಸ್ಪತ್ರೆಯಿದ ಹುಬ್ಬಳ್ಳಿ ಕಿಮ್ಸ್, ಹುಬ್ಬಳ್ಳಿ ಕಿಮ್ಸ್​​ನಿಂದ ಧಾರವಾಡ ಖಾಸಗಿ ಆಸ್ಪತ್ರೆ ಓಡಾಟದಲ್ಲಿಯೇ ಎರಡು ಗಂಟೆಗೂ ಹೆಚ್ಚು ಸಮಯ ಹೋಗಿದ್ದರಿಂದ ಸೂಕ್ತ ಚಿಕಿತ್ಸೆ ಸಿಗದ ಕಾರಣ ಪ್ರಕಾಶ್ ಬಾರದ ಲೋಕಕ್ಕೆ ಹೋಗಿದ್ದಾರೆ. ಹುಬ್ಬಳ್ಳಿ ಕಿಮ್ಸ್​​ನಲ್ಲಿಯೇ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಪ್ರಕಾಶ್ ಬದುಕುಳಿಯುತ್ತಿದ್ದರು. ಇಲ್ಲಿನ ಸಿಬ್ಬಂದಿ ಆತನನ್ನು ಬಲಿ ಪಡೆದಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್; ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್

ಇನ್ನು ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಇತ್ತೀಚೆಗೆ ಕೆಲ ಡಿ ಗ್ರೂಪ್ ಸಿಬ್ಬಂದಿ ಹಾಗೂ ವೈದ್ಯರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂತವರ ವಿರುದ್ದ ಮೇಲಾಧಿಕಾರಿಗಳು ಕಠೀಣ ಕ್ರಮ ಕೈಗೊಳ್ಳಬೇಕಿದ್ದು, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸ ಮಾಡಬೇಕಿದೆ. ಜನರು ಕಿಮ್ಸ್​​ನ ಬಡವರ ಸಂಜೀವಿನಿ ಎಂದೇ ನಂಬಿರುವ ಕಾರಣ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link