All posts by nagaraj11081993

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಬೆಂಗಳೂರು, ಮಾರ್ಚ್​ 14: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ( LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಬೆಂಗಳೂರಿನ ಹೋಟೆಲ್ ಮಾಲೀಕರಿಗೂ ಇದರ ಬಿಸಿ ತಟ್ಟಿರುವುದು ಹೊಸ ವಿಷಯವೇನಲ್ಲ. ಹೀಗಿರುವಾಗ ಹೋಟೆಲ್ ಉದ್ಯಮವನ್ನು ಉಳಿಸಿಕೊಳ್ಳಲು ಕೆಲ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ. ಇದರಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಗ್ರಾಹಕ ಜೇಬಿಗೆ ಬಿಸಿ ಮುಟ್ಟಿಸಿವೆ.

ದುಬಾರಿ ಮೊತ್ತದಲ್ಲಿ ಸಿಲಿಂಡರ್ ಮಾರಾಟ

ಯುದ್ಧದ ಪರಿಸ್ಥಿತಿಯಲ್ಲಿ ಸಾಮಾನ್ಯವಾಗಿ ದೊರೆಯುವ ಬೆಲೆಯಿಗಿಂತ ಒನ್ ಟು ಡಬಲ್ ದರ ನೀಡಿ ಸಿಲಿಂಡರ್ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ಹೋಟೆಲ್ ವ್ಯವಹಾರವನ್ನು ನಿಲ್ಲಿಸಲು ಸಾಧ್ಯವಿಲ್ಲದ ಕಾರಣ ಹೆಚ್ಚುವರಿ ಹಣ ನೀಡಿ ಗ್ಯಾಸ್ ಖರೀದಿಸಿ ಹೋಟೆಲ್ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹೆಚ್ಚುವರಿ ಖರ್ಚಿನ ಪರಿಣಾಮವಾಗಿ ಇದೀಗ ಗ್ರಾಹಕರಿಗೂ ಬಿಗ್ ಶಾಕ್ ಎದುರಾಗಿದೆ. ಗ್ಯಾಸ್ ಕೊರತೆಯ ಹಿನ್ನಲೆಯಲ್ಲಿ ಹಲವು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಸಹ ಏರಿಕೆ ಕಂಡಿದೆ.

ವಿಶೇಷವಾಗಿ ಶಿವಾನಂದ ಸರ್ಕಲ್ ಪ್ರದೇಶದಲ್ಲಿರುವ ಬೆಂಗಳೂರು ಕೆಫೆ ಸೇರಿದಂತೆ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ದರವನ್ನು ಹೆಚ್ಚಿಸಲಾಗಿದೆ. ಎಲ್ಲ ತಿಂಡಿಗಳ ಮೇಲೂ ಸುಮಾರು 10 ರೂಪಾಯಿ ಹೆಚ್ಚುವರಿ ದರ ವಿಧಿಸಲಾಗಿದೆ. ಹೋಟೆಲ್ ಮಾಲೀಕರು ಹಳೆಯ ದರದ ಪಕ್ಕದಲ್ಲೇ ಹೊಸ ದರವನ್ನು ಪ್ರದರ್ಶಿಸಿ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಹಿಂದಿನ ದರ – ಇಂದಿನ ದರ (ರೂ.ಗಳಲ್ಲಿ)

  • ಇಡ್ಲಿ – 30 -40
  • ವಡೆ – 30 -40
  • ರವಾ ಇಡ್ಲಿ 40-50
  • ಖಾರಾ ಬಾತ್ 30-40
  • ಕೇಸರಿ ಬಾತ್ 30-40
  • ಪಲಾವ್ – 50 -60
  • ಪೂರಿ ಸಾಗು – 60-70
  • ಸೆಟ್ ದೋಸೆ 60-70
  • ಮಸಾಲಾ ದೋಸೆ – 60-70
  • ರೈಸ್ ಸಾಂಬಾರ್ – 70-80
  • ಊಟ – 90 -100
  • ರೋಟಿ 90-100

ಗ್ಯಾಸ್ ಕೊರತೆ ಹಾಗೂ ಹೆಚ್ಚುತ್ತಿರುವ ಖರ್ಚಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಆದರೆ ಬೆಲೆ ಏರಿಕೆಯಿಂದ ಸಾಮಾನ್ಯ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾಸ್ ಸರಬರಾಜನ್ನು ಶೀಘ್ರದಲ್ಲಿ ಸರಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೋಟೆಲ್ ಮಾಲೀಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ಸಿನಿಮಾ ಮೂಲಕ ಗಮನ ಸೆಳೆದವರು. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ.

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಗುಣಮಟ್ಟ ಕಳಪೆ ಮಟ್ಟ ತಲುಪಿದೆ. ಮುಂಬೈನ ಕಳಪೆ ವಾಯು ಗುಣಮಟ್ಟದ ಸೂಚ್ಯಂಕದ ಬಗ್ಗೆ ದೀಪಿಕಾ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಳವಳ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ನೇರವಾಗಿ ಬಿಎಂಸಿಗೆ ಟ್ಯಾಗ್ ಮಾಡಿ ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಗುರುವಾರ, ದೀಪಿಕಾ ಪಡುಕೋಣೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ AQI ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಆ ಸ್ಕ್ರೀನ್‌ಶಾಟ್‌ನಲ್ಲಿ, ಮುಂಬೈನ ಹಲವು ಭಾಗಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಾಗಿರುವದು ಕಂಡುಬರುತ್ತದೆ. ಈ ಪೋಸ್ಟ್ ಜೊತೆಗೆ, ದೀಪಿಕಾ, ‘ಈ ನಗರ ಮತ್ತು ಇಲ್ಲಿ ವಾಸಿಸುವ ಜನರು ಉಸಿರುಗಟ್ಟಿಸುತ್ತಿದ್ದಾರೆ. ಇದು ಹೇಗೆ ಸರಿಯಾಗಬಹುದು?’ ಎಂದು ಬರೆದಿದ್ದಾರೆ. ಇದರ ಜೊತೆಗೆ, ಅವರು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಉಲ್ಲೇಖಿಸಿ, ಈ ಸಮಸ್ಯೆಯ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿದರು.

ಮುಂಬೈನಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ವಿಷಯದ ಬಗ್ಗೆ ಕೆಲವು ಕಲಾವಿದರು ಈಗಾಗಲೇ ಧ್ವನಿ ಎತ್ತಿದ್ದಾರೆ. ನಟಿಯರಾದ ಸಯಾಮಿ ಖೇರ್ ಮತ್ತು ರಿಚಾ ಚಡ್ಡಾ ಕೂಡ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು.

ದೀಪಿಕಾ ಪಡುಕೋಣೆ ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಅದಕ್ಕಾಗಿಯೇ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಯಾವಾಗಲೂ ಹೆಚ್ಚು ಚರ್ಚೆ ಆಗುತ್ತವೆ. ಈ ಬಾರಿಯೂ ಅವರು ಹಂಚಿಕೊಂಡ ಪೋಸ್ಟ್ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗಿದ್ದು, ಅನೇಕ ಜನರು ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ

ದೀಪಿಕಾ ಅವರು ನಿರ್ದೇಶಕ ಅಟ್ಲೀ ಅವರ ಮುಂಬರುವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಚಿತ್ರದ ಶೀರ್ಷಿಕೆಯನ್ನು ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ. ಇದಲ್ಲದೆ, ದೀಪಿಕಾ ಶಾರುಖ್ ಖಾನ್ ಅವರ ‘ಕಿಂಗ್’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಡಿಸೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರೂ ಸಹ ಈ ರೀತಿ ರನೌಟ್ ಮಾಡಬೇಡಿ: ಕೈಫ್ ಕಿವಿಮಾತು

ಪಾಕಿಸ್ತಾನ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ನಾಯಕ ಮೆಹಿದಿ ಹಸನ್ ಮಿರಾಝ್ ಅವರು ಸಲ್ಮಾನ್ ಅಲಿ ಅಘಾ ಅವರನ್ನು ರನ್ ಔಟ್ ಮಾಡಿದ ರೀತಿಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ವಿಕೆಟ್ ಪಡೆಯುವ ಹಪಾಹಪಿಯು ಕ್ರೀಡಾ ಸ್ಫೂರ್ತಿಗಿಂತ ದೊಡ್ಡದಲ್ಲ. ಇದು ವಿಶ್ವಕಪ್ ಫೈನಲ್ ಪಂದ್ಯವಾಗಿದ್ದರೂ ಸಹ ಇಂತಹ ಕೆಲಸ ಮಾಡಬಾರದು. ಯುವ ಕ್ರಿಕೆಟಿಗರು ಇದನ್ನು ಎಂದಿಗೂ ಅನುಕರಿಸಬಾರದು ಎಂದು ಮೊಹಮ್ಮದ್ ಕೈಫ್ ಸೋಷಿಯಲ್ ಮೀಡಿಯಾ ಮೂಲಕ ಕಿವಿಮಾತು ಹೇಳಿದ್ದಾರೆ.

ಘಟನೆ ಹಿನ್ನಲೆ:

ಪಾಕ್ ತಂಡದ ಆಟಗಾರನ ಸಲ್ಮಾನ್ ಅಲಿ ಅಘಾ ಅವರು ಕ್ರೀಸ್‌ನಿಂದ ಸ್ವಲ್ಪ ಹೊರಬಂದು, ಕೆಳಗೆ ಬಿದ್ದಿದ್ದ ಚೆಂಡನ್ನು ಎತ್ತಿ ಬೌಲರ್‌ಗೆ (ಮಿರಾಝ್​) ನೀಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಮಿರಾಝ್ ಅವರು ಚೆಂಡನ್ನು ತಕ್ಷಣವೇ ಎತ್ತಿ ಸ್ಟಂಪ್‌ಗೆ ಎಸೆದು ಔಟ್ ಮಾಡಿದ್ದಾರೆ. ಅತ್ತ ಥರ್ಡ್ ಅಂಪೈರ್ ಪರಿಶೀಲಿಸಿದಾಗ ಸಲ್ಮಾನ್ ಅಲಿ ಅಘಾ ಕ್ರೀಸ್​ನಿಂದ ಹೊರಗಿರುವುದು ಕಂಡು ಬಂದಿದೆ. ಹೀಗಾಗಿ ಔಟ್ ಎಂದು ತೀರ್ಪು ನೀಡಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಲ್ಮಾನ್ ಅಲಿ ಅಘಾ ಅಸಮಾಧಾನ ಹೊರಹಾಕುತ್ತಾ ಮೈದಾನದಿಂದ ತೆರಳಿದ್ದರು. ಇದನ್ನೇ ಪ್ರಸ್ತಾಪಿಸಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್, “ಕ್ರೀಡಾ ಸ್ಫೂರ್ತಿ ಇಲ್ಲದ ಆಟ ಆಟವೇ ಅಲ್ಲ” ಎಂದು ಅವರು ಕಿಡಿಕಾರಿದ್ದಾರೆ.

 

Source link

ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್

‘ಧುರಂಧರ್ 2’ ಸಿನಿಮಾ (Dhurandhar 2) ರಿಲೀಸ್​​ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅಡ್ವಾನ್ಸ್ ಬುಕಿಂಗ್​​​ನಲ್ಲೂ ಚಿತ್ರ ಅಬ್ಬರಿಸುತ್ತಿದೆ. ದೊಡ್ಡ ಚಿತ್ರಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ತಕ್ಕಂತೆ ಒಂದಷ್ಟು ಥಿಯರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅದೇ ರೀತಿ ‘ಧುರಂಧರ್ 2’ ಸಿನಿಮಾಗೆ ಸಂಬಂಧಿಸಿದ ಒಂದು ದೊಡ್ಡ ಥಿಯರಿ ಹುಟ್ಟಿಕೊಂಡಿದೆ. ತೆರೆಮೇಲೆ ರಣವೀರ್ ಸಿಂಗ್ ಅವರನ್ನು ಕೊಲ್ಲೋದು ಸಾರಾ ಅರ್ಜುನ್ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ.

ಈ ಮೊದಲು ‘ಟಾಕ್ಸಿಕ್’ ರಿಲೀಸ್ ಆಗುತ್ತದೆ ಎಂದಾಗ ಒಂದಷ್ಟು ಥಿಯರಿಗಳು ಹೊರ ಬಂದವು.ಕಥೆ ಹಾಗಿರಲಿದೆ, ಹೀಗಿರಲಿದೆ ಎಂದೆಲ್ಲ ಹೇಳಲಾಯಿತು. ಈಗ ‘ಧುರಂಧರ್ 2’ ಸಿನಿಮಾ ಬಗ್ಗೆಯೂ ಇದೇ ರೀತಿಯ ಥಿಯರಿಗಳು ಹುಟ್ಟಿಕೊಳ್ಳುತ್ತಿವೆ. ಹಮ್ಜಾ ಅಲಿ ಮಜಾರಿಯನ್ನು ಯಲಿನಾ ಜಮಾಲಿ ಸಾಯಿಸುತ್ತಾಳಾ ಎಂಬ ಪ್ರಶ್ನೆ ಮೂಡಿದೆ.

ಯಲಿನಾ ರಾಜಕಾರಣಿಯ ಮಗಳು. ಈಕೆಯ ಮೇಲೆ ಹಮ್ಜಾಗೆ ಪ್ರೀತಿ ಮೂಡುತ್ತದೆ. ಇಬ್ಬರೂ ವಿವಾಹ ಆಗುತ್ತಾರೆ.ಈ ಹಮ್ಜಾ ಅಲಿ ಭಾರತದ ಸ್ಪೈ ಎಂಬ ವಿಷಯ ಆಕೆಗೆ ತಿಳಿದಿರೋದಿಲ್ಲ. ಹೀಗಾಗಿ, ಈ ವಿಷಯ ತಿಳಿದ ಬಳಿಕ ಆಕೆ ಹತ್ಯೆ ಮಾಡುತ್ತಾಳೆ ಎಂದು ಹೇಳಲಾಗುತ್ತಾ ಇದೆ. ಇದಕ್ಕೆ ಕಾರಣವೂ ಇದೆ. ಯಲಿನಾ ಗನ್ ಹಿಡಿದು ನಿಲ್ಲೋ ದೃಶ್ಯ ಟ್ರೇಲರ್​​ನಲ್ಲಿ ಬರುತ್ತದೆ. ಇದನ್ನು ನೋಡಿದ ಅನೇಕರು ಹೀಗೊಂದು ಥಿಯರಿಯನ್ನು ಹುಟ್ಟುಹಾಕಿದ್ದಾರೆ.

ಇನ್ನು, ‘ಗೆಹ್ರಾ ಹುವಾ..’ ಹಾಡಿನ ಸಾಲುಗಳು ಕೂಡ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರೀತಿ ಹಾಗೂ ಮೋಸದ ಕುರಿತು ಈ ಹಾಡಿನ ಸಾಲು ಸಾಗುತ್ತದೆ. ಯಲಿನಾ ಜೊತೆ ಪ್ರೀತಿ ಮಾಡಿದ್ದು, ಹಮ್ಜಾ ತೆಗೆದುಕೊಂಡ ದೊಡ್ಡ ತಪ್ಪು ನಿರ್ಧಾರ ಆಗಿ ಮಾರ್ಪಡಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಇನ್ನು, ಹಮ್ಜಾನ ಯಲಿನಾ ಎಕ್ಸ್​​​ಪೋಸ್ ಮಾಡಬಹುದು ಎಂದು ಕೂಡ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವಿಧ ಚರ್ಚೆಗಳು ಜೋರಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ (SS Rajamouli) ಅವರು ‘ವಾರಣಾಸಿ’ ಸಿನಿಮಾನ ನಿರ್ದೇಶನ ಮಾಡುವುದರಲ್ಲಿ ಬ್ಯುಸಿ ಇದ್ದಾರೆ. ವಿವಿಧ ಹಂತಗಳಲ್ಲಿ ಸಿನಿಮಾದ ಶೂಟ್ ನಡೆಯುತ್ತಿದ್ದು 2027ರ ಏಪ್ರಿಲ್​ನಲ್ಲಿ ಸಿನಿಮಾ ತೆರೆಗೆ ಬರಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕಥೆ ರಾಮಾಯಣದಿಂದ ಸ್ಫೂರ್ತಿ ಪಡೆದಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಈ ಚಿತ್ರದ ಸೆಟ್​​ಗೆ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ಈ ವರದಿ ಬಗ್ಗೆ ರಾಜಮೌಳಿ ಆಗಲಿ, ಸುದೀಪ್ ಆಗಲಿ ಅಧಿಕೃತವಾಗಿ ಹೇಳಿಲ್ಲ. ಈಗ ಕೇಳಿ ಬರಿತ್ತಿರುವ ಒಸ ಮಾಹಿತಿ ಎಂದರೆ ಸುದೀಪ್ ಏಪ್ರಿಲ್​​​ನಲ್ಲಿ 15 ದಿನಗಳ ಶೂಟ್​​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿದೆ. ಇನ್ನು, ಸದ್ಯಕ್ಕಂತೂ ಈ ಬಗ್ಗೆ ಅವರು ಮಾಹಿತಿ ನೀಡುವುದು ಅನುಮಾನವೇ.

