ನೀರಿನ ಬಿಲ್ ಕೇಳೋ ಅಧಿಕಾರಿಗಳು ಈಗ ಎಲ್ಲಿದ್ದಾರೆ?; ಮಂಗಳೂರಿನಲ್ಲಿ ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ – Kannada News | Lab Confirms Unsafe Drinking Water in Mangaluru: Public Outraged by MCC Inaction
ಮಂಗಳೂರು, ಜೂ.18: ಮಂಗಳೂರು ಮಹಾನಗರ ಪಾಲಿಕೆಯ (MCC) ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಕರಾವಳಿಯ ನಾಗರಿಕರು ಭಾರಿ ಬೆಲೆ ತೆರುವಂತಾಗಿದೆ. ಪಾಲಿಕೆಯಿಂದ ಸರಬರಾಜಾಗುತ್ತಿರುವ ಕಲುಷಿತ ಕುಡಿಯುವ ನೀರನ್ನು ಸೇವಿಸಿ ನಗರದ ನೂರಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ತೀವ್ರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಜನರ ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದ ಬಿಜೈ ನ್ಯೂರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರು-ನಾಲ್ಕು ವಾರಗಳಿಂದ ಮನೆಯ ಟ್ಯಾಪ್ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ….