ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed
ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ(Accident) ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ….