ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್
ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government) ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು…ಬಿಸಿಲಿನ ತಾಪಮಾನದ (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ…