ಕಾಂಗ್ರೆಸ್ನಲ್ಲಿ ಗರಿಗೆದರಿದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ…