Headlines

nagaraj11081993

ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್; ‘ಬಾಸ್’ ಸಿನಿಮಾ ಕಥೆ ರಿವೀಲ್

‘ಬಾಸ್’ ಸಿನಿಮಾ ವಿಷಯ ಚರ್ಚೆ ಹುಟ್ಟುಹಾಕಿದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಹೀರೋ ಓರ್ವ ಕೊಲೆ ಕೇಸ್​​​ನಲ್ಲಿ ಸಿಕ್ಕಿ ಬೀಳೋ ಕಥೆ ಇದು. ಇದನ್ನು ನೋಡಿದ ಅನೇಕರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರೋ ನಿರ್ದೇಶಕರು ‘ಇದು ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್’ ಎಂದು ಹೇಳಿದ್ದಾರೆ. ಟ್ರೇಲರ್ ರಿಲೀಸ್ ಆದ ಬಳಿಕ ಎಲ್ಲ ವಿಷಯ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್​’

ಮಳೆ ನಿಂತರೂ ಹನಿ ನಿಂತಿಲ್ಲ ಎಂಬಂತೆ ಟಿ20 ವಿಶ್ವಕಪ್​​ ಫೈನಲ್ ಪಂದ್ಯದ ಚರ್ಚೆ ಮುಂದುವರೆದಿದೆ. ಮಾರ್ಚ್ 8 ರಂದು ಅಹಮದಾಬಾದ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು….

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ

ಬೆಂಗಳೂರು, ಮಾರ್ಚ್​ 10: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

IPL 2026: ಹೆಚ್ಚುವರಿ ಪಂದ್ಯಗಳು… ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2026 ರಿಂದ ಹೆಚ್ಚುವರಿ 10 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು. ಆದರೆ ಈ ಯೋಜನೆಯು…

Read More

ಮಲೈಕಾ ಅರೋರಾ ಜೊತೆ ಇರೋ ಈ ಹೊಸ ಹುಡುಗ ಯಾರು?

ನಟಿ ಮಲೈಕಾ ಅರೋರಾ ತಮ್ಮ ಖಾಸಗಿ ಜೀವನಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ . ಕಳೆದ ಕೆಲವು ದಿನಗಳಿಂದ, ಮಲೈಕಾ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ರೋಮ್‌ನಲ್ಲಿರುವ ಅವರಿಬ್ಬರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈಗ ಮಲೈಕಾ ತಮ್ಮ ಖಾಸಗಿ ಜೀವನಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರು ಒಟ್ಟಿಗೆ ನೃತ್ಯ ಮಾಡುವುದನ್ನು…

Read More

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೆಲ್ತ್ ಎಮರ್ಜೆನ್ಸಿ? ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

ಬೆಂಗಳೂರು, ಮಾರ್ಚ್ 10: ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ…

Read More

ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

ಸಾಯಿ ಪಲ್ಲವಿಯವರು (Sai Pallavi)  ಇಂದು ಬೇಡಿಕೆಯ ನಟಿ ಎನಿಸಿಕೊಂರುವುದ ಗೊತ್ತೇ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಾಕಿ ಮಾಡುತ್ತಿರುವ ಸಿನಿಮಾ ಇದು ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಅಂತಹ ಸಿನಿಮಾದಲ್ಲಿ ಇವರಿಗೆ ಅವಕಾಶ ಸಿಕ್ಕಿದೆ ಎಂದರೆ ಇವರ ಟ್ಯಾಲೆಂಟ್ ಏನು ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ ಮತ್ತು ರಂಭಾ ಅವರು ಸಾಯಿ ಪಲ್ಲವಿ ಬಗ್ಗೆ ಅವರು ಅಂದೇ ಹೊಗಳಿದ್ದರು. ಅದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!

ಬೆಂಗಳೂರು, ಮಾರ್ಚ್​ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

Horoscope Today 10​​​​​​th​​ March​: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 10​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಸಪ್ತಮಿ, ಅನುರಾಧ ನಕ್ಷತ್ರ, ವೃಷಿಣ ಯೋಗ ಮತ್ತು ಭದ್ರಕರಣವನ್ನು ಹೊಂದಿದೆ. ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ…

Read More

‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ’; ರಶ್ಮಿಕಾ ಭಾವುಕ ಪೋಸ್ಟ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೂಲಕ ಅವರು ಎಲ್ಲರ ಗಮನ ಸೆಳೆದರು. ಈಗ ರಶ್ಮಿಕಾ-ವಿಜಯ್ ನಟನೆಯಿಂದ ಒಂದು ಬ್ರೇಕ್ ಪಡೆದುಕೊಂಡಿದ್ದು, ಹಾಯಾಗಿ ಸುತ್ತಾಡುತ್ತಿದ್ದಾರೆ. ಈ ಮಧ್ಯೆ ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಸಂದೇಶ ನೀಡಿದ್ದಾರೆ. ‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿ ಹುಡುಕಿಕೊಳ್ಳಿ’ ಎಂದು ಅವರು ಹೇಳಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅದ್ದೂರಿಯಾಗಿ ವಿವಾಹ ಆದರು. ಮದುವೆ ಬಳಿಕ ವಿಜಯ್ ಹುಟ್ಟೂರಿನಲ್ಲಿ ಅದ್ದೂರಿ ಕಾರ್ಯಕ್ರಮ…

Read More