ರಿಯಲ್ ಎಸ್ಟೇಟ್ ಏಜೆಂಟ್ನನ್ನು ಅಪಹರಿಸಿ ಹತ್ಯೆ ಕೇಸ್: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ
ಆನೇಕಲ್, ಮಾರ್ಚ್ 11: ಆನೇಕಲ್‌ನಲ್ಲಿ ಕಿಡ್ನ್ಯಾಪ್ (kidnapped) ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ತಮಿಳುನಾಡಿನಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಠಾಣೆ ಪೊಲೀಸರಿಂದ ಓರ್ವ ಅಪ್ರಾಪ್ತ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಮೋಹನ್ ಬಾಬು, ತೇಜಸ್, ದರ್ಶನ್, ಲಿಖಿತ್, ನಿಖಿಲ್, ಆನಂದ್, ಪ್ರಶಾಂತ್ ಮತ್ತು ಓರ್ವ ಅಪ್ರಾಪ್ತ ಬಂಧಿತರು. ಆರೋಪಿಗಳು ಕಿಡ್ನ್ಯಾಪ್ ಮಾಡಲು ಬಳಸಿದ್ದ ಹುಂಡೈ ಕಾರನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿ ಕೋರ್ಟ್ಗೆ…