All posts by nagaraj11081993

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)
ವಾಗ್ದಾಳಿ ಮಾಡಿದ್ದಾರೆ.

ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟ್ರಂಪ್ ನನ್ನ ಸ್ನೇಹಿತ ಅಂತಾ ಪ್ರಧಾನಿ ಮೋದಿ ಹೇಳುತ್ತಾರೆ. ಟ್ರಂಪ್ ಅತಿ ಹೆಚ್ಚು ಟ್ಯಾಕ್ಸ್ ನಮ್ಮ ಮೇಲೆ ಹಾಕುತ್ತಿದ್ದಾರೆ. ಖಮೇನಿ ಹತ್ಯೆ ಮಾಡಿದರೆ ವಿಶ್ವ ಹೇಗೆ ಸುರಕ್ಷಿತ ಆಗುತ್ತೆ? ನೀವು ಎಲ್ಲರನ್ನೂ ಕೊಲ್ಲುತ್ತಾ ಹೋದರೆ ಎಲ್ಲಿ ಶಾಂತಿ ಬರುತ್ತೆ. ಅಮೆರಿಕ ಜೊತೆಗೂಡಿ ನಮ್ಮ ದೇಶವನ್ನು ಹಾಳು ಮಾಡುತ್ತಿದ್ದೀರಿ. ನೀವು ಸ್ವಾಭಿಮಾನ ಬೆಳೆಸಿಕೊಳ್ಳಿ. ಬ್ರಿಟಿಷರನ್ನ ಒದ್ದು ಓಡಿಸಿದ್ದೆವು. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ ಎಂದು ಕಿಡಿಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಟ್ವೀಟ್​

ಜವಾಹರ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್​ಗೆ ಹೋಗಿ ಬಂದ‌ ನಂತರ ಅದು ಇರಾನ್ ಮೇಲೆ‌ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು.‌ ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಭಾರತ ದೇಶದ 65% ರೈತರು ಕೃಷಿ ಅವಲಂಬಿತರಾಗಿದ್ದರೆ ಅಮೆರಿಕಾದಲ್ಲಿ 3% ಅವಲಂವಿತರಾಗಿದ್ದಾರೆ. ನಮ್ಮ ದೇಶದ ಉತ್ಪನ್ನಗಳಿಗೆ ಅಮೆರಿಕಾದಲ್ಲಿ ಮನಬಂದಂತೆ ತೆರಿಗೆ ಹಾಕಲಾಗುತ್ತಿದೆ. ಆದರೆ, ಅಮೆರಿಕಾದ ಉತ್ಪನ್ನಗಳ ಮೇಲೆ ಯಾವುದೇ ತೆರಿಗೆಯನ್ನು ಭಾರತ ಹೇರುತ್ತಿಲ್ಲ. ಟ್ರಂಪ್ ಜೊತೆ ದಿನಾಲೂ ಮಾತನಾಡುತ್ತಿರುವುದಾಗಿ ಮೋದಿ ಹೇಳುತ್ತಾರೆ. ತೆರಿಗೆ ಹಾಕುವ ಬಗ್ಗೆನೆ ಮಾತನಾಡುತ್ತಾರಾ? ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ ಈ ಮೂವರನ್ನು ಹೊರತುಪಡಿಸಿ ಆ ಬಳಿಕ ಬಂದವರು ಪರಿಣಾಮಕಾರಿಯಾಗಲಿಲ್ಲ. ಅದರಲ್ಲೂ ನಾಯಕ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ನಿರಾಶೆ ಮೂಡಿಸಿದರು. ಈ ಮೂಲಕ ಟಿ20 ವಿಶ್ವಕಪ್ ಫೈನಲ್​ನಲ್ಲಿ ಭಾರತದ ನಾಯಕರ ರನ್ ಬರವನ್ನು ಈ ಪಂದ್ಯದಲ್ಲೂ ಮುಂದುವರೆಸಿದರು.

ವಾಸ್ತವವಾಗಿ ಟೀಂ ಇಂಡಿಯಾ ಇದುವರೆಗೆ ನಾಲ್ಕು ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದೆ. ಇದರಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಫೈನಲ್​ಗಳನ್ನು ಆಡಿದರೆ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಂದು ಹಾಗೂ ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಫೈನಲ್ ಪಂದ್ಯವನ್ನು ಆಡುತ್ತಿದೆ. ಆದರೆ ಈ ನಾಲ್ಕು ಫೈನಲ್ ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕರಿಗೆ ಒಂದಂಕಿ ದಾಟಿ ಮುಂದಕ್ಕೆ ಹೋಗಲು ಸಾಧ್ಯವಾಗಿಲ್ಲ. ಅಂದರೆ ಈ ಮೂವರು ನಾಯಕರು ಟಿ20 ವಿಶ್ವಕಪ್ ಫೈನಲ್​ನಲ್ಲಿ 10 ರನ್​ ಒಳಗೆ ವಿಕೆಟ್ ಒಪ್ಪಿಸಿದ್ದಾರೆ.

