ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್ ಪೊಲೀಸ್ ಬಲೆಗೆ
ಬೆಳಗಾವಿ, ಮಾರ್ಚ್ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ ಕಳ್ಳರ ಗ್ಯಾಂಗ್ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ. ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್…