ಕೌಟಿಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ರಾಮನಗರದಲ್ಲಿ 5 ತಿಂಗಳ ಗರ್ಭಿಣಿ ಆತ್ಮಹತ್ಯೆ
ರಾಮನಗರ, ಮಾರ್ಚ್ 12: ಕೌಟಿಂಬಿಕ ಕಲಹ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯ ರೂಮ್ನಲ್ಲಿಯೇ ನಯನಾ (19) ಮೃತಪಟ್ಟಿದ್ದಾರೆ. ಕಳೆದ 9 ತಿಂಗಳ ಹಿಂದೆ ಸುನೀಲ್ ಜೊತೆ ನಯನಾ ಅವರ ವಿವಾಹವಾಗಿತ್ತು ಎನ್ನಲಾಗಿದೆ. ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ…