ಎಲ್ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್
ನವದೆಹಲಿ, ಮಾರ್ಚ್ 13: ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವೆ ಸಂಘರ್ಷ ಆರಂಭವಾದ ನಂತರ ಜಗತ್ತಿನಾದ್ಯಂತ ಹಲವೆಡೆ ಇಂಧನ, ಎಲ್ಪಿಜಿ ಬಿಕ್ಕಟ್ಟು (LPG Crisis) ತಲೆದೋರಿತ್ತು. ಅದಕ್ಕೆ ಭಾರತವೂ ಹೊರತಾಗಿರಲಿಲ್ಲ. ಆದರೆ, ಕೊನೆಗೂ ಭಾರತದಲ್ಲಿ ಉದ್ಭವವಾಗಿದ್ದ ಎಲ್ಪಿಜಿ ಕೊರತೆಗೆ ಪರಿಹಾರ ಸಿಕ್ಕಂತಾಗಿದೆ. ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್‌ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ…