All posts by nagaraj11081993

ಸೆಪ್ಟೆಂಬರ್​ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ – Kannada News | Russian President Vladimir Putin to visit India in September for BRICS Summit in Delhi

ನವದೆಹಲಿ, ಮೇ 19: ಇದೇ ವರ್ಷದ ಸೆಪ್ಟೆಂಬರ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ಪುಟಿನ್ ನವದೆಹಲಿಗೆ ಆಗಮಿಸಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ ಪುಟಿನ್ ಅವರು ಎರಡನೇ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವುದು ಉಭಯ ದೇಶಗಳ ನಡುವಿನ ಆಳವಾದ ರಾಜತಾಂತ್ರಿಕ ಬಾಂಧವ್ಯವನ್ನು ಎತ್ತಿ ತೋರಿಸುತ್ತದೆ. ಇದಕ್ಕೂ ಮುನ್ನ ಡಿಸೆಂಬರ್ 2025ರಲ್ಲಿ ನಡೆದ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಅವರು ಭಾರತಕ್ಕೆ ಬಂದಿದ್ದರು.

ಬ್ರಿಕ್ಸ್ ಶೃಂಗಸಭೆಯ ಜೊತೆಗೆ, ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ಪ್ರತ್ಯೇಕ ದ್ವಿಪಕ್ಷೀಯ ಸಭೆ ನಡೆಯಲಿದೆ. ಜಾಗತಿಕ ರಾಜಕೀಯ ಒತ್ತಡಗಳ ನಡುವೆಯೂ ಭಾರತ ಮತ್ತು ರಷ್ಯಾ ನಡುವೆ ಡಾಲರ್ ಬದಲಿಗೆ ರೂಪಾಯಿ-ರೂಬಲ್ ಮೂಲಕ ವ್ಯಾಪಾರವನ್ನು ವಿಸ್ತರಿಸುವ ಬಗ್ಗೆ ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ ಕೋವಿಡ್​ನಂತಹ ಜಾಗತಿಕ ಪರಿಣಾಮ ಬೀರಬಹುದು: ಪುಟಿನ್

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ರಷ್ಯಾದಿಂದ ಭಾರತಕ್ಕೆ ಕಚ್ಚಾ ತೈಲ, ಕಲ್ಲಿದ್ದಲು ಮತ್ತು ರಸಗೊಬ್ಬರಗಳ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಉಭಯ ನಾಯಕರು ಚರ್ಚಿಸಲಿದ್ದಾರೆ. ರಕ್ಷಣಾ ಸಹಕಾರ ಮತ್ತು ತಂತ್ರಜ್ಞಾನ: ರಷ್ಯಾದ ಅತ್ಯಾಧುನಿಕ S-400 ಕ್ಷಿಪಣಿ ವ್ಯವಸ್ಥೆಯ ಪೂರೈಕೆ ಹಾಗೂ ರಕ್ಷಣಾ ವಲಯದಲ್ಲಿ ಜಂಟಿ ತಂತ್ರಜ್ಞಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆಗಳು ಮುಂದುವರಿಯಲಿವೆ.

ಇದನ್ನೂ ಓದಿ: ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ

ಇತ್ತೀಚೆಗಷ್ಟೇ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಅವರು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು ಸಹ ಈ ವರ್ಷದ ಕೊನೆಯಲ್ಲಿ ವಾರ್ಷಿಕ ಶೃಂಗಸಭೆಗಾಗಿ ರಷ್ಯಾದ ರಾಜಧಾನಿ ಮಾಸ್ಕೋಗೆ ಭೇಟಿ ನೀಡುವುದನ್ನು ಖಚಿತಪಡಿಸಿದ್ದರು. ಜಾಗತಿಕವಾಗಿ ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳ ನಿರ್ಬಂಧಗಳ ನಡುವೆಯೂ ಭಾರತ ಮತ್ತು ರಷ್ಯಾ ತಮ್ಮ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿರುವುದು ಇಡೀ ವಿಶ್ವದ ಗಮನ ಸೆಳೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾದಿಂದ 9 ಆಟಗಾರರು ಔಟ್..!

Source link

ಪ್ರಯಾಣಿಕರು ನಿರಾಳ, ಎಂದಿನಂತೆ ನಾಳೆ ಬಸ್​​ ಸಂಚಾರ; ಇಲ್ಲಿವೆ ಈ ಹೊತ್ತಿನ ಟಾಪ್​​ 5 ಸುದ್ದಿಗಳು – Kannada News | Evening Top News: KSRTC Bus Services Resume, Elephant Marthanda Death and Punjami Singer Murder

ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್​​ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಕೋರ್ಟ್​​ ಹೇಳಿದ್ದು, ಈ ಸಭೆಯನ್ನು ಸಾರಿಗೆ ನೌಕರರು ಸದುಪಯೋಗಪಡಿಸಿಕೊಳ್ಳಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು

ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ. ನಿನ್ನೆ ಸ್ನಾನಕ್ಕೆಂದು ಕಾವೇರಿ ನದಿಗೆ ಮಾವುತರು ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದ ವೇಳೆ ಅವುಗಳ ನಡುವೆ ಕಾದಾಟ ನಡೆದಿತ್ತು. ಈ ವೇಳೆ ಓರ್ವ ಮಹಿಳೆ ಮೃತಪಟ್ಟಿದ್ದರೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಗಾಯಗೊಂಡಿದ್ದ ಮಾರ್ತಾಂಡಗೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಅದು ಇಂದು ಮೃತಪಟ್ಟಿದೆ ಎಂದು ಡಿಎಫ್ಒ ಅಭಿಶೇಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು

ಪಶ್ಚಿಮ ಬಂಗಾಳ ಸರ್ಕಾರದಿಂದ ಮಹತ್ವದ ನಿರ್ಧಾರ

ಸಿಲಿಗುರಿ ಕಾರಿಡಾರ್ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ‘ಚಿಕನ್ ನೆಕ್’ ಎಂದು ಕರೆಯಲ್ಪಡುವ ಸಿಲಿಗುರಿ ಕಾರಿಡಾರ್ ಪ್ರದೇಶದಲ್ಲಿನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದೆ. ಸಿಲಿಗುರಿ ಕಾರಿಡಾರ್ ಭಾರತಕ್ಕೆ ಅತ್ಯಂತ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ ಪ್ರದೇಶವಾಗಿದ್ದು, ಇದು ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗೂ ಚೀನಾ ಗಡಿಗಳಿಗೆ ಸಮೀಪದಲ್ಲಿದೆ. ‘ಚಿಕನ್ ನೆಕ್’ ಎಂದು ಪ್ರಸಿದ್ಧಿಯಾಗಿರುವ ಈ ಕಿರಿದಾದ ಭೂಭಾಗವು ಭಾರತದ ಮುಖ್ಯ ಭೂಭಾಗವನ್ನು ಈಶಾನ್ಯ ರಾಜ್ಯಗಳೊಂದಿಗೆ ಸಂಪರ್ಕಿಸುವ ಏಕೈಕ ಪ್ರಮುಖ ದಾರಿಯಾಗಿದೆ.

ಇದನ್ನೂ ಓದಿ: ಚಿಕನ್ ನೆಕ್ ಕಾರಿಡಾರ್​​ನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ ಪಶ್ಚಿಮ ಬಂಗಾಳದ ಸಿಎಂ

ಅಪಹರಣವಾಗಿದ್ದ ಗಾಯಕಿ ಶವ ಪತ್ತೆ

ಕಳೆದ 6 ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಲೂಧಿಯಾನದ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ ಸುಮಾರು 8.30ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ನಂತರ, ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ

ಭಾರತ ತಂಡ ಪ್ರಕಟ

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡ ಪ್ರಕಟ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳ: ಕೊಲ್ಲಂ ಜಿಲ್ಲೆಯ ಚಿತ್ತಾರ ಎಂಬಲ್ಲಿ ಚಲಿಸುತ್ತಿದ್ದ ಬಸ್‌ನ ಮುಂಭಾಗದ ಟೈರ್ ದಿಢೀರನೆ ಕಳಚಿಕೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಮಡತ್ತರದಿಂದ ಅಂಚಲ್ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಗದೂತ ಬಸ್ ಚಿತ್ತಾರ ಸಮೀಪದ ತಿರುವಿನಲ್ಲಿ ಚಲಿಸುತ್ತಿದ್ದಾಗ ಈ ತಾಂತ್ರಿಕ ದೋಷ ಸಂಭವಿಸಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಪ್ರಮಾಣದ ಪ್ರಾಣಾಪಾಯ ತಪ್ಪಿದ್ದು, ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದೇಶಕ್ಕೆ ಅಪ್ಪಳಿಸುತ್ತಿದೆ ಆರ್ಥಿಕ ಚಂಡಮಾರುತ; ಕುಸಿಯಲಿದೆ ಅರ್ಥ ವ್ಯವಸ್ಥೆ: ರಾಹುಲ್ ಗಾಂಧಿ ಆತಂಕ – Kannada News | Rahul Gandhi Warns India of “Economic Storm” Amid Fuel Price Hikes, Blames Modi Govt

ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು ಸಂಪೂರ್ಣವಾಗಿ ಕುಸಿಯಲಿದ್ದು, ಅದರ ಭೀಕರ ಪರಿಣಾಮವನ್ನು ಸಾಮಾನ್ಯ ನಾಗರಿಕರು ಅನುಭವಿಸಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಸುದ್ದಿಯ ಮುಖ್ಯಾಂಶಗಳು

  • ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ಆರ್ಥಿಕ ನೀತಿಗಳು ಅದಾನಿ, ಅಂಬಾನಿಯಂಥವರಿಗೆ ಉಪಯೋಗವಾಗುವಂತಿವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
  • ಸರ್ಕಾರ ರೂಪಿಸಿದ ಆರ್ಥಿಕ ರಚನೆಗಳು ಹೆಚ್ಚು ದಿನ ಉಳಿಯುವುದಿಲ್ಲ. ದುರದೃಷ್ಟಕ್ಕೆ ಈ ಕುಸಿತವು ಅದಾನಿಯಂತಹ ಉದ್ಯಮಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
  • ವಿದೇಶೀ ಪ್ರವಾಸ ಮಾಡಬೇಡಿ ಎಂದು ಜನಸಾಮಾನ್ಯರಿಗೆ ಹೇಳುವ ಮೋದಿಯವರು ತಾವೇ ದೇಶ ದೇಶ ಸುತ್ತುತ್ತಿರುತ್ತಾರೆ ಎಂದು ರಾಹುಲ್ ಗಾಂಧಿ ಸಿಡಿಗುಟ್ಟಿದ್ದಾರೆ.

ಕೋಟ್ಯಾಧಿಪತಿಗಳ ಪರವಾದ ಆರ್ಥಿಕ ರಚನೆ

ಕೇಂದ್ರದ ಆರ್ಥಿಕ ನೀತಿಗಳು ಕೇವಲ ಅದಾನಿ ಮತ್ತು ಅಂಬಾನಿಯಂತಹ ಆಯ್ದ ಕೆಲವು ಕೋಟ್ಯಧಿಪತಿ ಉದ್ಯಮಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುವಂತೆ ವ್ಯವಸ್ಥಿತವಾಗಿ ರೂಪಿಸಲ್ಪಟ್ಟಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ?

“ಮೋದಿ ಜಿ ಬದಲಾಯಿಸಿರುವ ಈ ಆರ್ಥಿಕ ರಚನೆಯು ಹೆಚ್ಚು ದಿನ ಉಳಿಯುವುದಿಲ್ಲ; ಇದು ಸಂಪೂರ್ಣವಾಗಿ ಕುಸಿಯುವುದು ನಿಶ್ಚಿತ. ಆದರೆ, ಈ ಕುಸಿತದ ಹೊರೆ ಸಾಮಾನ್ಯ ಜನರಿಗೆ ಆಗುತ್ತದೆಯೇ ಹೊರತು ಅಂಬಾನಿಯಂಥವರಿಗಲ್ಲ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯ ಜನರಿಗೆ ಆಘಾತ, ಶ್ರೀಮಂತರು ಸುರಕ್ಷಿತ

ಮುಂಬರುವ ಆರ್ಥಿಕ ಆಘಾತವು ಕಾರ್ಪೊರೇಟ್ ದಿಗ್ಗಜರನ್ನಾಗಲಿ ಅಥವಾ ರಾಜಕೀಯ ನಾಯಕರನ್ನಾಗಲಿ ಮುಟ್ಟುವುದಿಲ್ಲ. ಅವರು ತಮ್ಮ ಅರಮನೆಗಳಲ್ಲಿ ಸುರಕ್ಷಿತವಾಗಿ ಇರುತ್ತಾರೆ. ಆದರೆ ಇದರ ನೇರ ಹೊಡೆತ ಬೀಳುವುದು ದೇಶದ ಯುವಕರು, ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ. ವಿಶೇಷವಾಗಿ ಉತ್ತರ ಪ್ರದೇಶದ ಜನತೆ ಮತ್ತು ಯುವಸಮುದಾಯ ಇದರ ಸಂಪೂರ್ಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಪ್ರಧಾನಿ ಮೋದಿ ವಿದೇಶಿ ಪ್ರವಾಸಗಳ ವಿರುದ್ಧ ವಾಗ್ದಾಳಿ

ದೇಶದ ಆಂತರಿಕ ರಚನಾತ್ಮಕ ಬಿಕ್ಕಟ್ಟುಗಳನ್ನು ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. “ಮೋದಿ ಅವರು ದೇಶದ ಜನರಿಗೆ ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡಲು ಬುದ್ಧಿವಾದ ಹೇಳುತ್ತಾರೆ, ಆದರೆ ಸ್ವತಃ ತಾವೇ ಜಗತ್ತಿನಾದ್ಯಂತ ಸದಾ ಸುತ್ತುತ್ತಿರುತ್ತಾರೆ” ಎಂದು ಟೀಕಿಸಿದ ರಾಹುಲ್, ಮುಂಬರುವ ದಿನಗಳಲ್ಲಿ ದೇಶವು ಕಠಿಣ ಪರಿಸ್ಥಿತಿಯನ್ನು ಎದುರಿಸಲಿದ್ದು, ಕಳೆದ ಹಲವು ವರ್ಷಗಳಲ್ಲೇ ಕಾಣದಷ್ಟು ತೀವ್ರ ಸ್ವರೂಪದ ಆರ್ಥಿಕ ಆಘಾತ ಎದುರಾಗಲಿದೆ ಎಂದಿದ್ದಾರೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ (West Asian crisis) ಕಾರಣದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರುಪೇರಾಗಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿದೆ. ಕಮರ್ಷಿಯಲ್ ಎಲ್​ಪಿಜಿ ದರಗಳು ಬಹಳಷ್ಟು ಏರಿಕೆ ಆಗಿದೆ. ಗೃಹಬಳಕೆ ಎಲ್​ಪಿಜಿ ದರವೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಇದೇ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ, ಇದು “ಮೋದಿ ಸರ್ಕಾರವೇ ಸೃಷ್ಟಿಸಿದ ಬಿಕ್ಕಟ್ಟು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರವಾಸಿಗರಿಗೆ ನಿರಾಸೆ: ಹವಾಮಾನ ವೈಪರಿತ್ಯ ಹಿನ್ನೆಲೆ ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ – Kannada News | Monsoon Impact: Uttara Kannada Bans Water Sports and Tourist Boating for Safety

ಕಾರವಾರ, ಮೇ 19: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಬೀಚ್​​ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ಬ್ರೇಕ್​​ ಹಾಕಲಾಗಿದೆ.

ಮುಖ್ಯಾಂಶಗಳು

  • ಹವಾಮಾನ ವೈಪರಿತ್ಯ ಹಿನ್ನೆಲೆ ಜಲಸಾಹಸ ಕ್ರೀಡೆಗಿಲ್ಲ ಅವಕಾಶ​​
  • ಮಳೆಗಾಲ ಮುಕ್ತಾಯವರೆಗೂ ಜಲಸಾಹಸ ಕ್ರೀಡೆಗೆಗಳಿಗೆ ನಿರ್ಬಂಧ
  • ಜಲಾಸಾಹಸ ಕ್ರಿಡೆ ನಿರ್ವಹಣೆ & ಮೇಲುಸ್ತುವಾರಿ ಸಮಿತಿ ಆದೇಶ

ಆದೇಶದಲ್ಲಿ ಏನಿದೆ?

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮುಖ್ಯ ಬೀಚ್, ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್​​ ಬೀಚ್, ಪ್ಯಾರಡೈಸ್ ಬೀಚ್, ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಬೀಚ್ ಮತ್ತು ಕಾರವಾರ ಬೀಚ್​ಗಳಲ್ಲಿ ಪ್ರವಾಸಿ ಬೋಟಿಂಗ್ ಹಾಗೂ ಜಲಸಾಹಸ ಕ್ರೀಡೆ ಚಟುವಟಿಕೆಗೆ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು. ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲೂ ಅನುಮತಿ ನೀಡಲಾಗಿತ್ತು. ಹಾಗೆಯೇ ಕುಮಟಾ ತಾಲೂಕಿನ ತದಡಿ ಅಘನಾಶಿನಿ ನದಿ ತೀರ, ಹೊನ್ನಾವರ ಮತ್ತು ಕಾಸರಕೋಡು ಭಾಗದ ಶರಾವತಿ ಹಿನ್ನೀರಿನಲ್ಲಿ ಪ್ರವಾಸಿ ಬೋಟಿಂಗ್ ಚಟುವಟಿಕೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ ಇವೆಲ್ಲವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರೋದಾಗಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ; ಲಂಗರು ಹಾಕಿದ ನೂರಾರು ಬೋಟ್​​​ಗಳು

ಜೊತೆಗೆ ಹೊನ್ನಾವರದ ಅಪ್ಸರಕೊಂಡ ಕಡಲ ತೀರದಲ್ಲಿ ಪ್ರೀ ವೆಡ್ಡಿಂಗ್ ಸೆಟ್ ಅಳವಡಿಕೆಗೂ ಅವಕಾಶ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಮಳೆಗಾಲಕೂಡ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಕಡಲತೀರಗಳಲ್ಲಿ ಹಾಗೂ ನದಿತೀರಗಳಲ್ಲಿ ನಡೆಸುತ್ತಿರುವ ಜಲಸಾಹಸ ಕ್ರೀಡೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ಮೇ 13ರಂದು ರಾತ್ರಿ ಸುಮಾರು 8.30ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ನಂತರ, ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು. ಇಂದರ್ ಕೌರ್ ಮನೆಗೆ ಮರಳುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಆಘಾತ ಆಗಿದೆ.

ಪೊಲೀಸ್ ತನಿಖೆಯ ಪ್ರಕಾರ, ಇಂದರ್ ಕೌರ್ ಮತ್ತು ಆರೋಪಿ ಸುಖ್ವಿಂದರ್ ಸಿಂಗ್ ಮೂರು ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಸ್ನೇಹಿತರಾಗಿದ್ದರು. ಆದರೆ, ಸುಖ್ವಿಂದರ್‌ನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ಸತ್ಯ ತಿಳಿದ ತಕ್ಷಣ ಇಂದರ್ ಆತನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಅಲ್ಲದೆ ಆತನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಸುಖ್ವಿಂದರ್, ಗಾಯಕಿಯ ಮೇಲೆ ತೀವ್ರ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ.

ಈ ಕೊಲೆ ಪ್ರಕರಣದ ಹಿಂದೆ ದೊಡ್ಡ ಸಂಚು ಅಡಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ ಸುಖ್ವಿಂದರ್ ಸಿಂಗ್ ಗಾಯಕಿಯನ್ನು ಕೊಲ್ಲಲೆಂದೇ ಕೆನಡಾದಿಂದ ನೇಪಾಳ ಮಾರ್ಗವಾಗಿ ಪಂಜಾಬ್‌ಗೆ ಬಂದಿದ್ದ ಎನ್ನಲಾಗಿದೆ. ಮೇ 13ರಂದು ಆತ ತನ್ನ ಸಹಚರರೊಂದಿಗೆ ಸೇರಿ ಗಾಯಕಿಯ ಕಾರನ್ನು ಅಡ್ಡಗಟ್ಟಿ, ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದನು. ನಂತರ ಅವರನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ನೀಲೋ ಕಾಲುವೆಗೆ ಎಸೆದಿದ್ದನು. ಕೃತ್ಯ ಎಸಗಿದ ತಕ್ಷಣವೇ ಆರೋಪಿ ಮತ್ತೆ ಅದೇ ನೇಪಾಳ ಮಾರ್ಗವಾಗಿ ಕೆನಡಾಕ್ಕೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ: 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?

ಆರೋಪಿ ಸುಖ್ವಿಂದರ್ ಸಿಂಗ್ ಮತ್ತು ಆತನ ಸಹಚರ ಕರಮ್‌ಜೀತ್ ಸಿಂಗ್ ವಿರುದ್ಧ ಮೇ 15ರಂದೇ ಜಮಾಲ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ ಪೊಲೀಸರು ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರೆ ಆಕೆಯ ಪ್ರಾಣ ಉಳಿಯುತ್ತಿತ್ತು ಎಂದು ಗಾಯಕಿಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೀನು ಮದುವೆಯಾಗುತ್ತಿರುವ ಗಂಡು ನನ್ನಪ್ಪ; ವಧುವಿಗೆ ಕರೆಮಾಡಿ ಶಾಕ್ ಕೊಟ್ಟ ಯುವತಿ – Kannada News | The man you are marrying is my father little girl shocks bride in phone call

ಮೊರಾದಾಬಾದ್, ಮೇ 19: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮದುವೆಯಾಗಿ, ಇಬ್ಬರು ಮಕ್ಕಳಾದ ಮೇಲೆ ಇನ್ನೊಂದು ಮದುವೆಯಾಗಲು (Wedding) ಪ್ಲಾನ್ ಮಾಡಿದ್ದರು. ಈ ಯೋಜನೆಯನ್ನು ಆತನ 2ನೇ ಮಗಳೇ ವಿಫಲಗೊಳಿಸಿದ್ದಾಳೆ. ಮೊರಾದಾಬಾದ್‌ನಲ್ಲಿ ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಮದುವೆಯನ್ನು ಮುಚ್ಚಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಮದುವೆ ಮೆರವಣಿಗೆಗೂ ಮುನ್ನ ಮಗಳು ವಧುವಿನ ಕುಟುಂಬಕ್ಕೆ ಕರೆ ಮಾಡಿ ಆತನ ಮದುವೆಯ ಪುರಾವೆಯನ್ನು ಕಳುಹಿಸಿದ್ದಳು. ಈ ವಿಷಯ ಪೊಲೀಸರಿಗೆ ಗೊತ್ತಾದ ಬಳಿಕ ಆರೋಪಿ ವರನಿಗೆ 5.20 ಲಕ್ಷ ರೂ. ದಂಡ ವಿಧಿಸಲಾಯಿತು.

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಪತ್ನಿಯನ್ನು ವಂಚಿಸಿ ಎರಡನೇ ಮದುವೆಯಾಗಲು ಪ್ರಯತ್ನಿಸಿದರು. ಆದರೆ, ಮದುವೆ ಮೆರವಣಿಗೆ ಹೊರಡುವ ಸ್ವಲ್ಪ ಸಮಯದ ಮೊದಲು ವರನ ಮುಗ್ಧ ಮಗಳು ಚಾಣಾಕ್ಷತನದಿಂದ ವಧುವಿನ ಕುಟುಂಬಕ್ಕೆ ಕರೆ ಮಾಡಿದಳು. ನಂತರ ಕಣ್ಣೀರಿಡುತ್ತಾ ಅವಳು ತನ್ನ ತಂದೆಯ ನಿಜವಾದ ಗುರುತನ್ನು ಬಹಿರಂಗಪಡಿಸಿದಳು.

ಇದನ್ನೂ ಓದಿ: Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ

‘ನೀವು ಮದುವೆಯಾಗುತ್ತಿರುವುದು ನನ್ನ ಅಪ್ಪನನ್ನು. ಆತ 2 ಮಕ್ಕಳ ತಂದೆ’ ಎಂದು ಆಕೆ ಹೇಳಿದಾಗ ವಧುವಿನ ಮನೆಯವರು ನಂಬಲಿಲ್ಲ. ಕೊನೆಗೆ ಆ ಹುಡುಗಿ ತನ್ನ ತಂದೆಯ ಮೊದಲ ಮದುವೆಯ ದಾಖಲೆಗಳನ್ನು ನೀಡಿದ ಬಳಿಕ ವಧುವಿನ ಮನೆಯವರಿಗೆ ಶಾಕ್ ಆಗಿತ್ತು. ತಕ್ಷಣ ವಧುವಿನ ಕುಟುಂಬಸ್ಥರು ಮದುವೆಯ ಆಚರಣೆಗಳನ್ನು ನಿಲ್ಲಿಸಿ ಪೊಲೀಸರಿಗೆ ವಿಷಯ ತಿಳಿಸಿದರು. ನಂತರ ಗಣ್ಯರ ಸಮ್ಮುಖದಲ್ಲಿ ತುರ್ತು ಪಂಚಾಯತ್ ಕರೆಯಲಾಯಿತು.

