ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ – Kannada News | Horrific Crash In Mysuru: Over 10 Injured As Speeding Car Rams Into Auto In T Narasipura
ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. Source…