ಮೊದಲನೆಯದಾಗಿ, 2007 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಎಂಎಸ್ ಧೋನಿ ಕೇವಲ 6 ರನ್ ಗಳಿಸಿದರೆ, 2014 ರ ಫೈನಲ್‌ನಲ್ಲಿ ಕೇವಲ 4 ರನ್​ ಕಲೆಹಾಕಿದ್ದರು. 2024 ರಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್​ನಲ್ಲಿ ರೋಹಿತ್ ಶರ್ಮಾ ಕೂಡ 9 ರನ್‌ಗಳಿಗೆ ಔಟಾಗಿದ್ದರು. ಆದಾಗ್ಯೂ ಈ ಇಬ್ಬರು ಫೈನಲ್‌ನಲ್ಲಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಈ ಹಿಂದಿನ ಒಂದಂಕಿ ಸರಣಿಯನ್ನು ಮುರಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಕಿವೀಸ್ ವಿರುದ್ಧ ಅವರ ಪ್ರದರ್ಶನವೂ ಅದ್ಭುತವಾಗಿತ್ತು. ಆದರೆ ಸೂರ್ಯನಿಗೆ ಈ ಪಂದ್ಯದಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ.

ಇದರೊಂದಿಗೆ, ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲ ಎಸೆತದಲ್ಲೇ ಸೊನ್ನೆಗ ಔಟಾದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅವರಿಗಿಂತ ಮೊದಲು ಪಾಕಿಸ್ತಾನದ ಶಾಹಿದ್ ಅಫ್ರಿದಿ, ವೆಸ್ಟ್ ಇಂಡೀಸ್‌ನ ಆಂಡ್ರೆ ರಸೆಲ್ ಮತ್ತು ವೆಸ್ಟ್ ಇಂಡೀಸ್‌ನ ಲೆಂಡ್ಲ್ ಸಿಮನ್ಸ್ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ಇದು ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಇದು ಸೂರ್ಯಕುಮಾರ್ ಯಾದವ್ ಅವರ ಮೂರನೇ ಗೋಲ್ಡನ್ ಡಕ್ ಸಾಧನೆಯಾಗಿದೆ. ಇದಕ್ಕೂ ಮೊದಲು ಸೂರ್ಯ 42 ತಿಂಗಳ ಹಿಂದೆ ಅಂದರೆ 2022 ರ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಎಸೆತದಲ್ಲೇ ಬಲಿಯಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆಗೆ ಸ್ವಲ್ಪ ದಿನ ಬಾಕಿ: ಸಮವಸ್ತ್ರದಲ್ಲೇ ವೀರ ಯೋಧ ಅನುಜ್​ಗೆ​​​​​​ ಅಂತಿಮ ವಿದಾಯ ಸಲ್ಲಿಸಿದ ಭಾವಿ ಪತ್ನಿ!

ದೆಹಲಿ, ಮಾ.8: ದೇಶಸೇವೆಯಲ್ಲಿದ್ದಾಗ ವೀರಮರಣವನ್ನಪ್ಪಿದ ಭಾರತೀಯ ವಾಯುಪಡೆಯ (IAF) ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರ ಅಂತಿಮ ಸಂಸ್ಕಾರವು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ವೇಳೆ ಅವರ ಭಾವಿ ಪತ್ನಿ, ಸ್ವತಃ ವಾಯುಪಡೆಯ ಪೈಲಟ್ ಆಗಿರುವ ಅಧಿಕಾರಿ ಅಂತಿಮ ನಮನ ಸಲ್ಲಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣಾಲಿಗಳನ್ನು ತೇವಗೊಳಿಸಿದೆ. ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರು ಕರ್ತವ್ಯದ ಅವಧಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರಕ್ಕೆ ಸಕಲ ಮಿಲಿಟರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಅನುಜ್ ಅವರ ಭಾವಿ ಪತ್ನಿ ಕೂಡ ಭಾರತೀಯ ವಾಯುಪಡೆಯಲ್ಲೇ ಅಧಿಕಾರಿಯಾಗಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದ ನಡುವೆಯೂ, ಅವರು ತಮ್ಮ ವಾಯುಪಡೆಯ ಸಮವಸ್ತ್ರದಲ್ಲೇ (Uniform) ಬಂದು ಸಲ್ಯೂಟ್ ಮಾಡುವ ಮೂಲಕ ಅಂತಿಮ ವಿದಾಯ ಸಲ್ಲಿಸಿದರು. ಈ ಭಾವುಕ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ದೇಶದಾದ್ಯಂತ ಜನರು ವೀರ ಯೋಧನ ತ್ಯಾಗಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು “ಅಮರ ರಹೇ” ಘೋಷಣೆಗಳನ್ನು ಕೂಗಿದರು. ಯೋಧನ ಕುಟುಂಬದ ಧೈರ್ಯ ಮತ್ತು ಅವರ ಭಾವಿ ಪತ್ನಿಯ ಕರ್ತವ್ಯ ನಿಷ್ಠೆಗೆ ನೆಟ್ಟಿಗರು ನಮನ ಸಲ್ಲಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಟಿಟಿಗೆ ಬರುತ್ತಿದೆ ‘ಲ್ಯಾಂಡ್​​ಲಾರ್ಡ್’ ಸಿನಿಮಾ: ಯಾವಾಗ? ಎಲ್ಲಿ?

