ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ! – Kannada News | Hubballi Airport Gets Karnataka’s First Mobile Command Post Vehicle For Emergency And Hijack Crisis Management
‘ಮೊಬೈಲ್ ಕಮಾಂಡ್ ಪೋಸ್ಟ್’ ವಾಹನImage Credit source: Times of India ಹುಬ್ಬಳ್ಳಿ, ಮೇ 19: ವಿಮಾನ ನಿಲ್ದಾಣಗಳಲ್ಲಿ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟುಗಳನ್ನು ಕ್ಷಿಪ್ರವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣವು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುವ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್’ (MCP) ಅಥವಾ ಮೊಬೈಲ್ ಕ್ರಿಸಿಸ್ ಕಮಾಂಡ್ ವಾಹನವನ್ನು ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ನಿಯೋಜಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI)…