ಇದನ್ನೂ ಓದಿ: ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ

ಆರೋಪಿ ತಂದೆಯ ಈ ಅನೈತಿಕ ಕೃತ್ಯದ ವಿರುದ್ಧ ಪಂಚಾಯತ್ ಬಲವಾದ ನಿಲುವನ್ನು ತೆಗೆದುಕೊಂಡಿತು. ಮದುವೆಯಾದರೂ ಮತ್ತೊಂದು ಮದುವೆಗೆ ರೆಡಿಯಾಗಿ ವಧುವಿನ ಕುಟುಂಬವನ್ನು ಅವಮಾನಿಸಿದ್ದಕ್ಕಾಗಿ ಮತ್ತು ಮದುವೆಯ ಸಿದ್ಧತೆಗಳ ಸಮಯದಲ್ಲಿ ಉಂಟಾದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಪಂಚಾಯತ್ ವರನಿಗೆ 5.20 ಲಕ್ಷ ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA ಅರಣ್ಯ ವಿಭಾಗದ ಸಿಬ್ಬಂದಿ ಮರದ ಕೊಂಬೆ ತೆರವು ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆಯೇ ನಾಲ್ಕು ಗಂಟೆ ಬಳಿಕ ಸ್ಥಳಕ್ಕೆ ಜಿಬಿಎ ಅರಣ್ಯ ಸಿಬ್ಬಂದಿ ಆಗಮಿಸಿ ಮರವನ್ನು ತೆರವುಗೊಳಿಸಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಪ್ರತಿದಿನ ಬೆಳಿಗ್ಗೆ ಎದ್ದ ನಂತರ ನಿಮ್ಮ ಫೋನ್ ಅನ್ನು ಕೈಯಲ್ಲಿ ಹಿಡಿದುಕೊಂಡು ವೀಡಿಯೊಗಳನ್ನು ನೋಡುತ್ತಾ ಗಂಟೆಗಟ್ಟಲೆ ಕಳೆಯುವ ಬದಲು, ನಿಮ್ಮ ದಿನವನ್ನು 10 ನಿಮಿಷಗಳ ಧ್ಯಾನದೊಂದಿಗೆ ಪ್ರಾರಂಭಿಸಿ. ಬೆಳಿಗ್ಗೆ ಧ್ಯಾನ ಮಾಡುವುದರಿಂದ ದೇಹದಲ್ಲಿ ಒತ್ತಡ ಉಂಟುಮಾಡುವ ಹಾರ್ಮೋನ್ ಕಾರ್ಟಿಸೋಲ್ ಮಟ್ಟ ಕಡಿಮೆಯಾಗುತ್ತದೆ. ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸುವುದು ಮಾನಸಿಕ ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಇದು ಭಾವನಾತ್ಮಕ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಕೆಲಸದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.

ಗಮನ ಹೆಚ್ಚುತ್ತದೆ: ಪ್ರತಿದಿನ ಬೆಳಿಗ್ಗೆ 10 ನಿಮಿಷಗಳ ಕಾಲ ಧ್ಯಾನ ಮಾಡುವ ಅಭ್ಯಾಸ ಮಾಡಿಕೊಂಡರೆ, ಗೊಂದಲದ ಸಮಸ್ಯೆ ಕಡಿಮೆಯಾಗುತ್ತದೆ. ಧ್ಯಾನವು ಮಾನಸಿಕ ಶಕ್ತಿ ಮತ್ತು ಗಮನ ಕೇಂದ್ರೀಕರಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಿಯಮಿತವಾಗಿ 10 ನಿಮಿಷಗಳ ಧ್ಯಾನ ಮಾಡುವುದರಿಂದ ಗಮನ ಸುಧಾರಿಸುತ್ತದೆ. ಪ್ರತಿದಿನ ಬೆಳಿಗ್ಗೆ ಧ್ಯಾನ ಮಾಡುವ ಜನರು ಸ್ಪಷ್ಟ ಆಲೋಚನೆಗಳನ್ನು ಹೊಂದಿರುತ್ತಾರೆ, ತ್ವರಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ, ಮತ್ತು ಅವರು ಮಾನಸಿಕವಾಗಿ ಬಲಶಾಲಿಯಾಗಿರುತ್ತಾರೆ.

