ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ಧಾರವಾಡ, ಮಾರ್ಚ್ 07: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ (Lokayukta raid) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಎಂಬವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದ ಅಧಿಕಾರಿ ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ…