ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!
ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ…