Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ

ಇಂದು ಲಕ್ಷ್ಮಿ ನಾರಾಯಣ ಪೂಜೆ ಮಾಡಿ. ಹಳದಿ ಬಣ್ಣದ ಹೂವುಗಳನ್ನು ವಿಷ್ಣುವಿಗೆ ಅರ್ಪಿಸಿ. ಬಾಕಿ ಹಣ ವಾಪಸ್ ಬರಲು ಇದು ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇನ್ನು ಸಾಕು ಎಂದು ನಿರ್ಧಾರ ಮಾಡಿ ನೀವಾಗಿಯೇ ಕೆಲವು ಸಂಬಂಧ, ಸ್ನೇಹದಿಂದ ದೂರವಾಗುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಅದರಲ್ಲೂ ನಿಮ್ಮಲ್ಲಿ ಕೆಲವರು ಸಂಬಂಧಪಟ್ಟವರಿಗೆ ನೇರವಾಗಿ ಈ ಬಗ್ಗೆ ಹೇಳಿಯೇ ದೂರವಾಗಲಿದ್ದೀರಿ. ಮುಖ್ಯವಾಗಿ ನಿಮಗೆ ಹಳೇ ಸಂಗತಿಗಳು ವಿಪರೀತ ಕಾಡಲಿವೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಕೃಷಿ ಅಥವಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಣಕಾಸಿನ ಹೊಂದಾಣಿಕೆ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಲ್ಲಿ ಮುಖ್ಯವಾದ ಮಾತುಕತೆ ನಡೆಸುವುದಕ್ಕೆ ತೆರಳುವಾಗ ಹಸಿರು ಬಣ್ಣದ ಕರ್ಚೀಫ್ ಅಥವಾ ವಸ್ತ್ರವನ್ನು ಬಳಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ತಂದೆ ಅಥವಾ ತಂದೆ ಸಮಾನರಾದವರ ಜತೆಗೆ ವಿವಿಧ ವಿಚಾರಗಳಿಗೆ ಅಭಿಪ್ರಾಯ ಭೇದಗಳು ಉದ್ಭವ ಆಗಲಿದೆ. ಒಂದು ವೇಳೆ ನೀವು ಇದನ್ನು ಕೂತು, ಮಾತನಾಡಿ ಬಗೆಹರಿಸಿಕೊಳ್ಳದೇ ಹೋದಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ

ಇಂದು ಸಂಜೆ ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ “ಲಕ್ಷ್ಮಿ ಅಷ್ಟೋತ್ತರ” ಪಠಿಸುವುದು ಆರ್ಥಿಕ ಒತ್ತಡ ಕಡಿಮೆ ಮಾಡಲು ಸಹಕಾರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಧೈರ್ಯದ ತೀರ್ಮಾನ ಈ ದಿನ ಉತ್ತಮವಾದ ಫಲ ನೀಡಲಿದೆ. ಇತರರು ನಿಮ್ಮನ್ನು ಎಚ್ಚರಿಸಿ, ಯಾವುದನ್ನು ಮಾಡಬಾರದು ಎಂದು ಹೇಳಿರುತ್ತಾರೋ ಅದೇ ಲಾಭದಾಯಕವಾಗಿ ಮಾರ್ಪಡಲಿದೆ. ಇನ್ನೂ ಸ್ಪಷ್ಟವಾಗಿ ಹೇಳಬೇಕು ಅಂದರೆ, ಇತರರು ತಮ್ಮಿಂದ ಮಾಡಲು ಸಾಧ್ಯವಿಲ್ಲ ಎಂದು ಕೈಬಿಟ್ಟ…

Read More

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ನವದೆಹಲಿ, ಮಾರ್ಚ್​​ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು…

Read More

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ…

Read More

Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

Money9 Financial Freedom Summit 2026: Money9 ನ ನಾಲ್ಕನೇ ಆವೃತ್ತಿಯ ಹಣಕಾಸು ಸ್ವಾತಂತ್ರ್ಯ ಶೃಂಗಸಭೆ (ಫೈನಾನ್ಷಿಯಲ್ ಫ್ರೀಡಂ ಸಮಿಟ್ 2026) ಪ್ರಾರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಈ ಶೃಂಗಸಭೆಯಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. TV9 ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ (Barun Das) ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ವೀಡಿಯೊ ಸಂದೇಶದ ಮೂಲಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಮಹಾರಾಷ್ಟ್ರ ವೇಗವಾಗಿ ಅಭಿವೃದ್ಧಿ…

Read More

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸಾಕಷ್ಟು ದಾಸ್ತಾನು ಲಭ್ಯತೆ ರಾಜ್ಯ ಸರ್ಕಾರವು ಪ್ರಮುಖ ತೈಲ…

Read More