ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ, ಮಾರ್ಚ್ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ಮಾಡಿದ್ದಾರೆ. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ…