ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ ಬೌರಿಂಗ್ ಕ್ಲಬ್ನಲ್ಲಿ ಸಿಎಂ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್ ಹೇಜಲ್‌ವುಡ್ ಮತ್ತು ಪ್ಯಾಟ್ ಕಮ್ಮಿನ್ಸ್ ಉದ್ಘಾಟನಾ ಪಂದ್ಯದಲ್ಲಿ ಆಡುವುದು ಅನುಮಾನ. ಪ್ಯಾಟ್ ಕಮ್ಮಿನ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದರೆ, ಜೋಶ್ ಹೇಜಲ್‌ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ಜೀವಾಳವಾಗಿದ್ದಾರೆ. ಹೀಗಾಗಿ ಇವರಿಬ್ಬರ ಅಲಭ್ಯತೆ ಎರಡೂ ತಂಡಗಳಿಗೆ ದೊಡ್ಡ ತಲೆನೋವಾಗಿದೆ.
ಪ್ಯಾಟ್ ಕಮ್ಮಿನ್ಸ್-ಹೇಜಲ್‌ವುಡ್ ಡೌಟ್
ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಗಾಯದ ಕಾರಣದಿಂದಾಗಿ 2026 ರ ಟಿ20 ವಿಶ್ವಕಪ್‌ನಿಂದಲೂ ಹೊರಬಿದಿದ್ದರು. ಇದೀಗ ಇವರಿಬ್ಬರು ಐಪಿಎಲ್ 2026 ರ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದು ವರದಿಯಾಗಿದೆ. ಇಬ್ಬರೂ ಆಟಗಾರರು ಇನ್ನೂ ಚೇತರಿಕೆಯ ಹಾದಿಯಲಿದ್ದು, ವೈದ್ಯಕೀಯ ಅನುಮತಿ ಪಡೆದ ನಂತರವೇ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ.
ಪ್ಯಾಟ್ ಕಮ್ಮಿನ್ಸ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಜುಲೈ 2025 ರ ವೆಸ್ಟ್ ಇಂಡೀಸ್ ಪ್ರವಾಸದ ನಂತರ ಈ ಗಾಯಕ್ಕೆ ತುತ್ತಾದ ಕಮ್ಮಿನ್ಸ್, ಇದರಿಂದಾಗಿ ಆಶಸ್ ಸರಣಿಯ ಆರಂಭಿಕ ಪಂದ್ಯಗಳಿಂದ ಹೊರಬಿದ್ದರು. ಆದರೆ ಅವರ ಚೇತರಿಕೆ ಪೂರ್ಣಗೊಳ್ಳದ ಕಾರಣ ಅವರನ್ನು 2026 ರ ಟಿ20 ವಿಶ್ವಕಪ್‌ನಿಂದಲೂ ಹೊರಗಿಡಲಾಯಿತು. ಇನ್ನು ವೇಗಿ ಹೇಜಲ್‌ವುಡ್ ಮಂಡಿರಜ್ಜು ಗಾಯ ಮತ್ತು ಅಕಿಲೀಸ್ ಸ್ನಾಯುರಜ್ಜು ಗಾಯದಿಂದ ಬಳಲುತ್ತಿದ್ದಾರೆ. ನವೆಂಬರ್ 2025 ರಲ್ಲಿ ಶೆಫೀಲ್ಡ್ ಶೀಲ್ಡ್ ಪಂದ್ಯದ ಸಮಯದಲ್ಲಿ ಹೇಜಲ್‌ವುಡ್ ಈ ಗಾಯಕ್ಕೆ ತುತ್ತಾದರು. ಇದರಿಂದಾಗಿ ಅವರು ಆಶಸ್ ಸರಣಿಯಿಂದಲೂ ಹೊರಗುಳಿದರು. ಅವರ ಚೇತರಿಕೆ ನಿಧಾನವಾಗಿದ್ದರಿಂದ 2026 ರ ಟಿ20 ವಿಶ್ವಕಪ್‌ನಿಂದಲೂ ಅವರನ್ನು ಹೊರಗಿಡಲಾಯಿತು.
ಪ್ಯಾಟ್ ಕಮ್ಮಿನ್ಸ್ 72 ಐಪಿಎಲ್ ಪಂದ್ಯಗಳಲ್ಲಿ ಪ್ರತಿ ಓವರ್‌ಗೆ 8.8 ರನ್‌ಗಳ ಎಕಾನಮಿ ದರದೊಂದಿಗೆ 79 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕಳೆದ ವರ್ಷ 14 ಪಂದ್ಯಗಳನ್ನಾಡಿದ ಕಮ್ಮಿನ್ಸ್ 16 ವಿಕೆಟ್‌ಗಳನ್ನು ಕಬಳಿಸಿದ್ದರು. ಇತ್ತ ಹೇಜಲ್‌ವುಡ್ 39 ಪಂದ್ಯಗಳಲ್ಲಿ 57 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಹೇಜಲ್‌ವುಡ್ ಆಡಿದ 12 ಪಂದ್ಯಗಳಲ್ಲಿ 22 ವಿಕೆಟ್‌ಗಳನ್ನು ಕಬಳಿಸಿದ್ದರು. ಅವರ ಈ ಪ್ರದರ್ಶನವು ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
Money9 Financial Freedom Summit 2026: Money9 ನ ನಾಲ್ಕನೇ ಆವೃತ್ತಿಯ ಹಣಕಾಸು ಸ್ವಾತಂತ್ರ್ಯ ಶೃಂಗಸಭೆ (ಫೈನಾನ್ಷಿಯಲ್ ಫ್ರೀಡಂ ಸಮಿಟ್ 2026) ಪ್ರಾರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಈ ಶೃಂಗಸಭೆಯಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. TV9 ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ (Barun Das) ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ವೀಡಿಯೊ ಸಂದೇಶದ ಮೂಲಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಹಾರಾಷ್ಟ್ರ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದ ಫಡಣವಿಸ್
ಮಹಾರಾಷ್ಟ್ರ ಇಂದು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಮಹಾ ಸಿಎಂ ಫಡ್ನವೀಸ್ ಹೇಳಿದರು. ಮಹಾರಾಷ್ಟ್ರದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಇಂದು, ಭಾರತೀಯ ರಾಜ್ಯಗಳಲ್ಲೇ ಮಹಾರಾಷ್ಟ್ರ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದೆ. ಮಹಾರಾಷ್ಟ್ರವನ್ನು ಒಂದು ದೇಶವಾಗಿ ಪರಿಗಣಿಸಿ ನೋಡಿದರೂ, ವಿಶ್ವದ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರಗಳಲ್ಲಿ ಒಂದೆನಿಸಬಲ್ಲುದು ಎಂದು ದೇವೇಂದ್ರ ಫಡ್ಣವಿಸ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ:
ಎಲ್ಲಾ ಕ್ಷೇತ್ರಗಳಲ್ಲಿ ಮಹಾರಾಷ್ಟ್ರದ್ದು ಮೊದಲ ಸ್ಥಾನ
ವಿದೇಶಿ ಹೂಡಿಕೆಯಾಗಿರಲಿ, ಅತಿ ಹೆಚ್ಚು ಮೂಲಸೌಕರ್ಯ ಯೋಜನೆಗಳಿರಲಿ, ಉದ್ಯೋಗ ಸೃಷ್ಟಿಯಾಗಿರಲಿ ಅಥವಾ ಹೆಚ್ಚಿನ ಸ್ಟಾರ್ಟಪ್‌ಗಳಿರಲಿ, ಮಹಾರಾಷ್ಟ್ರವು ಎಲ್ಲಾ ವಲಯಗಳಲ್ಲಿಯೂ ಪ್ರಥಮ ಸ್ಥಾನದಲ್ಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳು ತಿಳಿಸಿದರು. ಒಂದು ಕಾಲದಲ್ಲಿ ಮುಂಬೈ ಮತ್ತು ಪುಣೆಗೆ ಸೀಮಿತವಾಗಿದ್ದ ಅಭಿವೃದ್ಧಿಯು ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಹೊಸ ಹೂಡಿಕೆ ಅವಕಾಶಗಳು ತೆರೆಯುತ್ತಿವೆ. ಅದು ಗಡ್ಚಿರೋಲಿಯಾಗಲಿ ಅಥವಾ ನಂದುರ್ಬಾರ್, ಜಲಗಾಂವ್ ಅಥವಾ ನಾಂದೇಡ್ ಆಗಿರಲಿ, ಹಿಂದೆ ಹೂಡಿಕೆಯ ಕೊರತೆಯಿದ್ದ ಪ್ರತಿಯೊಂದು ಜಿಲ್ಲೆಯೂ ಈಗ ಹೂಡಿಕೆಯಲ್ಲಿ ಪೈಪೋಟಿ ನಡೆಸುತ್ತಿವೆ ಎಂದರು.
ಮೂರು ಹಂತಗಳಲ್ಲಿ ಮಹಾರಾಷ್ಟ್ರದ ಅಭಿವೃದ್ಧಿಗೆ ಪರಿಕಲ್ಪನೆ
ಒಂದು ದೊಡ್ಡ ಸಾಹಸಗಾಥೆಯೇ ನಡೆಯುತ್ತಿದೆ. 2047 ರ ವೇಳೆಗೆ $5 ಟ್ರಿಲಿಯನ್ ಆರ್ಥಿಕತೆಯ ಕನಸಿನೊಂದಿಗೆ ನಾವು ಮುಂದುವರಿಯಲು ಪ್ರಾರಂಭಿಸಿದ್ದೇವೆ. ಇದನ್ನು ನನಸು ಮಾಡುವುದು ಅಸಾಧ್ಯವೇನಲ್ಲ ಎಂದ ದೇವೇಂದ್ರ ಫಡಣವಿಸ್ ಅವರು, ಅಭಿವೃದ್ಧಿ ಹೊಂದಿದ ಮಹಾರಾಷ್ಟ್ರಕ್ಕಾಗಿ ಮೂರು ಹಂತದ ದೃಷ್ಟಿಕೋನವನ್ನು ರೂಪಿಸಿರುವ ಸಂಗತಿಯನ್ನು ತಿಳಿಸಿದರು.
ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಸಾಕಷ್ಟು ದಾಸ್ತಾನು ಲಭ್ಯತೆ
ರಾಜ್ಯ ಸರ್ಕಾರವು ಪ್ರಮುಖ ತೈಲ ಕಂಪನಿಗಳಾದ IOC, BPC ಮತ್ತು HPC ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದೆ. ರಾಜ್ಯದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಮತ್ತು ಮುಂಬರುವ ದಿನಗಳಿಗೂ ಸರಿಹೊಂದುವಷ್ಟು ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ತೈಲ ಕಂಪನಿಗಳು ದೃಢಪಡಿಸಿವೆ ಅಂತ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತಂಕ ಬೇಡ: ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಅನಗತ್ಯ ಬುಕಿಂಗ್ ಬೇಡ: ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಆತಂಕದಿಂದ ಸಾರ್ವಜನಿಕರು ಅನಗತ್ಯವಾಗಿ ಸಿಲಿಂಡರ್‌ಗಳನ್ನು ಮುಂಗಡವಾಗಿ ಬುಕ್ ಮಾಡುವುದು ಅಥವಾ ಸಂಗ್ರಹಿಸಿಡುವುದನ್ನು ಮಾಡಬಾರದು. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗದಂತೆ ಸಹಕರಿಸಲು ಕೋರಲಾಗಿದೆ.
ಆದ್ಯತಾ ವಲಯಗಳಿಗೆ ಪೂರೈಕೆ
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಅಗತ್ಯ ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿನಿಲಯಗಳು ಮತ್ತು ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಕಾಲೇಜುಗಳ ಬಿಸಿಯೂಟ ಯೋಜನೆಗಳು ಮತ್ತು ಕಾರಾಗೃಹಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ , ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಹಾಗೂ ವ್ಯತ್ಯಯವಾಗದಂತೆ ಕ್ರಮ ವಹಿಸಲು ತೈಲ ಕಂಪನಿಗಳಿಗೆ ಸೂಚಿಸಿದೆ.
ಕಾನೂನು ಕ್ರಮದ ಎಚ್ಚರಿಕೆ
ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಅಥವಾ ರೀಫಿಲ್ಲಿಂಗ್ (Refilling) ದಂಧೆಯಲ್ಲಿ ತೊಡಗುವುದು ಕಂಡುಬಂದಲ್ಲಿ Essential Commodities Act 1955 (ಅಗತ್ಯ ವಸ್ತುಗಳ ಕಾಯ್ದೆ), LPG Control Order 2000 ಮತ್ತು Petroleum Products Order 1999 ರ ಕಾಯ್ದೆಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತಕ್ಕೆ ಸೂಚನೆ
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಎಲ್‌ಪಿಜಿ ವಿತರಣಾ ಕೇಂದ್ರಗಳ ಮೇಲೆ ನಿಗಾ ಇಡಲು ಮತ್ತು ಸುಗಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ರೀತಿಯ ಅನೇಕ ವಿಡಿಯೋಗಳನ್ನು ಅವರು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡುತ್ತಾರೆ.
ಬೆಂಗಳೂರು, ಮಾರ್ಚ್ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ ಸೇರಿದಂತೆ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
813 ಕೋಟಿ ರೂ. ವೆಚ್ಚದಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ
ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಸುಮಾರು 75 ಎಕರೆ ಜಮೀನಿನಲ್ಲಿ ಸುಮಾರು 813 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ.
ಕ್ರೀಡಾಂಗಣದ ಸುತ್ತಮುತ್ತ ವಾಣಿಜ್ಯ ಮಳಿಗೆಗಳು ಹಾಗೂ ಇತರೆ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯೂ ರೂಪಿಸಲಾಗಿದೆ. ಈ ಕಟ್ಟಡ ಕಾಮಗಾರಿಗಳ ಪರಿಷ್ಕೃತ ವೆಚ್ಚದ ವಿವರಗಳನ್ನು ಸಿದ್ಧಪಡಿಸಿ ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಹತ್ವದ ಹೆಜ್ಜೆಯಾಗಲಿದೆ.
682 ಕೋಟಿ ರೂ ವೆಚ್ಚದಲ್ಲಿ ಶಾಲೆಗಳ ಉನ್ನತೀಕರಣ
76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ನಿರ್ಧರಿಸಲಾಗಿದೆ. 41 ಉರ್ದು ಮಾಧ್ಯಮ ಶಾಲೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ 682 ಕೋಟಿ ರೂ ವೆಚ್ಚದಲ್ಲಿ ಉನ್ನತೀಕರಿಸಲು ಸಂಪುಟ ಸಮ್ಮತಿಸಿದೆ.
ಇನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ನಾಲೆ ಅಭಿವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯ ಕ್ಷೇತ್ರದ ಕಾವೇರಿ ಶಾಖಾ ನಾಲೆ, ಕೆರೆಗೋಡು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ ಸೇರಿದಂತೆ ನಾಲ್ಕು ಕಾವೇರಿ ವಿತರಣಾ ನಾಲೆಗಳು ಮತ್ತು ಪಿಕಪ್ ನಾಲೆಗಳ ಆಧುನೀಕರಣಕ್ಕೆ 100 ಕೋಟಿ ರೂ ಅನುದಾನ ನೀಡಲು ಸಚಿವ ಸಂಪುಟ ಅಸ್ತು ಎಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ನವದೆಹಲಿ, ಮಾರ್ಚ್ 12: ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ಇಂಧನ ಪೂರೈಕೆಗೆ ಆಯಕಟ್ಟಿನ ಸ್ಥಳವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೆನೈ ಅವರು ಕರೆ ನೀಡಿದ್ದಾರೆ. ಹಾಗೆಯೇ, ಅಮೆರಿಕದ ಎಲ್ಲಾ ಮಿಲಿಟರಿ ನೆಲೆಗಳನ್ನು ತತ್ಕ್ಷಣವೇ ಮುಚ್ಚಬೇಕೆಂದೂ ಗಲ್ಫ್ ದೇಶಗಳಿಗೆ ಅವರು ಅಪ್ಪಣೆ ಮಾಡಿದ್ದಾರೆ. ‘ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಕ್ರಮ ಮುಂದುವರಿಯುತ್ತದೆ’ ಎಂದು ಮೊಜ್ತಬಾ ಹೇಳಿದ್ದಾರೆ.
ವೈರಿಗಳಿಗೆ ಹೊಸ ಶಾಕ್ ಕೊಡಲು ಇರಾನ್ ಅಣಿ…
ಇದೇ ವೇಳೆ, ಇರಾನ್ ಮುಖ್ಯಸ್ಥರು ಅಮೆರಿಕ ಮತ್ತು ಇಸ್ರೇಲ್ ದೇಶಗಳಿಗೆ ಹಾಗೂ ಗಲ್ಫ್ ರಾಷ್ಟ್ರಗಳಿಗೆ ಹೊಸ ಶಾಕ್ನ ಸುಳಿವು ಕೊಟ್ಟಿದ್ದಾರೆ. ‘ವೈರಿಗೆ ಕಡಿಮೆ ಅನುಭವ ಇರುವಂತಹ ಮತ್ತು ಬಹಳ ದುರ್ಬಲ ಇರುವಂತಹ ಇತರ ಫ್ರಂಟ್ಗಳನ್ನು ತೆರೆಯುವ ಬಗ್ಗೆ ಯೋಜಿಸುತ್ತಿದ್ದೇವೆ. ಈ ಯುದ್ಧ ಸ್ಥಿತಿ ಮುಂದುವರಿದರೆ ಅವುಗಳನ್ನು ಸಕ್ರಿಯಗೊಳಿಸಲಾಗುವುದು’ ಎಂದು ಖಮನೈ ಎಚ್ಚರಿಕೆ ಕೊಟ್ಟಿದ್ದಾರೆ.
ಇರಾನ್ನ ಹುತಾತ್ಮರ ರಕ್ತಕ್ಕೆ ಮುಯ್ಯಿ ತೀರಿಸಿಕೊಳ್ಳಲು ಈ ದೇಶ ಮರೆಯದು ಎಂದೂ ಮೊಜ್ತಬಾ ಹೇಳಿದ್ದಾರೆ. ನೆರೆಯ ದೇಶಗಳೊಂದಿಗೆ ಇರಾನ್ ಸ್ನೇಹ ಬಯಸುತ್ತದಾದರೂ ಅವಲ್ಲಿರುವ ಅಮೆರಿಕನ್ ನೆಲೆಗಳ ಮೇಲೆ ದಾಳಿ ಮುಂದುವರಿಯುವುದು ಎಂದೂ ಸ್ಪಷ್ಟಪಡಿಸಿದ್ದಾರೆ.
‘ನಮ್ಮ ಪ್ರೀತಿಯ ತಾಯ್ನಾಡಿನ ಮೇಲೆ ದಾಳಿ ಮಾಡಿ ನಮ್ಮ ಜನರನ್ನು ಕೊಂದವರ ವಿಚಾರದಲ್ಲಿ ಈ ದೇಶಗಳು (ಗಲ್ಫ್) ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಶಾಂತಿ ಮತ್ತು ಭದ್ರತೆ ಒದಗಿಸುವ ಅಮೆರಿಕದ ಭರವಸೆ ಬರೀ ಸುಳ್ಳು ಎಂಬುದು ಈ ದೇಶಗಳಿಗೆ ಈಗಾಗಲೇ ಗೊತ್ತಾಗಿದೆ. ಆ ಅಮೆರಿಕನ್ ನೆಲೆಗಳನ್ನು ಕೂಡಲೇ ಮುಚ್ಚಬೇಕು’ ಎಂದು ಇರಾನ್ ಸರ್ವೋಚ್ಚ ನಾಯಕ ಒತ್ತಾಯಿಸಿದ್ದಾರೆ.
ಯುದ್ಧ ನಿಲ್ಲಿಸಲು ಇರಾನ್ ಮೂರು ಷರತ್ತುಗಳನ್ನು ಮುಂದಿಟ್ಟಿದೆ. ಅಮೆರಿಕ ಮತ್ತು ಇಸ್ರೇಲ್ ತತ್ಕ್ಷಣವೇ ದಾಳಿ ನಿಲ್ಲಿಸಬೇಕು. ಭವಿಷ್ಯದಲ್ಲಿ ಇರಾನ್ ಮೇಲೆ ದಾಳಿಯಾಗುವುದಿಲ್ಲ ಎಂದು ಖಾತ್ರಿಪಡಿಸಬೇಕು. ದಾಳಿಯಿಂದ ಈಗಾಗಲೇ ಇರಾನ್ಗೆ ಆಗಿರುವ ನಷ್ಟವನ್ನು ಭರಿಸಿಕೊಡಬೇಕು ಎಂಬುದು ಆ ಮೂರು ಷರತ್ತುಗಳು.
‘ಒಂದು ವಿಚಾರ ಒತ್ತಿಹೇಳಲು ಇಷ್ಟಪಡುತ್ತೇನೆ. ಶತ್ರುವಿನಿಂದ ನಾವು ಪರಿಹಾರ ಪಡೆದೇ ಪಡೆಯುತ್ತೇವೆ. ಪರಿಹಾರಕ್ಕೆ ಅವರು ಒಪ್ಪಲಿಲ್ಲವೆಂದರೆ ಅವರ ಆಸ್ತಿಗಳಿಂದಲೇ ನಮಗೆ ಬೇಕಾದ್ದನ್ನು ಪಡೆಯುತ್ತೇವೆ. ಅದು ಸಾಧ್ಯವಾಗದಿದ್ದಲ್ಲಿ ಅವರ ಆಸ್ತಿಗಳನ್ನು ತಕ್ಕ ಪ್ರಮಾಣದಲ್ಲಿ ನಾಶ ಮಾಡುತ್ತೇವೆ’ ಎಂದು ಮೊಜ್ತಬಾ ಖಮೇನಿ ತಿಳಿಸಿದ್ದಾರೆ.
ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಯಾಗ್‌ರಾಜ್ ಕುಂಭಮೇಳದ ಸಂದರ್ಭದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದ 18 ವರ್ಷದ ಮೊನಾಲಿಸಾ ಭೋಸ್ಲೆ (Monalisa Bhosle) ತಮ್ಮ ಪ್ರಿಯಕರ ಫರ್ಮಾನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಕೇರಳದ ಪೂವಾರ್ ಸಮೀಪದ ಅರುಮನೂರಿನ ನಯನಾರ್ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಈ ಜೋಡಿ ಮದುವೆಯಾಗಿದೆ. ಈ ಮದುವೆ ಬಳಿಕ ಮೊನಾಲಿಸಾ ಬೋಸ್ಲೆ ಅವರು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆಗುತ್ತಾರಾ ಎಂಬ ಪ್ರಶ್ನೆಗೆ ಕೆಲವರಿಗೆ ಮೂಡಿದೆ. ಅದಕ್ಕೆ ಈ ಜೋಡಿ ಉತ್ತರ ನೀಡಿದೆ.
ಮದುವೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ‘ನಾವು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ. ನಾನು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿಲ್ಲ. ಹಾಗಾಗಿ ಇದು ಲವ್ ಜಿಹಾದ್ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಹಣೆಯ ಮೇಲೆ ಸಿಂಧೂರ ಧರಿಸಿದ್ದ ಅವರು, ‘ಫರ್ಮಾನ್ ಈ ಮದುವೆಗೆ ಮೊದಲು ಒಪ್ಪಿರಲಿಲ್ಲ. ನಾನೇ ಒತ್ತಾಯ ಮಾಡಿ ಮದುವೆ ಆಗುವಂತೆ ಮಾಡಿದೆ’ ಎಂದು ಹೇಳಿಕೆ ನೀಡಿದ್ದಾರೆ.
ಈ ವೇಳೆ ಫರ್ಮಾನ್ ಖಾನ್ ಮಾತನಾಡಿ, ‘ನಾವಿಬ್ಬರೂ ಕಲಾವಿದರು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಪ್ರೀತಿಯಲ್ಲಿ ಧರ್ಮ ಬದಲಾಯಿಸುವ ಅಗತ್ಯವಿಲ್ಲ’ ಎಂದಿದ್ದಾರೆ. ಆ ಮೂಲಕ ತಮ್ಮ ಪತ್ನಿ ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಈ ಜೋಡಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಗುತ್ತಿದೆ.
ಮೊನಾಲಿಸಾ ಅವರು ಕೇರಳದಲ್ಲಿ ಚಿತ್ರೀಕರಣಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ರಕ್ಷಣೆ ಕೋರಿ ತಿರುವನಂತಪುರಂ ಪೊಲೀಸರನ್ನು ಸಂಪರ್ಕಿಸಿದ್ದರು. ತಂದೆ ತನ್ನನ್ನು ಬಲವಂತವಾಗಿ ಊರಿಗೆ ಕರೆದೊಯ್ದು, ಸೋದರ ಸಂಬಂಧಿಯೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದರು. ‘ನನಗೆ ನನ್ನ ಸೋದರ ಸಂಬಂಧಿಯನ್ನು ಮದುವೆಯಾಗಲು ಇಷ್ಟವಿಲ್ಲ, ಅದಕ್ಕಾಗಿಯೇ ನಾನು ಪ್ರೀತಿಸಿದವನ ಜೊತೆ ಮದುವೆಯಾಗಿದ್ದೇನೆ’ ಎಂದು ಅವರು ಪೊಲೀಸರ ಬಳಿ ಹೇಳಿಕೊಂಡಿದ್ದರು.
ಮೊನಾಲಿಸಾ ವಯಸ್ಕಳಾ ಅಥವಾ ಅಪ್ರಾಪ್ತಳಾ ಎಂಬ ಗೊಂದಲವಿತ್ತು. ಆದರೆ ಸುದ್ದಿಗೋಷ್ಠಿಯಲ್ಲಿ ತಮ್ಮ ಜನ್ಮ ದಾಖಲೆಗಳನ್ನು ಪ್ರದರ್ಶಿಸಿದ ಅವರು, ತಮಗೆ ಈಗಷ್ಟೇ 18 ವರ್ಷ ತುಂಬಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ‘ಅವರು ವಯಸ್ಕರಾಗಿರುವುದರಿಂದ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.