‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ
ಮುಂಬೈ, ಮಾರ್ಚ್ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…