ಒತ್ತಡವು ತಕ್ಷಣವೇ ನಿವಾರಣೆಯಾಗುತ್ತದೆ: ಇಂದಿನ ಈ ಬ್ಯುಸಿ ಜಮಾನದಲ್ಲಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕಾರಣಕ್ಕೆ ಒತ್ತಡಕ್ಕೆ ಒಳಗಾಗುತ್ತಲೇ ಇರುತ್ತಾರೆ. ಈ ರೀತಿಯ ಒತ್ತಡವನ್ನು ತೆಗೆದುಹಾಕಲು ಧ್ಯಾನವು ಅತ್ಯುತ್ತಮ ಔಷಧವಾಗಿದೆ. ಪ್ರತಿದಿನ ಧ್ಯಾನ ಮಾಡುವ ಮೂಲಕ, ನೀವು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬಹುದು. ನಿಯಮಿತ ಧ್ಯಾನವು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ. ಧ್ಯಾನವು ಮನಸ್ಸನ್ನು ಶಾಂತವಾಗಿ ಮತ್ತು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಜೊತೆಗೆ ಧ್ಯಾನವು ನಿಮ್ಮನ್ನು ಭಾವನಾತ್ಮಕವಾಗಿ ಸ್ಥಿರವಾಗಿಡಲು ಸಹಾಯ ಮಾಡುತ್ತದೆ.

ಶಕ್ತಿಯ ಮಟ್ಟಗಳು ಹೆಚ್ಚಾಗುತ್ತದೆ: ಒಬ್ಬ ವ್ಯಕ್ತಿಯು ಮಾನಸಿಕವಾಗಿ ಚಿಂತಿತನಾಗಿದ್ದಾಗ ಅಥವಾ ಒತ್ತಡಕ್ಕೊಳಗಾದಾಗ, ಅವನ ಶಕ್ತಿಯ ಮಟ್ಟವು ಕಡಿಮೆಯಾಗುತ್ತದೆ. ಹೀಗಿರುವಾಗ ನೀವು ಬೆಳಿಗ್ಗೆ ಧ್ಯಾನ ಮಾಡಿದರೆ, ಶಕ್ತಿಯ ಮಟ್ಟವು ಹೆಚ್ಚಾಗುತ್ತದೆ. ಧ್ಯಾನವು ನರಮಂಡಲವನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ಆಮ್ಲಜನಕದ ಹರಿವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ನೀವು ದಿನವಿಡೀ ಚೈತನ್ಯಶೀಲರಾಗಿರುತ್ತೀರಿ.

ಇದನ್ನೂ ಓದಿ: ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ರೋಗನಿರೋಧಕ ವ್ಯವಸ್ಥೆ ಬಲಗೊಳ್ಳುತ್ತದೆ: ಹೆಚ್ಚುವರಿಯಾಗಿ, ಧ್ಯಾನವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೀವು ವಿಶ್ರಾಂತಿ ಪಡೆದಾಗ, ನಿಮ್ಮ ದೇಹವು ಹೆಚ್ಚು ವೇಗವಾಗಿ ಗುಣವಾಗುತ್ತದೆ. ನಿಯಮಿತವಾಗಿ ಧ್ಯಾನ ಮಾಡುವ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗಾಗಿ ಪ್ರತಿನಿತ್ಯ 10 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ: ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು  ಧ್ಯಾನ ಪ್ರಯೋಜನಕಾರಿಯಾಗಿದೆ. ಧ್ಯಾನವು ರಕ್ತದ ಹರಿವನ್ನು ಸುಧಾರಿಸುತ್ತದೆ, ಇದು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಕ್ರಮೇಣ ಸಮತೋಲನಗೊಳಿಸುತ್ತದೆ. ಇದಲ್ಲದೆ, ಇದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ನಿದ್ರೆಯನ್ನು ಸುಧಾರಿಸುತ್ತದೆ: ನೀವು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿನಿತ್ಯ ಧ್ಯಾನ ಮಾಡಿ.  ಧ್ಯಾನವು ಮಾನಸಿಕ ಉದ್ರೇಕವನ್ನು ಕಡಿಮೆ ಮಾಡುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link