2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳಿಗೆ ಇದು ಪರ್ವ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ.
ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು.
ವೃಷಭ ರಾಶಿ:
ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ. ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ನಿಮ್ಮ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು. ಬದುಕು ಬಂಧನದಂತೆ ಅನ್ನಿಸಬಹುದು. ಮನಸ್ಸೂ ಸಂಕುಚಿತವಾಗಬಹುದು.
ಮಿಥುನ ರಾಶಿ:
ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ಮಿತವಾದ ಮಾತಿನಿಂದ ನಿಮಗೇ ಒಳ್ಳೆಯದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಬೇಡ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.
ಕರ್ಕಾಟಕ ರಾಶಿ:
ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಉದ್ಯೋಗದಾತರು ನಿಮ್ಮಿಂದ ನಿರೀಕ್ಷೆ ಮಾಡುವ ಬೆಂಬಲ ನೀಡುವಲ್ಲಿ ಸಫಲರಾಗುತ್ತೀರಿ. ಇದರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತವೆ. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಉತ್ತಮ ಸ್ನೇಹವನ್ನು ನೀವು ಕಳೆದುಕೊಳ್ಳುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು.
ಸಿಂಹ ರಾಶಿ:
ನಿಮಗೆ ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ಕೂಡಿಟ್ಟ ಹಣವನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಿದ್ದೀರಿ. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ.
ಕನ್ಯಾ ರಾಶಿ:
ಹಣಕ್ಕಾಗಿ ಕಾದು ಸಮಯವೂ ಹಾಳು. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಸಹೋದ್ಯೋಗಿಗಳ ಜತೆಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗುತ್ತದೆ. ನಿಮ್ಮ ವಿರುದ್ಧ ದೂರು ಹೇಳುವ ಸಾಧ್ಯತೆ ಕೂಡ ಇದೆ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು.
ತುಲಾ ರಾಶಿ:
ಕ್ರೀಡಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ವೃತ್ತಿಗೆ ಸಂಬಂಧಿಸಿದ ಸಲಹೆಗಳನ್ನು ಪಡೆಯುವಿರಿ. ವಿದ್ಯುತ್ ಉಪಕರಣಗಳನ್ನು ಬಳಕೆ ಮಾಡುತ್ತಿರುವವರು ಇತರರಿಗೆ ಅದನ್ನು ನೀಡಬೇಕಾದೀತು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಸಂಗಾತಿಯ ಜೊತೆ ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಆಸ್ತಿಯನ್ನು ಅನ್ಯರಿಗೆ ಕೊಡುವ ಚಿಂತನೆಯೂ ನಿಮ್ಮ ಮನಸ್ಸಿಗೆ ಬರಬಹುದು.
ವೃಶ್ಚಿಕ ರಾಶಿ:
ಸರಿಯಾದ ಸಮಯಕ್ಕೆ ಯೋಗ್ಯ ತೀರ್ಮಾನದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ದೈವಾನುಗ್ರಹ ನಿಮ್ಮ ಮೇಲಿರಲಿದೆ. ಆದರೂ ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು. ಮಕ್ಕಳ ವಿಚಾರದಲ್ಲಿ ನಿಷ್ಪಕ್ಷಪಾತಿಯಾಗುವುದು ಒಳ್ಳೆಯದು.
ಧನು ರಾಶಿ:
ಯೋಗ್ಯವಾಗಿ ದುಡಿಯುವ ನಿಮ್ಮ ಗುಣವು ಅಧಿಕಾರಿಗಳ ಗಮನಕ್ಕೆ ಬರಲಿದ್ದು ಮೆಚ್ಚುಗೆಯ ಸಿಗಲಿದೆ. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಸಮೀಪದ ಬಂಧುಗಳ ವಿಯೋಗವೂ ಆಗಬಹುದು. ಸುಲಭಕ್ಕೆ ಸಿಗದ ವಸ್ತುಗಳನ್ನು ಬಲದಿಂದ ಪಡೆಯುವತ್ತ ಚಿಂತಿಸುವಿರಿ.
