ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ…