All posts by nagaraj11081993

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest

ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಅಗಲವಾದ ಉಗುರುಗಳು:

ಅಗಲವಾದ ಉಗುರುಗಳನ್ನು ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ಮೇಷ, ಸಿಂಹ ಮತ್ತು ಧನುಸ್ಸು ರಾಶಿಯವರಲ್ಲಿ ಹೆಚ್ಚು ಕಂಡುಬರುತ್ತಾರೆ. ಇವರು ತಕ್ಷಣವೇ ಪ್ರತಿಕ್ರಿಯಿಸುವ, ಸಾಧನೆ ಮಾಡಲು ಹಂಬಲಿಸುವ ಮತ್ತು ತಮ್ಮ ಗುರಿಗಳ ಬಗ್ಗೆ ದೃಢ ಮನಸ್ಸು ಹೊಂದಿರುವವರಾಗಿರುತ್ತಾರೆ. ಇವರು ಶ್ರಮಜೀವಿಗಳು, ಮುಂಗೋಪಿಗಳು ಮತ್ತು ಹಠಮಾರಿ ಸ್ವಭಾವದವರಾಗಿರಬಹುದು. ಯಾವುದೇ ಕಷ್ಟ ಬಂದರೂ ಅದನ್ನು ಪರಿಷ್ಕರಿಸಲು ಪ್ರಯತ್ನಿಸುತ್ತಾರೆ. ರಾಜಕೀಯ ಯೋಗವು ಇವರಿಗೆ ತುಂಬಾ ಚೆನ್ನಾಗಿರುತ್ತದೆ, ಮತ್ತು ಇವರು ಉತ್ತಮ ನಾಯಕತ್ವ ಗುಣಗಳನ್ನು ಹೊಂದಿರುತ್ತಾರೆ. ಈ ಗುಣಗಳು ಬೇರೆ ರಾಶಿಯವರಲ್ಲೂ ಕಂಡುಬರಬಹುದು, ಇದು ಕೇವಲ ಒಂದು ಸೂಚಕವಾಗಿದೆ.

ವೃತ್ತಾಕಾರದ ಉಗುರುಗಳು:

ವೃತ್ತಾಕಾರದ ಉಗುರುಗಳು ಸಾಮಾನ್ಯವಾಗಿ ಕರ್ಕ, ವೃಶ್ಚಿಕ ಮತ್ತು ಮೀನ ರಾಶಿಯವರಲ್ಲಿ ಇರುತ್ತವೆ. ಇವರು ನಿಧಾನಪ್ರಿಯರು, ತಾಳ್ಮೆಯುಳ್ಳವರು ಮತ್ತು ಸಹನಶೀಲರು. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ, ಪ್ರತಿಯೊಂದು ವಿಷಯವನ್ನು ಆಳವಾಗಿ ಚಿಂತಿಸಿ ಮುಂದುವರೆಯುತ್ತಾರೆ. ಇವರು ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದು, ಧರ್ಮ ಚಿಂತಕರಾಗಿರುತ್ತಾರೆ. ತಂತ್ರ, ಮಂತ್ರ, ಯಂತ್ರಗಳ ಬಗ್ಗೆ ಹೆಚ್ಚು ಒಲವು ಹೊಂದಿರುತ್ತಾರೆ. ರಾಜಕೀಯ ವ್ಯಕ್ತಿಗಳು ಇಂತಹ ಗುಣಗಳನ್ನು ಅಳವಡಿಸಿಕೊಳ್ಳುವುದು ಸಾಮಾನ್ಯ. ಇವರ ಶಾಂತ ಸ್ವಭಾವ ಮತ್ತು ದೃಢತೆ ಇವರ ಶಕ್ತಿ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಲಂಬವಾದ (ಉದ್ದವಾದ) ಉಗುರುಗಳು:

