ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್: ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್
ಧಾರವಾಡ, ಮಾ.14: ಜೈಲುಗಳು ಅಂದರೆ ಕೈದಿಗಳು ಪಶ್ಚಾತ್ತಾಪ ಪಡುವ ಶಿಕ್ಷಾ ತಾಣಗಳಾಗಬೇಕು. ಆದರೆ ಧಾರವಾಡದ ಕೇಂದ್ರ ಕಾರಾಗೃಹ ಮಾತ್ರ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್ ಆಗಿ ಮಾರ್ಪಟ್ಟಿದೆಯೇ ಎಂಬ ಸಂಶಯ ಮೂಡಿದೆ. ಪೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ಮಾತನಾಡಿರುವ ಆಡಿಯೋ ಈಗ ಸಂಚಲನ ಮೂಡಿಸಿದೆ. ಪೋಕ್ಸೋ ಪ್ರಕರಣದ ಕೈದಿ ಪರ್ವೇಜ್ ಎಂಬಾತ ಬಾಲಕಿಯೊಂದಿಗೆ ಜೈಲಿನಿಂದಲೇ ಫೋನ್‌ನಲ್ಲಿ ಮಾತನಾಡಿದ್ದಾನೆ. “ಜೈಲಿನಲ್ಲಿ ಹಣ ಕೊಟ್ಟರೆ ಸಾಕು ಸಿಗರೇಟ್, ಸರಾಯಿ (ಮದ್ಯ) ಮತ್ತು ಮೊಬೈಲ್ ಸೇರಿದಂತೆ ಎಲ್ಲವೂ…