ಸುದೀಪ್ ಹಾಗೂ ರಾಜಮೌಳಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣ ಆಗಿದ್ದು, ‘ಈಗ’ ಸಿನಿಮಾ. ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡಿದರೆ, ಸುದೀಪ್ ಅವರು ಇದಕ್ಕೆ ವಿಲನ್. ಈ ಚಿತ್ರದಲ್ಲಿ ಸುದೀಪ್ ಅವರು ಶೋ ವಿನ್ನರ್ ಎನಿಸಿಕೊಂಡರು. ಅವರ ನಟನೆ ಬೇರೆಯದೇ ಲೆವೆಲ್​​​ನಲ್ಲಿ ಇತ್ತು. ಈ ಕಾರಣಕ್ಕೆ ರಾಜಮೌಳಿಗೆ ಸುದೀಪ್ ಎಂದರೆ ಫೇವರಿಟ್. ಈ ಕಾರಣದಿಂದಲೇ ‘ವಾರಣಾಸಿ’ ಸಿನಿಮಾದಲ್ಲಿ ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸುದೀಪ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಮಾರ್ಕ್’ ಚಿತ್ರದಲ್ಲಿ. ಕಳೆದ ವರ್ಷ ಡಿಸೆಂಬರ್​​ನಲ್ಲಿ ಸಿನಿಮಾ ತೆರೆಗೆ ಬಂತು. ಈ ಚಿತ್ರ ಗಮನ ಸೆಳೆಯಿತು. ಇದಾದ ಬಳಿಕ ರೋಮ್​-ಕಾಮ್ ಅಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ತೆಲುಗು ನಿರ್ದೇಶಕ ಸುಕುಮಾರ್ ಅಡಿಯಲ್ಲಿ ಪಳಗಿದ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು  ಪತ್ತೆ ಮಾಡಿದ್ದಾರೆ.

ಸ್ಥಿರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 ನಿವೇಶನಗಳು ಇವೆ. 6 ಸುಸಜ್ಜಿತ ವಾಸದ ಮನೆಗಳು ಇದೆ. 31 ಎಕರೆ ಕೃಷಿ ಭೂಮಿ ಇದೆ ಎಂದು ಹೇಳಲಾಗಿದೆ. ಚರಾಸ್ತಿಗಳು ಒಟ್ಟು 2,66,90,001 ರೂ. ಇದರಲ್ಲಿ 3,95,941 ಹಣ, 1.47 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳು, 17 ಲಕ್ಷ ರೂ. ಬೆಲೆಬಾಳುವ ಕಾರುಗಳು, 25.75 ಲಕ್ಷ ರೂ. ನಗದು ಠೇವಣಿ, 72.68 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ.

ಅಧಿಕಾರಿ ಶ್ರೀನಿವಾಸ್ ಅವರು ತಮ್ಮ ಆದಾಯದ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸರು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲಕ್ಕೆ ಎರಡು ದಿನಗಳ ಕಾಲ ಈ ಶೋಧ ಕಾರ್ಯ ನಡೆದಿದೆ. ಲೋಕಾಯುಕ್ತ ಪೊಲೀಸರು ಶ್ರೀನಿವಾಸ್ ಟಿ. ಎಂ. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 13ರ ಹೊತ್ತಿಗೆ ಅವರ ವಿರುದ್ಧ ಅಧಿಕೃತವಾಗಿ ತನಿಖೆ ಆರಂಭವಾಗಿದೆ.

ಇದನ್ನೂ ಓದಿ: ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಸಾಮಾನ್ಯವಾಗಿ ಲೋಕಾಯುಕ್ತ ದಾಳಿಯಲ್ಲಿ ಇಷ್ಟು ದೊಡ್ಡ ಮಟ್ಟದ ಅಕ್ರಮ ಆಸ್ತಿ ಪತ್ತೆಯಾದಾಗ, ಸಂಬಂಧಪಟ್ಟ ಇಲಾಖೆಯು (ಅಬಕಾರಿ ಇಲಾಖೆ) ಲೋಕಾಯುಕ್ತ ವರದಿಯನ್ನು ಆಧರಿಸಿ ಅಧಿಕಾರಿಯನ್ನು ಅಮಾನತುಮಾಡುವುದು ವಾಡಿಕೆ. ಶ್ರೀನಿವಾಸ್ ಅವರ ವಿರುದ್ಧದ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಲೋಕಾಯುಕ್ತರು ಸರ್ಕಾರಕ್ಕೆ ನೀಡುವ ಪ್ರಾಥಮಿಕ ವರದಿಯ ಆಧಾರದ ಮೇಲೆ ಮುಂದಿನ ಒಂದೆರಡು ದಿನಗಳಲ್ಲಿ ಅಮಾನತು ಆದೇಶ ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಸ್ತುತ, ದಾಳಿಯ ವೇಳೆ ಪತ್ತೆಯಾದ 31 ಎಕರೆ ಕೃಷಿ ಜಮೀನು, 6 ಮನೆಗಳು ಮತ್ತು 11 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಈ ಆಸ್ತಿಗಳು ಅವರ ಮತ್ತು ಅವರ ಕುಟುಂಬದ ಹೆಸರಿನಲ್ಲಿ ಹೇಗೆ ಬಂತು ಎಂಬುದಕ್ಕೆ ಶ್ರೀನಿವಾಸ್ ಅವರಿಂದ ಸಮರ್ಥನೆ ಕೇಳಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​​ 14: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾಕೆ ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಿಗೆ ದೈವಿಕ ಅನುಗ್ರಹವಿರುತ್ತದೆ ಎಂದು ನಂಬಲಾಗಿದೆ. ಅಂತಹ ಪ್ರಮುಖ ಸ್ಥಳಗಳಲ್ಲಿ ಹೊಸ್ತಿಲು ಕೂಡ ಒಂದು. ಹೊಸ್ತಿಲಲ್ಲಿ ಮಹಾಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ.

ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಸಂಕಲ್ಪ ಮಾಡಿಕೊಳ್ಳುವ ಪದ್ಧತಿ ಇದೆ. ಅದೇ ರೀತಿ, ಹೊರಗಿನಿಂದ ಮನೆಗೆ ಬರುವಾಗ ಹೊಸ್ತಿಲಿಗೆ ನಮಸ್ಕರಿಸಿ, ಬಲಗಾಲನ್ನು ಒಳಗೆ ಇಡುವುದು ವಾಡಿಕೆ. ಇದು ಹೊರಗಿನಿಂದ ತಂದಿರಬಹುದಾದ ಋಣಾತ್ಮಕ ಶಕ್ತಿ, ದೃಷ್ಟಿ, ಅಥವಾ ಪಾಪದ ಭಾರವನ್ನು ಹೋಗಲಾಡಿಸಿ, ಸಕಾರಾತ್ಮಕತೆಯನ್ನು ಮನೆಗೆ ತರುತ್ತದೆ ಎಂಬುದು ನಂಬಿಕೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

Source link

Horoscope Today 14th​​ March​: ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 14​​​​, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಷಾಡ ನಕ್ಷತ್ರ, ವರಿಯನ್ ಯೋಗ, ಭವಕರಣಗಳನ್ನು ಒಳಗೊಂಡಿದೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:59 ರವರೆಗೆ ಇರುತ್ತದೆ. ಸರ್ವ ಸಿದ್ಧಿ ಕಾಲವು ಮಧ್ಯಾಹ್ನ 1:59 ರಿಂದ 3:29 ರವರೆಗೆ ಇದೆ.

ಇಂದಿನ ದಿನವು ಪಾಪ ವಿಮೋಚನಿ ಏಕಾದಶಿ ಮತ್ತು ಅಲಂಕಾರು ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ವಿಶೇಷತೆಯನ್ನು ಹೊಂದಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯಲ್ಲಿ ಸಂಚರಿಸಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ ಗ್ರಹಗಳ ಶುಭ ಫಲ, ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಸಂಬಂಧಗಳು, ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

 

 

Source link

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ.

ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

“ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ. “ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು” ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯು ಜಾಗತಿಕ ರಾಜಕೀಯದಲ್ಲಿ ಭಾರಿ ಕಂಪನ ಸೃಷ್ಟಿಸಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಬೆಂಗಳೂರು, ಮಾ.14: ರಾಜ್ಯಾದ್ಯಂತ ತೀವ್ರವಾದ ಶಾಖದ ಅಲೆ (Heat Wave) ಎದುರಾಗಿದ್ದು, ಬಿಸಿಲಿನಿಂದ ಜನ ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ. ಕನಿಷ್ಠ ತೇವಾಂಶದ ಕಾರಣದಿಂದಾಗಿ ಸೆಖೆಯ ಅನುಭವ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ನಗರದಲ್ಲಿ ‘ತೀವ್ರ ತಾಪಮಾನದ ಎಚ್ಚರಿಕೆ’ ನೀಡಲಾಗಿದೆ.

ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ ಬಿಸಿಲು ಮತ್ತು ಒಣ ವಾತಾವರಣದ ನಿರೀಕ್ಷೆ. ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಗರಿಷ್ಠ ತಾಪಮಾನ ಸಮೀಪಿಸುವ ಸಾಧ್ಯತೆ ಇದೆ.ಕರಾವಳಿ ಕರ್ನಾಟಕ (ಮಂಗಳೂರು/ಉಡುಪಿ)ದಲ್ಲಿ ಹೆಚ್ಚಾಗಿ ಬಿಸಿಲು ಮತ್ತು ಬಿಸಿಲಿನ ವಾತಾವರಣವಿದ್ದು, ಸುತ್ತಲೂ ಹೆಚ್ಚಿನ ಆರ್ದ್ರತೆ ಮತ್ತು ಗರಿಷ್ಠ ತಾಪಮಾನವಿರುತ್ತದೆ. ಹೆಚ್ಚಿನ ಶಾಖದ ಅಲೆಗಳ ಅಪಾಯಗಳ ಕಾರಣ, ನಿವಾಸಿಗಳು ನೀರಿನಂಶದಿಂದ ಇರಲು, ಗರಿಷ್ಠ ಸಮಯದಲ್ಲಿ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಎಚ್ಚರಿಕೆ ಕ್ರಮವನ್ನು ನೀಡಲಾಗಿದೆ.

ನಗರ ಗರಿಷ್ಠ ತಾಪಮಾನ (ಅಂದಾಜು) ಸ್ಥಿತಿಗತಿ
ಕಲಬುರಗಿ 41°C – 42°C ತೀವ್ರ ಶಾಖದ ಅಲೆ (Heat Wave)
ಬಳ್ಳಾರಿ / ರಾಯಚೂರು 40°C ಒಣ ಹವೆ, ಸುಡುವ ಬಿಸಿಲು
ಬೆಂಗಳೂರು 35°C – 36°C ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಳ
ಮೈಸೂರು 36°C ಶುಷ್ಕ ವಾತಾವರಣ
ಮಂಗಳೂರು 34°C ಅಧಿಕ ತೇವಾಂಶ (ಹೆಚ್ಚಿನ ಸೆಖೆ)

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ‘ರೆಡ್ ಅಲರ್ಟ್’ ಮಾದರಿಯ ಪರಿಸ್ಥಿತಿ ಇದೆ. ಇಲ್ಲಿ ಬಿಸಿಗಾಳಿ (Loo) ಬೀಸುವ ಸಾಧ್ಯತೆ ಹೆಚ್ಚಿದೆ.ಇಂದು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ UV ಇಂಡೆಕ್ಸ್ 10+ (Extremely High) ದಾಟುವ ನಿರೀಕ್ಷೆಯಿದೆ. ಇದು ನೇರವಾಗಿ ಚರ್ಮಕ್ಕೆ ತಗುಲಿದರೆ ಹಾನಿಕಾರಕ ಎಂದು ಹೇಳಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..

ಸೂರ್ಯನ ಕಿರಣಗಳಲ್ಲಿ ಅತಿನೇರಳೆ (UV) ಮಟ್ಟ ಹೆಚ್ಚಿರಲಿದ್ದು, ಇದು ಚರ್ಮದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಿ. ಈ ಸಮಯದಲ್ಲಿ ಸೂರ್ಯನ ತಾಪಮಾನ ಮತ್ತು ಶಾಖದ ಅಲೆ ಅತ್ಯಂತ ತೀವ್ರವಾಗಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳನ್ನು ಸೇವಿಸಿ. ಹೊರಗೆ ಹೋಗಲೇಬೇಕಾದ ಅನಿವಾರ್ಯತೆ ಇದ್ದರೆ ಸಡಿಲವಾದ ಹತ್ತಿ ಬಟ್ಟೆ ಧರಿಸಿ, ಛತ್ರಿ ಅಥವಾ ಟೋಪಿಯನ್ನು ಬಳಸಿ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link