Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ
ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು. ನಗರದ ಹೃದಯಭಾಗದಲ್ಲಿರುವ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಾಧಾರಣ ಮಳೆಗೆ ಕೆರೆಯಂತಾಗಿದ್ದು, ನಾಲ್ಕರಿಂದ ಐದು ಅಡಿಯಷ್ಟು ನೀರು ನಿಂತಿತು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್ಪಾಸ್ಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರ ಬಿಸಿ ಸುತ್ತಮುತ್ತಲಿನ ರಸ್ತೆಗಳಿಗೆ ತಟ್ಟಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಹಾಗೂ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು. ಪ್ರತಿ ವರ್ಷ ಮಳೆ…