ಲಂಬವಾದ ಉಗುರುಗಳನ್ನು ಹೊಂದಿರುವವರು ಸಾಮಾನ್ಯವಾಗಿ ವೃಷಭ, ಕನ್ಯಾ ಮತ್ತು ಮಕರ ರಾಶಿಯವರಲ್ಲಿ ಕಂಡುಬರುತ್ತಾರೆ. ಇವರು ರಸಿಕ ಸ್ವಭಾವದವರು, ಪ್ರೀತಿ ಮತ್ತು ಪ್ರೇಮದ ಬಗ್ಗೆ ಹೆಚ್ಚು ಒಲವು ಹೊಂದಿದವರು. ಬೇಗ ಆಕರ್ಷಣೆಗೆ ಒಳಗಾಗುತ್ತಾರೆ ಮತ್ತು ಇತರರನ್ನು ಆಕರ್ಷಿಸುವ ಗುಣವನ್ನೂ ಹೊಂದಿರುತ್ತಾರೆ. ಸಮಾಜದಲ್ಲಿ ಹೆಸರು, ಕೀರ್ತಿ ಮತ್ತು ಪ್ರತಿಷ್ಠೆಗಾಗಿ ಹೋರಾಡುತ್ತಾರೆ. ಹಿಂದಿನ ಕಾಲದಲ್ಲಿ ಮಹಿಳೆಯರು ಉದ್ದವಾದ ಉಗುರುಗಳನ್ನು ಬೆಳೆಸಿಕೊಳ್ಳುತ್ತಿದ್ದುದು ಇದೇ ಕಾರಣಕ್ಕೆ. ಇವರ ಬಲ ಮೆದುಳು ಹೆಚ್ಚು ಕ್ರಿಯಾಶೀಲವಾಗಿರುತ್ತದೆ. ಚಲನಚಿತ್ರ ನಟರು, ಸಾಹಿತಿಗಳು, ಪುಸ್ತಕ ಬರೆಯುವವರು ಮತ್ತು ಬರಹಗಾರರಲ್ಲಿ ಈ ಗುಣ ಹೆಚ್ಚು ಕಂಡುಬರುತ್ತದೆ. ಇವರು ಅನೇಕ ಸ್ನೇಹಿತರನ್ನು ಹೊಂದಿರುತ್ತಾರೆ.

ಚೌಕಾಕಾರದ ಉಗುರುಗಳು:

ಚೌಕಾಕಾರದ ಉಗುರುಗಳು ಮಿಥುನ, ತುಲಾ ಮತ್ತು ಕುಂಭ ರಾಶಿಯವರಲ್ಲಿ ಸಾಮಾನ್ಯ. ಇವರು ಸೀಕ್ರೆಟ್ ಸ್ವಭಾವದವರು, ಯಾವುದೇ ವಿಷಯವನ್ನು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ತಮ್ಮ ವೈಯಕ್ತಿಕ ವಿಚಾರಗಳಲ್ಲಿ ಗುಟ್ಟನ್ನು ಕಾಪಾಡಿಕೊಳ್ಳುತ್ತಾರೆ. ಇವರು ಗಂಭೀರ ವ್ಯಕ್ತಿತ್ವದವರು, ಸೋತರೂ ಗೆದ್ದಿದ್ದೇವೆ ಎಂದು ಹೇಳುವ, ಗೆದ್ದರೂ ಸೋತಿದ್ದೇವೆ ಎಂದು ಹೇಳಿಕೊಳ್ಳುವ ಧೈರ್ಯಶಾಲಿಗಳು. ಇವರು ಸ್ವತಂತ್ರ ಉದ್ಯೋಗವನ್ನು ಬಯಸುತ್ತಾರೆ ಮತ್ತು ಯಾರ ಮೇಲೂ ಅವಲಂಬಿತರಾಗಲು ಇಷ್ಟಪಡುವುದಿಲ್ಲ. ಇವರದೇ ಆದ ಆಲೋಚನೆಗಳು, ಮನೆ ಮತ್ತು ಮನಸ್ಥಿತಿಯನ್ನು ಹೊಂದಿರುತ್ತಾರೆ. ಇವರು ಸಮಾಜದಲ್ಲಿ ಉತ್ತಮ ಜೀವನವನ್ನು ನಡೆಸಲು ಶಕ್ತರು.