ಮಕರ ರಾಶಿ:
ಸಣ್ಣ ವಿಷಯಗಳಿಗೆ ಎಲ್ಲರನ್ನೂ ದೂಷಿಸುತ್ತಾ ಇರುವುದು ಉತ್ತಮ ನಾಯಕನ ಲಕ್ಷಣ ಅಲ್ಲ. ಉದ್ಯೋಗ ಸ್ಥಳದಲ್ಲಿನ ದೌರ್ಬಲ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ವಿನೋದಕ್ಕೆಂದು ಆಡಿದ ಮಾತು ಗಂಭೀರಸ್ವರೂಪವನ್ನು ಪಡೆದೀತು. ನಿಮ್ಮವರೇ ನಿಮ್ಮ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ.
ಕುಂಭ ರಾಶಿ:
ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ನಿಮ್ಮ ಅತಿಯಾದ ಉತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರನ್ನು ತಲುಪಿ ಮಹತ್ತರ ಅಪಾಯವನ್ನು ಕೊಡಬಹುದು. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ.
ಮೀನ ರಾಶಿ:
ಹೊಸ ಯೋಜನೆಯಲ್ಲಿ ಪುನಃ ಪುನಃ ವಿಘ್ನ ಕಂಡುಬರುವುದು. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾದೀತು. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವೃದ್ಧಿ, ಕರಣ : ಬಾಲವ, ಸೂರ್ಯೋದಯ – 06 – 38 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:37 – 11:06, ಯಮಗಂಡ ಕಾಲ 14:05 – 15:34, ಗುಳಿಕ ಕಾಲ 06:39 – 08:08
ಸ್ನೇಹಿತರು- ಸಂಬಂಧಿಗಳ ಆಹ್ವಾನದ ಮೇಲೆ ಅವರ ಮನೆಗಳಿಗೆ ಊಟ ಅಥವಾ ತಿಂಡಿಗೋ ಅಥವಾ ಗೆಟ್- ಟು- ಗೆದರ್ ಗೆ ತೆರಳುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಈ ದಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಅದೇ ರೀತಿ ಕೆಲವರು ರೆಸಾರ್ಟ್ ಅಥವಾ ಹೋಮ್ ಸ್ಟೇಗಳಿಗೆ ತೆರಳುವಂಥ ಯೋಗ ಇದೆ. ಅನಿರೀಕ್ಷಿತವಾಗಿ ಹಣದ ಹರಿವು ಉತ್ತಮಗೊಳ್ಳಲಿದೆ.
ಬಹಳ ಸಮಯದಿಂದ ಮಾರಾಟ ಆಗದೆ ಉಳಿದಿದ್ದ ವಸ್ತುಗಳು ವ್ಯಾಪಾರಿಗಳಿಗೆ ಮಾರಾಟ ಆಗುವ ಸಾಧ್ಯತೆಗಳಿವೆ. ಹೊಸದಾಗಿ ಗ್ರಾಹಕರು ದೊರೆಯಲಿದ್ದಾರೆ. ಸ್ವಭಾವತಃ ಸಿಟ್ಟಿನವರಾಗಿದ್ದರೆ ಈ ದಿನ ಸಾಧ್ಯವಾದಷ್ಟೂ ಸಮಾಧಾನದಿಂದ ಇರುವುದು ಉತ್ತಮ. ಹೀಗೆ ಇರುವುದರಿಂದ ಹಲವು ಬಗೆಯಲ್ಲಿ ಅನುಕೂಲಗಳು ಆಗಬಹುದು. ಒಂದೇ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಆಪ್ತರಿಂದ ಎರಡು ವಿಭಿನ್ನ ಅಭಿಪ್ರಾಯ, ದೃಷ್ಟಿಕೋನಗಳು ವ್ಯಕ್ತ ಆಗಬಹುದು.
ನಿಮ್ಮದೇ ತಪ್ಪಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇರುವುದಿಲ್ಲ. ವಿತಂಡ ವಾದವನ್ನು ಹೂಡಲಿದ್ದೀರಿ. ಹೇಗಿದ್ದರೂ ಸಾಲ ದೊರೆಯುತ್ತದೆ ಎಂಬ ಕಾರಣಕ್ಕೋ ಅಥವಾ ಬಡ್ಡಿ ಇಲ್ಲದ ಆಫರ್ ಏನೋ ಇದೆ ಎಂಬ ಕಾರಣಕ್ಕೋ ಅಗತ್ಯ ಇಲ್ಲದಿದ್ದರೂ ಕೆಲವು ವಸ್ತುಗಳನ್ನು ಖರೀದಿಸುವುದಕ್ಕೆ ಮುಂದಾಗಲಿದ್ದೀರಿ. ಆಪ್ತ ಸ್ನೇಹಿತರೊಬ್ಬರ ಜತೆಗೆ ಮಾತನಾಡುವಾಗ ಬಳಸುವಂಥ ಪದಗಳಿಂದ ಅವರಿಗೆ ಬಹಳ ಬೇಸರ ಆಗಬಹುದು.
ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗೀ ಆಗುವುದರಿಂದ ನಿಮ್ಮ ಮನಸ್ಸಿಗೆ ತೃಪ್ತಿ- ಸಮಾಧಾನ ದೊರೆಯಲಿದೆ.
ಪರಿಚಿತರು ದಿಢೀರನೇ ನಿಮಗೆ ಕೆಲವು ವಸ್ತುಗಳನ್ನು ಉಚಿತವಾಗಿ ನೀಡಬಹುದು ಅಥವಾ ತಾವು ಕೆಲವು ಕಾಲ ದೂರದ ಊರಿಗೆ ಹೋಗುತ್ತಿದ್ದೇವೆ, ನಮ್ಮ ಕಾರು ಅಥವಾ ಬೈಕ್/ ಸ್ಕೂಟರ್ ಅನ್ನು ನೀವು ಬಳಸಿಕೊಳ್ಳಿ ಅಂತ ಹೇಳಬಹುದು. ಸಂಗಾತಿಯು ನಿಮ್ಮ ಬಳಿ ಕೆಲವು ಬೇಡಿಕೆಗಳನ್ನು ಇಡುವ ಸಾಧ್ಯತೆಗಳಿವೆ. ತವರು ಮನೆಯಿಂದ ಹೆಣ್ಣುಮಕ್ಕಳಿಗೆ ಬರಬೇಕಾದ ಆಸ್ತಿಯ ಪಾಲು ಏನಾದರೂ ಇದ್ದಲ್ಲಿ ಅದರ ಬಗ್ಗೆ ಒಂದು ತೀರ್ಮಾನ ಆಗುವಂಥ ಸುಳಿವು ದೊರೆಯಲಿದೆ.
ಮೂವತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸು ಮಕ್ಕಳು ಯಾರಿಗೆ ಇದ್ದಾರೋ ಅಂಥವರು ಮಕ್ಕಳ ಜತೆಗೆ ಮಾತನಾಡುವಾಗ ಕೋಪ ಮಾಡಿಕೊಳ್ಳದೇ ಇರುವುದು ತುಂಬ ಮುಖ್ಯ. ಮನೆ- ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವೇ ಇರಬಹುದು ಅಥವಾ ಮದುವೆ ಮತ್ಯಾವುದೇ ವಿಷಯ ಇರಬಹುದು, ಅದರ ಬಗ್ಗೆ ನಿಮಗೆ ಸಮ್ಮತಿ ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ, ಬದಲಿಗೆ ವಾದ- ವಾಗ್ವಾದಗಳನ್ನು ಮಾಡಿಕೊಳ್ಳಬೇಡಿ.
ಸಂಗಾತಿಯ ಅನಾರೋಗ್ಯ ಸಮಸ್ಯೆಗಳು ಆತಂಕಕ್ಕೆ ಕಾರಣ ಆಗಬಹುದು. ಒಂದು ವೇಳೆ ಈಗಾಗಲೇ ವೈದ್ಯರ ಬಳಿ ತೋರಿಸಿಕೊಂಡಿದ್ದರೂ ಸಮಸ್ಯೆ ಉಲ್ಬಣ ಆಗಿ, ಆತಂಕ ಸೃಷ್ಟಿ ಆಗಬಹುದು. ನಿರಾಂತಕವಾಗಿ ಆಗಬಹುದು ಎಂದುಕೊಂಡಿದ್ದ ಕೆಲವು ಕೆಲಸಗಳಿಗೆ ಅಡೆತಡೆಗಳು ಕಾಣಿಸಿಕೊಳ್ಳಬಹುದು. ಇಷ್ಟು ಸಮಯ ನಿಮ್ಮ ಜತೆಗೂಡಿ ವ್ಯವಹಾರ ಮಾಡುವುದಾಗಿ ಭರವಸೆ ನೀಡಿದ್ದ ವ್ಯಕ್ತಿಯು ತನ್ನ ತೀರ್ಮಾನವನ್ನು ಬದಲಿಸಿಕೊಂಡಿರುವುದಾಗಿ ಹೇಳಬಹುದು.
ನಿಮ್ಮ ಆಪ್ತರ ಜೊತೆಗೆ ಕೆಲ ದಿನಗಳ ಮಟ್ಟಿಗೆ ಮಾತನ್ನೇ ಬಿಡುವ ಹಂತಕ್ಕೆ ಹೋಗಬಹುದು. ಸಲೂನ್ ಹೊಸದಾಗಿ ಶುರು ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಹಣಕಾಸಿನ ಅನುಕೂಲಗಳು ಒದಗಿ ಬರಲಿವೆ. ಮನೆಯ ಮಟ್ಟಿಗೆ ಮಾಡಬೇಕು ಎಂದುಕೊಂಡಿದ್ದ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಮಾಡುವ ಸನ್ನಿವೇಶ ಸೃಷ್ಟಿ ಆಗಲಿದೆ. ಉದ್ಯೋಗ ಬದಲಾವಣೆಗೆ ಕೆಲವು ಅವಕಾಶಗಳು ಇವೆ ಎಂಬ ಬಗ್ಗೆ ಸ್ನೇಹಿತರು ಗಮನಕ್ಕೆ ತರಲಿದ್ದಾರೆ.
ನೀವಾಗಿಯೇ ವಹಿಸಿಕೊಂಡ ಜವಾಬ್ದಾರಿಗಳು ವಿಪರೀತ ಭಾರವಾಗಿ ಕಾಡುವುದಕ್ಕೆ ಆರಂಭಿಸುತ್ತದೆ. ಇಷ್ಟು ಸಮಯದಲ್ಲಿ ಹಣ ನೀಡುತ್ತೇನೆ ಎಂದು ನೀವು ಯಾರಿಗಾದರೂ ಮಾತು ನೀಡಿದ್ದಲ್ಲಿ ಅದು ನೀಡುವುದಕ್ಕೆ ಸಾಧ್ಯವಾಗದೆ ಅವರಿಂದ ನಿಂದೆ- ಆರೋಪಗಳನ್ನು ಕೇಳಿಸಿಕೊಳ್ಳಬೇಕಾಗಲಿದೆ. ಇನ್ನು ನಿಮ್ಮಲ್ಲಿ ಕೆಲವರಿಗೆ ನಿದ್ದೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಕೆಟ್ಟ ಕನಸುಗಳು ಬೀಳಬಹುದು ಅಥವಾ ಪದೇಪದೇ ಎಚ್ಚರವಾಗಿ, ಪೂರ್ಣ ಪ್ರಮಾಣದಲ್ಲಿ ನಿದ್ದೆ ಮಾಡುವುದಕ್ಕೆ ಸಾಧ್ಯವಾಗದಿರಬಹುದು.
ಬಾಗಲಕೋಟೆ, (ಮಾರ್ಚ್ 03): ಶಿವಾಜಿ ಜಯಂತಿ ಮೆರವಣಿ ವೇಳೆ ಕಲ್ಲು ತೂರಾಟ ಪ್ರಕರಣ (Stone Pelting Case) ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ (Bagalkot) ಮತ್ತೊಂದು ಕೋಮು ಸೌಹಾರ್ದತೆ ಹಾಳುವ ಮಾಡುವ ಘಟನೆ ನಡೆದಿದೆ. ಹೌದು… ಮಸೀದಿ ಗೋಡೆ ಮೇಲೆ ವ್ಯಕ್ತಿಯೋರ್ವ ತನ್ನ ಮಗನ ಕೈಯಿಂದ ಜೈ ಶ್ರೀರಾಮ್ ಎಂದು ಬರೆಯಿಸಿದ್ದು, ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಯಮನೂರಿ ಹಾಗೂ ಆತನ ಮಗನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅಲ್ಲದೇ ಗೋಡೆ ಮೇಲೆ ಬರೆದಿದ್ದ ಬರಹವನ್ನು ನೀರು ಹಾಕಿ ಅಳಿಸಿ ಸಮಾಧಾನಪಡಿಸಿದ್ದಾರೆ. 12 ವರ್ಷದ ಮಗುವಿನ ಕೈಯಿಂದ ಮಸೀದಿ ಗೋಡೆ ಮೇಲೆ ಜೈ ಶ್ರೀರಾಮ್ ಎಂದು ಬರೆದಿರುವ ಸಂಬಂಧ ಲಾಡಖಾನ್ ಎಂಬುವರು ನೀಡಿದ ದೂರಿನ ಮೇರೆಗೆ ನವನಗರ ಠಾಣೆಯಲ್ಲಿ FIR ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಂಡಿರುವ ಪೊಲೀಸರು, ಅಲರ್ಟ್ ಆಗಿದ್ದಾರೆ.
ಮೊನ್ನೆ ಅಷ್ಟೇ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಲಿಮರು ಕಲ್ಲು, ಚಪ್ಪಲಿ ತೂರಿದ್ದರು. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಹಿಂದೂ ಮುಸ್ಲಿಮರ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹಿಂದೂ ಸಂಘಟನೆಗಳು ಬಿಜೆಪಿ ನಾಯಕರು ಸಿಡಿದೆದ್ದು ಘಟನೆ ನಡೆದ ಸ್ಥಳದಿಂದಲೇ ಮತ್ತೆ ಶಿವಾಜಿ ಮೆರವಣಿಗೆ ಮಾಡುತ್ತೇವೆಂದು ಪಟ್ಟು ಹಿಡಿದಿದ್ದರು. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ನವದೆಹಲಿ, ಮಾರ್ಚ್ 6: ಶ್ರೀಲಂಕಾದ ಬಳಿ ಅಮೆರಿಕ ಇರಾನಿನ ಐರಿಸ್ ದೇನಾ (IRIS Dena) ಹಡಗಿನ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸಾಕಷ್ಟು ಜನರು ಮೃತಪಟ್ಟಿದ್ದರು. ಇದಕ್ಕೂ ಕೆಲವು ದಿನಗಳ ಮೊದಲು ಇರಾನ್ (Iran War) ಕೇರಳದ ಕೊಚ್ಚಿಯಲ್ಲಿ ಮತ್ತೊಂದು ಇರಾನಿನ ಹಡಗಾದ ಐರಿಸ್ ಲವನ್ ಅನ್ನು ನಿಲ್ಲಿಸಲು (ಡಾಕ್ ಮಾಡಲು) ಭಾರತವನ್ನು ಸಂಪರ್ಕಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೊಚ್ಚಿಯಲ್ಲಿ ಆ ಹಡಗಿನ ಡಾಕಿಂಗ್‌ಗೆ ಭಾರತವೂ ಅವಕಾಶ ನೀಡಿತ್ತು. ಈಗಲೂ ಇರಾನಿನ ಆ ಹಡಗು ಕೊಚ್ಚಿಯಲ್ಲಿಯೇ ಇದೆ.
ಫೆಬ್ರವರಿ 28ರಂದು ಐರಿಸ್ ಲವನ್ ಹಡಗಿನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಉಂಟಾದ ನಂತರ ಇರಾನಿನ ಕಡೆಯಿಂದ ಭಾರತಕ್ಕೆ ವಿನಂತಿ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಮಾರ್ಚ್ 1ರಂದು ಆ ಹಡಗಿಗೆ ಭಾರತದಿಂದ ಡಾಕಿಂಗ್‌ಗೆ ಅನುಮೋದನೆ ನೀಡಲಾಯಿತು. ಆ ಐರಿಸ್ ಲವನ್‌ನ 183 ಸಿಬ್ಬಂದಿಗೆ ಕೊಚ್ಚಿಯ ನೌಕಾ ಸೌಲಭ್ಯಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
“ಶ್ರೀಲಂಕಾದ ದಕ್ಷಿಣಕ್ಕೆ ಐರಿಸ್ ದೇನಾ ಮೇಲಿನ ದಾಳಿ ನಡೆಯುವ ಕೆಲವು ದಿನಗಳ ಮೊದಲು, ಇರಾನ್ ಭಾರತವನ್ನು ಇರಾನ್ ಹಡಗಾದ ಐರಿಸ್ ಲವನ್ ಅನ್ನು ಕರೆದೊಯ್ಯಲು ಸಂಪರ್ಕಿಸಿತ್ತು. ಇದು ಅಂತಾರಾಷ್ಟ್ರೀಯ ಫ್ಲೀಟ್ ರಿವ್ಯೂಗಾಗಿ ಈ ಪ್ರದೇಶಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ. “ಐರಿಸ್ ಲವನ್ ಮಾರ್ಚ್ 4ರಂದು ಕೊಚ್ಚಿಗೆ ತಲುಪಿತ್ತು. ಈ ಸಂದರ್ಭದಲ್ಲಿ ಅದರ 183 ಜನರ ಸಿಬ್ಬಂದಿಯನ್ನು ಪ್ರಸ್ತುತ ಕೊಚ್ಚಿಯಲ್ಲಿರುವ ನೌಕಾ ಸೌಲಭ್ಯಗಳಲ್ಲಿ ಇರಿಸಲಾಗಿದೆ” ಎಂದು ಭಾರತದ ನೌಕಾಪಡೆಯ ಮೂಲಗಳು ತಿಳಿಸಿವೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ, ಈ ವಾರ ಶ್ರೀಲಂಕಾ ಬಳಿ ಅಂತಾರಾಷ್ಟ್ರೀಯ ನೀರಿನಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆಯಿಂದ ಐರಿಸ್ ದೇನಾ ಮುಳುಗಿತ್ತು. ಒಂದು ಹೆಲಿಕಾಪ್ಟರ್ ಅನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಭಾರೀ ಬಂದೂಕುಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಟಾರ್ಪಿಡೊಗಳು ಇದ್ದವು. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಅದು ಇರಾನ್‌ಗೆ ಹಿಂತಿರುಗುತ್ತಿತ್ತು.
