ನಟಿ ಕೀರ್ತಿ ಸುರೇಶ್ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು – Kannada News | Keerthy Suresh addresses body shaming and surgery rumours on instagram post
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ತಾವು ಎದುರಿಸಿದ ಬಾಡಿ ಶೇಮಿಂಗ್ (Body Shaming) ಮತ್ತು ಪ್ಲಾಸ್ಟಿಕ್ ಸರ್ಜರಿ ವದಂತಿಗಳ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮನದ ಮಾತುಗಳನ್ನು ಹೊರಹಾಕಿದ್ದಾರೆ. ಸದಾ ಸೌಮ್ಯವಾಗಿ ಕಾಣಿಸಿಕೊಳ್ಳುವ ನಟಿ, ಇತ್ತೀಚೆಗೆ ತಮಗಾದ ದೈಹಿಕ ಮತ್ತು ಮಾನಸಿಕ ಹಿನ್ನಡೆಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ. ಜಿಮ್‌ನಲ್ಲಿ ತಾವು ಕಷ್ಟಪಟ್ಟು ವರ್ಕೌಟ್ ಮಾಡುತ್ತಿರುವ ಹಳೆಯ ವಿಡಿಯೋವನ್ನು ಹಂಚಿಕೊಂಡಿರುವ ಕೀರ್ತಿ ಸುರೇಶ್ (Keerthy Suresh), ‘ಫಿಟ್‌ನೆಸ್…