ಬೆಂಗಳೂರು ಪ್ರಯಾಣಿಕರೇ ಎಚ್ಚರ! ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ – Kannada News | Bangalore BMTC: Prevent Mobile Theft on Buses with These Smart Security Measures
ಬೆಂಗಳೂರು, ಮೇ.15: ಸಿಲಿಕಾನ್ ಸಿಟಿಯ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಯುವಕನೊಬ್ಬ ಸ್ವಯಂಪ್ರೇರಿತನಾಗಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ಸಿನ ಒಳಗೆ ಪ್ರಯಾಣಿಕರನ್ನು ಉದ್ದೇಶಿಸಿ ಮಾತನಾಡಿದ ಆತ, ಮೊಬೈಲ್ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಪ್ರಮುಖ ಸುರಕ್ಷತಾ ಕ್ರಮಗಳನ್ನು ಹಂಚಿಕೊಂಡಿದ್ದಾರೆ. ಮೊಬೈಲ್ ಫೋನ್ ಅನ್ನು ಡ್ರೆಸ್‌ನ ಜೇಬಿನಲ್ಲಿ ಇಡುವ ಬದಲು, ಹ್ಯಾಂಡ್‌ಬ್ಯಾಗ್‌ನಲ್ಲಿ ಸುರಕ್ಷಿತವಾಗಿ ಇರಿಸಿ. ಬ್ಯಾಗ್‌ನ ಜಿಪ್ ಲಾಕ್ ಬಗ್ಗೆ ಗಮನವಿರಲಿ. ಬಸ್ಸಿನಲ್ಲಿ ಪ್ರಯಾಣಿಸುವಾಗ ಅಥವಾ ಹತ್ತುವಾಗ ಮೊಬೈಲ್ ಅನ್ನು ಕೈಯಲ್ಲೇ…