All posts by nagaraj11081993

ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?

ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?

ಕೋಲಾರ, ಮಾರ್ಚ್​ 08: ಅದು ರಾಜ್ಯ ಹೆದ್ದಾರಿ ಜಿಲ್ಲಾ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಆ ರಸ್ತೆಯಲ್ಲಿ ಬರುವ ಅದೊಂದು ದೊಡ್ಡ ಕೆರೆಯ ಎರಡು ಬದಿಯಲ್ಲಿ ತಡೆಗೋಡೆ ಇಲ್ಲದ ಪರಿಣಾಮ ಭೀಕರ ಅವಘಡವೊಂದು (car accident) ನಡೆದಿದ್ದು, ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್​ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ 1.30 ಸುಮಾರಿನಲ್ಲಿ ಕೋಲಾರ ತಾಲ್ಲೂಕಿನ ತೊರಾಂಡಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್​ ನಲ್ಲಿದ್ದ ತೊರಾಂಡಹಳ್ಳಿ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್​​ ಮೃತಪಟ್ಟಿದ್ದಾರೆ.

ನಡೆದಿದ್ದೇನು?

ಅಷ್ಟಕ್ಕೂ ಆಗಿದ್ದೇನು ಅಂತ ನೋಡುವುದಾದರೆ, ನಾಳೆಯಿಂದ ಕೋಲಾರ ನಗರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಪಿಎಂ ಪಕ್ಷ ರಾಜ್ಯ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಒಂದು ಗಂಟೆವರೆಗೂ ಜಿಲ್ಲಾಧ್ಯಕ್ಷ ಕಾಮ್ರೆಡ್ ವೆಂಕಟೇಶ್ ಹಾಗೂ ಹಲವು ಕಾರ್ಯಕರ್ತರು ನಗರದಲ್ಲಿ ಬ್ಯಾನರ್, ಬಂಟಿಂಗ್ಸ್​​ಗಳನ್ನು ಕಟ್ಟಿ ನಂತರ ವೆಂಕಟೇಶ್,​ ತಮ್ಮ ಇಂಡಿಕಾ ಕಾರಿನಲ್ಲಿ ತಮ್ಮೂರು ತೊರಾಂಡಳ್ಳಿ ಕಡೆಗೆ ಹೊರಟಿದ್ದಾರೆ. ಈ ವೇಳೆ ಮುದುವಾಡಿ ಗ್ರಾಮದ ಬಳಿ ಬರುತ್ತಿರುವಾಗ ತಿರುವಿನಲ್ಲಿ ಕಾರಿಗೆ ಯಾವುದಾದರೂ ವಾಹನ ಡಿಕ್ಕಿ ಹೊಡೆಯಿತೋ ಅಥವಾ ಆಯತಪ್ಪಿತ್ತೋ ಗೊತ್ತಿಲ್ಲ ವೆಂಕಟೇಶ್ ಅವರು ಚಲಾಯಿಸುತ್ತಿದ್ದ ಕಾರು ಕೆರೆಗೆ ಬಿದ್ದಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ವೆಂಕಟೇಶ್ ಕಾರಿನಿಂದ ಹೊರಬರಲು ಪ್ರಯತ್ನ ಮಾಡಿದ್ದಾರೆ, ಆದರೂ ಪ್ರಯೋಜನವಾಗಿಲ್ಲ. ಹೀಗಾಗಿ ವೆಂಕಟೇಶ್ ಕಾರಿನಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಾರು ಅಪಘಾತವಾಗಿ ಕೆರೆಗೆ ಬಿದ್ದಿರುವ ವಿಷಯ ಬೆಳಿಗ್ಗೆ 9 ಗಂಟೆಯವರೆಗೂ ಯಾರಿಗೂ ತಿಳಿದಿಲ್ಲ. ಈ ವೇಳೆ ವೆಂಕಟೇಶ್ ರಾತ್ರಿ ಮನೆಗೆ ಬಂದಿಲ್ಲ. ಅವರ ಮೊಬೈಲ್​ ಕೂಡ ಕೆಲಸ ಮಾಡುತ್ತಿವೆಂದು ಹುಡುಕಾಡುವ ವೇಳೆ ವೆಂಕಟೇಶ್ ಅವರ ಕಾರಿನ ಮುಂಭಾಗದ ನಂಬರ್ ಪ್ಲೇಟ್​ ಇದ್ದ ಮಡ್ ಗಾರ್ಡ್ ಕೆರೆಯ ಕಟ್ಟೆ ಮೇಲೆ ಬದಿಯಲ್ಲಿ ಬಿದ್ದಿತ್ತು, ಅದನ್ನ ನೋಡಿದ ಕೆಲವರು ಕೆರೆಯಲ್ಲಿ ನೋಡಲಾಗಿ ಕಾರಿನಿಂದ ಡೀಸೆಲ್​ ಲೀಕ್​ ಆಗುತ್ತಿರುವುದು ಕಂಡುಬಂದಿದೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ ನಂತರ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕೆರೆಯಲ್ಲಿ ಕಾರು ಹಾಗೂ ವೆಂಕಟೇಶ್​ ಶವ ಇರುವುದು ತಿಳಿದು ಬಂದಿದೆ.

ಅಧಿಕಾರಿಗಳ ನಿರ್ಲ್ಯಕ್ಷ: ಕೆರೆಗಿಲ್ಲ ತಡೆಗೋಡೆ 

ಇನ್ನು ಕೋಲಾರ ತಾಲ್ಲೂಕಿನ ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲೇ ದೊಡ್ಡ ಕೆರೆ. ಈ ರಸ್ತೆ ಕೋಲಾರ ಮತ್ತು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ. ಆಂಧ್ರದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ ಇದಾಗಿದ್ದು, ಇಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲ್ಯಕ್ಷ ಹಾಗೂ ಕೆರೆಯನ್ನು ನಿರ್ವಹಣೆ ಮಾಡುವ ಸಣ್ಣ ನೀರಾವರಿ ಇಲಾಖೆ ನಿರ್ಲ್ಯಕ್ಷದಿಂದ ಮುದುವಾಡಿ ಕರೆಯ ಮೇಲೆ ತಡೆಗೋಡೆ ನಿರ್ಮಾಣ ಮಾಡದೆ ಇರುವುದು ಇಂಥಾದೊಂದು ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆ ಇದಾಗಿದ್ದು, ಮುದುವಾಡಿ ಕೆರೆಯ ಕಟ್ಟೆಯ ಮೇಲೆ ತಡೆಗೋಡೆ ನಿರ್ಮಾಣ ಮಾಡುವ ಜೊತೆಗೆ ರಸ್ತೆ ಅಗಲೀಕರಣ ಮಾಡುವ ಕೆಲಸ ಮಾಡಬೇಕಿತ್ತು. ಆದರೆ ಹಲವು ವರ್ಷಗಳಿಂದ ಈ ರಸ್ತೆ ಕಿರಿದಾಗಿದ್ದು, ಕೆರೆಗೆ ತಡೆಗೋಡೆ ಇಲ್ಲದಿರುವುದು ಈ ಅಪಘಾತಕ್ಕೆ ಕಾರಣ. ಒಂದು ವೇಳೆ ತಡೆಗೋಡೆ ಇದ್ದಿದ್ದರೆ ವೆಂಕಟೇಶ್ ಸಾವಾಗುತ್ತಿರಲಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಕಾರು ಅಪಘಾತದ ಕುರಿತು ಅನುಮಾನ?

ಇನ್ನು ಕಳೆದ ರಾತ್ರಿ ವೆಂಕಟೇಶ್ ಅವರಿದ್ದ ಕಾರು ಅಪಘಾತದ ಕುರಿತು ಕೂಡ ಅನುಮಾನ ವ್ಯಕ್ತವಾಗಿದೆ. ವೆಂಕಟೇಶ್ ಅವರಿದ್ದ ಕಾರು ತಾವಾಗಿ ಆಯತಪ್ಪಿ ಅಪಘಾತಕ್ಕೀಡಾಯಿತಾ ಅಥವಾ ಯಾವುದಾದರೂ ವಾಹನ ಡಿಕ್ಕಿಯಾಗಿ ಅವಘಡ ಸಂಭವಿಸಿದೆಯಾ ಅನ್ನೋದರ ಕುರಿತು ತನಿಖೆ ನಡೆಯಬೇಕಿದೆ. ಜೊತೆಗೆ ಕೂಡಲೇ ಈ ಕೆರೆಗೆ ಕಟ್ಟೆಯ ಮೇಲಿನ ರಸ್ತೆ ಅಗಲೀಕರಣ ಮಾಡಿ ಕೆರೆಯ ಎರಡೂ ಕಡೆ ತಡೆಗೋಡೆ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್​​ ಶಾಕ್​​ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಒಟ್ಟಾರೆ ತಮ್ಮ ಜೀವನದುದ್ದಕ್ಕೂ ಹತ್ತಾರು ಹೋರಾಟಗಳನ್ನು ಮಾಡಿ ಹತ್ತಾರು ಸಮಸ್ಯೆಗೆ ಪರಿಹಾರ ಕೊಡಿಸಿದ್ದ ವೆಂಕಟೇಶ್ ಅವರು ಸಾವಿಗೀಡಾಗಿದ್ದಾರೆ. ಅವರ ಸಾವಿನ ಮೂಲಕವಾದರೂ ಮುದುವಾಡಿ ಕೆರೆಗೆ ತಡೆಗೋಡೆ ನಿರ್ಮಾಣ ಮಾಡಿ ಮುಂದೆ ಆಗಬಹುದಾದ ಅಪಘಾತಗಳಿಗೆ ಶಾಶ್ವತ ಪರಿಹಾರ ಸೂಚಿಸುವ ಮೂಲಕ ಹೋರಾಟಗಾರನ ಸಾವಿಗೆ ನ್ಯಾಯ ಒದಗಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

Source link

ಟ್ರಂಪ್ ಮಗನ ಜತೆಗೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​? ಫೋಟೋ ವೈರಲ್

ಅಂತರಾಷ್ಟ್ರೀಯ ರಾಜಕೀಯದ ಇಬ್ಬರು ಪ್ರಭಾವಿ ವ್ಯಕ್ತಿಗಳ ಮಕ್ಕಳನ್ನು ಜೋಡಿಸಿ ನೆಟ್ಟಿಗರು ಹೊಸದೊಂದು ಡಿಜಿಟಲ್ ಲವ್​​ ಸ್ಟೋರಿಯನ್ನು ಸೃಷ್ಟಿಸಿದ್ದಾರೆ. ಇಬ್ಬರ ಸಿದ್ಧಾಂತಗಳೇ ಬೇರೆ, ಆಡಳಿತ ಕೂಡ ಬೇರೆಯಾಗಿರುವಾಗ ಈ ಮದುವೆ ಹೇಗೆ ಸಾಧ್ಯ ಎಂಬ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿರಿಯ ಪುತ್ರ 19 ವರ್ಷದ ಬ್ಯಾರನ್ ಟ್ರಂಪ್ ಮತ್ತು ಕಿಮ್ ಜೊಂಗ್ ಉನ್ ಅವರ ಹದಿಹರೆಯದ ಪುತ್ರಿ ಕಿಮ್ ಜು ಏ ನಡುವೆ ಸಂಬಂಧವಿದೆ ಎಂಬಂತೆ ಬಿಂಬಿಸುವ ಮೀಮ್‌ಗಳು ಈಗ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿವೆ. ಇವರಿಬ್ಬರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಡಿದೆ. ಇನ್ನು ಇಸ್ರೇಲ್​​ ಹಾಗೂ ಅಮೆರಿಕ ಇರಾನ್ ಮೇಲೆ ದಾಳಿ ಮಾಡಿದ್ದಾರೆ. ಈ ಕಾರಣಕ್ಕೆ ಉತ್ತರ ಕೊರಿಯಾ ನಮಗೆ ಬೆಂಬಲ ನೀಡಬೇಕು ಎಂಬ ಉದ್ದೇಶದಿಂದ ಟ್ರಂಪ್​​ ಈ ಸಂಬಂಧ ಬೆಳೆಸಿಕೊಂಡಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

ಟ್ರಂಪ್ ಮತ್ತು ಕಿಮ್ ಜೊಂಗ್ ಉನ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ, ನೆಟ್ಟಿಗರು ಈಗ ಅವರ ಮಕ್ಕಳನ್ನು ಇಟ್ಟುಕೊಂಡು “ರೋಮಿಯೋ-ಜೂಲಿಯೆಟ್” ಮಾದರಿಯ ಮೀಮ್‌ಗಳನ್ನು ತಯಾರಿಸುತ್ತಿದ್ದಾರೆ. ಎಐ (AI) ಮೂಲಕ ಸೃಷ್ಟಿಸಲಾದ ಚಿತ್ರಗಳಲ್ಲಿ ಬ್ಯಾರನ್ ಮತ್ತು ಕಿಮ್ ಜು ಏ ಒಟ್ಟಿಗೆ ಇರುವುದನ್ನು ತೋರಿಸಲಾಗುತ್ತಿದೆ. “ಜಗತ್ತಿನ ಎರಡು ಬದ್ಧ ವೈರಿ ರಾಷ್ಟ್ರಗಳನ್ನು ಈ ಪ್ರೇಮಕಥೆ ಒಂದು ಮಾಡಬಹುದು” ಎಂಬ ಹಾಸ್ಯದ ಸಾಲುಗಳೊಂದಿಗೆ ಈ ಚಿತ್ರಗಳು ಹಂಚಿಕೆಯಾಗುತ್ತಿವೆ.

ಇದನ್ನೂ ಓದಿ: ನನ್ನ ಬಳಿ ಅತ್ಯಾಧುನಿಕ ಕ್ಷಿಪಣಿಗಳು ಇದ್ರೂ ಯಾರೂ ಯುದ್ಧಕ್ಕೆ ಕರೆಯುತ್ತಿಲ್ಲವಲ್ಲ: ಟ್ರಂಪ್​ ಮಾಮ ಪ್ಲೀಸ್​​ ಒನ್ ಚಾನ್ಸ್​​​​​

ಇಲ್ಲಿದೆ ನೋಡಿ ವೈರಲ್​ ಪೋಸ್ಟ್:

ಎಕ್ಸ್ (X), ಇನ್‌ಸ್ಟಾಗ್ರಾಮ್ ಮತ್ತು ರೆಡ್ಡಿಟ್‌ನಂತಹ ವೇದಿಕೆಗಳಲ್ಲಿ ಈ ಮೀಮ್‌ಗಳು ಮಿಲಿಯನ್‌ಗಟ್ಟಲೆ ವೀಕ್ಷಣೆ ಪಡೆದಿವೆ. ವಿಶೇಷವಾಗಿ ಇಬ್ಬರೂ ನಾಯಕರು ಇತ್ತೀಚೆಗೆ ರಾಜತಾಂತ್ರಿಕವಾಗಿ ಚರ್ಚೆಯಲ್ಲಿರುವುದರಿಂದ ಈ ಮೀಮ್‌ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ. ಇದು ಕೇವಲ ಇಂಟರ್ನೆಟ್ ಬಳಕೆದಾರರ ಕಲ್ಪನೆ ಮತ್ತು ತಮಾಷೆಯಷ್ಟೇ. ಬ್ಯಾರನ್ ಟ್ರಂಪ್ ಸದ್ಯ ಅಮೆರಿಕದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರೆ, ಕಿಮ್ ಜು ಏ ಉತ್ತರ ಕೊರಿಯಾದಲ್ಲಿ ತನ್ನ ತಂದೆಯ ಉತ್ತರಾಧಿಕಾರಿಯಾಗಿ ಸಿದ್ಧಗೊಳ್ಳುತ್ತಿದ್ದಾರೆ. ಇವರಿಬ್ಬರ ನಡುವೆ ಯಾವುದೇ ರೀತಿಯ ವೈಯಕ್ತಿಕ ಪರಿಚಯ ಅಥವಾ ಸಂಬಂಧವಿಲ್ಲ ಎಂಬುದು ಸ್ಪಷ್ಟ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ಪರಾಭವನಾಮ ಸಂವತ್ಸರದ ತುಲಾ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಶುಕ್ರ ಅಧಿಪತಿಯಾದ ತುಲಾ ರಾಶಿಯವರಿಗೆ (ಚಿತ್ತಾ, ಸ್ವಾತಿ, ವಿಶಾಖ ನಕ್ಷತ್ರ) ಈ ವರ್ಷ ಬಹಳಷ್ಟು ಅದೃಷ್ಟಗಳು ಕೂಡಿಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ, ಅನೇಕ ಹೊಸ ಅವಕಾಶಗಳು ಲಭಿಸುತ್ತವೆ. ರೈತರು, ವ್ಯಾಪಾರಸ್ಥರು, ಉದ್ಯೋಗದಲ್ಲಿರುವವರಿಗೆ ಶುಭಫಲಗಳಿವೆ. ಕೆಲವರಿಗೆ ಸರ್ಕಾರಿ ನೌಕರಿ ಮತ್ತು ಬಡ್ತಿ ಲಭಿಸುತ್ತದೆ ಎಂದು ಸಲಹೆ ನೀಡಿದ್ದಾರೆ.

ಆರೋಗ್ಯದಲ್ಲಿ ಚೇತರಿಕೆ ಮತ್ತು ತಂದೆ-ತಾಯಿಗಳಿಂದ ಆಶೀರ್ವಾದ ಸಿಗಲಿದೆ. ವಿದ್ಯಾರ್ಥಿಗಳು, ರೈತರು, ವ್ಯಾಪಾರಸ್ಥರಿಗೆ ಉತ್ತಮ ಫಲಗಳಿವೆ. ಆತಂಕಗಳು ಮತ್ತು ಒತ್ತಡಗಳು ಕಡಿಮೆಯಾಗುತ್ತವೆ, ಆಸ್ತಿ ಕಲಹಗಳು ಇತ್ಯರ್ಥವಾಗುತ್ತವೆ. ಕಾನೂನು ವಿಷಯಗಳಲ್ಲಿ ಜಯ ಲಭಿಸುತ್ತದೆ ಮತ್ತು ಸಂತಾನ ಯೋಗವೂ ಇದೆ. ಮಹಿಳೆಯರಿಗೆ ವಿವಾಹ ವಿಷಯಗಳಲ್ಲಿ ಮೋಸ ಹೋಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ. ಪ್ರೇಮ ವ್ಯವಹಾರಗಳಲ್ಲಿಯೂ ಅಡೆತಡೆಗಳಿರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು ರಿವೀಲ್​ ಆಗಿದೆ.

