Headlines

nagaraj11081993

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್…

Read More

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಮಾರ್ಚ್​ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ ಸೇರಿದಂತೆ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ…

Read More

ಹಾರ್ಮುಜ್ ಜಲಸಂಧಿ ಮುಚ್ಚಿರುತ್ತದೆ; ಮುಯ್ಯಿ ತೀರಿಸಲು ಮರೆಯಲ್ಲ: ಇರಾನ್ ಮುಖ್ಯಸ್ಥ

ನವದೆಹಲಿ, ಮಾರ್ಚ್ 12: ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ಇಂಧನ ಪೂರೈಕೆಗೆ ಆಯಕಟ್ಟಿನ ಸ್ಥಳವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೆನೈ ಅವರು ಕರೆ ನೀಡಿದ್ದಾರೆ. ಹಾಗೆಯೇ, ಅಮೆರಿಕದ ಎಲ್ಲಾ ಮಿಲಿಟರಿ ನೆಲೆಗಳನ್ನು ತತ್​ಕ್ಷಣವೇ ಮುಚ್ಚಬೇಕೆಂದೂ ಗಲ್ಫ್ ದೇಶಗಳಿಗೆ ಅವರು ಅಪ್ಪಣೆ ಮಾಡಿದ್ದಾರೆ. ‘ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಕ್ರಮ ಮುಂದುವರಿಯುತ್ತದೆ’ ಎಂದು ಮೊಜ್ತಬಾ ಹೇಳಿದ್ದಾರೆ. ವೈರಿಗಳಿಗೆ ಹೊಸ ಶಾಕ್ ಕೊಡಲು ಇರಾನ್ ಅಣಿ… ಇದೇ ವೇಳೆ, ಇರಾನ್ ಮುಖ್ಯಸ್ಥರು ಅಮೆರಿಕ…

Read More

ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ

ಪ್ರಯಾಗ್‌ರಾಜ್ ಕುಂಭಮೇಳದ ಸಂದರ್ಭದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದ 18 ವರ್ಷದ ಮೊನಾಲಿಸಾ ಭೋಸ್ಲೆ (Monalisa Bhosle) ತಮ್ಮ ಪ್ರಿಯಕರ ಫರ್ಮಾನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಕೇರಳದ ಪೂವಾರ್ ಸಮೀಪದ ಅರುಮನೂರಿನ ನಯನಾರ್ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಈ ಜೋಡಿ ಮದುವೆಯಾಗಿದೆ. ಈ ಮದುವೆ ಬಳಿಕ ಮೊನಾಲಿಸಾ ಬೋಸ್ಲೆ ಅವರು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆಗುತ್ತಾರಾ ಎಂಬ ಪ್ರಶ್ನೆಗೆ ಕೆಲವರಿಗೆ ಮೂಡಿದೆ. ಅದಕ್ಕೆ ಈ ಜೋಡಿ ಉತ್ತರ ನೀಡಿದೆ. ಮದುವೆಯ ನಂತರ ನಡೆದ…

Read More

ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷಿತರ ಬಿಡುಗಡೆ: ಹೊಸ ಬದುಕಿನತ್ತ 31 ಕೈದಿಗಳು

ಬೆಂಗಳೂರು, (ಮಾರ್ಚ್ 12): ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕರ್ನಾಟಕದ (Karnataka) ವಿವಿಧ ಜೈಲಿನಲ್ಲಿರುವ ಒಟ್ಟು 31 ಕೈದಿಗಳ (Prisoners) ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಇಂದು (ಮಾರ್ಚ್ 12) ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ಮಾನವೀಯ ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನಾಳೆ (ಮಾರ್ಚ್ 13)…

Read More

ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ: ಕೋಟ್ಯಂತರ ರೂ ಅವ್ಯವಹಾರ ಆರೋಪ

ದಾವಣಗೆರೆ, ಮಾರ್ಚ್​​ 12: ಹರಿಹರದ ಪಂಚಮಸಾಲಿ ಮಠ (harihara panchamasali peetha) ರಾಜ್ಯದ ಪ್ರತಿಷ್ಠಿತ ಮಠ. ಈ ಮಠಕ್ಕೆ ಕೋಟ್ಯಂತರ ಭಕ್ತರಿದ್ದಾರೆ. ನಿತ್ಯ ದಾಸೋಹ ಕೂಡ ಶುರುವಾಗಿದೆ. ರಾಜ್ಯದ ಬಹುತೇಕ ಕಡೆ ಈ ಮಠದ ಆಸ್ತಿ ಇದೆ. ಇಂತಹ ಮಠದಲ್ಲಿ ಇದೀಗ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಕೋಟ್ಯಂತರ ರೂ ಅವ್ಯವಹಾರ ನಡೆದಿದೆ. ಮಾತಿನ ಚಕಮಕಿ ವೇಳೆ ನೂಕಾಟ ತಳ್ಳಾಟ ಕೂಡ ನಡೆದಿದೆ. ಮೇಲಾಗಿ ಸರ್ಕಾರದಿಂದ ಬಂದ ಹಣವಾದರೂ ಎಲ್ಲಿ ಎಂಬ ಹತ್ತು ಹಲವಾರು ಪ್ರಶ್ನೆಗೆ…

Read More

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಶ್ರೀಮಂತರಾಗಬೇಕು, ಜೀವನದಲ್ಲಿ ದುಡ್ಡು ಗಳಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಠಿಣ ಪರಿಶ್ರಮ ಪಡುತ್ತಾರೆ. ಹಣ ಗಳಿಸಲು ಕಠಿಣ ಪರಿಶ್ರಮ ಒಂದೇ ಸಾಲಲ್ಲ, ಈ ಕೆಲವೊಂದು ಸಲಹೆಗಳನ್ನೂ ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಹಾಗಿದ್ರೆ ಆಚರ್ಯ ಚಾಣಕ್ಯರು ಹೇಳಿರುವಂತೆ  ಜೀವನದಲ್ಲಿ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿ ಲಭಿಸಲು ಯಾವ ವಿಷಯಗಳಿಗೆ ಗಮನ ಕೊಡಬೇಕು ಎಂಬುದನ್ನು ನೋಡೋಣ ಬನ್ನಿ. ಹಣ, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ದುಂದುವೆಚ್ಚವನ್ನು ತಪ್ಪಿಸಿ: ಹಣವು…

Read More

ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ನವದೆಹಲಿ, ಮಾರ್ಚ್ 12: ಹೆಚ್ಚು ಕೈಗಾರಿಕಾ ಸಾಮರ್ಥ್ಯ ಹೊಂದಲಾಗಿರುವ ಕುರಿತಂತೆ ವಿವಿಧ ದೇಶಗಳ ಮೇಲೆ ಅಮೆರಿಕ ತನಿಖೆ ಆರಂಭಿಸಿದೆ. ಅಮೆರಿಕದ ಕಾನೂನಿನ ಸೆಕ್ಷನ್ 301 ಅಡಿಯಲ್ಲಿ ಅನ್ಯಾಯದ ವ್ಯಾಪಾರ ಕ್ರಮಗಳನ್ನು ನಡೆಸಲಾಗುತ್ತಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತದೆ. ಭಾರತವೂ ಒಳಗೊಂಡಂತೆ ಅಮೆರಿಕದ 16 ಟ್ರೇಡಿಂಗ್ ಪಾರ್ಟ್ನರ್ ದೇಶಗಳ ಕೈಗಾರಿಕಾ ನೀತಿಗಳನ್ನು ಅಮೆರಿಕ ಅವಲೋಕಿಸಲಿದೆ. ಟ್ರಂಪ್ ಸರ್ಕಾರದ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಇತ್ತೀಚೆಗೆ ಅನೂರ್ಜಿತಗೊಳಿಸಿ, ಶೇ. 10ರ ಬೇಸ್​ಲೈನ್ ಟ್ಯಾರಿಫ್ ನಿಗದಿ ಮಾಡಿತ್ತು. ಕೋರ್ಟ್​ನ ಈ…

Read More

‘ಭೂತ್ ಬಂಗ್ಲ’ ಸಿನಿಮಾದ ಟೀಸರ್ ನೋಡಿದ್ರಾ? ಹಾರರ್ ಜೊತೆ ಭರ್ಜರಿ ಕಾಮಿಡಿ

ಬಾಲಿವುಡ್‌ನ ಎವರ್‌ಗ್ರೀನ್ ಹಿಟ್ ಜೋಡಿ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಸುಮಾರು 14 ವರ್ಷಗಳ ಸುದೀರ್ಘ ಗ್ಯಾಪ್ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹಾರರ್-ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟೀಸರ್ (Bhooth Bangla Teaser) ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಈ ಸಿನಿಮಾದ ಪ್ರಚಾರದಲ್ಲಿ ಅಕ್ಷಯ್ ಕುಮಾರ್ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ‘ಹೇರಾ ಫೇರಿ’, ‘ಭೂಲ್ ಭುಲಯ್ಯ’,…

Read More

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಸ್ವಸ್ಥ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ಅನೇಕ ರೀತಿಯ ಬದಲಾವಣೆಗಳು ಇಂತಹ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣಗಳಾಗಿವೆ. ಆದರೆ ಕೆಲ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಕಿಡ್ನಿಯ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಕಿಡ್ನಿ ಆರೋಗ್ಯವಾಗಿರಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು, ಇದರಿಂದ ಕಿಡ್ನಿ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು…

Read More