Headlines

nagaraj11081993

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಅವರ ವೈವಾಹಿಕ ಜೀವನ ಅಧಿಕೃತವಾಗಿ ಅಂತ್ಯಗೊಂಡಿದೆ. ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಈಗ ಮುದ್ರೆ ಬಿದ್ದಿದೆ. ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಹನ್ಸಿಕಾ ಮತ್ತು ಉದ್ಯಮಿ ಸೊಹೈಲ್ ಖತುರಿಯಾ ಅವರಿಗೆ ವಿಚ್ಛೇದನ (Divorce) ಮಂಜೂರು ಮಾಡಿದೆ. ಹನ್ಸಿಕಾ ಮೋಟ್ವಾನಿ ಮತ್ತು ಸೊಹೈಲ್ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ವಿಶೇಷವೆಂದರೆ, ಹನ್ಸಿಕಾ ಅವರು ಪತಿಯಿಂದ ಯಾವುದೇ ರೀತಿಯ ಜೀವನಾಂಶ (Alimony) ಕೇಳಿಲ್ಲ….

Read More

Video: ಬದುಕು ನಿತ್ಯ ನಿರಂತರ ಹೋರಾಟ; ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ

ತಾಯಿ (mother) ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು ಇಲ್ಲೊಬ್ಬಳು ತಾಯಿ ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಾ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾಳೆ. ಈ ಆಟೋ ಚಾಲಕಿ ಹೆಸರು ಕೋಮಲ್ ಗಾಯಕ್ವಾಡ್ (Komal Gaikwad) . ಪತಿ ಬಿಟ್ಟು ಹೋದ ಬಳಿಕ ಈ ಮಹಿಳೆಗೆ ಮಗಳೇ ಪ್ರಪಂಚವಾಗಿದ್ದಾಳೆ. ಈ ತಾಯಿಯೊಬ್ಬಳ ಹೋರಾಟದ ಬದುಕಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ…

Read More

ಬೇಸಿಗೆಯಲ್ಲಿ ಬೆವರಿನ ವಾಸನೆಯನ್ನು ಹೋಗಲಾಡಿಸಿ, ದಿನವಿಡೀ ಫ್ರೆಶ್‌ ಆಗಿರಲು ಏನು ಮಾಡಬೇಕು?

ಬೇಸಿಗೆಯಲ್ಲಿ (summer) ನಿರ್ಜಲೀಕರಣ, ಶೆಖೆ, ಕಿರಿಕಿರಿ ಸಮಸ್ಯೆ ಒಂದುಕಡೆಯಾದ್ರೆ, ಇನ್ನೊಂದು ಕಡೆ ವಿಪರೀತ ಬೆವರಿನ ಸಮಸ್ಯೆ. ಹೌದು ಬೇಸಿಗೆಯಲ್ಲಿ ದೇಹ ವಿಪರೀತ ಬೆವರುವ ಕಾರಣ ಮೈ ತುರಿಕೆ, ಬೆವರು ಸಾಲೆಗಳ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೆ ಈ ಬೆವರಿನ ಕಾರಣದಿಂದ ದೇಹದಲ್ಲಿ ದುರ್ವಾಸನೆಯು ಸಹ ಕಾಣಿಸಿಕೊಳ್ಳುತ್ತದೆ. ಈ ಬೆವರಿನ ವಾಸನೆಯಿಂದಾಗಿ ಅನೇಕರು ಮುಜುಗರಕ್ಕೊಳಗಾಗುತ್ತಿರುತ್ತಾರೆ. ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಪರ್‌ಫ್ಯೂಮ್‌ ಹಾಕಿದ್ರೂ ಬೆವರಿನ ವಾಸನೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ವಾ? ಹಾಗಿದ್ರೆ ಈ ಕೆಲವೊಂದು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ…

Read More

ಕರ್ನಾಟಕದ ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಎದುರಾಯ್ತು ಗ್ಯಾಸ್ ಸಮಸ್ಯೆ

ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ದೇಶದ ಹಲವು ನಗರಗಳಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳ (LPG cylinders) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವುದರ ಜತೆಗೆ ವಿತರಣೆಯಲ್ಲಿ ತಾತ್ಕಾಲಿಕ ಅಡಚಣೆ ಎದುರಾಗುತ್ತಿದೆ. ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲ ಕರ್ನಾಟಕದ ಮುಜುರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು…

Read More

ಹರೀಶ್ ರಾಣಾ ದಯಾಮರಣದ ತೀರ್ಪಿಗೆ ಅಡಿಪಾಯ ಹಾಕಿತ್ತು ಅರುಣಾ ಶಾನಭಾಗ್ ಕೇಸ್; ಏನಿದು ಪ್ರಕರಣ?

ನವದೆಹಲಿ, ಮಾರ್ಚ್ 11: ಆತ ಉತ್ತರ ಪ್ರದೇಶದ ಸ್ಪುರದ್ರೂಪಿ ಯುವಕ. ಹೆಸರು ಹರೀಶ್ ರಾಣಾ. ಎಂಜಿನಿಯರಿಂಗ್ ಓದುತ್ತಿದ್ದ ಅವರು 2003ರಲ್ಲಿ 4ನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರಿಂದ ತಲೆಗೆ ಗಂಭೀರವಾಗಿ ಗಾಯವಾಗಿ ಕೋಮಾದಲ್ಲಿದ್ದರು. 13 ವರ್ಷಗಳಿಂದ ಕೋಮಾದಲ್ಲಿದ್ದ ಅವರು ಚೇತರಿಸಿಕೊಳ್ಳುವ ಯಾವ ಲಕ್ಷಣಗಳೂ ಇರಲಿಲ್ಲ. ಹೀಗಾಗಿ, ಅವರ ತಂದೆ-ತಾಯಿ ತಮ್ಮ ಮಗನಿಗೆ ದಯಾಮರಣ ನೀಡಬೇಕೆಂದು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ದಯಾಮರಣವೆಂದರೆ ಆ ವ್ಯಕ್ತಿಯ ಜೀವ ಉಳಿಸಲು ನೀಡಲಾಗುತ್ತಿರುವ ಎಲ್ಲ ಚಿಕಿತ್ಸೆ, ವೆಂಟಿಲೇಟರ್ ವ್ಯವಸ್ಥೆಯನ್ನು ತೆಗೆದುಹಾಕುವುದು. ಕೊನೆಗೂ ಹರೀಶ್ ರಾಣಾ…

Read More

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ, ಮಾರ್ಚ್​​ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು…

Read More

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …

Read More

ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿ, ಮಾರ್ಚ್​ 11: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಎಲ್ಲಿಯಾದ್ರು ನೀರು ಕಂಡ್ರೆ ಸಾಕು ಅಲ್ಲಿ ಸ್ವಲ್ಪ ಹೊತ್ತು ಆಟವಾಡಿ, ರಿಲ್ಯಾಕ್ಸ್ ಆಕಬೇಕು ಎಂದು ಬಯಸುತ್ತಿದ್ದಾರೆ. ಆದ್ರೆ ನಿಮ್ಮ ಮಕ್ಕಳು ಈ ರೀತಿಯಾಗಿ ಹೋಗ್ತಿದ್ದರೆ ಅವರ ಬಗ್ಗೆ ಸ್ವಲ್ಪ ಎಚ್ಚರವಹಿಸೋದು ಉತ್ತಮ. ಯಾಕಂದ್ರೆ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ ಸಮರ್ಥ್ ಮತ್ತು ಹರೀಶ್ ಎಂಬ ಹದಿನೇಳು ವರ್ಷದ…

Read More

ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ನೆಟ್ಟಿಗರ ಆಕ್ರೋಶ

ಪ್ಯಾನ್ ಇಂಡಿಯಾ ಸ್ಟಾರ್ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವಿವಾಹದ ಸಂಭ್ರಮ ಜೋರಾಗಿತ್ತು. ಇತ್ತೀಚೆಗಷ್ಟೇ ಈ ಜೋಡಿಯು ತಮ್ಮ ಮೆಹಂದಿ ಶಾಸ್ತ್ರದ ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಖುಷಿಯ ನಡುವೆಯೇ ರಶ್ಮಿಕಾ ತೊಟ್ಟಿದ್ದ ಉಡುಪಿನ ವಿನ್ಯಾಸ ಈಗ ವಿವಾದಕ್ಕೆ ಕಾರಣವಾಗಿದೆ. ಲಕ್ಷ್ಮಿ ದೇವಿಯ ಚಿತ್ರವಿರುವ ಉಡುಪು ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಅವರ ಅಪ್ಪಟ ಅಭಿಮಾನಿಗಳು ನಟಿಯ ಬೆಂಬಲಕ್ಕೆ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಂದು ಮೀನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯವರಿಗೆ ಶನಿ ಸಾಡೇ ಸಾತಿಯ ಗರ್ಭ ಭಾಗ ನಡೆಯುತ್ತಿದ್ದು, ಗುರು ನಾಲ್ಕರಿಂದ ಐದಕ್ಕೆ, ಶನಿ ಒಂದರಲ್ಲಿ, ರಾಹು 12ರಿಂದ 11ರಲ್ಲಿ ಮತ್ತು ಕೇತು ಆರರಿಂದ ಐದರಲ್ಲಿ ಇರುತ್ತಾರೆ. ಆದಾಯ 14 ಮತ್ತು ವ್ಯಯ 7 ಇರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದರೂ ಆರ್ಥಿಕವಾಗಿ ಉತ್ತಮ ಪರಿಸ್ಥಿತಿ ಇರುತ್ತದೆ. ಸರ್ಕಾರಿ ಉದ್ಯೋಗ, ವ್ಯಾಪಾರ, ಪಾಲುದಾರಿಕೆ ಹಾಗೂ ಉದ್ಯೋಗದಲ್ಲಿ ಶುಭ ಫಲಗಳಿವೆ….

Read More