ಅಂತಿಮವಾಗಿ, ಉಗುರುಗಳ ಆಕಾರದ ಮೂಲಕ ವ್ಯಕ್ತಿತ್ವವನ್ನು ಅರಿಯುವ ಈ ವಿಧಾನವು ನಮ್ಮನ್ನು ನಾವು ಅರ್ಥಮಾಡಿಕೊಳ್ಳಲು ಒಂದು ಆಸಕ್ತಿದಾಯಕ ಮಾರ್ಗವಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9

ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ.

ಮುಖ್ಯಾಂಶಗಳು

  • ದಾವಣಗೆರೆಯಲ್ಲಿ ಸಿಡಿಲು ಬಡಿದು 19 ವರ್ಷದ ಕುರಿಗಾಹಿ ಬಲಿ, ವಿಜಯಪುರದಲ್ಲಿ ಮರ ಬಿದ್ದು ವೃದ್ಧ ಸಾವು.
  • ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ಮನೆ ಮೇಲ್ಚಾವಣಿ ಕುಸಿದು ನಾಲ್ವರು ಸಾವು
  • ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಲ್ಯಾಂಡಿಂಗ್​ಗೆ ಪರದಾಡಿದ ಎರಡು ವಿಮಾನಗಳು.

ಭಾರಿ ಮಳೆ ಗಾಳಿಗೆ ಮನೆ ಮೇಲ್ಚಾವಣಿ, ಗೋಡೆ ಕುಸಿದು ನಾಲ್ವರು ಸಾವು

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮತಪಟ್ಟಿದ್ದಾರೆ. ಮೋರಟಗಿ ಗ್ರಾಮದ ಗುರುನಾಥ ಬಡಿಗೇರ(35), ಜ್ಯೋತಿ ಬಡಿಗೇರ(28), ಮಕ್ಕಳಾದ ಕಾಳಮ್ಮ ಬಡಿಗೇರ(13), ಕೀರ್ತಿ ಬಡಿಗೇರ(9) ಮೃತ ದುರ್ದೈವಿಗಳಾಗಿದ್ದಾರೆ.

ಜಿಲ್ಲಾವಾರು ಮಳೆ ಹಾನಿಯ ವಿವರ

ದಾವಣಗೆರೆ ಜಿಲ್ಲೆಯ ಜರೇಕಟ್ಟೆ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಅಜಿತ್ (19) ಎಂಬ ಯುವಕ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯಲ್ಲಿ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಅದೃಷ್ಟವಶಾತ್ ರಜೆ ಇದ್ದ ಕಾರಣ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಥಣಿಯ ಸಂಬರಗಿಯಲ್ಲಿ ಬಿರುಗಾಳಿಗೆ ಐದು ಮನೆಗಳ ಮೇಲ್ಛಾವಣಿ ಕುಸಿದು ದವಸ ಧಾನ್ಯಗಳು ನಾಶವಾಗಿವೆ.

ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ರನ್‌ವೇ ಸ್ಪಷ್ಟವಾಗಿ ಕಾಣಿಸದ ಕಾರಣ ಬೆಂಗಳೂರಿನಿಂದ ಬಂದಿದ್ದ ಏರ್ ಇಂಡಿಯಾದ ಎರಡು ವಿಮಾನಗಳು ಸುಮಾರು ಹೊತ್ತು ಆಗಸದಲ್ಲೇ ಗಿರಕಿ ಹೊಡೆದವು. ಹಾವೇರಿ ಜಿಲ್ಲೆಯ ಇಜಾರಿಲಕಮಾಪುರದಲ್ಲಿ ಅಲೆಮಾರಿಗಳ ಗುಡಿಸಲುಗಳು ಗಾಳಿಗೆ ಹಾರಿಹೋಗಿವೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಉತ್ತರ ಕನ್ನಡದ ಭಟ್ಕಳ ಮತ್ತು ಹೊನ್ನಾವರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ರಾಜ್ಯದಲ್ಲಿ ಮೇ 17ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CNG Price Hike: ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ – Kannada News | CNG Price Hike: Rates Increased by Rs 2 per kg Amid Hormuz Blockade

ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ.

ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ?

ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿನ ಬೆಲೆ ಈಗ ಪ್ರತಿ ಕೆಜಿಗೆ 84 ರೂ. ತಲುಪಿದೆ.

ಬೆಂಗಳೂರಿನಲ್ಲೂ ಈ ಏರಿಕೆಯ ಪರಿಣಾಮ ಶೀಘ್ರದಲ್ಲೇ ಕಂಡುಬರುವ ಸಾಧ್ಯತೆಯಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯ ಕುಸಿತವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ಕಂಪನಿಗಳು ತಿಳಿಸಿವೆ.

ಆಟೋ ಚಾಲಕರಿಗೆ ಸಂಕಷ್ಟ

ಸಿಎನ್‌ಜಿ ದರ ಏರಿಕೆಯು ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದೆ. ಈ ಹಿಂದೆಯೂ ಇಂಧನ ಬೆಲೆ ಏರಿಕೆಯಾದಾಗ ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸಿದ್ದರು. ದಿನವಿಡೀ ದುಡಿದರೂ ಅನಿಲದ ದರ ಹೆಚ್ಚಳದಿಂದಾಗಿ ಕೈಗೆ ಸಿಗುವ ಲಾಭ ಶೂನ್ಯವಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಬಾಡಿಗೆ ದರ ಹೆಚ್ಚಿಸಿದರೆ ಜನ ಆಟೋ ಹತ್ತಲ್ಲ, ಹೆಚ್ಚಿಸದಿದ್ದರೆ ನಮಗೆ ಹೊಟ್ಟೆ ತುಂಬಲ್ಲ ಎಂಬುದು ಅವರ ಸಮಸ್ಯೆ. ಬೆಂಗಳೂರಿನಂತಹ ನಗರಗಳಲ್ಲಿ ಈಗಾಗಲೇ ಸಿಎನ್‌ಜಿ ಕೊರತೆಯಿಂದಾಗಿ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು, ಈಗ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 8:02 am, Fri, 15 May 26

Source link

ಹೀಗಾದ್ರೆ ಪಂಜಾಬ್ ಪ್ಲೇಆಫ್​ಗೇರಲ್ಲ; ಈ ತಂಡಗಳು ಸೋತರೆ ಮಾತ್ರ ಚಾನ್ಸ್ – Kannada News | Punjab Kings IPL Playoff: How Other Teams’ Losses Can Save PBKS Season

ಐಪಿಎಲ್​ನ ಈ ಸೀಸನ್​ ಅಲ್ಲಿ ಪಂಜಾಬ್ ಕಿಂಗ್ಸ್ ಸತತ ಐದು ಸೋಲುಗಳನ್ನು ಕಂಡಿದೆ. ಟೂರ್ನಿಯ ಆರಂಭದಲ್ಲಿ ಅಬ್ಬರಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಶ್ರೇಯಸ್ ಅಯ್ಯರ್ ಪಡೆ ನಂತರ ಎಡವಿದೆ. ಸದ್ಯಕ್ಕೆ ಈ ತಂಡ ನಾಲ್ಕನೇ ಸ್ಥಾನದಲ್ಲಿದ್ದರೂ, ಪ್ಲೇ-ಆಫ್ ಹಾದಿ ಮಾತ್ರ ಅಂದುಕೊಂಡಷ್ಟು ಸುಲಭವಾಗಿಲ್ಲ. ಈಗ ಮುಂದಿನ ಎರಡು ಪಂದ್ಯಗಳನ್ನು ಗೆದ್ದರೂ ಅಧಿಕೃತವಾಗಿ ಮುಂದಿನ ಹಂತಕ್ಕೇರುತ್ತಾರೆ ಎಂಬ ಗ್ಯಾರಂಟಿ ಇಲ್ಲ. ಪಂಜಾಬ್ ತಂಡಕ್ಕೆ ಗೆಲುವಷ್ಟೇ ಅಲ್ಲ, ಅದೃಷ್ಟವೂ ಬೇಕಿದೆ.