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟಿಸಿದ್ದ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ವ್ಯಕ್ತವಾಗಿದ್ದವು. ಕ್ರಾಂತಿಕಾರಿ ಕತೆಯನ್ನು ಹೊಂದಿದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದ ಈ ಸಿನಿಮಾ ಒಟಿಟಿಯಲ್ಲಿಯೂ ಸಹ ಪ್ರೇಕ್ಷಕರನ್ನು ಸೆಳೆಯುವುದೇ ಎಂಬುದು ಕುತೂಹಲ ಮೂಡಿಸಿದೆ.

ಜನವರಿ 23ರಂದು ಚಿತ್ರಮಂದಿರಗಳಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಿಡುಗಡೆ ಆಗಿತ್ತು. ಜಾತಿ ಪದ್ಧತಿ, ಜೀತ ಪದ್ಧತಿಗಳ ವಿರುದ್ಧ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ಸಿನಿಮಾನಲ್ಲಿ ದುನಿಯಾ ವಿಜಯ್ ಭಿನ್ನ ರೀತಿಯ ಪಾತ್ರದಲ್ಲಿ ನಟಿಸಿದ್ದರು. ತುಸು ವಯಸ್ಸಾದ ಆದರೆ ಖಡಕ್ ಆದ ಪಾತ್ರದಲ್ಲಿ ದುನಿಯಾ ವಿಜಯ್ ನಟಿಸಿದ್ದರು. ನಾಯಕಿ ಪಾತ್ರದಲ್ಲಿ ನಟಿಸಿದ್ದ ರಚಿತಾ ರಾಮ್ ಸಹ ವಯಸ್ಸಾದ ಮಹಿಳೆಯ ಪಾತ್ರದಲ್ಲಿ ನಟಿಸಿದ್ದು ವಿಶೇಷವಾಗಿತ್ತು. ದುನಿಯಾ ವಿಜಯ್ ಪುತ್ರಿ ರಿತನ್ಯ ಸಹ ಈ ಸಿನಿಮಾನಲ್ಲಿ ಮಹತ್ವದ ಪಾತ್ರದಲ್ಲಿ ನಟಿಸಿದ್ದರು. ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ನಟಿಸಿದ್ದರು.

‘ಲ್ಯಾಂಡ್​​ಲಾರ್ಡ್’ ಸಿನಿಮಾವು ಜೀ5 ಒಟಿಟಿಯಲ್ಲಿ ಮಾರ್ಚ್ 13 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ಯುಗಾದಿ ಹಬ್ಬದ ವೇಳೆಗೆ ಅಂದರೆ ಮಾರ್ಚ್ 18ರ ವೇಳೆಗೆ ಈ ಸಿನಿಮಾ ಒಟಿಟಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದಾಗ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ದೊರೆತಿತ್ತು, ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸಿನಿಮಾವನ್ನು ಚಿತ್ರಮಂದಿರದಲ್ಲಿ ವೀಕ್ಷಿಸಿ, ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನು ಹಂಚಿಕೊಂಡಿದ್ದರು. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ.

ಇದನ್ನೂ ಓದಿ:ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ

‘ಲ್ಯಾಂಡ್​​ಲಾರ್ಡ್’ ಸಿನಿಮಾನಲ್ಲಿ ದುನಿಯಾ ವಿಜಯ್ ಜೊತೆಗೆ ರಚಿತಾ ರಾಮ್, ರಾಜ್ ಬಿ ಶೆಟ್ಟಿ, ಉಮಾಶ್ರೀ ಅವರುಗಳು ನಟಿಸಿದ್ದರು. ದುನಿಯಾ ವಿಜಯ್ ಪುತ್ರಿ ರಿತನ್ಯ, ಸಿನಿಮಾನಲ್ಲಿಯೂ ಸಹ ದುನಿಯಾ ವಿಜಯ್ ಪಾತ್ರದ ಪುತ್ರಿಯ ಪಾತ್ರದಲ್ಲಿಯೇ ನಟಿಸಿದ್ದರು. ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾದ ಮೂಲಕ ಗಮನ ಸೆಳೆದಿದ್ದ ಸಿರೀಶ್ ಬೈಕಾಡಿ ಸಹ ಈ ಸಿನಿಮಾನಲ್ಲಿ ನಟಿಸಿದ್ದರು. ಸಿನಿಮಾ ಇದೀಗ ಒಟಿಟಿಗೆ ಬರುತ್ತಿದ್ದು, ಯುಗಾದಿ ಸಮಯದಲ್ಲಿಯೇ ಟಿವಿಯಲ್ಲಿಯೂ ಪ್ರದರ್ಶನ ಆಗಲಿದೆ ಎನ್ನಲಾಗುತ್ತಿದೆ.

ದುನಿಯಾ ವಿಜಯ್ ಪ್ರಸ್ತುತ ಇನ್ನೂ ಕೆಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’, ತೆಲುಗಿನಲ್ಲಿ ಪುರಿ ಜಗನ್ನಾಥ್ ನಿರ್ದೇಶಿಸಿ, ವಿಜಯ್ ಸೇತುಪತಿ ನಟಿಸುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಸಿನಿಮಾ, ಅವರದ್ದೇ ನಿರ್ದೇಶನದ ‘ಸಿಟಿಲೈಟ್ಸ್’, ಸೂರಿ ನಿರ್ದೇಶನದ ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಸಿಟಿಲೈಟ್ಸ್’ ಸಿನಿಮಾನಲ್ಲಿ ವಿನಯ್ ರಾಜ್​​ಕುಮಾರ್ ನಾಯಕರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್

Source link

ಬೆಂಗಳೂರಿನಲ್ಲಿ ಜೂ ಎನ್​​ಟಿಆರ್: ಬಂದಿದ್ದೇಕೆ? ಆಡಿದ ಮಾತುಗಳೇನು?

ಪ್ಯಾನ್ ಇಂಡಿಯಾ ಸ್ಟಾರ್, ಟಾಲಿವುಡ್​​ನ ಸೂಪರ್ ಸ್ಟಾರ್ ಜೂ ಎನ್​​ಟಿಆರ್ (Jr NTR) ಅವರು ಇಂದು (ಮಾರ್ಚ್ 08) ಬೆಂಗಳೂರಿಗೆ ಆಗಮಿಸಿದ್ದರು. ನೆರೆ ರಾಜ್ಯದ ಸ್ಟಾರ್ ನಟ-ನಟಿಯರು ಸಿನಿಮಾ ಪ್ರಚಾರಕ್ಕಾಗಿ ಮಾತ್ರವೇ ಬೆಂಗಳೂರನ್ನು, ಕರ್ನಾಟಕವನ್ನು ನೆನಪು ಮಾಡಿಕೊಳ್ಳುತ್ತಾರೆ. ಆದರೆ ಜೂ ಎನ್​​ಟಿಆರ್ ಅವರ ಯಾವ ಸಿನಿಮಾ ಸಹ ಸದ್ಯಕ್ಕೆ ಬಿಡುಗಡೆ ಆಗುತ್ತಿಲ್ಲ ಆದರೂ ಇಂದು ಹಠಾತ್ತನೇ ಅವರು ಬೆಂಗಳೂರಿಗೆ ಬಂದಿದ್ದರು. ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೆ, ಕನ್ನಡದಲ್ಲಿಯೇ ಮಾತನಾಡಿದರು.

ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಜೂ ಎನ್​​ಟಿಆರ್ ಅವರು ಇಂದು ಬೆಂಗಳೂರಿಗೆ ಬಂದಿದ್ದರು. ಕಿಮ್ಸ್ ಜೊತೆಗೆ ಜೂ ಎನ್​​ಟಿಆರ್ ಅವರಿಗೆ ಬಲು ಆಪ್ತ ಬಂಧ ಇದೆ. 1983ರಲ್ಲಿ ಜೂ ಎನ್​​ಟಿಆರ್ ಅವರ ತಾತ ಎನ್​​ಟಿಆರ್ ಅವರೇ ಕಿಮ್ಸ್​​ಗೆ ಅಡಿಗಲ್ಲು ಹಾಕಿದ್ದರು. ಜೂ ಎನ್​​ಟಿಆರ್, 2009 ಭಾರಿ ರಸ್ತೆ ಅಪಘಾತಕ್ಕೆ ಈಡಾಗಿದ್ದರೂ ಸಹ ಅವರು ಕಿಮ್ಸ್​​ನಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಇದೇ ಕಾರಣಕ್ಕೆ ಇಂದು ಕಿಮ್ಸ್​​ನ ಹೊಸ ಘಟಕದ ಉದ್ಘಾಟನೆಗೆ ಅವರು ಆಗಮಿಸಿದ್ದರು.

ಈ ವೇಳೆ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ನಟ ಜೂ ಎನ್​​ಟಿಆರ್, ‘ನನಗೆ ಕರ್ನಾಟಕಕ್ಕೆ ಬರುವುದೆಂದರೆ ಅಪ್ಪನ ಮನೆಯಿಂದ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತದೆ. ನನ್ನ ತಾಯಿಯದ್ದು ಕುಂದಾಪುರ. ನನ್ನ ತಾಯಿ ಭಾಷೆ ಕನ್ನಡ. ಹಾಗಾಗಿ ಕರ್ನಾಟಕಕ್ಕೆ ಬರುವುದೆಂದರೆ ನನಗೆ ವಿಶೇಷ ಪ್ರೀತಿ’ ಎಂದು ಜೂ ಎನ್​ಟಿಆರ್ ಹೇಳಿದರು. ಕಿಮ್ಸ್​ನ ಸೇವೆಯನ್ನು ಕೊಂಡಾಡಿದ ಜೂ ಎನ್​​ಟಿಆರ್, ಕಿಮ್ಸ್​​ನವರು ‘ಪೇಷೆಂಟ್ ಈಸ್ ಪ್ಯಾರಾಮೌಂಟ್’ ಎಂಬ ಧ್ಯೇಯ ವಾಕ್ಯದೊಂದಿಗೆ ಸಲ್ಲಿಸುತ್ತಿರುವ ಸೇವೆ ಬೆಲೆಕಟ್ಟಲಾರದ್ದು, ಅವರು ಈ ಉದ್ಯಮದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಅಪಾರ ಯಶಸ್ಸು ಅವರಿಗೆ ಸಿಗಲಿ ಎಂದು ಹಾರೈಸಿದರು.