ಈ ಘಟನೆಯಿಂದ 87 ನಾವಿಕರು ಸಾವನ್ನಪ್ಪಿದ್ದರು. ಆದರೆ, ಶ್ರೀಲಂಕಾ 32 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯ ನಂತರ, ಭಾರತೀಯ ನೌಕಾಪಡೆಯು ತುರ್ತು ಕರೆಗೆ ಸ್ಪಂದಿಸಿ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಐಎನ್ಎಸ್ ತರಂಗಿಣಿಯನ್ನು ನಿಯೋಜಿಸಿತ್ತು. ನೌಕಾಪಡೆಯು ಐಎನ್ಎಸ್ ಇಕ್ಷಾಕ್ ಅನ್ನು ಸಹ ನಿಯೋಜಿಸಿತ್ತು.
Government Sources- “Days before the IRIS Dena incident south of Sri Lanka, India was approached by Iran to take in the Iranian Ship IRIS Lavan, which was also in the region for the International Fleet Review. This request was received on 28 February 2026, indicating that a… pic.twitter.com/ZHVfKXRDJv
ಐರಿಸ್ ದೇನಾ ಮೇಲಿನ ಅಮೆರಿಕದ ದಾಳಿಯನ್ನು ಇರಾನ್ ಟೀಕಿಸಿದ್ದು, ಹಡಗು ಯಾವುದೇ ಎಚ್ಚರಿಕೆ ಇಲ್ಲದೆ ನಾಶವಾಗಿದೆ ಮತ್ತು ಅದು ಯುದ್ಧ ಸಾಮಗ್ರಿಗಳನ್ನು ಸಹ ಹೊತ್ತೊಯ್ಯುತ್ತಿರಲಿಲ್ಲ ಎಂದು ಹೇಳಿದೆ. “ಅಮೆರಿಕನ್ ಜಲಾಂತರ್ಗಾಮಿ ಈ ಹಡಗಿಗೆ ಯಾವುದೇ ಪೂರ್ವ ಎಚ್ಚರಿಕೆ ನೀಡಲಿಲ್ಲ ಮತ್ತು ಹಠಾತ್ ದಾಳಿಯನ್ನು ನಡೆಸಿತು. ಇದರಿಂದಾಗಿ ಹಡಗು ಸ್ಫೋಟಗೊಂಡಿತು” ಎಂದು ಮುಂಬೈನಲ್ಲಿರುವ ಇರಾನ್‌ನ ಕಾನ್ಸುಲ್ ಜನರಲ್ ಸಯೀದ್ ರೆಜಾ ಮೊಸಾಯೆಬ್ ಮೋಟ್ಲಾಗ್ ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ ಭಾರತ ಹಾಗೂ ಕಿವೀಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾವ ತಂಡ ಫೈನಲ್ ಕಾಳಗದಲ್ಲಿ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗಂಟೆಗೆ ಪ್ರಾರಂಭವಾಗುತ್ತದೆ?
ವಿಶ್ವಕಪ್ ಫೈನಲ್ ಪಂದ್ಯ ಮಾರ್ಚ್ 8 ರ ಭಾನುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಈ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ OTT ಯಲ್ಲಿ ಎಲ್ಲಿ ವೀಕ್ಷಿಸಬಹುದು?
ಇಡೀ ಟಿ20 ವಿಶ್ವಕಪ್‌ನಂತೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ.
ಹಾಸನ, ಮಾರ್ಚ್ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ ನಡೆಸಿ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ವೇಳೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ, ಗ್ರಾಮಾಂತರ ಠಾಣೆ ಎಸ್‌ಐ ಕುಮಾರ್, ಕಾನ್ಸ್‌ಟೇಬಲ್‌ಗಳಾದ ಜಮಾಲುದ್ದೀನ್, ಕುಮಾರ್ ಎಂಬುವವರಿಗೆ ಗಾಯಗಳಾಗಿವೆ.
ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅವರು ಪದೇಪದೇ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ಡಾಗ್ ಸತೀಶ್ (Dog Sathish) ವಿಷಯದಲ್ಲಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸತೀಶ್ ಜೊತೆ ಸ್ನೇಹ ಮಾಡಿದವರಿಗೆ ಬೆದರಿಕೆ ಸಂದೇಶ ಕಳಿಸಿದ ಆರೋಪ ರಜತ್ ಮೇಲೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರು ರಜತ್ ಕಿಶನ್ ವಿರುದ್ಧ ದೂರು ನೀಡಿದ್ದಾರೆ. ರಜತ್ ಅವರು ಫೋನ್ ಕರೆ ಮುಖಾಂತರ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಡಾಗ್ ಸತೀಶ್ ಜೊತೆಗಿನ ಸ್ನೇಹ ಬಿಡಬೇಕೆಂದು ಬೆದರಿಕೆ ಹಾಕಲಾಗಿದೆ. ದೂರುದಾರರ ಕಾರಿನ ಫೋಟೋ ಕಳಿಸಿ ರಜತ್ ಬೆದರಿಸಿದ್ದಾರೆ. ಇದರಿಂದಾಗಿ ರಜತ್ ಅವರಿಗೆ ಸಂಕಷ್ಟ ಎದರಾಗಿದೆ.
‘ಸರ್ ಇದು ರಜತ್ ಬುಜ್ಜಿ. ಕಾಲ್ ಮಾಡುತ್ತಿದ್ದೇನೆ. ವಾಪಸ್ ಕಾಲ್ ಮಾಡ್ತೀರಾ ಇಲ್ಲ, ನಾವೇ ಒಳಗೆ ನುಗ್ಬೇಕಾ’ ಎಂದು ಗಿರೀಶ್ ಕುಮಾರ್ ಅವರಿಗೆ ರಜತ್ ಕಿಶನ್ ಅವರು ವಾಯ್ಸ್ ನೋಟ್ ಮೂಲಕ ಬೆದರಿಕೆ ಸಂದೇಶ ಕಳಿಸಿದ್ದಾರೆ. ಅಲ್ಲದೇ, ಕಾನ್ಫರೆನ್ಸ್ ಕಾಲ್ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಕೂಡ ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಕಿಶನ್ ಹಾಗೂ ಕಿರಣ್ ವಿರುದ್ಧ BNS 351(2), 352 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.
ದೂರಿನಲ್ಲಿ ಉಲ್ಲೇಖಿಸಿರುವಂತೆ ರಜತ್ ಕಿಶನ್ ಅವರು ಗಿರೀಶ್ ಕುಮಾರ್ ಅವರಿಗೆ ಸಂದೇಶ ಕಳಿಸಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮಾಜಿ ಸ್ಪರ್ಧಿ ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ಬೆದರಿಸಿದ್ದಾರೆ. ಅಲ್ಲದೇ ತಮ್ಮ ಕಾರಿನಲ್ಲಿ ಬಂದು ಕುಳಿತುಕೊಂಡು ಡಾಗ್ ಸತೀಶ್ ಮನೆ ಎಲ್ಲಿದೆ ಅಂತ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಜತ್ ಕಿಶನ್ ಅವರಿಗೆ ವಿವಾದಗಳು ಹೊಸದೇನೂ ಅಲ್ಲ. ಈ ಮೊದಲು ಕೂಡ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪರಿಣಾಮದಿಂದ ಅವರನ್ನು ಬಂಧಿಸಲಾಗಿತ್ತು. ಅಲ್ಲದೇ ಮೈಸೂರಿನ ಪಾರಂಪರಿಕ ಕಟ್ಟದ ಎದುರು ಸಿಗರೇಟ್ ಸೇದುತ್ತಾ ವಿಡಿಯೋ ಚಿತ್ರೀಕರಣ ಮಾಡಿದ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.