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದವ ಲಾಕ್​

ಹೊಂಬೇಗೌಡ ಮನೆಯಲ್ಲಿ ನಡೆದ ದರೋಡೆ ಹಿಂದೆ ಅವರ ಪ್ರಾಣ ಸ್ನೇಹಿತ ಬೆಟ್ಟೇಗೌಡ ಎಂಬಾತನ ಪಾತ್ರ ಇರೋದೀಗ ಬಯಲಾಗಿದೆ. ಸೈಟ್​​ ಮಾರುವ ಸಂಬಂಧ ಸ್ಟಾಂಪ್ ವೆಂಡರ್ ಆಗಿರುವ ಬೆಟ್ಟೇಗೌಡನ ಬಳಿಯೇ ಹೊಂಬೇಗೌಡರು ಪೇಪರ್​​ ಮಾಡಿಸಿದ್ದರು. ಹೀಗಾಗಿ ಸ್ನೇಹಿತನ ಬಳಿ ಸೈಟ್ ಮಾರಿದ ಹಣ ಇದೆ‌ ಎಂದು ತಿಳಿದಿದ್ದ ಆರೋಪಿ, ದರೋಡೆ ಮಾಡುವಂತೆ ಜೈಲಿಂದ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ನಾಗೇಂದ್ರನಿಗೆ ಐಡಿಯಾ ಕೊಟ್ಟಿದ್ದ. ಶಿವಾಜಿನಗರದಲ್ಲಿ ಶೂಟಿಂಗ್​​ಗೆ ಎಂದು ಹೇಳಿ ಸಬ್ ಇನ್ಸ್​​ಪೆಕ್ಟರ್ ಡ್ರೆಸ್ ಬಾಡಿಗೆಗೆ ತಂದಿದ್ದ ನಾಗೇಂದ್ರ, ಅದೇ ಡ್ರೆಸ್​​ ಹಾಕಿಕೊಂಡು ಮನೆಗೆ ನುಗ್ಗಿ ದರೋಡೆ ನಡೆಸಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​; ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಘಟನೆ ಏನಾಗಿತ್ತು?

ಹೊಂಬೇಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ ಪೊಲೀಸರಂತೆ ವೇಷಧರಿಸಿ ಮನೆಗೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು , ತಾವು ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ತಿಳಿಸಿದ್ದರು. ಇವರು ಬ್ಯಾಗ್​​ ಮತ್ತು ಡೈರಿಯನ್ನೂ ಹಿಡಿದು ಬಂದಿದ್ದ ಕಾರಣ ಆರಂಭದಲ್ಲಿ ಮನೆಯವರೂ ಆರೋಪಿಗಳ ಮಾತು ನಂಬಿದ್ದರು. ಆದರೆ ಬಳಿಕ ಆರೋಪಿಗಳು ವೃದ್ಧ ದಂಪತಿಯನ್ನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿದ್ದರು. ಅಲ್ಲದೆ ಅವರ ಕೈಕಾಲುಗಳನ್ನು ಕಟ್ಟಿ. ನಗದು ಮತ್ತು ಚಿನ್ನಾಭರಣ ದೋಚಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ, ಮಾರ್ಚ್​​ 08: ಹಾಸ್ಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆ ಕುರಿತು ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್​ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಇತರೆ ವಿದ್ಯಾರ್ಥಿಗಳ ಮೇಲೆ ರಾಡ್​​ನಿಂದ ಹಲ್ಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ಗಾಯಗೊಂಡಿದ್ದ ಓರ್ವ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಹಲ್ಲೆ ಬಾಲಕ ಎಸ್ಕೇಪ್ ಆಗಿರುವ ಬಾಲಕನಿಗಾಗಿ ನಗರದ ವಿವಿಧ ಕಡೆಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನೂ ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಪರಾಭವ ನಾಮ ಸಂವತ್ಸರದ ಕಟಕ ರಾಶಿ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಕಟಕ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರಲಿವೆ. ಗುರು ಒಂದರಿಂದ ಎರಡನೇ ಮನೆಗೆ ಸಾಗಿದರೆ, ಶನಿಗ್ರಹ ವರ್ಷವಿಡೀ ಒಂಬತ್ತನೇ ಮನೆಯಲ್ಲಿ ಸಂಚರಿಸಲಿದೆ. ರಾಹು ಎಂಟರಿಂದ ಏಳಕ್ಕೆ, ಕೇತು ಒಂದರಿಂದ ಎರಡನೇ ಮನೆಗೆ ಚಲಿಸಲಿದೆ. ವರ್ಷದ ಕಡೆಯ ಭಾಗದಲ್ಲಿ ಕೇತು ಗ್ರಹ ಜನ್ಮಕ್ಕೆ ಬರುವುದು ಹೋರಾಟದ ಬದುಕನ್ನು ಸೂಚಿಸುತ್ತದೆ.

ಆದಾಯ ಎಂಟು ಪಾಲು ಮತ್ತು ವ್ಯಯ ಎರಡು ಪಾಲು ಇರುವುದರಿಂದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಅಲ್ಪ ಸಮಸ್ಯೆಗಳು ಎದುರಾದರೂ, ಸುಖ ಏಳು ಮತ್ತು ದುಃಖ ನಾಲ್ಕು ಪ್ರಮಾಣದಲ್ಲಿರುತ್ತದೆ. ವ್ಯಾಪಾರದಲ್ಲಿ ಕಿರಿಕಿರಿಗಳು, ರಾಜಕೀಯದಲ್ಲಿ ಹಿನ್ನಡೆ, ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮಾನಸಿಕ ಒತ್ತಡ ಎದುರಾಗಬಹುದು. ಆದಾಗ್ಯೂ, ಜುಲೈ-ಆಗಸ್ಟ್ ನಂತರ ಆಕಸ್ಮಿಕ ಧನಯೋಗವಿದೆ. ವಾಹನ ಯೋಗ ಉತ್ತಮವಾಗಿದ್ದು, ರೈತಾಪಿ ವರ್ಗದವರಿಗೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಶುಭವಾಗಲಿದೆ. ಮಕ್ಕಳ ವಿಚಾರ, ವಿವಾಹ ಮತ್ತು ಧರ್ಮ ಕಾರ್ಯಗಳಲ್ಲಿ ಶುಭಫಲಗಳಿವೆ. ಹಣಕಾಸಿನ ಮುಗ್ಗಟ್ಟುಗಳನ್ನು ಎದುರಿಸಬೇಕಾದರೂ, ಸಿಕ್ಕಿಬಿದ್ದ ಹಣದಲ್ಲಿ ಶೇ.50 ಮರಳಿ ಬರಲಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಕನ್ನಡ ಟ್ರೇಲರ್: ಕರ್ನಾಟಕದಲ್ಲಿ ಮೋಡಿ ಮಾಡುತ್ತಾ ರಣವೀರ್ ಸಿಂಗ್ ಸಿನಿಮಾ?

ಕಳೆದ ವರ್ಷ ‘ಧುರಂಧರ್’ ಸಿನಿಮಾ ಕೇವಲ ಹಿಂದಿಯಲ್ಲಿ ಬಿಡುಗಡೆ ಆಗಿತ್ತು. ಹಾಗಿದ್ದರೂ ಕೂಡ ಆ ಸಿನಿಮಾಗೆ ದೇಶಾದ್ಯಂತ ಮೆಚ್ಚುಗೆ ಸಿಕ್ಕಿತ್ತು. ಈಗ ಅದರ ಸೀಕ್ವೆಲ್ ಬರುತ್ತಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿದೆ ಎಂಬುದು ವಿಶೇಷ. ಹಿಂದಿ ಜೊತೆಗೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಆ ಮೂಲಕ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರೇಕ್ಷಕರನ್ನು ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಲಿದೆ.

ಮಾರ್ಚ್ 18ರ ಸಂಜೆಯೇ ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶುರುವಾಗಲಿದೆ. ಈ ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಟಿಕೆಟ್ ಬುಕಿಂಗ್ ಶುರುವಾದ ಕೆಲವೇ ಗಂಟೆಗಳಲ್ಲಿ ಬಹುಕೋಟಿ ರೂಪಾಯಿ ಬೆಲೆಯ ಟಿಕೆಟ್​ಗಳು ಮಾರಾಟ ಆಗಿವೆ. ಬಾಕ್ಸ್ ಆಫೀಸ್​​ನಲ್ಲಿ ಮೊದಲ ದಿನವೇ ಈ ಸಿನಿಮಾ ಹೊಸ ಇತಿಹಾಸ ಬರೆಯುವ ಲಕ್ಷಣ ಕಾಣಿಸುತ್ತಿದೆ.

‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್, ಸಂಜಯ್ ದತ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಮೊದಲ ಪಾರ್ಟ್ ಭಾರಿ ಕಲೆಕ್ಷನ್ ಮಾಡಿದ್ದರಿಂದ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಇದೆ. ಟ್ರೇಲರ್ ನೋಡಿದ ಬಳಿಕ ನಿರೀಕ್ಷೆ ಡಬಲ್ ಆಗಿದೆ.

‘ಧುರಂಧರ್ 2’ ಕನ್ನಡ ಟ್ರೇಲರ್:

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾದ ಜೊತೆ ‘ಟಾಕ್ಸಿಕ್’ ಸಿನಿಮಾ ಕೂಡ ಬಿಡುಗಡೆ ಆಗಬೇಕಿತ್ತು. ಆದರೆ ಇಸ್ರೇಲ್, ಅಮೆರಿಕಾ, ಇರಾನ್ ನಡುವಿನ ಯುದ್ಧದ ಪರಿಣಾಮದಿಂದಾಗಿ ‘ಟಾಕ್ಸಿಕ್’ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಯಿತು. ಆದ್ದರಿಂದ ‘ಧುರಂಧರ್ 2’ ಸಿನಿಮಾಗೆ ದೊಡ್ಡ ಅನುಕೂಲ ಆಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

ಕರ್ನಾಟಕದಲ್ಲಿ ‘ಧುರಂಧರ್ 2’ ಸಿನಿಮಾಗೆ ಟಫ್ ಸ್ಪರ್ಧೆ ನೀಡಲು ಯಾವುದೇ ಸಿನಿಮಾಗಳು ಇಲ್ಲ. ಹಾಗಾಗಿ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಚಿತ್ರಕ್ಕೆ ಬಾರಿ ಕಲೆಕ್ಷನ್ ಆಗುವ ನಿರೀಕ್ಷೆ ಇದೆ. ಟಿಕೆಟ್ ಬೆಲೆ ಗಗನಕ್ಕೇರಿದೆ. ಆದರೂ ಕೂಡ ಜನರು ಮುಗಿಬಿದ್ದು ಟಿಕೆಟ್ ಖರೀದಿಸುತ್ತಿದ್ದಾರೆ. ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಮಾಯಿ ಆಗಲಿದೆ ಎಂಬುದಕ್ಕೆ ಈ ಮೂಲಕ ಸುಳಿವು ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ಬೆಂಗಳೂರು, ಮಾರ್ಚ್​​ 08: ಜಯಮಹಲ್‌ ಬಳಿ  ಹಿಟ್ ಆ್ಯಂಡ್​ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್​​ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗಾಗಿ ತೀವ್ರ ಶೋಧ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇರಾನ್ ಯುದ್ಧ: ಬೆಂಬಲಕ್ಕೆ ಬ್ರಿಟನ್ ಹಿಂದೇಟು; ಇದನ್ನು ಮರೆಯಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 8: ಇರಾನ್ ಯುದ್ಧದಲ್ಲಿ ಬ್ರಿಟನ್ ವರ್ತನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಸಮಾಧಾನ ಹೊಂದಿದ್ದಾರೆ. ಮಧ್ಯಪ್ರಾಚ್ಯದತ್ತ ಎರಡು ವಿಮಾನ ವಾಹಕಗಳನ್ನು (Aircraft Carrier) ಕಳುಹಿಸಲು ಗಂಭೀರವಾಗಿ ಯೋಚಿಸುತ್ತಿರುವುದಾಗಿ ಬ್ರಿಟನ್ ನೀಡಿರುವ ಹೇಳಿಕೆಯನ್ನು ಟ್ರಂಪ್ ಲೇವಡಿ ಮಾಡಿದ್ದಾರೆ. ಯುದ್ಧವೇ ಮುಗಿಯುತ್ತಿದೆ. ಈಗ್ಯಾಕೆ ಇವರ ನೆರವು. ಇವರ ಈ ಬುದ್ಧಿಯನ್ನು ಯಾವತ್ತೂ ನೆನಪಲ್ಲಿಟ್ಟಿರುತ್ತೇನೆ ಎಂದು ಅಮೆರಿಕ ಅಧ್ಯಕ್ಷರು ಗುಡುಗಿದ್ದಾರೆ.

ಕಳೆದ ಕೆಲ ದಿನಗಳಿಂದ ಡೊನಾಲ್ಡ್ ಟ್ರಂಪ್ ಅವರು ಬ್ರಿಟಿಷ್ ಪ್ರಧಾನಿ ಕೇರ್ ಸ್ಟಾರ್ಮರ್ (Keir Starmer) ಅವರನ್ನು ಟೀಕಿಸುತ್ತಲೇ ಇದ್ದಾರೆ. ಇರಾನ್ ಮೇಲೆ ದಾಳಿ ಮಾಡಲು ಅಮೆರಿಕಕ್ಕೆ ಬ್ರಿಟನ್ ನೆಲೆಗಳನ್ನು ನೀಡಲು ಅಸಮ್ಮತಿಸಿದ ಬಳಿಕ ಟ್ರಂಪ್ ವ್ಯಗ್ರಗೊಂಡಿದ್ದಾರೆ.

ಐತಿಹಾಸಿಕವಾಗಿ ನಿಕಟ ಸಂಬಂಧ ಇರುವ ದೇಶಗಳನ್ನು ಹಾಳು ಮಾಡಲು ಬ್ರಿಟನ್ ಪ್ರಧಾನಿ ಕೇರ್ ಸ್ಟಾರ್ಮರ್ ಸಹಾಯವಾಗಿದ್ದಾರೆ ಎಂದು ಟ್​ರಂಪ್ ಬಾರಿ ಬಾರಿ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಕೊಲ್ಲಿ ದೇಶಗಳ ಮೇಲೆ ಇರಾನ್​ನಿಂದ ಮುಂದುವರಿದ ದಾಳಿ; ಕುವೇತ್ ಏರ್​ಪೋರ್ಟ್ ಮೇಲೂ ದಾಳಿ

‘ಒಂದು ಕಾಲದಲ್ಲಿ ನಮ್ಮ ದೊಡ್ಡ ಮಿತ್ರನಾಗಿದ್ದ, ನಮ್ಮ ಮಿತ್ರರಲ್ಲೇ ಅತಿಹೆಚ್ಚಿನವರಾಗಿದ್ದ ಯುನೈಟೆಡ್ ಕಿಂಗ್ಡಂ ಕೊನೆಗೂ ಮಧ್ಯಪ್ರಾಚ್ಯಕ್ಕೆ ಎರಡು ಏರ್​ಕ್ರಾಫ್ಟ್ ಕ್ಯಾರಿಯರ್​ಗಳನ್ನು ಕಳುಹಿಸಲು ಗಂಭೀರವಾಗಿ ಯೋಚಿಸುತ್ತಿದ್ದಾರೆ. ಪರವಾಗಿಲ್ಲ ಪ್ರಧಾನಿ ಸ್ಟಾರ್ಮರ್ ಅವರೆ, ನಮಗೆ ಅವುಗಳ ಅವಶ್ಯಕತೆ ಈಗ ಇಲ್ಲ. ಆದರೆ, ಇದು ನೆನಪ್ಪಿರುತ್ತದೆ. ನಾವು ಈಗಾಗಲೇ ಯುದ್ಧ ಗೆದ್ದಾದ ಬಳಿಕ ನೆರವಾಗಲು ಬರುವ ಜನರ ಅವಶ್ಯಕತೆ ಇಲ್ಲ’ ಎಂದು ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಸೇನಾ ನೆಲೆಗಳನ್ನು ಬಳಸಲು ಅಮೆರಿಕಕ್ಕೆ ನಿರಾಕರಿಸಿದ್ಯಾಕೆ?

ಇರಾನ್ ಮೇಲೆ ದಾಳಿಗಳನ್ನು ಮಾಡಲು ಬ್ರಿಟಿಷ್ ನೆಲೆಗಳನ್ನು ಬಳಸಲು ಅಮೆರಿಕ ಮುಂದಾಗಿತ್ತು. ಆದರೆ, ಅದಕ್ಕೆ ಅವಕಾಶ ಕೊಡಲಿಲ್ಲ. ಸರಿಯಾಗಿ ಯೋಜಿಸಲಾಗಿದೆಯಾ ಮತ್ತು ಕಾನೂನಾತ್ಮಕವಾಗಿದೆಯಾ ಎಂಬುದು ಮನವರಿಕೆ ಆದರೆ ಮಾತ್ರ ಸೇನಾ ನೆಲೆಗಳನ್ನು ಬಳಸಲು ಅನುಮತಿಸಬಹುದು ಎಂಬುದು ಬ್ರಿಟನ್ ನಿಲುವು. ಆದರೆ, ರಕ್ಷಣಾ ಉದ್ದೇಶಕ್ಕೆ ಸೇನಾ ನೆಲೆಗಳನ್ನು ಬಳಸಲು ನಂತರ ಅನುಮತಿಸಿತ್ತು ಬ್ರಿಟನ್.

ಇದನ್ನೂ ಓದಿ: “ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ಬ್ರಿಟನ್ ಮಾತ್ರವಲ್ಲ, ಹಲವು ಐರೋಪ್ಯ ದೇಶಗಳು ಅಮೆರಿಕದೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿವೆ. ಗ್ರೀನ್​ಲ್ಯಾಂಡ್ ಅನ್ನು ಅಮೆರಿಕ ಖರೀದಿಸುವ ಪ್ರಸ್ತಾಪವನ್ನು ಅನೇಕ ಐರೋಪ್ಯ ದೇಶಗಳು ವಿರೋಧಿಸಿವೆ. ಅದರಲ್ಲೂ ಬ್ರಿಟನ್​ನಿಂದ ತೀವ್ರ ಪ್ರತಿರೋಧ ಬಂದಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link