ಸೀಸನ್‌ನ ಮೊದಲಾರ್ಧದಲ್ಲಿ ಸತತ ಆರು ಗೆಲುವುಗಳೊಂದಿಗೆ ಬೀಗುತ್ತಿದ್ದ ಪಂಜಾಬ್ ತಂಡಕ್ಕೆ ಎರಡನೇ ಹಂತದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿ ಅಂಕ ಹಂಚಿಕೆಯಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ಸದ್ಯ 13 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಪಂಜಾಬ್, ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಇತರ ತಂಡಗಳ ಫಲಿತಾಂಶದ ಮೇಲೆ ಕಣ್ಣಿಡಬೇಕಾದ ಅನಿವಾರ್ಯತೆ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಗೆಲುವುಗಳೊಂದಿಗೆ (16 ಅಂಕ) ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. +1.053 ರನ್‌ರೇಟ್ ಹೊಂದಿರುವುದು ತಂಡದ ಪ್ಲಸ್ ಪಾಯಿಂಟ್. ಅಷ್ಟೇ ಅಂಕ ಹೊಂದಿರುವ ಗುಜರಾತ್ ಟೈಟಾನ್ಸ್ ಎರಡನೇ ಸ್ಥಾನದಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪಂಜಾಬ್​​ಗೆ ಬಾಕಿ ಇರೋದು ಇನ್ನು ಎರಡು ಪಂದ್ಯಗಳು ಮಾತ್ರ. ಅದೆರಡೂ ಪಂದ್ಯ ಗೆದ್ದರೆ ತಂಡದ ಅಂಕ 17 ಆಗಲಿದೆ. 5 ಹಾಗೂ ಆರನೇ ಸ್ಥಾನದಲ್ಲಿರುವ ಸಿಎಸ್​​ಕೆ ಹಾಗೂ ಆರ್​​ಆರ್​ ತಂಡ ತಲಾ 12 ಅಂಕ ಗಳಿಸಿವೆ. ಈ ತಂಡಗಳಿಗೆ ಇರೋದು ತಲಾ ಮೂರು ಪಂದ್ಯಗಳು. ಹೀಗಾಗಿ, ಎರಡೂ ತಂಡಗಳು ಮೂರಕ್ಕೆ ಮೂರು ಪಂದ್ಯ ಗೆದ್ದರೆ 18 ಅಂಕ ಆಗಲಿವೆ.ಆರ್​​ಸಿಬಿ ಸೇರಿದಂತೆ ಟಾಪ್ ಆರರಲ್ಲಿರುವ ಬಹುತೇಕ ಎಲ್ಲಾ ತಂಡಗಳ ಸೋಲು ಪಂಜಾಬ್​​ಗೆ ಪ್ಲಸ್ ಆಗಲಿದೆ.

ಇದನ್ನೂ ಓದಿ: ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಗೆದ್ದ ಬುಮ್ರಾ; ಪಂಜಾಬ್​ಗೆ ಸತತ 5ನೇ ಸೋಲು

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಮಂಕಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂಬೈ ತಂಡ ಎಲಿಮಿನೇಟ್ ಆಗಿರುವುದರಿಂದ ಪಂಜಾಬ್ ವಿರುದ್ಧದ ಪಂದ್ಯ ಗೆದ್ದರೂ ಯಾವುದೇ ಬದಲಾವಣೆ ಇಲ್ಲ. ಆದರೆ, ಪಂಜಾಬ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:46 am, Fri, 15 May 26

Source link

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ!

ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ
  • ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆ, ಆರೆಂಜ್ ಅಲರ್ಟ್​
  • ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡಿನ ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ನೀಡಲಾಗಿದೆ. ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಮತ್ತು ಮೈಸೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮಂಡ್ಯ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್​ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್​​, ಡೀಸೆಲ್ ದರ ಏರಿಕೆ ನಿರ್ಧಾರ ಪ್ರಕಟಿಸಿವೆ.

(ಮಾಹಿತಿ ಅಪ್​ಡೇಟ್ ಆಗಲಿದೆ)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 7:04 am, Fri, 15 May 26

Source link

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ.

1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ

2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್

3. ರಣವೀರ್ ಸಿಂಗ್​​ಗೆ ದೊಡ್ಡ ಜಯ

ಭಾರತದಲ್ಲಿ ಜಿಯೋ ಹಾಟ್​ಸ್ಟಾರ್ ಸಂಸ್ಥೆ ಬರೋಬ್ಬರಿ 150 ಕೋಟಿ ರೂಪಾಯಿಗಳಿಗೆ ಒಟಿಟಿ ಹಕ್ಕನ್ನು ಖರೀದಿಸಿದೆ ಎನ್ನಲಾಗಿದೆ. ಭಾರತೀಯ ಪ್ರೇಕ್ಷಕರು ಜಿಯೋಹಾಟ್‌ಸ್ಟಾರ್‌ನಲ್ಲಿ ಮಾತ್ರ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಮೊದಲ ಭಾಗ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದ್ದರಿಂದ, ಎರಡನೇ ಭಾಗವೂ ಅಲ್ಲಿಯೇ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಈ ಸುದ್ದಿ ಅಚ್ಚರಿ ಮೂಡಿಸಿದೆ. ಭಾರತದ ಹೊರಗಿನ ಪ್ರೇಕ್ಷಕರಿಗಾಗಿ ನೆಟ್‌ಫ್ಲಿಕ್ಸ್ ಈ ಚಿತ್ರವನ್ನು ಪ್ರಸಾರ ಮಾಡಲಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ‘ಧುರಂದರ್: ದಿ ರಿವೇಂಜ್ (ರಾ ಆ್ಯಂಡ್ ಅನ್​​ಸಿನ್) ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಅಂದರೆ, ಥಿಯೇಟರ್‌ನಲ್ಲಿ ಬಿಡುಗಡೆಯಾದ ಆವೃತ್ತಿಗಿಂತ ಒಟಿಟಿ ಆವೃತ್ತಿ ಹೆಚ್ಚು ರೋಚಕವಾಗಿರಲಿದೆ: ಚಿತ್ರಮಂದಿರದಲ್ಲಿ 3 ಗಂಟೆ 49 ನಿಮಿಷಗಳಿದ್ದ ಈ ಸಿನಿಮಾ, ಒಟಿಟಿಯಲ್ಲಿ 3 ಗಂಟೆ 52 ನಿಮಿಷಗಳ ಕಾಲ ಇರಲಿದೆ. ಸೆನ್ಸಾರ್ ಮಂಡಳಿಯಿಂದ ಕತ್ತರಿ ಬಿದ್ದಿದ್ದ ಹಿಂಸಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಈ ಆವೃತ್ತಿಯಲ್ಲಿ ಮರುಸೇರ್ಪಡೆ ಮಾಡಲಾಗಿದೆ. ಇಂದು ಸಿನಿಮಾ ಪ್ರಸಾರ ಆಗುವ ಸಾಧ್ಯತೆ ಇದೆ.

ಒಟ್ಟಾರೆ ಗಳಿಕೆ

‘ಧುರಂಧರ್ 2’ ಸಿನಿಮಾ ಭಾರತಾದ್ಯಂತ 1369 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹಾಗೂ 1,144.56 ನೆಟ್ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರದ ಗ್ರಾಸ್ ಕಲೆಕ್ಷನ್ 1,796.51 ಕೋಟಿ ರೂಪಾಯಿ ಆಗಿದೆ. ಹೆಚ್ಚುವರಿಯಾಗಿ 10-20 ಕೋಟಿ ರೂಪಾಯಿ ಸೇರ್ಪಡೆಯಾಗಬಹುದು ಅಷ್ಟೇ ಎಂದು ಅಂದಾಜಿಸಲಾಗಿದೆ. ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಗಳಿಕೆ 1,810 ಕೋಟಿ ರೂಪಾಯಿ ಇದೆ. ಇದನ್ನು ಈ ಚಿತ್ರಕ್ಕೆ ಬೀಟ್ ಮಾಡಲಾಗುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇದನ್ನೂ ಓದಿ: ‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ

ಆದಿತ್ಯ ಧರ್ ನಿರ್ದೇಶನದ ಈ ಆಕ್ಷನ್ ಡ್ರಾಮಾ, ದೊಡ್ಡ ಮಟ್ಟದ ತಾರಾಗಣವನ್ನು ಹೊಂದಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಜಿಯೋ ಹಾಟ್​​ಸ್ಟಾರ್ ಸಂಸ್ಥೆ ಇದನ್ನು ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:04 am, Fri, 15 May 26

Source link

ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ – Kannada News | Indian Cargo Ship MV Haji Ali Sinks After Suspected Drone Attack in Omani Waters

ನವದೆಹಲಿ, ಮೇ 15: ಓಮನ್ ಪ್ರಾದೇಶಿಕ ಜಲವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಭಾರತೀಯ ಸರಕು ಸಾಗಣೆ ನೌಕೆಯ (Indian Ship) ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. ಪರಿಣಾಮವಾಗಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ದಾಳಿಯ ಹಿಂದೆ ಇರಾನ್ (Iran) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಇದೀಗ ಹಾರ್ಮುಜ್ ಸುತ್ತಲಿನ ಪ್ರದೇಶವೂ ಸಂಚಾರಕ್ಕೆ ಸುರಕ್ಷಿತವಲ್ಲ ಎಂಬುದು ದೃಢಪಟ್ಟಿದೆ.

ಮುಖ್ಯಾಂಶಗಳು

  • ಮುಳುಗಡೆಯಾದ ಹಡಗನ್ನು ಎಂವಿ ಹಾಜಿ ಅಲಿ (MV Haji Ali) ಎಂದು ಗುರುತಿಸಲಾಗಿದೆ.
  • ಹಡಗು ಸೋಮಾಲಿಯಾದಿಂದ ಶಾರ್ಜಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿತ್ತು
  • ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಿಗ್ಬಂಧನ ವಿಧಿಸಿದ ನಂತರ ಅಮೆರಿಕ ನೌಕಾಪಡೆ ಸೂಚಿಸಿದ ಹೊಸ ಸುರಕ್ಷಿತ ಮಾರ್ಗದಲ್ಲಿ ಈ ಹಡಗು ಚಲಿಸುತ್ತಿತ್ತು.

ಸುಮಾರು 57 ಮೀಟರ್ ಉದ್ದವಿರುವ ಎಂವಿ ಹಾಜಿ ಅಲಿ ಹಡಗು ಮೇ 13 ರಂದು ಮುಂಜಾನೆ 3:30 ರ ಸುಮಾರಿಗೆ ಓಮನ್ ಕರಾವಳಿಯ ಲಿಮಾ ಸಮೀಪ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ಇರಾನ್ ಹಾರ್ಮುಜ್ ಜಲಸಂಧಿಯ ಪ್ರಮುಖ ಮಾರ್ಗಗಳನ್ನು ನಿರ್ಬಂಧಿಸಿದ ನಂತರ, ಹಡಗುಗಳು ಸುರಕ್ಷಿತ ಸಂಚಾರಕ್ಕಾಗಿ ಹೊಸ ಮಾರ್ಗವನ್ನು ಬಳಸುತ್ತಿದ್ದವು. ಆದರೆ, ಕಳೆದ ಹತ್ತು ದಿನಗಳಲ್ಲಿ ಇದೇ ಮಾರ್ಗದಲ್ಲಿ ಐದು ದಾಳಿಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಹಾರ್ಮುಜ್ ಜಲಸಂಧಿಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಘೋಷಿಸಿರುವ ಇರಾನ್

