Hantavirus Cases: ಮನುಷ್ಯರಿಂದ ಮನುಷ್ಯರಿಗೆ ಹರಡುವ ‘ಆಂಡಿಸ್ ವೈರಸ್’ ಸೋಂಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ! – Kannada News | WHO Warns of Andes Virus Spread on MV Hondius: Hantavirus Transmits Human to Human
ಜಿನಿವಾ, ಮೇ.15: ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ MV Hondius ಕ್ರೂಸ್ ಹಡಗಿನಲ್ಲಿ ಕಾಣಿಸಿಕೊಂಡಿದ್ದ ಹಂಟಾವೈರಸ್ ಸೋಂಕು ಈಗ ಹೊಸ ರೂಪ ಪಡೆದುಕೊಂಡಿದೆ. ಸೋಂಕಿತರಲ್ಲಿ ಎಂಟು ಮಂದಿಗೆ ‘ಆಂಡಿಸ್ ವೈರಸ್’ ತಗುಲಿರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಹಂಟಾವೈರಸ್‌ನ ಅತ್ಯಂತ ಅಪಾಯಕಾರಿ ತಳಿಯಾಗಿದ್ದು, ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುವ ಸಾಮರ್ಥ್ಯ ಹೊಂದಿದೆ. ಏಪ್ರಿಲ್ 1 ರಂದು ಅರ್ಜೆಂಟೀನಾದಿಂದ ಹೊರಟಿದ್ದ ಈ ಹಡಗಿನಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರಿಗೆ ಆಂಡಿಸ್ ವೈರಸ್ ಇರುವುದು ದೃಢಪಟ್ಟಿದ್ದರೆ,…