Headlines

nagaraj11081993

SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ? – Kannada News | Ishan Kishan’s Record Century in Syed Mushtaq Ali Final: Is India Comeback Near?

ಜಾರ್ಖಂಡ್ ನಾಯಕ ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಅಬ್ಬರದ ಶತಕ ಸಿಡಿಸುವ ಮೂಲಕ ತಂಡವನ್ನು ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಕರ್ನಾಟಕ ವಿರುದ್ಧ ಅಜೇಯ 98 ರನ್ ಗಳಿಸುವ ಮೂಲಕ ನಾಯಕನಾಗಿ ಫೈನಲ್‌ನಲ್ಲಿ ಅತ್ಯಧಿಕ ಇನ್ನಿಂಗ್ಸ್‌ಗಳ ದಾಖಲೆಯನ್ನು…

Read More

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌…

Read More

ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು ಬಯಲು – Kannada News | A man kicked to child In Bengaluru: Reveled Accused gym trainer Ranjan Cases

ಬೆಂಗಳೂರು, (ಡಿಸೆಂಬರ್ 19): ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ ಫುಟ್​ಬಾಲ್​ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್​ನನ್ನ ಬಂಧಿಸಿದ್ದಾರೆ. ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದ್ದಾರೆ….

Read More

Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ – Kannada News | Bank of India Recruitment 2025: 514 Credit Officer Jobs – Apply Now!

ಬ್ಯಾಂಕ್ ಆಫ್ ಇಂಡಿಯಾ ಬೃಹತ್​​ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತದ ತನ್ನ ಶಾಖೆಗಳಲ್ಲಿ ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ನಿಯಮಿತವಾಗಿ ಕ್ರೆಡಿಟ್ ಆಫೀಸರ್ (MMGS 3, MMGS 2, SMGS 4) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36…

Read More

ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ. ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ…

Read More

ಶಿಕ್ಷಕರೇ ಮೇಸ್ತ್ರಿ, ವಿದ್ಯಾರ್ಥಿಗಳೇ ಕಾರ್ಮಿಕರು: ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು – Kannada News | Teachers Using Students to Swarna School building construction work In Hassan Video Goes Viral

ಹಾಸನ, (ಡಿಸೆಂಬರ್ 19): ಮಕ್ಕಳು ಓದಲು ಶಾಲೆಗೆ ಹೋಗುತ್ತಾರೆ. ಇನ್ನು ಪೋಷಕರು ಸಹ ಲಕ್ಷಾಂತರ ರೂಪಾಯಿ ಫೀ ಕಟ್ಟಿ ತಮ್ಮ ಮಕ್ಕಳು ನಾಲ್ಕು ಅಕ್ಷರ ಕಲಿತು ವಿದ್ಯಾವಂತರಾಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಆದ್ರೆ, ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವೊಂದು ಹಾಸನ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು…ಶಿಕ್ಷಕರು ಮೇಸ್ತ್ರಿಯಂತೆ ಮುಂದೆ ನಿಂತುಕೊಂಡು ಮಕ್ಕಳಿಂದ ಶಾಲೆ ಕಟ್ಟಡ ನಿರ್ಮಾಣ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ…

Read More

ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ – Kannada News | Meditation Is Not Fashion It Is Need says Sri Sri Ravi Shankar Guruji in Geneva Ahead of World Meditation Day

ನವದೆಹಲಿ, ಡಿಸೆಂಬರ್ 19: ಡಿಸೆಂಬರ್ 21ರಂದು ಜಗತ್ತಿನಾದ್ಯಂತ ವಿಶ್ವ ಧ್ಯಾನ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸ್ಥಿತಿಸ್ಥಾಪಕತ್ವ ಮತ್ತು ಅಂತಾರಾಷ್ಟ್ರೀಯ ಸಹಕಾರದ ಆಧಾರಸ್ತಂಭವಾಗಿ ಧ್ಯಾನವನ್ನು ಮುನ್ನಡೆಸುವಲ್ಲಿ ಭಾರತದ ನಾಯಕತ್ವವು ಇದೀಗ ಜಾಗತಿಕ ಗಮನಕ್ಕೆ ಬರುತ್ತಿದೆ. 2024ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದ ನಿರ್ಣಯದ ನಂತರ ಡಿಸೆಂಬರ್ 21 ಅನ್ನು ವಿಶ್ವ ಧ್ಯಾನ ದಿನವೆಂದು (World Meditation Day) ವಿಶ್ವಸಂಸ್ಥೆಯು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿನೀವಾದಲ್ಲಿ ಆರ್ಟ್ ಆಫ್ ಲಿವಿಂಗ್​ನ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು…

Read More

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ – Kannada News | Speaker Om Birla holds all party meeting over Tea as Parliament winter session concludes

ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session)  ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು….

Read More