ಇದನ್ನೂ ಓದಿ:ಜೂ ಎನ್​​ಟಿಆರ್​ ಹಳೆ ಸಿನಿಮಾ ಸೀಕ್ವೆಲ್​​ಗೆ ಕತೆ ರೆಡಿ, ಆದರೆ ನಟಿಸುತ್ತಾರಾ ನಟ?

ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿದ ಜೂ ಎನ್​​ಟಿಆರ್, ‘ಮಹಿಳೆಯರನ್ನು ಹೇಗೆ ನೋಡಬೇಕು, ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದನ್ನು ಪದೇ ಪದೇ ನೆನಪು ಮಾಡಿಸುವ ಪರಿಸ್ಥಿತಿ ಇದೇ ಎಂಬುದೇ ನನಗೆ ಬೇಸರ ತರುವ ವಿಷಯ. ಮಹಿಳೆಯರು ಎಷ್ಟು ಮುಖ್ಯ ಎಂಬುದನ್ನು ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ. ಅದು ಸ್ವಾಭಾವಿಕವಾಗಿ ಬರಬೇಕು. ಅದೆಲ್ಲ ಮನೆಯಿಂದಲೇ ಪ್ರಾರಂಭ ಆಗಬೇಕು, ನನ್ನ ಇಬ್ಬರು ಗಂಡು ಮಕ್ಕಳು ಸಹ ಹೆಣ್ಣು ಮಕ್ಕಳನ್ನು ಗೌರವಿಸುವ ವ್ಯಕ್ತಿಗಳಾಗಿಯೇ ಬೆಳೆಯಲಿದ್ದಾರೆ ಎಂಬುದು ನಾನು ಖಾತ್ರಿಪಡಿಸುತ್ತಿದ್ದೇನೆ’ ಎಂದರು ಜೂ ಎನ್​​ಟಿಆರ್.

ರಸ್ತೆ ಸುರಕ್ಷತೆ ಬಗ್ಗೆಯೂ ಮಾತನಾಡಿದ ಜೂ ಎನ್​​ಟಿಆರ್, ‘ರಸ್ತೆ ಅಪಘಾತದಿಂದ ಭಾರಿ ನಷ್ಟವನ್ನು ನಮ್ಮ ಕುಟುಂಬ ಅನುಭವಿಸಿದೆ. ನಾನು, ನನ್ನ ದೊಡ್ಡ ಅಣ್ಣ ಮತ್ತು ತಂದೆಯನ್ನು ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದೇನೆ. ನಾನು ಸಹ ಸ್ವತಃ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದೆ, ಜೀವವೇ ಹೋಗುವ ಸ್ಥಿತಿ ಅಂದು ಇತ್ತು. ರಸ್ತೆ ಸುರಕ್ಷತೆ ಮತ್ತು ಡ್ರೈವಿಂಗ್ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಡ್ರೈವಿಂಗ್ ಮಾಡಬೇಕಾದರೆ ಕುಟುಂಬವನ್ನು ಮನಸ್ಸಿನಲ್ಲಿಟ್ಟುಕೊಂಡು ಡ್ರೈವ್ ಮಾಡಿ. ಆಗ ಎಚ್ಚರಿಕೆ ಇರುತ್ತದೆ. ಜವಾಬ್ದಾರಿ ಎಂಬುದು ಒಳಗಿನಿಂದಲೇ ಬರಲಿ, ಅದು ಹೇರಿಕೆ ಆಗುವುದು ಬೇಡ’ ಎಂದಿದ್ದಾರೆ ಜೂ ಎನ್​​ಟಿಆರ್.

ಇನ್ನು ಅಭಿಮಾನಿಗಳ ಬಗ್ಗೆ ಮಾತನಾಡಿದ ಜೂ ಎನ್​​ಟಿಆರ್, ‘ನಿಮ್ಮ ಪ್ರೀತಿಯನ್ನು ಪಡೆಯಲು ನಾನು ಅದೃಷ್ಟ ಮಾಡಿದ್ದೇನೆ. ಅಭಿಮಾನದ ಸಹೋದರರು ನೀವು. ನಿಮಗೆಲ್ಲರಿಗೂ ಕೋಟಿ-ಕೋಟಿ ಧನ್ಯವಾದ. ನಿಮ್ಮಲ್ಲಿ ಕೇಳಿಕೊಳ್ಳುವುದಿಷ್ಟೆ ಜಾಗೃತೆಯಾಗಿ ಮನೆಗೆ ಹೋಗಿ, ನಮ್ಮ ಮನೆಯಲ್ಲಿ ನಡೆದ ದುರ್ಘಟನೆ ನಿಮ್ಮ ಮನೆಯಲ್ಲಿ ನಡೆಯಬಾರದು, ನಿಮ್ಮ ಪ್ರೀತಿಗೆ, ಆಜನ್ಮ ಋಣದಲ್ಲಿರುತ್ತೇನೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಮೊದಲ ಓವರ್‌ನಲ್ಲಿ ಸಿಕ್ಸರ್; ವಿಶ್ವ ದಾಖಲೆ ಮುರಿದ ಸಂಜು ಸ್ಯಾಮ್ಸನ್

2026 ರ ಟಿ20 ವಿಶ್ವಕಪ್ ಫೈನಲ್‌ (T20 World Cup Final) ಪಂದ್ಯ ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ (India vs New Zealand) ನಡುವೆ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್​ನಲ್ಲಿ ಸ್ಟ್ರೈಕ್ ತೆಗೆದುಕೊಂಡ ಸಂಜು ಸ್ಯಾಮ್ಸನ್ (Sanju Samson) ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಇದರೊಂದಿಗೆ ವಿಶ್ವ ದಾಖಲೆಯನ್ನು ಸೃಷ್ಟಿಸಿದರು. ಮ್ಯಾಟ್ ಹೆನ್ರಿ ಅವರ ಎಸೆತದಲ್ಲಿ ಸಂಜು ಸ್ಯಾಮ್ಸನ್ ಸಿಕ್ಸ್ ಬಾರಿಸಿದ ತಕ್ಷಣ ಟಿ20 ವಿಶ್ವಕಪ್​ ಪಂದ್ಯಗಳಲ್ಲಿ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಸಂಜು ಸ್ಯಾಮ್ಸನ್ ಇದುವರೆಗೆ ಆಡಿರುವ ನಾಲ್ಕು ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಮೊದಲ ಓವರ್‌ನಲ್ಲಿ ಸಿಕ್ಸ್ ಬಾರಿಸಿದ್ದಾರೆ . ಇದರೊಂದಿಗೆ ಟಿ20 ವಿಶ್ವಕಪ್‌ನಲ್ಲಿ 40 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಇಂಗ್ಲೆಂಡ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಂಜು ಕೇವಲ 21 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಫಿಲ್ ಸಾಲ್ಟ್ ಜೊತೆಗೆ, ರಹಮಾನಲ್ಲಾ ಗುರ್ಬಾಜ್ ಟಿ20 ವಿಶ್ವಕಪ್ ಪಂದ್ಯಗಳ ಮೊದಲ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಮೊಹಮ್ಮದ್ ರಿಜ್ವಾನ್ ಮತ್ತು ಕ್ವಿಂಟನ್ ಡಿ ಕಾಕ್ ಕೂಡ ಈ ಸಾಧನೆಯನ್ನು ಮೂರು ಬಾರಿ ಮಾಡಿದ್ದಾರೆ. ಆದಾಗ್ಯೂ, ಸಂಜು ಸ್ಯಾಮ್ಸನ್ ನಾಲ್ಕು ಸಿಕ್ಸರ್‌ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಮೊದಲ ಓವರ್​ನಲ್ಲೇ ಸಿಕ್ಸರ್

ನಮೀಬಿಯಾ ವಿರುದ್ಧದ ಪಂದ್ಯದ ಮೊದಲ ಓವರ್‌ನಲ್ಲಿ ಸಂಜು ಸ್ಯಾಮ್ಸನ್ ಸಿಕ್ಸರ್ ಬಾರಿಸಿದ್ದರು. ನಂತರ ಜಿಂಬಾಬ್ವೆ ವಿರುದ್ಧವೂ ಸಿಕ್ಸರ್ ಬಾರಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ ಸ್ಯಾಮ್ಸನ್ ಮೊದಲ ಓವರ್‌ನಲ್ಲಿ ಸಿಕ್ಸರ್ ಬಾರಿಸಿದ್ದರು. ಇದೀಗ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಸ್ಯಾಮ್ಸನ್ ಮೊದಲ ಓವರ್​ನಲ್ಲಿ ಸಿಕ್ಸರ್ ಬಾರಿಸಿದ್ದಾರೆ.

IND vs NZ: ಫೈನಲ್​ನಲ್ಲಿ ಟಾಸ್ ಸೋತ ಭಾರತ; ಪ್ರಶಸ್ತಿ ಪಂದ್ಯಕ್ಕೆ ಪ್ಲೇಯಿಂಗ್ 11 ಹೀಗಿದೆ

ಭಾರತಕ್ಕೆ ಸ್ಫೋಟಕ ಆರಂಭ

ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಫೈನಲ್‌ನಲ್ಲಿ ಟೀಂ ಇಂಡಿಯಾಗೆ ಭರ್ಜರಿ ಆರಂಭ ನೀಡಿದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಕೇವಲ ನಾಲ್ಕು ಓವರ್‌ಗಳಲ್ಲಿ ತಂಡದ ಸ್ಕೋರ್ ಅನ್ನು ಅರ್ಧಶತಕದ ಗಡಿ ದಾಟಿಸಿದರು. ಇದು ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತದ ವೇಗದ ಆರಂಭಿಕ ಅರ್ಧಶತಕದ ಜೊತೆಯಾಟವಾಗಿದೆ. ಹಾಗೆಯೇ ಈ ಜೋಡಿ ಮೊದಲ ವಿಕೆಟ್​ಗೆ 7.1 ಓವರ್​ಗಳಲ್ಲಿ 98 ರನ್​ಗಳ ಜೊತೆಯಾಟವನ್ನು ನೀಡಿತು. ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 52 ರನ್ ಬಾರಿಸಿ ಔಟಾದರು.

Source link

ಬಹರೇನ್​ನ ಅಮೆರಿಕನ್ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ; 21 ಸೈನಿಕರ ಹತ್ಯೆ

ಟೆಹರಾನ್, ಮಾರ್ಚ್ 8: ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ನೌಕಾಪಡೆ ಅಥವಾ ಫಿಫ್ಟ್ ಫ್ಲೀಟ್ (US 5th Fleet) ಮೇಲೆ ಇರಾನ್ ಮತ್ತೆ ದಾಳಿ ಎಸಗಿದೆ. ಇರಾನ್​ನ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್​ಗಳು ಅಮೆರಿಕದ ನೌಕೆಗಳ ಮೇಲೆ ಎರಗಿವೆ. ಈ ದಾಳಿಯಲ್ಲಿ 21 ಸೈನಿಕರು ಬಲಿಯಾಗಿದ್ದಾರೆ. ಕಳೆದ ತಿಂಗಳು, ಫೆಬ್ರುವರಿ 28ರಂದು ಕೂಡ ಇದೇ ಫಿಫ್ತ್ ಫ್ಲೀಟ್ ಹೆಡ್​ಕ್ವಾರ್ಟರ್ಸ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಮಿಸೈಲ್​ಗಳು ಮತ್ತು ಶಾಹಿದ್-136 ಡ್ರೋನ್​ಗಳಿಂದ ದಾಳಿ ಮಾಡಲಾಗಿತ್ತು.

ರಾಡಾರ್ ಸೌಕರ್ಯಗಳು, ಸರ್ವಿಸ್ ಕಟ್ಟಡಗಳು, ಸೆಟಿಲೈಟ್ ಕಮ್ಯೂನಿಕೇಶನ್ ಟರ್ಮಿನಲ್​ಗಳು ಸೇರಿದಂತೆ ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ಗೊತ್ತಾಗಿದೆ. ಮೊನ್ನೆ ಮಾರ್ಚ್ 6ರಂದು ಭಾರತಕ್ಕೆ ಬಂದು ವಾಪಸ್ ಹೋಗುತ್ತಿದ್ದ ಇರಾನೀ ಯುದ್ಧನೌಕೆಯೊಂದನ್ನು ಅಮೆರಿಕದ ಟಾರ್ಪಿಡೋ ದಾಳಿಯಲ್ಲಿ ಧ್ವಂಸ ಮಾಡಲಾಗಿದೆ. ಇದರಲ್ಲಿ ಹಲವು ಜನರು ಬಲಿಯಾಗಿದ್ದರು. ಅದರ ಬೆನ್ನಲ್ಲೇ ಇರಾನ್ ಇದೀಗ ಮುಯ್ಯಿ ದಾಳಿಯಾಗಿ ಅಮೆರಿಕದ ಫಿಫ್ಟ್ ಫ್ಲೀಟ್ ಮೇಲೆ ಎರಗಿದೆ.

ಇದನ್ನೂ ಓದಿ: ಇರಾನ್ ಯುದ್ಧ: ಬೆಂಬಲಕ್ಕೆ ಬ್ರಿಟನ್ ಹಿಂದೇಟು; ಇದನ್ನು ಮರೆಯಲ್ಲ ಎಂದ ಟ್ರಂಪ್

ಏನಿದು ಅಮೆರಿಕದ ಫಿಫ್ತ್ ಫ್ಲೀಟ್?

ಅಮೆರಿಕದ ಹಡಗುಗಳ ಪಡೆಗಳಲ್ಲಿ ಒಂದು. ಫಸ್ಟ್ ಫ್ಲೀಟ್, ಸೆಕೆಂಡ್ ಫ್ಲೀಟ್, ಥರ್ಡ್ ಫ್ಲೀಟ್, ಹೀಗೆ 12 ಫ್ಲೀಟ್​ಗಳಿವೆ. ಕೆಲವು ಸಕ್ರಿಯವಾಗಿವೆ, ಕೆಲವು ನಿಷ್ಕ್ರಿಯಗೊಂಡಿವೆ. ಒಂದೊಂದು ಫ್ಲೀಟ್ ಕೂಡ ನಿರ್ದಿಷ್ಟ ಸಮುದ್ರಪ್ರದೇಶದಲ್ಲಿ ಕಣ್ಗಾವಲು ಇಟ್ಟಿರುತ್ತವೆ.

ಫಿಫ್ತ್ ಫ್ಲೀಟ್​ನ ಹೆಡ್​ಕ್ವಾರ್ಟರ್ಸ್ ಬಹರೇನ್​ನಲ್ಲಿದೆ. ಇದರಲ್ಲಿ ಸುಮಾರು 20-25 ಯುದ್ಧ ನೌಕೆಗಳಿವೆ. ಪರ್ಷಿಯಲ್ ಕೊಲ್ಲಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರ ಸೇರಿದಂತೆ 2.5 ಮಿಲಿಯನ್ ಚದರ ಮೈಲುಗಳಷ್ಟು ಸಾಗರ ಪ್ರದೇಶವನ್ನು ಈ ಪಡೆ ಗಮನಿಸುತ್ತಿರುತ್ತದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಾಗಣೆಗೆ ಅಡ್ಡಿ ಇಲ್ಲದಂತೆ ಎಚ್ಚರ ವಹಿಸುವುದು ಸೇರದಂತೆ ಹಲವು ಗುರುತರ ಕಾರ್ಯಗಳನ್ನು ಇದು ಮಾಡುತ್ತದೆ.

ಇದನ್ನೂ ಓದಿ: ಕೊಲ್ಲಿ ದೇಶಗಳ ಮೇಲೆ ಇರಾನ್​ನಿಂದ ಮುಂದುವರಿದ ದಾಳಿ; ಕುವೇತ್ ಏರ್​ಪೋರ್ಟ್ ಮೇಲೂ ದಾಳಿ

ಹಾರ್ಮುಜ್ ಸ್ಟ್ರೇಟ್ ಅನ್ನು ತನ್ನ ಪೂರ್ಣ ಹತೋಟಿಗೆ ತೆಗೆದುಕೊಳ್ಳಲು ಇರಾನ್​ಗೆ ಅಡ್ಡಿಯಾಗಿರುವುದು ಅಮೆರಿಕದ ಈ ಫಿಫ್ತ್ ಫ್ಲೀಟ್ ನೌಕಾಪಡೆ. ಹೀಗಾಗಿ, ಇದನ್ನು ಗುರಿಯಾಗಿಸಿ ಇರಾನ್ ದಾಳಿಗಳನ್ನು ಮಾಡಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

2026 ರ ಟಿ20 ವಿಶ್ವಕಪ್ ಫೈನಲ್ ನಡುವೆ ಬಿಸಿಸಿಐ, ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿಶ್ವ ಕ್ರಿಕೆಟ್​ನ ಅತ್ಯಂತ ಯಶಸ್ವಿ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಇದೇ ಮಾಚ್​ 28 ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ನಡುವೆ ಐಪಿಎಲ್​ನ ಅಧಿಕೃತ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ತನ್ನ ಸೋಶಿಯಲ್ ಮೀಡಯಾ ಖಾತೆಯಲ್ಲಿ ಐಪಿಎಲ್ ಆರಂಭದ ದಿನಾಂಕವನ್ನು ಬಹಿರಂಗಪಡಿಸಿದೆ.

ಪೂರ್ಣ ವೇಳಾಪಟ್ಟಿ ಬಾಕಿ ಇದೆ

ಆದಾಗ್ಯೂ 2026 ರ ಐಪಿಎಲ್​ನ ಪೂರ್ಣ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಆದರೆ ಈ ಆವೃತ್ತಿಯ ಆರಂಭಿಕ ಪಂದ್ಯ ಯಾವಾಗ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ. ಕೆಲವು ದಿನಗಳಿಂದ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಐಪಿಎಲ್ 2026 ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದೆ. ಮೊದಲ ಪಂದ್ಯವು ಕಳೆದ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರನ್ನರ್ ಅಪ್ ಪಂಜಾಬ್ ಕಿಂಗ್ಸ್ ನಡುವೆ ನಡೆಯುವ ಸಾಧ್ಯತೆಯಿದೆ ಎಂದು ವರದಿಗಳಿವೆ.

ಅದೇ ರೀತಿ, ಐಪಿಎಲ್ 2026 ರ ಫೈನಲ್ ಪಂದ್ಯವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಗಳಿವೆ. ಹಾಗೆಯೇ ಈ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಇದರ ಜೊತೆಗೆ, ಒಂದು ಪ್ಲೇಆಫ್ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯುವ ಸಾಧ್ಯತೆಯಿದೆ. ಆದಾಗ್ಯೂ, ಬಿಸಿಸಿಐ ಶೀಘ್ರದಲ್ಲೇ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಅದರಲ್ಲಿ ಪೂರ್ಣ ಚಿತ್ರಣ ಸಿಗಲಿದೆ.

2  ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಬಿಡುಗಡೆ..?

ಈ ಬಾರಿ, ಐಪಿಎಲ್ 2026 ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಘೋಷಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಈಗಾಗಲೇ ಹರಿದಾಡುತ್ತಿದೆ. ಮೊದಲ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಈಗಾಗಲೇ ಅನುಮೋದಿಸಿದೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ವೇಳಾಪಟ್ಟಿಯನ್ನು ಘೋಷಿಸುವಲ್ಲಿ ಸ್ವಲ್ಪ ವಿಳಂಬವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link