ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!
ಮೈಸೂರು, ಮಾರ್ಚ್ 15: ಕರ್ನಾಟಕದಾದ್ಯಂತ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಪ್ರಸಿದ್ಧ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಗೆ ಗ್ಯಾಸ್ ಕೊರತೆ ತಲೆದೋರಿರುವುದರಿಂದ ಇದೀಗ ಸೌದೆ ಒಲೆ ಬಳಸಿ ಲಡ್ಡು ತಯಾರಿಸಲು ದೇವಸ್ಥಾನ ಪ್ರಾಧಿಕಾರ ಮುಂದಾಗಿದೆ. ಅದಕ್ಕಾಗಿ ವಿಶೇಷ ರೀತಿಯ ಸೌದೆ ಒಲೆಯನ್ನೂ ಸಿದ್ಧಪಡಿಸಲಾಗುತ್ತಿದೆ. ಸಾಮಾನ್ಯವಾಗಿ ಲಡ್ಡು ಪ್ರಸಾದವನ್ನು ಗ್ಯಾಸ್ ಒಲೆಯಲ್ಲಿ ತಯಾರಿಸಲಾಗುತ್ತದೆ. ಆದರೆ ಸದ್ಯ ಕಮರ್ಷಿಯಲ್ ಸಿಲಿಂಡರ್ಗಳು ಸಮರ್ಪಕವಾಗಿ ದೊರೆಯದ ಕಾರಣ…