nagaraj11081993

Womenʼs Day Wishes: ನಿಮ್ಮ ಜೀವನವನ್ನು ಬೆಳಗಿದ ಸ್ತ್ರೀಶಕ್ತಿಗೆ ಈ ರೀತಿ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿ

ಮಹಿಳೆ (Women) ಎಂದರೆ ಶಕ್ತಿ, ಮಹಿಳೆ ಎಂದರೆ ಧೈರ್ಯ, ಮಹಿಳೆ ಎಂದರೆ ಪ್ರೀತಿ, ಮಹಿಳೆ ಎಂದರೆ ಕಾಳಜಿ. ತಾಯಿಯಾಗಿ, ಸಹೋದರಿಯಾಗಿ, ಗೆಳತಿಯಾಗಿ, ಮಡದಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಆಕೆ ಜೀವವನ್ನು ನೀಡುವುದರ ಜೊತೆಗೆ ಜೀವನಕ್ಕೆ ಶಕ್ತಿ ತುಂಬುವವಳು. ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುವವಳು. ಈ ಸ್ತ್ರೀ ಶಕ್ತಿಗೆ ಧನ್ಯವಾದ ತಿಳಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಶುಭ ದಿನ ನಿಮ್ಮ ಜೀವನಕ್ಕೂ…

Read More

ಹಾರ್ದಿಕ್ ಪಾಂಡ್ಯ ಅಂದ್ರೆ ‘ಕ್ಲಚ್’ ಎಂದ ಹಾರ್ದಿಕ್ ಪಾಂಡ್ಯ

T20 World Cup 2026: “ಕ್ಲಚ್ ಅಂದ್ರೆ ಹಾರ್ದಿಕ್ ಪಾಂಡ್ಯ” (Clutch is Hardik Pandya) ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಹಾರ್ದಿಕ್ ಪಾಂಡ್ಯ. 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಹಾರ್ದಿಕ್ ಪಾಂಡ್ಯ ಸ್ವತಃ ತಮ್ಮನ್ನು ಕ್ಲಚ್ ಆಟಗಾರ ಎಂದು ಕರೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರ…

Read More

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿ, ಮಾರ್ಚ್​​ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Video: ಪ್ರಧಾನಿಯೊಂದಿಗಿನ ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ

ಜಪಾನ್, ಮಾರ್ಚ್​ 08: ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ  ದೇಶದ ಜನತೆ ಬಳಿ ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು….

Read More

ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್

T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ‘ಸದ್ದಡಗಿಸುವುದು’ ಸಖತ್ ಸದ್ದು ಮಾಡುತ್ತಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್. ಟಿ20 ವಿಶ್ವಕಪ್​ ಫೈನಲ್ ಪಂದ್ಯದ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ…

Read More

ಏನಾದ್ರು ಹೊಸ ಡೈಲಾಗ್ ಹೇಳ್ರಪ್ಪಾ… ಸೂರ್ಯಕುಮಾರ್ ಯಾದವ್ ತಿರುಗೇಟು

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ನಡೆದ ‘ಕ್ಯಾಪ್ಟನ್ಸ್ ಪ್ರೆಸ್​ಮೀಟ್’​​ ನಾಯಕರುಗಳ ವಾಕ್ಸಮರಕ್ಕೆ ಸಾಕ್ಷಿಯಾಗಿದೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ‘ಅಹಮದಾಬಾದ್​​ನ ಸ್ಟೇಡಿಯಂನಲ್ಲಿ ಪ್ರೇಕ್ಷಕರನ್ನು ಮೌನಗೊಳಿಸುವ’ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೇ ಪ್ರಶ್ನೆಯನ್ನು ಆ ಬಳಿಕ…

Read More

ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ

ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ (Dog Satish) ಅವರು ಶೌಚಾಲಯದಲ್ಲಿ ಇರುವಂತಹ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಲಾಗಿದೆ. ಅದಕ್ಕೆ ರಜತ್, ವಿನಯ್ ಗೌಡ ಮುಂತಾದವರು ತಕರಾರು ತೆಗೆದಿದರು. ಆ ವಿಚಾರ ಈಗ ವಿವಾದಕ್ಕೆ ತಿರುಗಿದೆ. ಹಲವು ವರ್ಷಗಳ ಕಾಲ ಕಷ್ಟಪಟ್ಟು ಸುದೀಪ್ (Kichcha Sudeep) ಅವರು ಮೇಲಕ್ಕೆ ಬಂದಿದ್ದಾರೆ. ಅಂಥವರ ಹಾಡನ್ನು ಈ ರೀತಿ ಬಳಕೆ ಮಾಡಿದ್ದು ಸರಿಯೇ…

Read More

ಮೂಢನಂಬಿಕೆಯೋ, ಕಾಕತಾಳೀಯವೊ… ಹೋಟೆಲ್ ಬದಲಿಸಿದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್ ಫೈನಲ್‌ಗೆ ಮುನ್ನ ಭಾರತ ತಂಡ ಅಹಮದಾಬಾದ್‌ನಲ್ಲಿರುವ ಹೋಟೆಲ್ ಅನ್ನು ಬದಲಾಯಿಸಿದೆ. ಇದರ ಬೆನ್ನಲ್ಲೇ ಇದು ಕಾಕತಾಳೀಯವೊ ಅಥವಾ ಮೂಢನಂಬಿಕೆಯೋ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ಈ ಹಿಂದಿನ ಪಂದ್ಯಗಳ ವೇಳೆ ಭಾರತ ತಂಡ ಐಟಿಸಿ ನರ್ಮದಾ (ITC Narmada) ಹೋಟೆಲ್‌ನಲ್ಲಿ ಉಳಿದುಕೊಂಡಿತ್ತು. ಈ ವೇಳೆ ಸೌತ್ ಆಫ್ರಿಕಾ ವಿರುದ್ಧ ಸೋಲನುಭವಿಸಿದ್ದರು. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯದ ವೇಳೆಯೂ ಇದೇ ಹೋಟೆಲ್​ನಲ್ಲಿ ತಂಗಿದ್ದರು. ಆ ಫೈನಲ್​ನಲ್ಲಿ…

Read More

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಬೆಂಗಳೂರು, ಮಾರ್ಚ್​ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು…

Read More