ಮೇ 20ರಂದು ಸಾರಿಗೆ ನೌಕರರ ಮುಷ್ಕರ: ಸಿಬ್ಬಂದಿಗೆ ಖಡಕ್ ಎಚ್ಚರಿಕೆ ಕೊಟ್ಟ KSRTC – Kannada News | KSRTC Workers Strike on May 20: Corporation Warns Employees with Strict No Work, No Pay Order
ಸಿಬ್ಬಂದಿಗೆ ಖಡಕ್ ಎಚ್ಚರಿಕೆ ಕೊಟ್ಟ KSRTC ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ನೌಕರರಿಗೆ ಕೆಎಸ್ಆರ್ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ಮುಖ್ಯಾಂಶಗಳು ಮೇ 20ರಂದು ಸಾರಿಗೆ…