ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ
ದಾವಣಗೆರೆ, (ಮಾರ್ಚ್ 31): ಸಚಿವ ಎಸ್ಎಸ್ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು…