ಕಷ್ಟ ಅಂತ ಹೇಳಿಕೊಂಡು ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್: ನರ್ಸ್ ಸೇರಿ ನಾಲ್ವರು ಅರೆಸ್ಟ್
ದಾವಣಗೆರೆ, (ಮಾರ್ಚ್ 07): ಖಾಸಗಿ ಆಸ್ಪತ್ರೆ ನರ್ಸ್, ಕಷ್ಟ ಅಂತ ಹೇಳಿಕೊಂಡು ಉದ್ಯಮಿಯನ್ನು ಬುಟ್ಟಿಗೆ ಹಾಕೊಂಡಿದ್ದು, ಬಳಿಕ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಹೌದು..ದಾವಣಗೆರೆಯ (Davanagere) ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣವನ್ನು (Honeytrap Case) ವಿದ್ಯಾನಗರ ಠಾಣೆ ಪೊಲೀಸರು ಭೇದಿಸಿದ್ದು, ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ್ದ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎನ್ನುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್ ಸೂತ್ರದಾರಿ ನರ್ಸ್ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್,…