ಇತ್ತೀಚಿನ ದಿನಗಳಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಘೋಷಿಸಿದ್ದು, ಈ ಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ. ಫೆಬ್ರವರಿ ಅಂತ್ಯದಿಂದ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ, ಇರಾನ್ ಇದುವರೆಗೆ 36ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳ ಮೇಲೆ ಪ್ರತಿದಾಳಿ ನಡೆಸಿದೆ. ಇರಾನ್​ ಐಆರ್​​ಜಿಸಿ ಪಡೆಗಳ ನೂರಾರು ಬೋಟ್​ಗಳು ಈ ಭಾಗದಲ್ಲಿ ಗಸ್ತು ತಿರುಗುತ್ತಿರುವುದು ಉಪಗ್ರಹ ಚಿತ್ರಗಳಿಂದ ದೃಢಪಟ್ಟಿದೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಮೇ 15) ಮೇ 20ರವರೆಗೂ ಐದು ದೇಶಗಳ ವಿದೇಶ ಪ್ರವಾಸ ಕೈಗೊಳ್ತಿದ್ದಾರೆ. ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ಭೇಟಿ ನೀಡಲಿದ್ದು, ಆಯಾ ದೇಶಗಳ ಉನ್ನತ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್

ಕೊಲ್ಲಿ ಕಾಳಗದಿಂದಾಗಿ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರುಪೇರಾಗುತ್ತಿರುವ ಬೆನ್ನಲ್ಲೇ ಮೋದಿ, ಯುಎಇ ಭೇಟಿ ಗಮರ್ನಾಹವಾಗಿದೆ. ಭಾರತದ ಇಂಧನ ಸ್ಥಿರತೆ, ದೀರ್ಘಾವಧಿಯ ತೈಲ ಪೂರೈಕೆ ಮತ್ತು ಮೂಲಸೌಕರ್ಯಗಳಲ್ಲಿ ಯುಎಇ ಹೂಡಿಕೆ ಖಚಿತಪಡಿಸಿಕೊಳ್ಳಲು ಈ ಭೇಟಿ ನೆರವಾಗಲಿದೆ. ಇನ್ನು, ಯುರೋಪ್ ಜೊತೆ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ, ಗ್ರೀನ್ ಹೈಡ್ರೋಜನ್, ಸೆಮಿಕಂಡಕ್ಟರ್‌ಗಳು, ಕೃತಕ ಬುದ್ಧಿಮತ್ತೆ, ರಕ್ಷಣಾ ವಲಯದ ಉತ್ಪಾದನೆ ಮತ್ತು ಕ್ಲೀನ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸಲು ಯುರೋಪ್ ನಾಯಕರೊಂದಿಗೆ ಮೋದಿ ಚರ್ಚಿಸಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 15, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಕ್ರವಾರವು ಪರಾಭವನಾ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ಮತ್ತು ಅಶ್ವಿನಿ ನಕ್ಷತ್ರದ ವಿಶೇಷ ದಿನವಾಗಿದೆ. ಅಂತರಾಷ್ಟ್ರೀಯ ಕುಟುಂಬ ದಿನವೂ ಆಗಿರುವ ಇಂದು, ಬೆಳಗಿನ ಜಾವ 6 ಗಂಟೆ 28 ನಿಮಿಷಕ್ಕೆ ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ ವೃಷಭ ಸಂಕ್ರಾಂತಿಯ ಪರ್ವಕಾಲವಿರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

Source link

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು ವಾಸ್ತು ದೋಷಗಳಿಗೆ ಕಾರಣವಾಗಬಹುದು. ವೈಜ್ಞಾನಿಕವಾಗಿ ನೋಡಿದರೆ, ನುಗ್ಗೆ ಮರವು ಉಷ್ಣಾಂಶದ ಮರವಾಗಿದ್ದು, ಅದರ ಕಾಂಡವು ತೆಳುವಾಗಿರುತ್ತದೆ. ಇದರಿಂದ ಮಕ್ಕಳು ಅಥವಾ ಯಾರಾದರೂ ಹತ್ತಿದಾಗ ಮುರಿದು ಬೀಳುವ ಸಾಧ್ಯತೆ ಇರುತ್ತದೆ. ಇದರ ಆಯಸ್ಸು ಸಹ ಕಡಿಮೆ. ನಂಬಿಕೆಗಳ ಪ್ರಕಾರ, ಇದು ನಕಾರಾತ್ಮಕ ಶಕ್ತಿಗಳನ್ನು, ಪೂರ್ವಪ್ರೇತಗಳನ್ನು ಆಕರ್ಷಿಸುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

Source link