ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್ ಆಯ್ತಾ SIR? – Kannada News | Foreign Nationals Voted in Tamil Nadu Elections?: More Than 10 Arrested
ಚೆನ್ನೈ, ಮೇ 15: ತಮಿಳುನಾಡು (Tamil Nadu) ವಿಧಾನಸಭೆ ಚುನಾವಣಾ ಫಲಿತಾಂಶ (Election Result) ಪ್ರಕಟವಾಗಿ, ನೂತನ ಸರ್ಕಾರ ರಚನೆ ಬೆನ್ನಲ್ಲೇ ಆಘಾತಕಾರಿ ವಿಷಯವೊಂದು ಬಹಿರಂಗಗೊಂಡಿದೆ. ಎಲೆಕ್ಷನ್ನಲ್ಲಿ ಮತ ಚಲಾಯಿಸಿರುವ ಆರೋಪದ ಮೇಲೆ ವಿದೇಶಿ ಪಾಸ್ಪೋರ್ಟ್ ಹೊಂದಿದ್ದ ಹಲವರನ್ನು ಚೆನ್ನೈ ಮತ್ತು ಮದುರೈ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾ ಮೂಲದವರಾಗಿದ್ದು, ಚೆನ್ನೈನಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ಶ್ರೀಲಂಕಾದ ರಂಜಿನಿ (59), ಸರ್ಫುದೀನ್ (68),…